
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ಆತಿಥ್ಯವಹಿಸಲು ವಿಶ್ವದ ಅತ್ಯಂತ ಸುಂದರ ಕ್ರಿಕೆಟ್ ಕ್ರೀಡಾಂಗಣಗಳಲ್ಲಿ ಒಂದಾದ ಹಿಮಾಚಲ ಪ್ರದೇಶದ ಧರ್ಮಶಾಲಾದ ಎಚ್‌ಪಿಸಿಎ (HPCA) ಸ್ಟೇಡಿಯಂ ಸಜ್ಜಾಗಿದೆ. ಈ ಮೈದಾನದಲ್ಲಿ ನಾಳೆ (ಮೇ 26) ನಡೆಯಲಿರುವ ಪ್ಲೇಆಫ್ನ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ಮುಖಾಮುಖಿಗೂ ಮುನ್ನ ಆರ್‌ಸಿಬಿ ಈ ಮೈದಾನದಲ್ಲಿ ಗೆಲ್ಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.
ಏಕೆಂದರೆ ಹೆಚ್ಪಿಸಿಎ ಮೈದಾನದಲ್ಲಿ ಆರ್‌ಸಿಬಿ ಈವರೆಗೆ ಆಡಿರುವುದು ಕೇವಲ 3 ಪಂದ್ಯಗಳು. ಈ ಮೂರು ಮ್ಯಾಚ್ಗಳಲ್ಲಿ ಆರ್‌ಸಿಬಿ ತಂಡದ ಪ್ರದರ್ಶನ ಹೇಗಿತ್ತು ಎಂಬುದರ ಇಣುಕು ನೋಟ ಇಲ್ಲಿದೆ…
ಅಂದರೆ ಧರ್ಮಶಾಲಾದಲ್ಲಿ ಆರ್‌ಸಿಬಿ ಆಡಿದ ಮೂರು ಮ್ಯಾಚ್ಗಳಲ್ಲಿ 2 ಜಯ ಸಾಧಿಸಿದೆ. ಈ ಎರಡೂ ಪಂದ್ಯಗಳನ್ನು ಪಂಜಾಬ್ ಕಿಂಗ್ಸ್ ವಿರುದ್ಧದವೇ ಗೆದ್ದುಕೊಂಡಿದೆ. ಅಂದರೆ ತವರು ಪ್ರೇಕ್ಷಕರ ಎದುರಲ್ಲಿ ಪಂಜಾಬ್ ಪಡೆಯನ್ನು ಬಗ್ಗು ಬಡಿಯುವಲ್ಲಿ ಆರ್‌ಸಿಬಿ ಯಶಸ್ವಿಯಾಗಿದೆ. ಹೀಗಾಗಿಯೇ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗೆಲ್ಲುವ ಫೇವರೇಟ್ ತಂಡವಾಗಿ ಆರ್‌ಸಿಬಿ ಗುರುತಿಸಿಕೊಂಡಿದೆ.
ಏಕೆಂದರೆ ಗುಜರಾತ್ ಟೈಟಾನ್ಸ್ ತಂಡವು ಧರ್ಮಶಾಲಾ ಮೈದಾನದಲ್ಲಿ ಈವರೆಗೆ ಒಂದೇ ಒಂದು ಪಂದ್ಯವಾಡಿಲ್ಲ. ಅಂದರೆ ಇದೇ ಮೊದಲ ಬಾರಿಗೆ ಕಣಕ್ಕಿಳಿಯಲು ಸಜ್ಜಾಗಿದೆ. ಅತ್ತ ಮೂರು ಪಂದ್ಯಗಳನ್ನಾಡಿರುವ ಅನುಭವ ಹೊಂದಿರುವ, ಅದರಲ್ಲೂ ಈ ಬಾರಿ ಪಂಜಾಬ್ ಕಿಂಗ್ಸ್ ವಿರುದ್ಧ ಕಣಕ್ಕಿಳಿದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಹೆಚ್ಪಿಸಿಎ ಮೈದಾನದ ಪಿಚ್ ಬಗ್ಗೆ ಸ್ಪಷ್ಟತೆ ಇದೆ. ಹೀಗಾಗಿಯೇ ಗುಜರಾತ್ ಟೈಟಾನ್ಸ್ ವಿರುದ್ಧ ಆರ್‌ಸಿಬಿ ಪ್ರಚಂಡ ಪ್ರದರ್ಶನ ನೀಡುವುದನ್ನು ಎದುರು ನೋಡಬಹುದು.
ಧರ್ಮಶಾಲಾದಲ್ಲಿ ಮಿಂಚಿದ ಆರ್‌ಸಿಬಿ ಸ್ಟಾರ್ಸ್:
ಇದನ್ನೂ ಓದಿ: 2 ತಂಡಗಳನ್ನು ಗಂಟು ಮೂಟೆ ಕಟ್ಟುವಂತೆ ಮಾಡಿದ 1 ರನ್, 1 ಅಂಕ..!
ಅಂದರೆ ಈ ಬ್ಯಾಟಿಂಗ್ ಸ್ನೇಹಿ ಪಿಚ್ನಲ್ಲಿ ವಿರಾಟ್ ಕೊಹ್ಲಿ ಕಡೆಯಿಂದ ಭರ್ಜರಿ ಪ್ರದರ್ಶನ ನಿರೀಕ್ಷಿಸಬಹುದು. ಇವರೊಂದಿಗೆ ವೆಂಕಟೇಶ್ ಅಯ್ಯರ್, ರಜತ್ ಪಾಟಿದಾರ್ ಹಾಗೂ ಟಿಮ್ ಡೇವಿಡ್ ಅಬ್ಬರಿಸಿದರೆ ಗುಜರಾತ್ ಟೈಟಾನ್ಸ್ ವಿರುದ್ಧ ಬೃಹತ್ ಮೊತ್ತದ ಸ್ಕೋರ್ ಎದುರು ನೋಡಬಹುದು.
Published On - 12:53 pm, Mon, 25 May 26