ಐಪಿಎಲ್ನ 29 ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ. ಪ್ರಸ್ತುತ ಪಾಯಿಂಟ್ ಟೇಬಲ್ನಲ್ಲಿ ಗುಜರಾತ್ ತಂಡ ಅತಿ ಹೆಚ್ಚು ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡವು 9ನೇ ಸ್ಥಾನದಲ್ಲಿದೆ. ಹೀಗಾಗಿ ಈ ಪಂದ್ಯದಲ್ಲಿ ಗೆಲ್ಲುವುದು ಸಿಎಸ್ಕೆಗೆ ಅನಿವಾರ್ಯ. ಮತ್ತೊಂದೆಡೆ ಟಾಸ್ ಗೆದ್ದಿರುವ ಗುಜರಾತ್ ಟೈಟನ್ಸ್ ತಂಡವು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಆದರೆ ಪಂದ್ಯದಿಂದ ಫಿಟ್ನೆಸ್ ಸಮಸ್ಯೆಯ ಕಾರಣ ನಾಯಕ ಹಾರ್ದಿಕ್ ಪಾಂಡ್ಯ ಹೊರಗುಳಿದಿದ್ದಾರೆ. ಪಾಂಡ್ಯ ಅವರ ಅನುಪಸ್ಥಿತಿಯಲ್ಲಿ ತಂಡದ ಉಪನಾಯಕ ರಶೀದ್ ಖಾನ್ ನಾಯಕತ್ವ ವಹಿಸಿಕೊಂಡಿದ್ದಾರೆ.
ಹಾರ್ದಿಕ್ ಪಾಂಡ್ಯ ಸ್ಥಾನದಲ್ಲಿ ವೃದ್ದಿಮಾನ್ ಸಾಹಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹಾಗೆಯೇ ಮ್ಯಾಥ್ಯೂ ವೇಡ್ ಬದಲಿಗೆ ವೇಗಿ ಅಲ್ಝಾರಿ ಜೋಸೆಫ್ ಗುಜರಾತ್ ಟೈಟನ್ಸ್ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಸಿಎಸ್ಕೆ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ.
ಚೆನ್ನೈ ಸೂಪರ್ ಕಿಂಗ್ಸ್ (ಪ್ಲೇಯಿಂಗ್ XI): ರಾಬಿನ್ ಉತ್ತಪ್ಪ, ರುತುರಾಜ್ ಗಾಯಕ್ವಾಡ್, ಮೊಯಿನ್ ಅಲಿ, ಅಂಬಟಿ ರಾಯುಡು, ಶಿವಂ ದುಬೆ, ರವೀಂದ್ರ ಜಡೇಜಾ (ನಾಯಕ), ಎಂಎಸ್ ಧೋನಿ, ಡ್ವೇನ್ ಬ್ರಾವೋ, ಕ್ರಿಸ್ ಜೋರ್ಡನ್, ಮಹೇಶ್ ತೀಕ್ಷಣ, ಮುಖೇಶ್ ಚೌಧರಿ
ಗುಜರಾತ್ ಟೈಟನ್ಸ್ (ಪ್ಲೇಯಿಂಗ್ XI): ವೃದ್ಧಿಮಾನ್ ಸಾಹ, ಶುಬ್ಮನ್ ಗಿಲ್, ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ರಾಹುಲ್ ತೆವಾಟಿಯಾ, ರಶೀದ್ ಖಾನ್(ನಾಯಕ), ಅಲ್ಝಾರಿ ಜೋಸೆಫ್, ಲಾಕಿ ಫರ್ಗುಸನ್, ಯಶ್ ದಯಾಲ್, ಮೊಹಮ್ಮದ್ ಶಮಿ
A look at the Playing XI for #GTvCSK#TATAIPL https://t.co/FakN55qi88 pic.twitter.com/rzqkbazpFJ
— IndianPremierLeague (@IPL) April 17, 2022
ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್
ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