AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 Points Table: ಅಗ್ರಸ್ಥಾನದಲ್ಲಿ ಗುಜರಾತ್ ಭದ್ರ: ಫಾಫ್ ಡುಪ್ಲೆಸಿಸ್ ಕೈಯಲ್ಲಿ ಆರೆಂಜ್ ಕ್ಯಾಪ್

IPL 2023 Orange-Purple Cap: ಶುಕ್ರವಾರ ರಾಜಸ್ಥಾನ ವಿರುದ್ಧ ನಡೆದ ಪಂದ್ಯದಲ್ಲಿ ಗುಜರಾತ್ 9 ವಿಕೆಟ್​ಗಳ ಜಯ ದಾಖಲಿಸಿತು. ಇದೀಗ ಈ ಪಂದ್ಯದ ಬಳಿಕ ಐಪಿಎಲ್ 2023 ಪಾಯಿಂಟ್ಸ್ ಟೇಬಲ್​ ಹೇಗಿದೆ?, ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿಯಿದೆ ನೋಡೋಣ.

IPL 2023 Points Table: ಅಗ್ರಸ್ಥಾನದಲ್ಲಿ ಗುಜರಾತ್ ಭದ್ರ: ಫಾಫ್ ಡುಪ್ಲೆಸಿಸ್ ಕೈಯಲ್ಲಿ ಆರೆಂಜ್ ಕ್ಯಾಪ್
RR vs GT
Vinay Bhat
|

Updated on: May 06, 2023 | 10:41 AM

Share

ಮುಖ್ಯಾಂಶಗಳು

  • ಅಗ್ರಸ್ಥಾನದಲ್ಲಿ ಗುಜರಾತ್ ಟೈಟಾನ್ಸ್ ಭದ್ರ
  • ಫಾಫ್ ಡುಪ್ಲೆಸಿಸ್ ಕೈಯಲ್ಲಿ ಆರೆಂಜ್ ಕ್ಯಾಪ್
  • ಪರ್ಪಲ್ ಕ್ಯಾಪ್ ಯಾರ ಕೈಯಲ್ಲಿದೆ??

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್​ ಲೀಗ್ (IPL 2023) ಟೂರ್ನಿಯಲ್ಲಿ 48 ಪಂದ್ಯಗಳು ಮುಕ್ತಾಯಗೊಂಡಿದೆ. ಕೆಲ ತಂಡಗಳಿಂದ ಊಹಿಸಲಾಗದ ಪ್ರದರ್ಶನ ಬರುತ್ತಿದೆ. ಎದುರಾಳಿಗೆ 200+ ಟಾರ್ಗೆಟ್ ನೀಡಿದರೂ ಸುಲಭವಾಗಿ ಚೇಸ್ ಮಾಡಿ ಗೆಲುವು ಸಾಧಿಸುವುದು ಈ ಬಾರಿಯ ಟೂರ್ನಿಯಲ್ಲಿ ಸಾಮಾನ್ಯವಾಗುತ್ತಿದೆ. ಇಂದು ಐಪಿಎಲ್ 2023 ರಲ್ಲಿ ಎರಡು ಪಂದ್ಯಗಳು ನಡೆಯಲಿದೆ. ಮೊದಲ ಪಂದ್ಯದಲ್ಲಿ ಸಿಎಸ್​ಕೆ-ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ-ಆರ್​ಸಿಬಿ (DC vs RCB) ಮುಖಾಮುಖಿ ಆಗಲಿದೆ. ಶುಕ್ರವಾರ ರಾಜಸ್ಥಾನ ವಿರುದ್ಧ ನಡೆದ ಪಂದ್ಯದಲ್ಲಿ ಗುಜರಾತ್ 9 ವಿಕೆಟ್​ಗಳ ಸುಲಭ ಜಯ ದಾಖಲಿಸಿತು. ಇದೀಗ ಈ ಪಂದ್ಯದ ಬಳಿಕ ಐಪಿಎಲ್ 2023 ಪಾಯಿಂಟ್ಸ್ ಟೇಬಲ್​ ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿಯಿದೆ ಎಂಬುದನ್ನು ನೋಡೋಣ.

