GT vs KKR, IPL 2023: ಐಪಿಎಲ್ನಲ್ಲಿಂದು ಎರಡು ಪಂದ್ಯ: ಹಾರ್ದಿಕ್ ಪಡೆಗೆ ಶಾರ್ದೂಲ್ ಭಯ
SRH vs PBKS, IPL 2023: ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್- ಕೋಲ್ಕತ್ತಾ ನೈಟ್ ರೈಡರ್ಸ್ (GT vs KKR) ತಂಡವನ್ನು ಎದುರಲಿಸದೆ. ಎರಡನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿ ಆಗಲಿದೆ.
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿಂದು (IPL 2023) ಎರಡು ಪಂದ್ಯಗಳು ನಡೆಯಲಿದೆ. ಮಧ್ಯಾಹ್ನ 3:30ಕ್ಕೆ ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಯೋಜಿಸಲಾಗಿರುವ ಮೊದಲ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ನಿತೀಶ್ ರಾಣ ನೇತೃತ್ವದ ಕೋಲ್ಕತ್ತಾ ನೈಟ್ ರೈಡರ್ಸ್ (GT vs KKR) ತಂಡವನ್ನು ಎದುರಲಿಸದೆ. ಸಂಜೆ 7:30ಕ್ಕೆ ಹೈದರಾಬಾದ್ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯಲಿರುವ ಎರಡನೇ ಪಂದ್ಯದಲ್ಲಿ ಆ್ಯಡಂ ಮರ್ಕ್ರಮ್ ಅವರ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಧವನ್ ನಾಯಕತ್ವದ ಪಂಜಾಬ್ ಕಿಂಗ್ಸ್ (SRH vs PBKS) ತಂಡಗಳು ಮುಖಾಮುಖಿ ಆಗಲಿದೆ.
ಗುಜರಾತ್-ಕೆಕೆಆರ್:
ಜಿಟಿ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಕಳೆದ ಎರಡು ಪಂದ್ಯದಲ್ಲಿ ವೈಫಲ್ಯ ಅನುಭವಿಸಿದರೂ ತಂಡದ ಒಬ್ಬಲ್ಲಾ ಒಬ್ಬ ಆಟಗಾರ ಆಸರೆಯಾಗಿ ಪಂದ್ಯ ಗೆಲ್ಲಿಸಿದ್ದಾರೆ. ಪಾಂಡ್ಯ ಬಿಟ್ಟರೆ ತಂಡದ ಬಹುತೇಕ ಆಟಗಾರರು ಫಾರ್ಮ್ನಲ್ಲಿದ್ದಾರೆ. ಶುಭಮನ್ ಗಿಲ್ ಪರಿಣಾಮಕಾರಿಯಾಗಿ ಕಂಡುಬರುತ್ತಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಸಾಯಿ ಸುದರ್ಶನ್ ಉತ್ತಮ ಲಯದಲ್ಲಿದ್ದರೆ, ಡೇವಿಡ್ ಮಿಲ್ಲರ್ ಫಿನಿಶರ್ ಸ್ಥಾನವನ್ನು ತುಂಬುತ್ತಿದ್ದಾರೆ. ವೃದ್ದಿಮಾನ್ ಸಾಹ, ರಶೀದ್ ಖಾನ್ ಬ್ಯಾಟಿಂಗ್ನಲ್ಲಿ ಕೊಡುಗೆ ನೀಡುತ್ತಾರೆ. ಬೌಲಿಂಗ್ನಲ್ಲಿ ವೇಗದ ಪಾಳಯದಲ್ಲಿ ಮೊಹಮ್ಮದ್ ಶಮಿ, ಅಲ್ಜಾರಿ ಜೋಸೆಫ್ ಭರ್ಜರಿ ಪ್ರದರ್ಶನ ನೀಡಿದರೆ, ರಶೀದ್ ಖಾನ್ ಸ್ಪಿನ್ ಜಾದು ಸಖತ್ ಆಗಿ ವರ್ಕ್ ಆಗುತ್ತಿದೆ.
