AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಗುಜರಾತ್​ಗೆ ಗುನ್ನ ಇಡಲು ಆರ್​ಸಿಬಿ ರೆಡಿ; ಪಂದ್ಯ ಎಷ್ಟು ಗಂಟೆಗೆ ಆರಂಭ?

GT vs RCB IPL 2026: ಐಪಿಎಲ್ 2026 ರ 42ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ಏಪ್ರಿಲ್ 30 ರಂದು ಅಹಮದಾಬಾದ್‌ನಲ್ಲಿ ಮುಖಾಮುಖಿಯಾಗಲಿವೆ. ಇದು ಈ ಆವೃತ್ತಿಯ ಎರಡನೇ ಕದನವಾಗಿದ್ದು, ಹಿಂದಿನ ಪಂದ್ಯವನ್ನು ಆರ್​ಸಿಬಿ ಗೆದ್ದಿತ್ತು. ಪಾಯಿಂಟ್ಸ್ ಟೇಬಲ್‌ನಲ್ಲಿ ಆರ್​ಸಿಬಿ ಎರಡನೇ ಸ್ಥಾನದಲ್ಲಿದ್ದರೆ, ಗುಜರಾತ್ ಐದನೇ ಸ್ಥಾನದಲ್ಲಿದೆ. ಸಂಜೆ 7:30 ಕ್ಕೆ ಆರಂಭವಾಗುವ ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ಮತ್ತು ಹಾಟ್‌ಸ್ಟಾರ್‌ನಲ್ಲಿ ವೀಕ್ಷಿಸಬಹುದು.

IPL 2026: ಗುಜರಾತ್​ಗೆ ಗುನ್ನ ಇಡಲು ಆರ್​ಸಿಬಿ ರೆಡಿ; ಪಂದ್ಯ ಎಷ್ಟು ಗಂಟೆಗೆ ಆರಂಭ?
Gt Vs Rcb
ಪೃಥ್ವಿಶಂಕರ
|

Updated on: Apr 29, 2026 | 9:02 PM

Share

ಐಪಿಎಲ್ 2026 (IPL 2026) ರ 42 ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (RCB vs GT) ನಡುವೆ ನಡೆಯಲಿದೆ. ಈ ಆವೃತ್ತಿಯಲ್ಲಿ ಎರಡೂ ತಂಡಗಳ ಎರಡನೇ ಮುಖಾಮುಖಿ ಇದಾಗಿದೆ. ಇದಕ್ಕೂ ಮೊದಲು ಉಭಯ ತಂಡಗಳು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಆ ಪಂದ್ಯವನ್ನು ಆರ್​ಸಿಬಿ ಸುಲಭವಾಗಿ ಗೆದ್ದುಕೊಂಡಿತ್ತು. ಇದೀಗ ಆರ್​ಸಿಬಿ ಸತತ ಎರಡನೇ ಪಂದ್ಯವನ್ನು ಗೆಲ್ಲುವ ಇರಾದೆಯಲ್ಲಿದೆ. ಇತ್ತ ಗುಜರಾತ್ ತನ್ನ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಗುರಿ ಇಟ್ಟುಕೊಂಡಿದೆ. ಇನ್ನು ಪಾಯಿಂಟ್ ಪಟ್ಟಿಯ ವಿಚಾರಕ್ಕೆ ಬರುವುದಾದರೆ.. ಆರ್​ಸಿಬಿ ಆರು ಗೆಲುವುಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ಗುಜರಾತ್ ನಾಲ್ಕು ಗೆಲುವುಗಳೊಂದಿಗೆ ಐದನೇ ಸ್ಥಾನದಲ್ಲಿದೆ.

ಗುಜರಾತ್ ಟೈಟಾನ್ಸ್ ಹಾಗೂ ಆರ್​ಸಿಬಿ ನಡುವಿನ ಐಪಿಎಲ್ ಪಂದ್ಯ ಯಾವಾಗ ನಡೆಯಲಿದೆ?

ಗುಜರಾತ್ ಟೈಟಾನ್ಸ್ ಹಾಗೂ ಆರ್​ಸಿಬಿ ನಡುವಿನ ಐಪಿಎಲ್ ಪಂದ್ಯ ಏಪ್ರಿಲ್ 30 ರಂದು ನಡೆಯಲಿದೆ.