  • ಗುಜರಾತ್ ಟೈಟಾನ್ಸ್ ತಂಡ ಅಗ್ರಸ್ಥಾನದಲ್ಲಿ ಭದ್ರವಾಗಿದೆ. ಆಡಿದ ಹತ್ತು ಪಂದ್ಯಗಳಲ್ಲಿ ಏಳು ಗೆಲುವು, ಮೂರು ಸೋಲುಂಡು +0.752 ರನ್​ರೇಟ್​ನೊಂದಿಗೆ 14 ಅಂಕ ಸಂಪಾದಿಸಿದೆ.
  • ಲಖನೌ ಸೂಪರ್ ಜೇಂಟ್ಸ್ ತಂಡ ದ್ವಿತೀಯ ಸ್ಥಾನದಲ್ಲಿದೆ. ಆಡಿದ ಹತ್ತು ಪಂದ್ಯಗಳಲ್ಲಿ ಐದು ಗೆಲುವು, ನಾಲ್ಕು ಸೋಲು ಕಂಡು 11 ಅಂಕ ಸಂಪಾದಿಸಿ +0.639 ರನ್​ರೇಟ್​ ಹೊಂದಿದೆ.
  • ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೂರನೇ ಸ್ಥಾನದಲ್ಲಿದೆ. ಆಡಿದ 10 ಪಂದ್ಯಗಳಲ್ಲಿ ಐದರಲ್ಲಿ ಗೆಲುವು ನಾಲ್ಕರಲ್ಲಿ ಸೋಲು ಕಂಡು ಒಟ್ಟು 11 ಅಂಕ ಸಂಪಾದಿಸಿದೆ. +0.329 ರನ್​ರೇಟ್ ಹೊಂದಿದೆ.
  • ರಾಜಸ್ಥಾನ್ ರಾಯಲ್ಸ್ ತಂಡ ಪಾಯಿಂಟ್ ಟೇಬಲ್​ನಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಆಡಿದ 10 ಪಂದ್ಯಗಳಲ್ಲಿ ಐದು ಗೆಲುವು, ಐದು ಸೋಲುಂಡು +0.448ರನ್​ರೇಟ್​ನೊಂದಿಗೆ 10 ಅಂಕ ಸಂಪಾದಿಸಿದೆ.
  • ರಾಯಲ್ ಚಾಲೆಂಜರ್ಸ್ ಬೆಂಗಳೂರು ಐದನೇ ಸ್ಥಾನದಲ್ಲಿದೆ. ಆಡಿದ ಒಂಬತ್ತು ಪಂದ್ಯಗಳ ಪೈಕಿ ಐದರಲ್ಲಿ ಗೆಲುವು ನಾಲ್ಕರಲ್ಲಿ ಸೋಲು ಕಂಡು 10 ಅಂಕ ಸಂಪಾದಿಸಿ -0.030 ರನ್​ರೇಟ್ ಹೊಂದಿದೆ.
  • ಮುಂಬೈ ಇಂಡಿಯನ್ಸ್ ಮೇಲಕ್ಕೆರಿ ಆರನೇ ಸ್ಥಾನದಲ್ಲಿದೆ. ಆಡಿದ 9 ಪಂದ್ಯದಲ್ಲಿ 4 ಸೋಲು, ಐದು ಗೆಲುವು ಕಂಡು 10 ಅಂಕ ಸಂಪಾದಿಸಿ -0.373 ರನ್​ರೇಟ್ ಹೊಂದಿದೆ.
  • ಪಂಜಾಬ್ ಕಿಂಗ್ಸ್ ಆಡಿದ ಹತ್ತು ಪಂದ್ಯಗಳಲ್ಲಿ ಐದು ಸೋಲು- ಐದು ಜಯ ಕಂಡು 10 ಅಂಕ ಹೊಂದಿ -0.472ರನ್​ರೇಟ್​ನೊಂದಿಗೆ ಏಳನೇ ಸ್ಥಾನಕ್ಕೆ ಕುಸಿದಿದೆ.
  • ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಎಂಟನೇ ಪ್ಲೇಸ್​ನಲ್ಲಿದೆ. ಆಡಿದ 10 ಪಂದ್ಯಗಳಲ್ಲಿ ನಾಲ್ಕು ಗೆಲುವು, ಆರರಲ್ಲಿ ಸೋಲುಂಡು -0.103 ರನ್​ರೇಟ್​ನೊಂದಿಗೆ 8 ಅಂಕ ಸಂಪಾದಿಸಿದೆ.
  • ಸನ್​ರೈಸರ್ಸ್ ಹೈದರಾಬಾದ್ ತಂಡ ಒಂಬತ್ತನೇ ಸ್ಥಾನದಲ್ಲಿದೆ. ಆಡಿದ 9 ಪಂದ್ಯದಲ್ಲಿ ಆರರಲ್ಲಿ ಸೋಲು ಮೂರರಲ್ಲಿ ಜಯ ಕಂಡು 6 ಅಂಕ ಸಂಪಾದಿಸಿ -0.540 ರನ್​ರೇಟ್ ಹೊಂದಿದೆ.
  • ಡೆಲ್ಲಿ ಕ್ಯಾಪಿಟಲ್ಸ್ ಕೊನೆಯ ಸ್ಥಾನದಲ್ಲಿದೆ. ಆಡಿದ 9 ಪಂದ್ಯಗಳ ಪೈಕಿ ಕೇವಲ ಮೂರರಲ್ಲಷ್ಟೆ ಜಯ ಸಾಧಿಸಿ 6 ಅಂಕ ಸಂಪಾದಿಸಿ -0.768 ರನ್​ರೇಟ್ ಹೊಂದಿದೆ.

