AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kane Williamson: ಗೆದ್ದ ಖುಷಿಯಲ್ಲಿದ್ದ ಗುಜರಾತ್​ಗೆ ಬಿಗ್ ಶಾಕ್: ಐಪಿಎಲ್​ನಿಂದ ಕೇನ್ ವಿಲಿಯಮ್ಸನ್ ಔಟ್

IPL 2023, Kane Williamson Ruled Out: ಗುಜರಾತ್ ಟೈಟಾನ್ಸ್ ತಂಡದ ಸ್ಟಾರ್ ಬ್ಯಾಟರ್ ಕೇನ್ ವಿಲಿಯಮ್ಸನ್ ಸಂಪೂರ್ಣ ಐಪಿಎಲ್ 2023 ಟೂರ್ನಿಯಿಂದ ಹೊರಬಿದ್ದಿದ್ದಾರೆ. ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಇಂಜುರಿಗೆ ತುತ್ತಾದ ಇವರು ಅರ್ಧದಲ್ಲೇ ಮೈದಾನ ತೊರೆಯಬೇಕಾಯಿತು.

Kane Williamson: ಗೆದ್ದ ಖುಷಿಯಲ್ಲಿದ್ದ ಗುಜರಾತ್​ಗೆ ಬಿಗ್ ಶಾಕ್: ಐಪಿಎಲ್​ನಿಂದ ಕೇನ್ ವಿಲಿಯಮ್ಸನ್ ಔಟ್
Kane Williamson Ruled Out
Vinay Bhat
|

Updated on:Apr 01, 2023 | 12:17 PM

Share

13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯದಲ್ಲಿ ಗೆದ್ದು ಬೀಗಿದ್ದ ಗುಜರಾತ್ ಟೈಟಾನ್ಸ್​ಗೆ (Gujarat Titans) ಇದೀಗ ದೊಡ್ಡ ಹೊಡೆತ ಬಿದ್ದಿದೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 5 ವಿಕೆಟ್​ಗಳ ಜಯ ಸಾಧಿಸಿದ ಹಾರ್ದಿಕ್ ಪಡೆಗೆ ಹಿನ್ನಡೆ ಆಗಿದೆ. ತಂಡದ ಸ್ಟಾರ್ ಬ್ಯಾಟರ್, ನ್ಯೂಜಿಲೆಂಡ್​ನ ಕೇನ್ ವಿಲಿಯಮ್ಸನ್ (Kane Williamson) ಸಂಪೂರ್ಣ ಐಪಿಎಲ್ 2023 (IPL 2023) ಟೂರ್ನಿಯಿಂದ ಹೊರಬಿದ್ದಿದ್ದಾರೆ. ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಇಂಜುರಿಗೆ ತುತ್ತಾದ ಇವರು ಅರ್ಧದಲ್ಲೇ ಮೈದಾನ ತೊರೆಯಬೇಕಾಯಿತು. ಇದೀಗ ಕೇನ್ ಗಾಯದ ಬಗ್ಗೆ ಅಪ್ಡೇಟ್ ಬಂದಿದ್ದು, ವಿಶ್ರಾಂತಿಯ ಅಗತ್ಯವಿರುವ ಕಾರಣ ಸಂಪೂರ್ಣ ಟೂರ್ನಿಯಿಂದ ಹೊರಗುಳಿಯಲಿದ್ದಾರೆ.

ಈ ಪಂದ್ಯದಲ್ಲಿ ಟಾಸ್ ಸೋತ ಚೆನ್ನೈ ಸೂಪರ್ ಕಿಂಗ್ಸ್ ಬ್ಯಾಟಿಂಗ್ ಆರಂಭಿಸಿತು. ಪಂದ್ಯದ ಮಧ್ಯೆ ಸಿಕ್ಸರ್ ತಡೆಯುವ ಪ್ರಯತ್ನದಲ್ಲಿ ಬೌಂಡರಿ ಗೆರೆಯಾಚೆ ಬಿದ್ದು ಕೇನ್ ವಿಲಿಯಮ್ಸನ್ ಗಾಯಗೊಂಡರು. ರುತುರಾಜ್ ಗಾಯಕ್ವಾಡ್ ಬಾರಿಸಿದ ಚೆಂಡು ಸಿಕ್ಸರ್‌ನತ್ತ ಧಾವಿಸಿತ್ತು. ಈ ಸಂದರ್ಭದಲ್ಲಿ ಬೌಂಡರಿ ಗೆರೆಯ ಸನಿಹ ಫೀಲ್ಡಿಂಗ್ ನಡೆಸುತ್ತಿದ್ದ ಮಿಲಿಯಮ್ಸನ್ ಚೆಂಡನ್ನು ಹಾರಿ ಸಿಕ್ಸರ್ ತಡೆಯುವಲ್ಲಿ ಯಶಸ್ವಿಯಾದರು. ಆದರೆ ನೆಲಕ್ಕೆ ಬಿದ್ದ ಸಂದರ್ಭ ಕೇನ್ ಮೊಣಕಾಲಿಗೆ ಗಾಯವಾಗಿದೆ. ಅಲ್ಲಿಂದ ಏಳಲು ಕೂಡ ಇವರಿಗೆ ಸಾಧ್ಯವಾಗಲಿಲ್ಲ.