ಗುಜರಾತ್ ಟೈಟಾನ್ಸ್ ಹಾಗೂ ಆರ್​ಸಿಬಿ ನಡುವಿನ ಐಪಿಎಲ್ ಪಂದ್ಯ ಎಲ್ಲಿ ನಡೆಯಲಿದೆ?

ಗುಜರಾತ್ ಟೈಟಾನ್ಸ್ ಹಾಗೂ ಆರ್​ಸಿಬಿ ನಡುವಿನ ಐಪಿಎಲ್ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಗುಜರಾತ್ ಟೈಟಾನ್ಸ್ ಹಾಗೂ ಆರ್​ಸಿಬಿ ನಡುವಿನ ಐಪಿಎಲ್ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಗುಜರಾತ್ ಟೈಟಾನ್ಸ್ ಹಾಗೂ ಆರ್​ಸಿಬಿ ನಡುವಿನ ಐಪಿಎಲ್ ಪಂದ್ಯ ಸಂಜೆ 7:30 ಕ್ಕೆ ಗಂಟೆಗೆ ಆರಂಭವಾಗಲಿದೆ. ಟಾಸ್ ಸಂಜೆ 7 ಗಂಟೆಗೆ ನಡೆಯಲಿದೆ.

ಗುಜರಾತ್ ಟೈಟಾನ್ಸ್ ಹಾಗೂ ಆರ್​ಸಿಬಿ ನಡುವಿನ ಐಪಿಎಲ್ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಗುಜರಾತ್ ಟೈಟಾನ್ಸ್ ಹಾಗೂ ಆರ್​ಸಿಬಿ ನಡುವಿನ ಐಪಿಎಲ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್​ವರ್ಕ್​ನ ವಿವಿದ ಚಾನೆಲ್​ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಹಾಟ್ ಸ್ಟಾರ್​​ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ.

ಉಭಯ ತಂಡಗಳು

ಗುಜರಾತ್ ಟೈಟಾನ್ಸ್: ಶುಭ್​ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಕುಮಾರ್ ಕುಶಾಗ್ರಾ, ಅನುಜ್ ರಾವತ್, ಜೋಸ್ ಬಟ್ಲರ್, ನಿಶಾಂತ್ ಸಿಂಧು, ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ಅರ್ಷದ್ ಖಾನ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಇಶಾಂತ್ ಶರ್ಮಾ, ಗುರ್ನೂರ್ ಸಿಂಗ್ ಬ್ರಾರ್, ರಶೀದ್ ಖಾನ್, ಮಾನವ್ ಸುತಾರ್, ಸಾಯಿ ಕಿಶೋರ್, ಜಯಂತ್ ಯಾದವ್, ಅಶೋಕ್ ಶರ್ಮಾ, ಜೇಸನ್ ಹೋಲ್ಡರ್, ಟಾಮ್ ಬ್ಯಾಂಟನ್, ಪೃಥ್ವಿ ರಾಜ್, ಲ್ಯೂಕ್ ವುಡ್.

