AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024 Auction: ಹಾರ್ದಿಕ್ ಮುಂಬೈ ಸೇರುವುದು ಖಚಿತ: ಪಾಂಡ್ಯ ಇರುವ ವಿಡಿಯೋ ಗುಜರಾತ್ ಪೇಜ್​ನಿಂದ ಡಿಲೀಟ್

Hardik Pandya: ಮುಂಬೈ ಇಂಡಿಯನ್ಸ್‌ಗೆ ಹಾರ್ದಿಕ್ ಪಾಂಡ್ಯ ಸೇರುವುದು ಬಹುತೇಕ ಖಚಿತವಾಗಿದೆ. ಇದಕ್ಕೆ ಪುಷ್ಠಿ ಎಂಬಂತೆ ಗುಜರಾತ್ ಟೈಟಾನ್ಸ್ ಫ್ರಾಂಚೈಸಿ ತನ್ನ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿದ ಕೊನೆಯ ಕೆಲವು ವೀಡಿಯೊಗಳಲ್ಲಿ ಹಾರ್ದಿಕ್ ಪಾಂಡ್ಯ ಎಲ್ಲಿಯೂ ಕಂಡುಬರುತ್ತಿಲ್ಲ.

IPL 2024 Auction: ಹಾರ್ದಿಕ್ ಮುಂಬೈ ಸೇರುವುದು ಖಚಿತ: ಪಾಂಡ್ಯ ಇರುವ ವಿಡಿಯೋ ಗುಜರಾತ್ ಪೇಜ್​ನಿಂದ ಡಿಲೀಟ್
Hardik Pandya and Gujarat Titans
Vinay Bhat
|

Updated on: Nov 26, 2023 | 10:49 AM

Share

ಇಂಡಿಯನ್ ಪ್ರೀಮಿಯರ್ ಲೀಗ್ ಫ್ರಾಂಚೈಸಿಗಳು ಐಪಿಎಲ್ 2024 ಹರಾಜಿಗಾಗಿ (IPL 2024 Auction) ಭರ್ಜರಿ ತಯಾರಿ ನಡೆಸುತ್ತಿವೆ. ಇದರ ನಡುವೆ ಕೆಲ ಶಾಕಿಂಗ್ ವಹಿವಾಟು ಕೂಡ ನಡೆಯುತ್ತಿದೆ. ಫ್ರಾಂಚೈಸಿಗಳು ಹರಾಜಿಗು ಮೊದಲು ಟ್ರೇಡ್ ಮೂಲಕ ಆಟಗಾರರನ್ನು ವಿನಿಮಯ ಮಾಡಿಕೊಳ್ಳುವ ಆಯ್ಕೆಯನ್ನು ಹೊಂದಿವೆ. ಸದ್ಯ ಇದರಲ್ಲಿ ದೊಡ್ಡ ವಿಷಯ ಎಂದರೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಹಾರ್ದಿಕ್ ಪಾಂಡ್ಯ ಅವರನ್ನು ಮರಳಿ ಕರೆತರಲು ಮುಂದಾಗಿದೆ ಎಂದು ವರದಿಯಾಗಿದೆ. ಗುಜರಾತ್‌ ಟೈಟಾನ್ಸ್​ನೊಂದಿಗೆ ಮುಂಬೈ 15 ಕೋಟಿ ರೂ. ಒಪ್ಪಂದದ ಮೂಲಕ ಪಾಂಡ್ಯ ಅಂಬಾನಿ ಫ್ರಾಂಚೈಸಿಗೆ ಬರಲಿದ್ದಾರಂತೆ. ಇದೀಗ ಈ ಸುದ್ದಿಗೆ ಮತ್ತಷ್ಟು ಪುಷ್ಠಿ ಸಿಕ್ಕಿದೆ.

ಮುಂಬೈ ಇಂಡಿಯನ್ಸ್‌ಗೆ ಹಾರ್ದಿಕ್ ಪಾಂಡ್ಯ ಸೇರುವುದು ಬಹುತೇಕ ಖಚಿತವಾಗಿದೆ. ಐಪಿಎಲ್ 2024 ರ ಹರಾಜಿನ ಮೊದಲು ಕುತೂಹಲಕಾರಿ ಸಂಗತಿ ಹೊರಹೊಮ್ಮಿದೆ. ಗುಜರಾತ್ ಟೈಟಾನ್ಸ್ ಫ್ರಾಂಚೈಸಿ ತನ್ನ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿದ ಕೊನೆಯ ಕೆಲವು ವೀಡಿಯೊಗಳಲ್ಲಿ ಹಾರ್ದಿಕ್ ಪಾಂಡ್ಯ ಎಲ್ಲಿಯೂ ಕಂಡುಬರುತ್ತಿಲ್ಲ. ಮಿನಿ ಹರಾಜು ಮತ್ತು ಐಪಿಎಲ್ 2024 ಕ್ಕಿಂತ ಮುಂಚಿತವಾಗಿ ಜಿಟಿ ಹಾರ್ದಿಕ್ ಅವರ ವಿಡಿಯೋವನ್ನು ಡಿಲೀಟ್ ಮಾಡಿದೆ.

