Gujarat Titans
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2023) ಟೂರ್ನಿಯಲ್ಲಿ 57 ಪಂದ್ಯಗಳು ಮುಕ್ತಾಯಗೊಂಡಿದೆ. ಎದುರಾಳಿಗೆ 200+ ಟಾರ್ಗೆಟ್ ನೀಡಿದರೂ ಸುಲಭವಾಗಿ ಚೇಸ್ ಮಾಡಿ ಗೆಲುವು ಸಾಧಿಸುವುದು ಈ ಬಾರಿಯ ಟೂರ್ನಿಯಲ್ಲಿ ಹೆಚ್ಚಾಗುತ್ತಿವೆ. ಶುಕ್ರವಾರ ನಡೆದ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಣ ಮುಖಾಮುಖಿಯಲ್ಲಿ ಮುಂಬೈ 27 ರನ್ಗಳ ಭರ್ಜರಿ ಜಯ ಕಂಡಿತು. ಇಂದು ಐಪಿಎಲ್ನಲ್ಲಿ ಹೈದರಾಬಾದ್-ಲಖನೌ ಮತ್ತು ಡೆಲ್ಲಿ-ಪಂಜಾಬ್ ನಡುವೆ ಒಟ್ಟು ಎರಡು ಪಂದ್ಯಗಳು ನಡೆಯಲಿದೆ. ಸದ್ಯ ಐಪಿಎಲ್ 2023 ಪಾಯಿಂಟ್ಸ್ ಟೇಬಲ್ ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿಯಿದೆ ಎಂಬುದನ್ನು ನೋಡೋಣ.
- ಗುಜರಾತ್ ಟೈಟಾನ್ಸ್ ತಂಡ ಶುಕ್ರಾವರದ ಪಂದ್ಯದಲ್ಲಿ ಮುಂಬೈ ವಿರುದ್ಧ ಸೋತರೂ ಅಗ್ರಸ್ಥಾನದಲ್ಲಿ ಭದ್ರವಾಗಿದ್ದು ಪ್ಲೇ ಆಫ್ಗೆ ಬಹುತೇಕ ಕಾಲಿಟ್ಟಿದೆ. ಆಡಿದ 12 ಪಂದ್ಯಗಳಲ್ಲಿ ಎಂಟು ಗೆಲುವು, ನಾಲ್ಕು ಸೋಲುಂಡು +0.761 ರನ್ರೇಟ್ನೊಂದಿಗೆ 16 ಅಂಕ ಸಂಪಾದಿಸಿದೆ.
- ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಎರಡನೇ ಸ್ಥಾನದಲ್ಲಿದೆ. ಆಡಿದ 12 ಪಂದ್ಯಗಳ ಪೈಕಿ ಏಳರಲ್ಲಿ ಗೆಲುವು ನಾಲ್ಕರಲ್ಲಿ ಸೋಲು ಕಂಡು ಒಟ್ಟು 15 ಅಂಕ ಸಂಪಾದಿಸಿದೆ. +0.493 ರನ್ರೇಟ್ ಹೊಂದಿದೆ.
- ಜಿಟಿ ವಿರುದ್ಧ ಗೆದ್ದು ಮುಂಬೈ ಇಂಡಿಯನ್ಸ್ ತಂಡ ಮೂರನೇ ಸ್ಥಾನಕ್ಕೆ ಜಿಗಿದಿದೆ. ಇವರು ಆಡಿದ 12 ಪಂದ್ಯದಲ್ಲಿ 5 ಸೋಲು, ಏಳು ಗೆಲುವು ಕಂಡು 14 ಅಂಕ ಸಂಪಾದಿಸಿ -0.117 ರನ್ರೇಟ್ ಹೊಂದಿದೆ.
- ರಾಜಸ್ಥಾನ್ ರಾಯಲ್ಸ್ ತಂಡ ಪಾಯಿಂಟ್ ಟೇಬಲ್ನಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಆಡಿದ 12 ಪಂದ್ಯಗಳಲ್ಲಿ ಆರು ಗೆಲುವು, ಆರು ಸೋಲುಂಡು +0.633ರನ್ರೇಟ್ನೊಂದಿಗೆ 12 ಅಂಕ ಸಂಪಾದಿಸಿದೆ.
- ಲಖನೌ ಸೂಪರ್ ಜೇಂಟ್ಸ್ ತಂಡ ಐದನೇ ಸ್ಥಾನದಲ್ಲಿದೆ. ಆಡಿದ ಹನ್ನೊಂದು ಪಂದ್ಯಗಳಲ್ಲಿ ಐದು ಗೆಲುವು, ಐದು ಸೋಲು ಕಂಡು 11 ಅಂಕ ಸಂಪಾದಿಸಿ +0.294 ರನ್ರೇಟ್ ಹೊಂದಿದೆ.
- ರಾಯಲ್ ಚಾಲೆಂಜರ್ಸ್ ಬೆಂಗಳೂರು ಆರನೇ ಸ್ಥಾನದಲ್ಲಿದೆ. ಆಡಿದ ಹನ್ನೊಂದು ಪಂದ್ಯಗಳ ಪೈಕಿ ಐದರಲ್ಲಿ ಗೆಲುವು ಆರರಲ್ಲಿ ಸೋಲು ಕಂಡು 10 ಅಂಕ ಸಂಪಾದಿಸಿ -0.345 ರನ್ರೇಟ್ ಹೊಂದಿದೆ.