IPL ನಲ್ಲಿಲ್ಲ ಚಾನ್ಸ್, ವಿದೇಶದಲ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ ಪೂಜಾರ
ಇತ್ತ ಕೆಕೆಆರ್ ಪರ ಶಾರ್ದೂಲ್ ಠಾಕೂರ್ ಆರ್ಸಿಬಿ ಎದುರಿನ ಪಂದ್ಯದಲ್ಲಿ ನೀಡಿದ ಪ್ರದರ್ಶನ ಎದುರಾಳಿಗೆ ನಡುಕ ಹುಟ್ಟಿಸಿದೆ. ಸ್ಫೋಟಕ ಬ್ಯಾಟಿಂಗ್ ಜೊತೆಗೆ ಬೌಲಿಂಗ್ನಲ್ಲೂ ಮಿಂಚು ಹರಿಸುತ್ತಿದ್ದಾರೆ. ಸುನಿಲ್ ನರೈನ್ ಮತ್ತು ವರುಣ್ ಚಕ್ರವರ್ತಿ ಬೌಲಿಂಗ್ನಲ್ಲಿ ಕಮಾಲ್ ಮಾಡುತ್ತಿದ್ದಾರೆ. ವೆಂಕಟೇಶ್ ಅಯ್ಯರ್ ಮತ್ತು ರಹಮಾನುಲ್ಲಾ ಗುರ್ಬಾಜ್ ಆರಂಭಿಕರಾಗಿ ಉತ್ತಮವಾಗಿ ಕಂಡುಬಂದರೆ ಮಧ್ಯಮ ಕ್ರಮಾಂಕದಲ್ಲಿ ನಾಯಕ ನಿತೀಶ್ ರಾಣಾ ಮತ್ತು ರಿಂಕು ಸಿಂಗ್ ಪ್ರಭಾವಿಗಳಾಗಿದ್ದಾರೆ. ಫಿನಿಶರ್ ಸ್ಥಾನದಲ್ಲಿ ಆಂಡ್ರೇ ರಸೆಲ್ ಇದ್ದು ಯಾವುದೇ ಸಂದರ್ಭದಲ್ಲಿ ಅಬ್ಬರಿಸುವ ಸಾಮರ್ಥ್ಯ ಹೊಂದಿದ್ದಾರೆ.
ಹೈದರಾಬಾದ್- ಪಂಜಾಬ್:
ಆಡಿದ ಎರಡೂ ಪಂದ್ಯಗಳಲ್ಲಿ ಸೋತಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡವು ಇನ್ನೂ ಖಾತೆ ತೆರೆದಿಲ್ಲ. ತಂಡದಲ್ಲಿ ಅನುಭವಿ ಪ್ಲೇಯರ್ಗಳಿದ್ದರೂ ಮಿಂಚುತ್ತಿಲ್ಲ. ಸನ್‌ರೈಸರ್ಸ್ ತಂಡದ ಪ್ರಮುಖ ಬ್ಯಾಟರ್‌ಗಳಾದ ಮಯಂಕ್ ಅಗರವಾಲ್, ಅಭಿಷೇಕ್ ಶರ್ಮಾ, ಹ್ಯಾರಿ ಬ್ರೂಕ್ ಹಾಗೂ ರಾಹುಲ್ ತ್ರಿಪಾಠಿ ಅವರು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಆಡಿದರೆ ದೊಡ್ಡ ಮೊತ್ತ ಪೇರಿಸುವುದು ಸುಲಭವಾಗಲಿದೆ. ಭವನೇಶ್ವರ್ ಕುಮಾರ್, ನಟರಾಜನ್, ಉಮ್ರಾನ್ ಮಲಿಕ್ ಮಾರಕವಾಗಬೇಕಿದೆ.
ಇತ್ತ ಪಂಜಾಬ್ ತಂಡದ ಆರಂಭಿಕ ಜೋಡಿ ಶಿಖರ್ ಧವನ್ ಹಾಗೂ ಪ್ರಭಸಿಮ್ರನ್ ಸಿಂಗ್ ಉತ್ತಮ ಲಯದಲ್ಲಿದ್ದಾರೆ. ಕಳೆದ ಪಂದ್ಯದಲ್ಲಿ ಇಬ್ಬರೂ ಅರ್ಧಶತಕ ಗಳಿಸಿ ಅಬ್ಬರಿಸಿದ್ದರು. ಆದರೆ, ರಾಜಪಕ್ಸ ಮತ್ತು ಶಾರೂಕ್ ಖಾನ್ ಅವರ ಅಸ್ಥಿರ ಲಯವು ತಂಡದ ಚಿಂತೆಗೆ ಕಾರಣವಾಗಿದೆ. ಎಡಗೈ ವೇಗಿಗಳಾದ ಸ್ಯಾಮ್ ಕರನ್, ಆರ್ಷದೀಪ್ ಸಿಂಗ್ ಹಾಗೂ ಸ್ಪಿನ್ನರ್ ರಾಹುಲ್ ಚಾಹರ್ ಅಪಾಯಕಾರಿಯಾಗಿದ್ದಾರೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:23 am, Sun, 9 April 23