AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

GT vs CSK: ಸಿಎಸ್​ಕೆ ವಿರುದ್ಧ 89 ರನ್​ಗಳಿಂದ ಗೆದ್ದ ಗುಜರಾತ್‌; ಅಗ್ರಸ್ಥಾನದಲ್ಲಿ ಆರ್​ಸಿಬಿ ಸೇಫ್

IPL 2026 GT vs CSK: ಐಪಿಎಲ್ 2026 ರ 66 ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್, ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 89 ರನ್​ಗಳಿಂದ ಸೋಲಿಸಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿತು. ಶುಭಮನ್ ಗಿಲ್, ಸಾಯಿ ಸುದರ್ಶನ್ ಮತ್ತು ಜೋಸ್ ಬಟ್ಲರ್ ಅವರ ಭರ್ಜರಿ ಅರ್ಧಶತಕಗಳ ನೆರವಿನಿಂದ ಗುಜರಾತ್ 229 ರನ್ ಗಳಿಸಿತು. ಮೊಹಮ್ಮದ್ ಸಿರಾಜ್, ಕಗಿಸೊ ರಬಾಡ ಮತ್ತು ರಶೀದ್ ಖಾನ್ ತಲಾ ಮೂರು ವಿಕೆಟ್ ಪಡೆದು ಸಿಎಸ್​ಕೆಯನ್ನು 140 ರನ್‌ಗಳಿಗೆ ಆಲೌಟ್ ಮಾಡಿದರು. ಈ ಸೋಲಿನಿಂದ ಸಿಎಸ್‌ಕೆ ಟೂರ್ನಿಯಿಂದ ಹೊರಬಿದ್ದಿದೆ.

GT vs CSK: ಸಿಎಸ್​ಕೆ ವಿರುದ್ಧ 89 ರನ್​ಗಳಿಂದ ಗೆದ್ದ ಗುಜರಾತ್‌; ಅಗ್ರಸ್ಥಾನದಲ್ಲಿ ಆರ್​ಸಿಬಿ ಸೇಫ್
Gujarat
ಪೃಥ್ವಿಶಂಕರ
|

Updated on:May 21, 2026 | 11:26 PM

Share

ಐಪಿಎಲ್ 2026 (IPL 2026) ರ 66 ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ (GT vs CSK) ಪರಸ್ಪರ ಮುಖಾಮುಖಿಯಾಗಿದ್ದವು. ಈ ಆವೃತ್ತಿಯಲ್ಲಿ ಎರಡೂ ತಂಡಗಳ 14 ನೇ ಮತ್ತು ಕೊನೆಯ ಲೀಗ್ ಪಂದ್ಯ ಇದಾಗಿತ್ತು. ಈ ಪಂದ್ಯದಲ್ಲಿ ಸಿಎಸ್​ಕೆ ತಂಡವನ್ನು 89 ರನ್​ಗಳಿಂದ ಸೋಲಿಸಿದ ಗುಜರಾತ್ ಟೈಟಾನ್ಸ್ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ. ಅಂದರೆ ಹಾಲಿ ಚಾಂಪಿಯನ್‌ ಆರ್​ಸಿಬಿ ಅಗ್ರಸ್ಥಾನದಲ್ಲೇ ಮುಂದುವರೆದಿದೆ. ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ ಟೈಟಾನ್ಸ್ ಮೂವರ ಅರ್ಧಶತಕದ ನೆರವಿನಿಂದ 229 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಸಿಎಸ್​ಕೆ 140 ರನ್​ಗಳಿಗೆ ಆಲೌಟ್ ಆಗುವ ಮೂಲಕ ಹೀನಾಯವಾಗಿ ಸೋತು ಟೂರ್ನಿಯಿಂದ ಹೊರಬಿದ್ದಿತು.