ಆರ್​ಸಿಬಿ ತಂಡ: ರಜತ್ ಪಾಟಿದಾರ್, ವಿರಾಟ್ ಕೊಹ್ಲಿ, ದೇವದತ್ತ್ ಪಡಿಕ್ಕಲ್, ರಜತ್ ಪಾಟಿದಾರ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋರ್ಡಾನ್ ಕಾಕ್ಸ್, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಜಾಕೋಬ್ ಬೆಥೆಲ್, ವೆಂಕಟೇಶ್ ಅಯ್ಯರ್, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ವಿಕ್ಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾಣ್, ಜೋಶ್ ಹೇಜಲ್​ವುಡ್, ರಸಿಖ್ ದಾರ್, ಸುಯಶ್ ಶರ್ಮಾ, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ಅಭಿನಂದನ್ ಸಿಂಗ್, ಜಾಕೋಬ್ ಡಫಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ
ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ
ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಹೆಚ್​​ಡಿಕೆ
ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಹೆಚ್​​ಡಿಕೆ
ಮಂತ್ರಾಲಯದಲ್ಲಿ ವರುಣನ ಅಬ್ಬರ: ಹೊಳೆಯಂತಾದ ರಸ್ತೆ, ತತ್ತರಿಸಿದ ಭಕ್ತರು
ಮಂತ್ರಾಲಯದಲ್ಲಿ ವರುಣನ ಅಬ್ಬರ: ಹೊಳೆಯಂತಾದ ರಸ್ತೆ, ತತ್ತರಿಸಿದ ಭಕ್ತರು
ಶಿವಮೊಗ್ಗ: ಆಟವಾಡುತ್ತಿದ್ದಾಗ ಆರು ವರ್ಷದ ಬಾಲಕ ಸಾವು, ಹೃದಯಾಘಾತ ಶಂಕೆ
ಶಿವಮೊಗ್ಗ: ಆಟವಾಡುತ್ತಿದ್ದಾಗ ಆರು ವರ್ಷದ ಬಾಲಕ ಸಾವು, ಹೃದಯಾಘಾತ ಶಂಕೆ
ಕಚ್ಚಾ ತೈಲ ಬೆಲೆ ಭಾರಿ ಕುಸಿತ! ಪೆಟ್ರೋಲ್, ಡೀಸೆಲ್ ದರ ಇಳಿಕೆ ನಿರೀಕ್ಷೆ
ಕಚ್ಚಾ ತೈಲ ಬೆಲೆ ಭಾರಿ ಕುಸಿತ! ಪೆಟ್ರೋಲ್, ಡೀಸೆಲ್ ದರ ಇಳಿಕೆ ನಿರೀಕ್ಷೆ
ಸಾಕಷ್ಟು ಭಿನ್ನವಾಗಿ ‘ಮೋಡ ಕವಿದ ವಾತಾವರಣ’ ಸಿನಿಮಾದ ಪ್ರಚಾರ ಮಾಡಿದ ಸುನಿ
ಸಾಕಷ್ಟು ಭಿನ್ನವಾಗಿ ‘ಮೋಡ ಕವಿದ ವಾತಾವರಣ’ ಸಿನಿಮಾದ ಪ್ರಚಾರ ಮಾಡಿದ ಸುನಿ
ಸ್ಲೋವಾಕಿಯಾದಲ್ಲಿ ಬ್ರೆಡ್ ಮತ್ತು ಉಪ್ಪಿನೊಂದಿಗೆ ಪ್ರಧಾನಿ ಮೋದಿಗೆ ಸ್ವಾಗತ
ಸ್ಲೋವಾಕಿಯಾದಲ್ಲಿ ಬ್ರೆಡ್ ಮತ್ತು ಉಪ್ಪಿನೊಂದಿಗೆ ಪ್ರಧಾನಿ ಮೋದಿಗೆ ಸ್ವಾಗತ
ಬಾಗಲಕೋಟೆ: ಭಾರಿ ಮಳೆಗೆ ಜಮಖಂಡಿ ತರಕಾರಿ ಮಾರುಕಟ್ಟೆ ಜಲಾವೃತ
ಬಾಗಲಕೋಟೆ: ಭಾರಿ ಮಳೆಗೆ ಜಮಖಂಡಿ ತರಕಾರಿ ಮಾರುಕಟ್ಟೆ ಜಲಾವೃತ
ಉಡುಪಿ ಕೃಷ್ಣನ ದರ್ಶನ ಪಡೆದ ಅನಂತ್​​ ಅಂಬಾನಿ
ಉಡುಪಿ ಕೃಷ್ಣನ ದರ್ಶನ ಪಡೆದ ಅನಂತ್​​ ಅಂಬಾನಿ
ಯಜ್ಞ-ಯಾಗಾದಿಗಳಲ್ಲಿ ಯಾವ ಸಮಿತ್ತುಗಳನ್ನು ಅರ್ಪಿಸಿದರೆ ಏನು ಫಲ?
ಯಜ್ಞ-ಯಾಗಾದಿಗಳಲ್ಲಿ ಯಾವ ಸಮಿತ್ತುಗಳನ್ನು ಅರ್ಪಿಸಿದರೆ ಏನು ಫಲ?