AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

GT vs RR: ಗೆದ್ದ ಇತಿಹಾಸವೇ ಇಲ್ಲ: ಹಿಸ್ಟರಿ ಬದಲಿಸುತ್ತಾ, ಮರುಕಳಿಸುತ್ತಾ?

Gujarat Titans vs Rajasthan Royals, Qualifier 2: ಐಪಿಎಲ್​ನ 73ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಕಣಕ್ಕಿಳಿಯಲಿದೆ. ಮೊದಲ ಕ್ವಾಲಿಫೈಯರ್​ನಲ್ಲಿ ಆರ್​ಸಿಬಿ ವಿರುದ್ಧ ಸೋತಿರುವ ಗುಜರಾತ್ ಟೈಟಾನ್ಸ್ ಈ ಪಂದ್ಯದ ಮೂಲಕ ಫೈನಲ್​ಗೇರುವ ವಿಶ್ವಾಸದಲ್ಲಿದೆ. ಅತ್ತ ಎಲಿಮಿನೇಟರ್ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಅಮೋಘ ಗೆಲುವು ದಾಖಲಿಸಿರುವ ರಾಜಸ್ಥಾನ್ ರಾಯಲ್ಸ್ ಇಂದು ಕೂಡ ವಿಜಯ ಪತಾಕೆ ಹಾರಿಸುವ ಇರಾದೆಯಲ್ಲಿದೆ.

GT vs RR: ಗೆದ್ದ ಇತಿಹಾಸವೇ ಇಲ್ಲ: ಹಿಸ್ಟರಿ ಬದಲಿಸುತ್ತಾ, ಮರುಕಳಿಸುತ್ತಾ?
Rajasthan RoyalsImage Credit source: IPL
ಝಾಹಿರ್ ಯೂಸುಫ್
|

Updated on: May 29, 2026 | 11:34 AM

Share

ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2026) ಕ್ವಾಲಿಫೈಯರ್-2 ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡವು ಮೇ 31 ರಂದು ನಡೆಯಲಿರುವ ಐಪಿಎಲ್​ ಫೈನಲ್​ಗೆ ಎಂಟ್ರಿ ಕೊಡಲಿದೆ. ಹಾಗೆಯೇ ಸೋತ ತಂಡದ ಐಪಿಎಲ್ ಅಭಿಯಾನ ಅಂತ್ಯಗೊಳ್ಳಲಿದೆ. ಹೀಗಾಗಿ ಇಂದಿನ ಮ್ಯಾಚ್​ನಲ್ಲಿ ಗೆಲ್ಲಲು ಉಭಯ ತಂಡಗಳು ಜಿದ್ದಾಜಿದ್ದಿನ ಪೈಪೋಟಿ ನಡೆಸುವುದು ದಿಟ.

ಗೆದ್ದ ಇತಿಹಾಸವೇ ಇಲ್ಲ!

ಕುತೂಹಲಕಾರಿ ವಿಷಯ ಎಂದರೆ ರಾಜಸ್ಥಾನ್ ರಾಯಲ್ಸ್ ತಂಡವು ಐಪಿಎಲ್​ನ ಪ್ಲೇಆಫ್​ ಪಂದ್ಯಗಳಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಗೆದ್ದ ಇತಿಹಾಸವೇ ಇಲ್ಲ. ಅಂದರೆ ಎರಡು ಬಾರಿ ಮುಖಾಮುಖಿಯಾದಾಗಲೂ ಆರ್​ಆರ್ ವಿರುದ್ಧ ಗೆಲ್ಲುವಲ್ಲಿ ಗುಜರಾತ್ ಟೈಟಾನ್ಸ್ ತಂಡ ಯಶಸ್ವಿಯಾಗಿದೆ.

  • 2022ರ ಕ್ವಾಲಿಫೈಯರ್ 1: ಐಪಿಎಲ್ 2022 ರ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು.
  • 2022 ಫೈನಲ್: ಐಪಿಎಲ್​ 2022ರ ಮೊದಲ ಕ್ವಾಲಿಫೈಯರ್​ನಲ್ಲಿ ಸೋತಿದ್ದ ರಾಜಸ್ಥಾನ್ ರಾಯಲ್ಸ್ ತಂಡವು ದ್ವಿತೀಯ ಕ್ವಾಲಿಫೈಯರ್​ನಲ್ಲಿ ಗೆಲ್ಲುವ ಮೂಲಕ ಫೈನಲ್​ಗೇರಿತ್ತು. ಆದರೆ ಫೈನಲ್​ನಲ್ಲೂ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 7 ವಿಕೆಟ್​ಗಳ ಸೋಲುಣಿಸಿ ಗುಜರಾತ್ ಟೈಟಾನ್ಸ್ ತಂಡವು ಚೊಚ್ಚಲ ಬಾರಿ ಟ್ರೋಫಿ ಎತ್ತಿ ಹಿಡಿದಿದ್ದರು.