MS Dhoni: ಐಪಿಎಲ್ ಸಿಕ್ಸರ್ ಕಿಂಗ್​ಗಳ ಪಟ್ಟಿಗೆ ಎಂಎಸ್ ಧೋನಿ ಎಂಟ್ರಿ..!

ಇದನ್ನೂ ಓದಿ
Image
MS Dhoni Six: ಎಂಎಸ್ ಧೋನಿ ಸಿಡಿಸಿದ ಆ ಒಂದು ಸಿಕ್ಸ್​ಗೆ ದಂಗಾದ ನರೇಂದ್ರ ಮೋದಿ ಸ್ಟೇಡಿಯಂ: ವೈರಲ್ ವಿಡಿಯೋ
Image
IPL 2023 Points Table: ಗುಜರಾತ್-ಚೆನ್ನೈ ಪಂದ್ಯದ ಬಳಿಕ ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿಯಿದೆ?, ಪಾಯಿಂಟ್ ಟೇಬಲ್ ಹೇಗಿದೆ?
Image
IPL 2023, PBKS vs KKR: ಐಪಿಎಲ್​ನಲ್ಲಿಂದು ಡಬಲ್ ಧಮಾಕ: ಒಂದೇ ದಿನ ಎರಡು ಪಂದ್ಯ: ಯಾವುದೆಲ್ಲ?, ಇಲ್ಲಿದೆ ಮಾಹಿತಿ
Image
MS Dhoni: ಎಂಎಸ್ ಧೋನಿ ಕಾಲು ಮುಟ್ಟಿ ನಮಸ್ಕರಿಸಿದ ಅರಿಜಿತ್ ಸಿಂಗ್: ಚೆನ್ನೈ-ಗುಜರಾತ್ ಪಂದ್ಯದ ರೋಚಕ ಫೊಟೋ ಇಲ್ಲಿದೆ

ತೀವ್ರ ನೋವಿಗೆ ಒಳಗಾಗಿದ್ದ ಕೇನ್​ಗೆ ತಕ್ಷಣವೇ ಜಿಟಿ ತಂಡದ ಫೀಸಿಯೋ ಆಗಮಿಸಿ ಪ್ರಾಥಮಿಕ ಚಿಕಿತ್ಸೆ ನೀಡಿದರು. ಆದರೆ, ನೋವಿನ ಪ್ರಮಾಣ ಕಡಿಮೆ ಆಗದ ಕಾರಣ ಮೈದಾನವನ್ನು ತೆರೆದರು. ಸಾಯಿ ಸುದರ್ಶನ ಇಂಪಾಕ್ಟ್ ಪ್ಲೇಯರ್ ಆಗಿ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಕೇನ್ ಇಂಜುರಿ ಕುರಿತ ಅಪ್ಡೇಟ್ ಬಂದಿದ್ದು ಸಂಪೂರ್ಣ ಟೂರ್ನಿಯಿಂದ ಹೊರಬಿದ್ದಿದ್ದಾರೆ.

ಧೋನಿ ಇಂಜುರಿ:

ಮೊದಲ ಪಂದ್ಯದಲ್ಲೇ ಸಿಎಸ್​ಕೆ ನಾಯಕ ಎಂಎಸ್ ಧೋನಿ ಕೂಡ ಇಂಜುರಿಗೆ ತುತ್ತಾದ ಘಟನೆ ನಡೆದಿದೆ. ವಿಕೆಟ್ ಕೀಪಿಂಗ್ ಮಾಡುತ್ತಿರುವಾಗ ಚೆಂಡು ಹಿಡಿಯಲು ಡೈವ್ ಬಿದ್ದಾಗ ಧೋನಿ ಅವರು ಗಾಯಕ್ಕೆ ತುತ್ತಾಗಿದ್ದಾರೆ. ಎಂಎಸ್​ಡಿಯ ಮೊಣ ಕಾಲಿಗೆ ಜೋರಾದ ಪೆಟ್ಟಾಗಿದ್ದು ಮೈದಾನದಲ್ಲಿ ಏಳಲು ಸಾಧ್ಯವಾಗದೆ ಕಷ್ಟ ಪಡುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ. ಬಳಿಕ ಸಿಎಸ್​ಕೆ ಫಿಸಿಯೊ ಧೋನಿ ಇರುವ ಕಡೆ ಬಂದು ಆರೈಕೆ ಮಾಡಿದರು. ಸದ್ಯ ಧೋನಿಯ ಗಾಯ ಎಷ್ಟರ ಮಟ್ಟಿಗೆ ದೊಡ್ಡದಾಗಿದೆ ಎಂಬುದು ತಿಳಿದುಬಂದಿಲ್ಲ. ಅಥವಾ ಮುಂದಿನ ಪಂದ್ಯಕ್ಕೆ ಲಭ್ಯರಿರುತ್ತಾರ ಎಂಬುದು ಇನ್ನಷ್ಟೆ ಖಚಿತವಾಗಬೇಕಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:09 pm, Sat, 1 April 23

ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​