IND vs AUS: ದುಬಾರಿ ಬೌಲರ್​ಗಳಿಗೆ ಕೋಕ್? 2ನೇ ಟಿ20ಗೆ ಇಲ್ಲಿದೆ ಭಾರತ ಸಂಭಾವ್ಯ ತಂಡ

ಜಿಟಿಯ ಸಾಮಾಜಿಕ ಮಾಧ್ಯಮ ಚಾನೆಲ್‌ನಲ್ಲಿ ಪೋಸ್ಟ್ ಮಾಡಿದ ಇತ್ತೀಚಿನ ವಿಡಿಯೋಗಳು ಶುಭ್​ಮನ್ ಗಿಲ್, ಮ್ಯಾಥ್ಯೂ ವೇಡ್, ರಶೀದ್ ಖಾನ್ ಮತ್ತು ಮುಂತಾದವರನ್ನು ಮಾತ್ರ ಒಳಗೊಂಡಿವೆ. ಆದಾಗ್ಯೂ, ಈ ವೀಡಿಯೊಗಳಲ್ಲಿ ಹಾರ್ದಿಕ್ ಪಾಂಡ್ಯ ಅವರ ಯಾವುದೇ ಕುರುಹು ಇಲ್ಲ. ಈ ಮೂಲಕ ಅವರು ಮುಂಬೈ ಸೇರುವುದು ಬಹುತೇಕ ಖಚಿತವಾಗಿದೆ. ಗುಜರಾತ್ ಅವರ ಇತ್ತೀಚಿನ ಕೆಲವು ಪೋಸ್ಟ್‌ಗಳನ್ನು ನೋಡೋಣ.