ಬದಲಿಸುತ್ತಾ ಹಿಸ್ಟರಿ?

ಗುಜರಾತ್ ಟೈಟಾನ್ಸ್ ವಿರುದ್ಧ ಪ್ಲೇಆಫ್​ ಹಂತದಲ್ಲಿ 2 ಬಾರಿ ಸೋತಿರುವ ರಾಜಸ್ಥಾನ್ ರಾಯಲ್ಸ್ ಈ ಬಾರಿ ಹಿಸ್ಟರಿ ಬದಲಿಸುತ್ತಾ? ಎಂಬುದೇ ಕುತೂಹಲ. ಏಕೆಂದರೆ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಸತತ 6 ಪಂದ್ಯಗಳಲ್ಲಿ ಸೋತಿದ್ದ ರಾಜಸ್ಥಾನ್ ರಾಯಲ್ಸ್ ನಿರ್ಣಾಯಕ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ದ್ವಿತೀಯ ಕ್ವಾಲಿಫೈಯರ್​ಗೆ ಅರ್ಹತೆ ಪಡೆದುಕೊಂಡಿದೆ. ಈ ಅರ್ಹತೆಯೊಂದಿಗೆ ಇದೀಗ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲು ಸಜ್ಜಾಗಿದೆ. ಅತ್ತ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಸೋಲಿನ ಸರಪಳಿ ಕಳಚಿರುವ ರಾಜಸ್ಥಾನ್ ರಾಯಲ್ಸ್ ಗುಜರಾತ್ ಟೈಟಾನ್ಸ್ ವಿರುದ್ಧ ಕೂಡ ಗೆಲ್ಲಲಿದೆಯಾ ಎಂಬುದೇ ಸದ್ಯ ಕುತೂಹಲ.

ಮರುಕಳಿಸುತ್ತಾ ಇತಿಹಾಸ?

ಅತ್ತ ರಾಜಸ್ಥಾನ್ ರಾಯಲ್ಸ್ ಹಿಸ್ಟರಿ ಬದಲಿಸಲು ಪ್ಲ್ಯಾನ್ ರೂಪಿಸುತ್ತಿದ್ದರೆ, ಇತ್ತ ಗುಜರಾತ್ ಟೈಟಾನ್ಸ್ ತಂಡವು ಪ್ಲೇಆಫ್​ನಲ್ಲಿ ಆರ್​ಆರ್​ ವಿರುದ್ಧ ಹ್ಯಾಟ್ರಿಕ್ ಗೆಲುವು ಸಾಧಿಸಲು ಯೋಜನೆ ಸಿದ್ಧಪಡಿಸುತ್ತಿದ್ದಾರೆ. ಅಂದರೆ 2022ರ ಕ್ವಾಲಿಫೈಯರ್​ ಪಂದ್ಯದ ಫಲಿತಾಂಶವನ್ನೇ ಮರು ಸೃಷ್ಟಿಸಲು ಗುಜರಾತ್ ಟೈಟಾನ್ಸ್ ಪ್ಲ್ಯಾನ್ ರೂಪಿಸಿಕೊಂಡಿದೆ.

ಇದನ್ನೂ ಓದಿ: AB de Villiers: ವೈಭವ್​ನ ನೋಡಿದಾಗ ನನಗೆ ಆ ಬ್ಯಾಟರ್​ ನೆನಪಾಗ್ತಾರೆ!

ಈ ಪ್ಲ್ಯಾನ್​ಗೆ ಮರು ಪ್ಲ್ಯಾನ್ ರೂಪಿಸಿ ರಾಜಸ್ಥಾನ್ ರಾಯಲ್ಸ್ ಫೈನಲ್​ಗೇರಲಿದೆಯಾ? ಅಥವಾ ಗುಜರಾತ್ ಟೈಟಾನ್ಸ್ ಮೂರನೇ ಬಾರಿ ಫೈನಲ್​ಗೆ ಎಂಟ್ರಿ ಕೊಡಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