AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

GT vs SRH Playing XI: ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಿದ ಜಿಟಿ, ಎಸ್​ಆರ್​ಹೆಚ್

IPL Gujarat Titans vs Sunrisers Hyderabad in Kannada Playing XI: ಗುಜರಾತ್ ಟೈಟಾನ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಈವರೆಗೆ 7 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಗುಜರಾತ್ ಟೈಟಾನ್ಸ್ 5 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ, ಸನ್​ರೈಸರ್ಸ್ ಹೈದರಾಬಾದ್ ತಂಡ ಗೆದ್ದಿರುವುದು ಕೇವಲ ಒಂದು ಬಾರಿ ಮಾತ್ರ. ಇನ್ನು ಒಂದು ಮ್ಯಾಚ್ ಕಾರಣಾಂತರದಿಂದ ರದ್ದಾಗಿತ್ತು.

GT vs SRH Playing XI: ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಿದ ಜಿಟಿ, ಎಸ್​ಆರ್​ಹೆಚ್
Gt Vs Srh
ಝಾಹಿರ್ ಯೂಸುಫ್
|

Updated on: May 12, 2026 | 7:12 PM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 56ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿವೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಸನ್​ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಗುಜರಾತ್ ಟೈಟಾನ್ಸ್ ಮೊದಲು ಬ್ಯಾಟ್ ಮಾಡಲಿದೆ. ಇನ್ನು ಈ ಪಂದ್ಯಕ್ಕಾಗಿ ಉಭಯ ತಂಡಗಳು ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಿದ್ದು, ಎರಡೂ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…

ಸನ್‌ರೈಸರ್ಸ್ ಹೈದರಾಬಾದ್ (ಪ್ಲೇಯಿಂಗ್ XI): ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಹೆನ್ರಿಕ್ ಕ್ಲಾಸೆನ್, ಸಲೀಲ್ ಅರೋರಾ, ನಿತೀಶ್ ಕುಮಾರ್ ರೆಡ್ಡಿ, ಸ್ಮರಣ್ ರವಿಚಂದ್ರನ್, ಪ್ಯಾಟ್ ಕಮಿನ್ಸ್ (ನಾಯಕ), ಶಿವಂಗ್ ಕುಮಾರ್, ಈಶಾನ್ ಮಾಲಿಂಗ, ಸಾಕಿಬ್ ಹುಸೇನ್, ಪ್ರಫುಲ್ ಹಿಂಗೆ

ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ಶುಭ್​ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಜೇಸನ್ ಹೋಲ್ಡರ್, ನಿಶಾಂತ್ ಸಿಂಧು, ರಾಹುಲ್ ತೆವಾಟಿಯಾ, ರಶೀದ್ ಖಾನ್, ಅರ್ಷದ್ ಖಾನ್, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್.

ಹೆಡ್ ಟು ಹೆಡ್ ದಾಖಲೆ:

ಸನ್​ರೈಸರ್ಸ್ ಹೈದರಾಬಾದ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಈವರೆಗೆ ಮುಖಾಮುಖಿಯಾಗಿರುವುದು ಕೇವಲ 7 ಪಂದ್ಯಗಳಲ್ಲಿ ಮಾತ್ರ. ಈ 7 ಮ್ಯಾಚ್​ಗಳಲ್ಲಿ 5 ಪಂದ್ಯಗಳನ್ನು ಗುಜರಾತ್ ಟೈಟಾನ್ಸ್ ಗೆದ್ದುಕೊಂಡಿದೆ. ಇನ್ನು ಒಂದು ಪಂದ್ಯದಲ್ಲಿ ಎಸ್​ಆರ್​ಹೆಚ್ ಜಯ ಸಾಧಿಸಿದೆ. ಮತ್ತೊಂದು ಪಂದ್ಯವು ಕಾರಣಾಂತರದಿಂದ ರದ್ದಾಗಿತ್ತು.

ಈ ಅಂಕಿ ಅಂಶಗಳನ್ನು ಗಣನೆಗೆ ತೆಗೆದುಕೊಂಡರೆ ಗುಜರಾತ್ ಟೈಟಾನ್ಸ್ ತಂಡವು ಬಲಿಷ್ಠವಾಗಿದೆ. ಇದಾಗ್ಯೂ ಪ್ರಸ್ತುತ ಸನ್​ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟಿಂಗ್ ಶಕ್ತಿಯನ್ನು ಕಡೆಗಣಿಸುವಂತಿಲ್ಲ. ಹೀಗಾಗಿ ಇಂದಿನ ಮ್ಯಾಚ್​ನಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಗೆದ್ದವರಿಗೆ ಅಗ್ರಸ್ಥಾನ:

ಈ ಪಂದ್ಯದಲ್ಲಿ ಜಯ ಸಾಧಿಸುವ ತಂಡ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದೆ. ಅಂದರೆ ಪ್ರಸ್ತುತ ಅಂಕ ಪಟ್ಟಿಯಲ್ಲಿ ಸನ್​ರೈಸರ್ಸ್ ಹೈದರಾಬಾದ್​ ತಂಡವು 14 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದರೆ, ಗುಜರಾತ್ ಟೈಟಾನ್ಸ್ ತಂಡವು 14 ಪಾಯಿಂಟ್ಸ್​ನೊಂದಿಗೆ ತೃತೀಯ ಸ್ಥಾನದಲ್ಲಿದೆ.

ಇಂದಿನ ಪಂದ್ಯದಲ್ಲಿ ಗೆಲ್ಲುವ ತಂಡ 16 ಅಂಕಗಳನ್ನು ಪಡೆಯುವ ಮೂಲಕ ಆರ್​ಸಿಬಿ ತಂಡವನ್ನು ಹಿಂದಿಕ್ಕಿ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದೆ. ಹೀಗಾಗಿ ಈ ಪಂದ್ಯದಲ್ಲಿ ಉಭಯ ತಂಡಗಳಿಂದ ಜಿದ್ದಾಜಿದ್ದಿನ ಹೋರಾಟವನ್ನು ಎದುರು ನೋಡಬಹುದು.

ಇದನ್ನೂ ಓದಿ: GT vs SRH IPL 2026 Live Score: ಟೈಟಾನ್ಸ್​ vs ಸನ್​ರೈಸರ್ಸ್​​

ಗುಜರಾತ್ ಟೈಟಾನ್ಸ್ ತಂಡ: ಶುಭ್​ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಕುಮಾರ್ ಕುಶಾಗ್ರಾ, ಅನುಜ್ ರಾವತ್, ಜೋಸ್ ಬಟ್ಲರ್, ನಿಶಾಂತ್ ಸಿಂಧು, ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ಅರ್ಷದ್ ಖಾನ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಇಶಾಂತ್ ಶರ್ಮಾ, ಗುರ್ನೂರ್ ಸಿಂಗ್ ಬ್ರಾರ್, ರಶೀದ್ ಖಾನ್, ಮಾನವ್ ಸುತಾರ್, ಸಾಯಿ ಕಿಶೋರ್, ಜಯಂತ್ ಯಾದವ್, ಅಶೋಕ್ ಶರ್ಮಾ, ಜೇಸನ್ ಹೋಲ್ಡರ್, ಟಾಮ್ ಬ್ಯಾಂಟನ್, ಪೃಥ್ವಿ ರಾಜ್ ಯಾರ್ರಾ, ಲ್ಯೂಕ್ ವುಡ್.

ಸನ್‌ರೈಸರ್ಸ್ ಹೈದರಾಬಾದ್: ಪ್ಯಾಟ್ ಕಮ್ಮಿನ್ಸ್ (ನಾಯಕ), ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಅನಿಕೇತ್ ವರ್ಮಾ, ಸ್ಮರಣ್ ರವಿಚಂದ್ರನ್, ಇಶಾನ್ ಕಿಶನ್, ಹೆನ್ರಿಕ್ ಕ್ಲಾಸೆನ್, ನಿತೀಶ್ ಕುಮಾರ್ ರೆಡ್ಡಿ, ಹರ್ಷ್ ದುಬೆ, ಕಮಿಂದು ಮೆಂಡಿಸ್, ಹರ್ಷಲ್ ಪಟೇಲ್, ಬ್ರೈಡನ್ ಕಾರ್ಸ್​, ಜಯದೇವ್ ಉನದ್ಕತ್, ಎಶಾನ್ ಮಾಲಿಂಗ, ಝೀಶಾನ್ ಅನ್ಸಾರಿ, ಶಿವಾಂಗ್ ಕುಮಾರ್, ಸಲೀಲ್ ಅರೋರ, ಸಾಕಿಬ್ ಹುಸೈನ್, ಓಂಕಾರ್ ತರ್ಮಲೆ, ಅಮಿತ್ ಕುಮಾರ್, ಪ್ರಫುಲ್ ಹಿಂಗೆ, ಕ್ರೇನ್ಸ್ ಫುಲೆಟ್ರಾ, ಲಿಯಾಮ್ ಲಿವಿಂಗ್​ಸ್ಟೋನ್ಸ್, ಶಿವಂ ಮಾವಿ, ಜ್ಯಾಕ್ ಎಡ್ವರ್ಡ್ಸ್.

Follow Us