ಐಪಿಎಲ್ 2024 ಕ್ಕೆ ಮುಂದಿನ ತಿಂಗಳು ಮಿನಿ ಹರಾಜು ನಡೆಯಲಿದೆ, ಆದರೆ ಇದಕ್ಕೂ ಮೊದಲು, ಪ್ರತಿ ಬಾರಿಯಂತೆ, ಎಲ್ಲಾ 10 ಫ್ರಾಂಚೈಸಿಗಳಿಗೆ ಟ್ರೇಡ್ ವಿಂಡೋ ತೆರೆದಿರುತ್ತದೆ, ಇದರಲ್ಲಿ ಫ್ರಾಂಚೈಸಿ ಪರಸ್ಪರ ಆಟಗಾರರನ್ನು ವಿನಿಮಯ ಮಾಡಿಕೊಳ್ಳಬಹುದು. ಟ್ರೇಡ್ ವಿಂಡೋ ನವೆಂಬರ್ 26 ರಂದು ಕೊನೆಗೊಳ್ಳುತ್ತದೆ. ವರದಿಗಳ ಪ್ರಕಾರ, ಗುಜರಾತ್ ಟೈಟಾನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಕೇವಲ 2 ಋತುಗಳ ನಂತರ ಗುಜರಾತ್ ಟೈಟಾನ್ಸ್ ಜೊತೆಗಿನ ಸಂಬಂಧವನ್ನು ಮುರಿಯಲು ನಿರ್ಧರಿಸಿದ್ದಾರೆ. ಹಾರ್ದಿಕ್ ಮತ್ತೊಮ್ಮೆ ಮುಂಬೈ ಇಂಡಿಯನ್ಸ್‌ಗೆ ಮರಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಹಾರ್ದಿಕ್ ಮತ್ತು ಟೀಮ್ ಮ್ಯಾನೇಜ್‌ಮೆಂಟ್ ನಡುವೆ ಕೆಲಕಾಲಗಳಿಂದ ಭಿನ್ನಾಭಿಪ್ರಾಯವಿತ್ತು, ಹೀಗಾಗಿ ಹಾರ್ದಿಕ್ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
ಸಿದ್ದರಾಮಯ್ಯ ಕಡೆಗಣನೆ ಆರೋಪಕ್ಕೆ ಡಿಸಿಎಂ ಪರಮೇಶ್ವರ್ ಸ್ಪಷ್ಟನೆ
ಸಿದ್ದರಾಮಯ್ಯ ಕಡೆಗಣನೆ ಆರೋಪಕ್ಕೆ ಡಿಸಿಎಂ ಪರಮೇಶ್ವರ್ ಸ್ಪಷ್ಟನೆ
ಮಂಡ್ಯ ಹೆದ್ದಾರಿಯಲ್ಲಿ ಕಾಂಗ್ರೆಸ್ ಮುಖಂಡನ ಬರ್ತ್‌ಡೇ ದರ್ಬಾರ್
ಮಂಡ್ಯ ಹೆದ್ದಾರಿಯಲ್ಲಿ ಕಾಂಗ್ರೆಸ್ ಮುಖಂಡನ ಬರ್ತ್‌ಡೇ ದರ್ಬಾರ್
‘ಡಾಲಿಯಿಂದ ಮೋಸ ಆಗಿದೆ’; ರೀಷ್ಮಾ ನಾಣಯ್ಯ ಆರೋಪಕ್ಕೆ ಕಾರಣ ಏನು?
‘ಡಾಲಿಯಿಂದ ಮೋಸ ಆಗಿದೆ’; ರೀಷ್ಮಾ ನಾಣಯ್ಯ ಆರೋಪಕ್ಕೆ ಕಾರಣ ಏನು?
ರಾಜ್ಯದಲ್ಲಿ ಆಸ್ತಿ ಮಾರ್ಗಸೂಚಿ ದರ ಏರಿಕೆ ಸಾಧ್ಯತೆ; ಸುಳಿವು ಕೊಟ್ಟ ಡಿಸಿಎಂ
ರಾಜ್ಯದಲ್ಲಿ ಆಸ್ತಿ ಮಾರ್ಗಸೂಚಿ ದರ ಏರಿಕೆ ಸಾಧ್ಯತೆ; ಸುಳಿವು ಕೊಟ್ಟ ಡಿಸಿಎಂ
ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಸರ್ಕಾರದಿಂದ ಒಟ್ಟು 16 ಸಾವಿರ ಕೋಟಿ ಬಿಡುಗಡೆ
ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಸರ್ಕಾರದಿಂದ ಒಟ್ಟು 16 ಸಾವಿರ ಕೋಟಿ ಬಿಡುಗಡೆ
ಮೇಲುಕೋಟೆಯಲ್ಲಿ ರಾಜಮುಡಿ ಉತ್ಸವಸ್ವಾಮಿಯ ದರ್ಶನಕ್ಕೆ ಹರಿದುಬಂದ ಭಕ್ತಗಣ
ಮೇಲುಕೋಟೆಯಲ್ಲಿ ರಾಜಮುಡಿ ಉತ್ಸವಸ್ವಾಮಿಯ ದರ್ಶನಕ್ಕೆ ಹರಿದುಬಂದ ಭಕ್ತಗಣ
ಉಡುಪಿ: ವಿದ್ಯುತ್ ತಂತಿ ತಗುಲಿ ಹುಲ್ಲು ಸಾಗಿಸುತ್ತಿದ್ದ ಲಾರಿಗೆ ಬೆಂಕಿ
ಉಡುಪಿ: ವಿದ್ಯುತ್ ತಂತಿ ತಗುಲಿ ಹುಲ್ಲು ಸಾಗಿಸುತ್ತಿದ್ದ ಲಾರಿಗೆ ಬೆಂಕಿ
ಗಾನವಿ ಖಾಸಗಿವಿಷಯ ಬಿಚ್ಚಟ್ಟ ಸೌಂದರ್ಯಾ
ಗಾನವಿ ಖಾಸಗಿವಿಷಯ ಬಿಚ್ಚಟ್ಟ ಸೌಂದರ್ಯಾ
ಎರಡು ದಿನಗಳ ಫಿಲಿಪೈನ್ಸ್​ ಪ್ರವಾಸ ಮುಗಿಸಿ ದೆಹಲಿಗೆ ಮರಳಿದ ಪ್ರಧಾನಿ ಮೋದಿ
ಎರಡು ದಿನಗಳ ಫಿಲಿಪೈನ್ಸ್​ ಪ್ರವಾಸ ಮುಗಿಸಿ ದೆಹಲಿಗೆ ಮರಳಿದ ಪ್ರಧಾನಿ ಮೋದಿ
ಇಂದು ಈ ರಾಶಿಯವರು ಜೊತೆಗಿರುವವರಿಂದ ಏನನ್ನೂ ನಿರೀಕ್ಷಿಸದಿರಿ
ಇಂದು ಈ ರಾಶಿಯವರು ಜೊತೆಗಿರುವವರಿಂದ ಏನನ್ನೂ ನಿರೀಕ್ಷಿಸದಿರಿ