GT vs CSK Playing XI IPL 2022: ರಶೀದ್ ಖಾನ್ ಗುಜರಾತ್ ಕ್ಯಾಪ್ಟನ್: ಪ್ಲೇಯಿಂಗ್ 11 ಹೀಗಿದೆ

IPL 2022: ಹಾರ್ದಿಕ್ ಪಾಂಡ್ಯ ಸ್ಥಾನದಲ್ಲಿ ವೃದ್ದಿಮಾನ್ ಸಾಹಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹಾಗೆಯೇ ಮ್ಯಾಥ್ಯೂ ವೇಡ್ ಬದಲಿಗೆ ವೇಗಿ ಅಲ್ಝಾರಿ ಜೋಸೆಫ್ ಗುಜರಾತ್ ಟೈಟನ್ಸ್ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

GT vs CSK Playing XI IPL 2022: ರಶೀದ್ ಖಾನ್ ಗುಜರಾತ್ ಕ್ಯಾಪ್ಟನ್: ಪ್ಲೇಯಿಂಗ್ 11 ಹೀಗಿದೆ
GT vs CSK Playing XI
Follow us
TV9 Web
| Updated By: ಝಾಹಿರ್ ಯೂಸುಫ್

Updated on: Apr 17, 2022 | 7:19 PM

ಐಪಿಎಲ್​ನ 29 ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ. ಪ್ರಸ್ತುತ ಪಾಯಿಂಟ್​ ಟೇಬಲ್​ನಲ್ಲಿ ಗುಜರಾತ್ ತಂಡ ಅತಿ ಹೆಚ್ಚು ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡವು 9ನೇ ಸ್ಥಾನದಲ್ಲಿದೆ. ಹೀಗಾಗಿ ಈ ಪಂದ್ಯದಲ್ಲಿ ಗೆಲ್ಲುವುದು ಸಿಎಸ್​ಕೆಗೆ ಅನಿವಾರ್ಯ. ಮತ್ತೊಂದೆಡೆ ಟಾಸ್ ಗೆದ್ದಿರುವ ಗುಜರಾತ್ ಟೈಟನ್ಸ್ ತಂಡವು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಆದರೆ ಪಂದ್ಯದಿಂದ ಫಿಟ್​ನೆಸ್ ಸಮಸ್ಯೆಯ ಕಾರಣ ನಾಯಕ ಹಾರ್ದಿಕ್ ಪಾಂಡ್ಯ ಹೊರಗುಳಿದಿದ್ದಾರೆ. ಪಾಂಡ್ಯ ಅವರ ಅನುಪಸ್ಥಿತಿಯಲ್ಲಿ ತಂಡದ ಉಪನಾಯಕ ರಶೀದ್ ಖಾನ್ ನಾಯಕತ್ವ ವಹಿಸಿಕೊಂಡಿದ್ದಾರೆ.

ಹಾರ್ದಿಕ್ ಪಾಂಡ್ಯ ಸ್ಥಾನದಲ್ಲಿ ವೃದ್ದಿಮಾನ್ ಸಾಹಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹಾಗೆಯೇ ಮ್ಯಾಥ್ಯೂ ವೇಡ್ ಬದಲಿಗೆ ವೇಗಿ ಅಲ್ಝಾರಿ ಜೋಸೆಫ್ ಗುಜರಾತ್ ಟೈಟನ್ಸ್ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಸಿಎಸ್​ಕೆ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ.

ಚೆನ್ನೈ ಸೂಪರ್ ಕಿಂಗ್ಸ್ (ಪ್ಲೇಯಿಂಗ್ XI): ರಾಬಿನ್ ಉತ್ತಪ್ಪ, ರುತುರಾಜ್ ಗಾಯಕ್ವಾಡ್, ಮೊಯಿನ್ ಅಲಿ, ಅಂಬಟಿ ರಾಯುಡು, ಶಿವಂ ದುಬೆ, ರವೀಂದ್ರ ಜಡೇಜಾ (ನಾಯಕ), ಎಂಎಸ್ ಧೋನಿ, ಡ್ವೇನ್ ಬ್ರಾವೋ, ಕ್ರಿಸ್ ಜೋರ್ಡನ್, ಮಹೇಶ್ ತೀಕ್ಷಣ, ಮುಖೇಶ್ ಚೌಧರಿ

ಗುಜರಾತ್ ಟೈಟನ್ಸ್ (ಪ್ಲೇಯಿಂಗ್ XI): ವೃದ್ಧಿಮಾನ್ ಸಾಹ, ಶುಬ್ಮನ್ ಗಿಲ್, ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ರಾಹುಲ್ ತೆವಾಟಿಯಾ, ರಶೀದ್ ಖಾನ್(ನಾಯಕ), ಅಲ್ಝಾರಿ ಜೋಸೆಫ್, ಲಾಕಿ ಫರ್ಗುಸನ್, ಯಶ್ ದಯಾಲ್, ಮೊಹಮ್ಮದ್ ಶಮಿ

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