- ಕೆಕೆಆರ್ ಪಾಯಿಂಟ್ ಟೇಬಲ್ನಲ್ಲಿ ಏಳನೇ ಸ್ಥಾನಕ್ಕೆ ಕುಸಿದಿದೆ. ಆಡಿದ 12 ಪಂದ್ಯಗಳಲ್ಲಿ ಐದು ಗೆಲುವು, ಏಳು ಪಂದ್ಯಗಳಲ್ಲಿ ಸೋಲುಂಡು -0.357ರನ್ರೇಟ್ನೊಂದಿಗೆ 10 ಅಂಕ ಸಂಪಾದಿಸಿದೆ.
- ಪಂಜಾಬ್ ಕಿಂಗ್ಸ್ ಆಡಿದ 11 ಪಂದ್ಯಗಳಲ್ಲಿ ಆರು ಸೋಲು- ಐದು ಜಯ ಕಂಡು 10 ಅಂಕ ಹೊಂದಿ -0.441ರನ್ರೇಟ್ನೊಂದಿಗೆ ಎಂಟನೇ ಸ್ಥಾನಲ್ಲಿದೆ.
- ಸನ್ರೈಸರ್ಸ್ ಹೈದರಾಬಾದ್ ತಂಡ ಒಂಬತ್ತನೇ ಸ್ಥಾನದಲ್ಲಿದೆ. ಆಡಿದ 10 ಪಂದ್ಯದಲ್ಲಿ ಆರರಲ್ಲಿ ಸೋಲು ನಾಲ್ಕರಲ್ಲಿ ಜಯ ಕಂಡು 8 ಅಂಕ ಸಂಪಾದಿಸಿ -0.472 ರನ್ರೇಟ್ ಹೊಂದಿದೆ.
- ಡೆಲ್ಲಿ ಕ್ಯಾಪಿಟಲ್ಸ್ ಕೊನೆಯ ಸ್ಥಾನದಲ್ಲಿದೆ. ಆಡಿದ 11 ಪಂದ್ಯಗಳ ಪೈಕಿ ನಾಲ್ಕರಲ್ಲಿ ಜಯ ಸಾಧಿಸಿ, ಏಳು ಪಂದ್ಯಗಳಲ್ಲಿ ಸೋಲುಂಡು 8 ಅಂಕ ಸಂಪಾದಿಸಿ -0.605 ರನ್ರೇಟ್ ಹೊಂದಿದೆ.
IPL 2023: RCB ಪಾಲಿಗೆ ಮುಂದಿನ ಪಂದ್ಯ ಯಾಕೆ ಅಷ್ಟೊಂದು ಮುಖ್ಯ ಗೊತ್ತಾ?
ಆರೆಂಜ್ ಕ್ಯಾಪ್:
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡುಪ್ಲೆಸಿಸ್ ಆರೆಂಜ್ ಕ್ಯಾಪ್ ತೊಟ್ಟಿದ್ದಾರೆ. ಇವರು ಆಡಿದ 11 ಪಂದ್ಯಗಳಲ್ಲಿ ಆರು ಅರ್ಧಶತಕ ಸಿಡಿಸಿ ಒಟ್ಟು 576 ರನ್ ಗಳಿಸಿದ್ದಾರೆ. ರಾಜಸ್ಥಾನ್ ತಂಡದ ಯಶಸ್ವಿ ಜೈಸ್ವಾಲ್ ದ್ವಿತೀಯ ಸ್ಥಾನದಲ್ಲಿದ್ದು ಫಾಫ್ಗಿಂತ 1 ರನ್ ಹಿಂದೆಯಿದ್ದಾರಷ್ಟೆ. ಇವರು ಆಡಿದ 12 ಪಂದ್ಯಗಳಲ್ಲಿ ನಾಲ್ಕು ಅರ್ಧಶತಕ, 1 ಶತಕ ಸಿಡಿಸಿ ಒಟ್ಟು 575 ರನ್ ಕಲೆಹಾಕಿದ್ದಾರೆ. ಗುಜರಾತ್ ತಂಡದ ಶುಭ್ಮನ್ ಗಿಲ್ ಮೂರನೇ ಸ್ಥಾನಕ್ಕೆ ಜಿಗಿದಿದ್ದು 12 ಪಂದ್ಯಗಳಿಂದ 475 ರನ್ ಗಳಿಸಿದ್ದಾರೆ.
ಪರ್ಪಲ್ ಕ್ಯಾಪ್:
ಗುಜರಾತ್ ಟೈಟಾನ್ಸ್ ತಂಡದ ರಶೀದ್ ಖಾನ್ ಪರ್ಪಲ್ ಕ್ಯಾಪ್ ತೊಟ್ಟಿದ್ದಾರೆ. ಇವರು ಆಡಿದ 12 ಪಂದ್ಯಗಳಲ್ಲಿ 23 ವಿಕೆಟ್ ಪಡೆದುಕೊಂಡಿದ್ದಾರೆ. ರಾಜಸ್ಥಾನ್ ರಾಯಲ್ಸ್ ತಂಡದ ಸ್ಪಿನ್ನರ್ ಯುಜ್ವೇಂದ್ರ ಚಹಲ್ 12 ಪಂದ್ಯಗಳಿಂದ 21 ವಿಕೆಟ್ ಪಡೆದು ದ್ವಿತೀಯ ಸ್ಥಾನದಲ್ಲಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದ ಪಿಯೂಷ್ ಚಾವ್ಲಾ ತೃತೀಯ ಸ್ಥಾನದಲ್ಲಿದ್ದು ಹನ್ನೆರಡು ಪಂದ್ಯಗಳಲ್ಲಿ 19 ವಿಕೆಟ್ ಪಡೆದುಕೊಂಡಿದ್ದಾರೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