ಗುಜರಾತ್ ಬ್ಯಾಟಿಂಗ್ ಅಬ್ಬರ

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು ಉತ್ತಮ ಆರಂಭವನ್ನೇ ಪಡೆಯಿತು. ನಾಯಕ ಶುಭಮನ್ ಗಿಲ್ ಮತ್ತು ಸಾಯಿ ಸುದರ್ಶನ್ ಮೊದಲ ವಿಕೆಟ್‌ಗೆ 12.2 ಓವರ್‌ಗಳಲ್ಲಿ 125 ರನ್ ಸೇರಿಸಿದರು. ಗಿಲ್ 37 ಎಸೆತಗಳಲ್ಲಿ 64 ರನ್ ಗಳಿಸಿದರೆ, ಸುದರ್ಶನ್ 53 ಎಸೆತಗಳಲ್ಲಿ 84 ರನ್ ಗಳಿಸಿ ಔಟಾದರು. ಇನ್ನಿಂಗ್ಸ್ ಅಂತ್ಯದ ವೇಳೆಗೆ, ಜೋಸ್ ಬಟ್ಲರ್ 27 ಎಸೆತಗಳಲ್ಲಿ 5 ಬೌಂಡರಿ ಮತ್ತು 4 ಸಿಕ್ಸರ್‌ಗಳನ್ನು ಒಳಗೊಂಡಂತೆ ಅಜೇಯ 57 ರನ್ ಗಳಿಸಿದರು. ಈ ಮೂವರ ಅರ್ಧಶತಕದಿಂದಾಗಿ ಗುಜರಾತ್ 20 ಓವರ್‌ಗಳಲ್ಲಿ 229 ರನ್‌ಗಳ ಬೃಹತ್ ಮೊತ್ತವನ್ನು ದಾಖಲಿಸಿತು. ಸಿಎಸ್‌ಕೆ ಪರ ಸ್ಪೆನ್ಸರ್ ಜಾನ್ಸನ್, ಅನ್ಶುಲ್ ಕಾಂಬೋಜ್ ಮತ್ತು ಮುಖೇಶ್ ಚೌಧರಿ ತಲಾ 1 ವಿಕೆಟ್ ಪಡೆದರಾದರೂ ಯಾವುದೇ ಬೌಲರ್​ಗೆ ರನ್​ ವೇಗಕ್ಕೆ ಕಡಿವಾಣ ಹಾಕಲು ಸಾಧ್ಯವಾಗಲಿಲ್ಲ.

ಸಿಎಸ್​ಕೆ ಕಳಪೆ ಬ್ಯಾಟಿಂಗ್

230 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕಳಪೆ ಆರಂಭ ಪಡೆಯಿತು. ಮೊದಲ ಓವರ್‌ನಲ್ಲೇ ಮೊಹಮ್ಮದ್ ಸಿರಾಜ್ ಸಂಜು ಸ್ಯಾಮ್ಸನ್ ಅವರನ್ನು 0 ರನ್‌ಗೆ ಔಟ್ ಮಾಡಿದರು. ನಂತರ, ರುತುರಾಜ್ ಗಾಯಕ್ವಾಡ್ ಮತ್ತು ಉರ್ವಿಲ್ ಪಟೇಲ್ ಕೂಡ ಸಿರಾಜ್ ಬೌಲಿಂಗ್‌ಗೆ ಬಲಿಯಾದರು. ಸಿರಾಜ್ ತನ್ನ ಮೊದಲ ಎರಡು ಓವರ್‌ಗಳಲ್ಲಿ ಮೂರು ವಿಕೆಟ್‌ಗಳನ್ನು ಕಬಳಿಸಿ ಸಿಎಸ್‌ಕೆ ಬೆನ್ನೆಲುಬನ್ನು ಮುರಿದರು. ಕಗಿಸೊ ರಬಾಡ ಮತ್ತು ರಶೀದ್ ಖಾನ್ ಕೂಡ ಅದ್ಭುತ ಬೌಲಿಂಗ್ ಮಾಡಿದರು. ರಬಾಡ ಮತ್ತು ರಶೀದ್ ಖಾನ್ ಕೂಡ ಮೂರು ವಿಕೆಟ್‌ಗಳನ್ನು ಪಡೆದರು.

GT vs CSK IPL 2026 Highlights: ಗುಜರಾತ್ ವಿರುದ್ಧ ಹೀನಾಯವಾಗಿ ಸೋತ ಸಿಎಸ್​ಕೆ

ಮತ್ತೊಂದೆಡೆ, ಶಿವಂ ದುಬೆ ಸಿಎಸ್​ಕೆ ಪರ ಏಕಾಂಗಿ ಹೋರಾಟ ನಡೆಸಿ 17 ಎಸೆತಗಳಲ್ಲಿ 47 ರನ್​ಗಳ ಇನ್ನಿಂಗ್ಸ್ ಆಡಿದರಾದರೂ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಸಿಎಸ್​ಕೆ 13.4 ಓವರ್‌ಗಳಲ್ಲಿ 140 ರನ್‌ಗಳಿಗೆ ಆಲೌಟ್ ಆಯಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:24 pm, Thu, 21 May 26

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