IPL 2023 DC vs RCB Live Streaming: ಮತ್ತೆ ಕೊಹ್ಲಿ- ಗಂಗೂಲಿ ಮುಖಾಮುಖಿ; ಪಂದ್ಯ ಆರಂಭ ಎಷ್ಟು ಗಂಟೆಗೆ?

ಆರೆಂಜ್ ಕ್ಯಾಪ್:

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡುಪ್ಲೆಸಿಸ್ ಪುನಃ ಆರೆಂಜ್ ಕ್ಯಾಪ್ ತೊಟ್ಟಿದ್ದಾರೆ. ಇವರು ಆಡಿದ ಒಂಬತ್ತು ಪಂದ್ಯಗಳಲ್ಲಿ ಐದು ಅರ್ಧಶತಕ ಸಿಡಿಸಿ ಒಟ್ಟು 466 ರನ್ ಗಳಿಸಿದ್ದಾರೆ. ರಾಜಸ್ಥಾನ್ ತಂಡದ ಯಶಸ್ವಿ ಜೈಸ್ವಾಲ್ ದ್ವಿತೀಯ ಸ್ಥಾನದಲ್ಲಿದ್ದಾರೆ. ಇವರು ಆಡಿದ ಹತ್ತು ಪಂದ್ಯಗಳಲ್ಲಿ ಮೂರು ಅರ್ಧಶತಕ, 1 ಶತಕ ಸಿಡಿಸಿ ಒಟ್ಟು 442 ರನ್ ಕಲೆಹಾಕಿದ್ದಾರೆ. ಸಿಎಸ್​ಕೆ ತಂಡದ ಡೆವೊನ್ ಕಾನ್ವೇ ಮೂರನೇ ಸ್ಥಾನದಲ್ಲಿದ್ದು 10 ಪಂದ್ಯಗಳಿಂದ 414 ರನ್ ಗಳಿಸಿದ್ದಾರೆ.

ಪರ್ಪಲ್ ಕ್ಯಾಪ್:

ಗುಜರಾತ್ ಟೈಟಾನ್ಸ್ ತಂಡದ ಮೊಹಮ್ಮದ್ ಶಮಿ ಪರ್ಪಲ್ ಕ್ಯಾಪ್ ತೊಟ್ಟಿದ್ದಾರೆ. ಇವರು ಆಡಿರುವ ಹತ್ತು ಪಂದ್ಯಗಳಲ್ಲಿ 18 ವಿಕೆಟ್ ಪಡೆದುಕೊಂಡಿದ್ದಾರೆ. ಇದೇ ತಂಡದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ಕೂಡ 10 ಪಂದ್ಯಗಳಿಂದ 18 ವಿಕೆಟ್ ಕಿತ್ತು ದ್ವಿತೀಯ ಸ್ಥಾನದಲ್ಲಿದ್ದಾರೆ. ಸಿಕೆಸ್​ಕೆ ತಂಡದ ತುಷಾರ್ ದೇಶಪಾಂಡೆ ಆಡಿರುವ 10 ಪಂದ್ಯಗಳಲ್ಲಿ 17 ವಿಕೆಟ್ ಗಳಿಸಿ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
ಹಾಸನ: 32 ಕಾಡಾನೆಗಳ ಹಿಂಡು ಪತ್ತೆ, ಡ್ರೋನ್​​ ಕ್ಯಾಮರಾದಲ್ಲಿ ದೃಶ್ಯ ಸೆರೆ
ಹಾಸನ: 32 ಕಾಡಾನೆಗಳ ಹಿಂಡು ಪತ್ತೆ, ಡ್ರೋನ್​​ ಕ್ಯಾಮರಾದಲ್ಲಿ ದೃಶ್ಯ ಸೆರೆ
ದನದ ಶೆಡ್ ಬಿಲ್ ಬಾಕಿ:ಪಂಚಾಯ್ತಿ ಮುಂದೆ ಎಮ್ಮೆ ಕರು ಕಟ್ಟಿದ ಫಲಾನುಭವಿ
ದನದ ಶೆಡ್ ಬಿಲ್ ಬಾಕಿ:ಪಂಚಾಯ್ತಿ ಮುಂದೆ ಎಮ್ಮೆ ಕರು ಕಟ್ಟಿದ ಫಲಾನುಭವಿ
ಚಿಕ್ಕಣ್ಣನ ಡ್ಯಾನ್ಸ್ ನೋಡಿ ಪ್ರಭುದೇವಗೆ ಹೋಲಿಸಿದ ಶಿವಣ್ಣ
ಚಿಕ್ಕಣ್ಣನ ಡ್ಯಾನ್ಸ್ ನೋಡಿ ಪ್ರಭುದೇವಗೆ ಹೋಲಿಸಿದ ಶಿವಣ್ಣ
ಹೆಚ್​​​ಡಿಕೆ-ಡಿಕೆಶಿ ಜಟಾಪಟಿ:ಕುಮಾರಸ್ವಾಮಿ ನಡೆಗೆ ಸ್ವಾಮೀಜಿ ಅಸಮಾಧಾನ
ಹೆಚ್​​​ಡಿಕೆ-ಡಿಕೆಶಿ ಜಟಾಪಟಿ:ಕುಮಾರಸ್ವಾಮಿ ನಡೆಗೆ ಸ್ವಾಮೀಜಿ ಅಸಮಾಧಾನ
ಲಕ್ಷ್ಮೀಪುತ್ರ ಟ್ರೇಲರ್‌ಗೆ ಶಿವಣ್ಣ ಫಿದಾ; ಚಿಕ್ಕಣ್ಣ ಭವಿಷ್ಯದ ಸ್ಟಾರ್
ಲಕ್ಷ್ಮೀಪುತ್ರ ಟ್ರೇಲರ್‌ಗೆ ಶಿವಣ್ಣ ಫಿದಾ; ಚಿಕ್ಕಣ್ಣ ಭವಿಷ್ಯದ ಸ್ಟಾರ್
ಚಿನ್ನ ಗ್ರಾಂಗೆ 10 ಸಾವಿರದ ಒಳಗೆ ಬರುತ್ತಾ? ಹೂಡಿಕೆ ತಜ್ಞರು ಹೇಳಿದ್ದೇನು?
ಚಿನ್ನ ಗ್ರಾಂಗೆ 10 ಸಾವಿರದ ಒಳಗೆ ಬರುತ್ತಾ? ಹೂಡಿಕೆ ತಜ್ಞರು ಹೇಳಿದ್ದೇನು?
ಸಚಿವ ಸ್ಥಾನ ವಂಚಿತ ಹೆಬ್ಬಾಳ್ಕರ್, ಮಹದೇವಪ್ಪಗೆ ಪ್ರಮುಖ ಹುದ್ದೆ ಸಾಧ್ಯತೆ
ಸಚಿವ ಸ್ಥಾನ ವಂಚಿತ ಹೆಬ್ಬಾಳ್ಕರ್, ಮಹದೇವಪ್ಪಗೆ ಪ್ರಮುಖ ಹುದ್ದೆ ಸಾಧ್ಯತೆ
ಚಿನ್ನದ ಬೆಲೆ ದಿಢೀರ್​​ ಕುಸಿತ ಕಂಡಿದ್ದೇಕೆ? ಇಲ್ಲಿದೆ ತಜ್ಞರ ವಿವರಣೆ
ಚಿನ್ನದ ಬೆಲೆ ದಿಢೀರ್​​ ಕುಸಿತ ಕಂಡಿದ್ದೇಕೆ? ಇಲ್ಲಿದೆ ತಜ್ಞರ ವಿವರಣೆ
ದೆಹಲಿಗೆ ತೆರಳಿದ ಹರಿಪ್ರಸಾದ್​​: KPCC ಕಾರ್ಯಾಧ್ಯಕ್ಷರ ನೇಮಕ ಬಗ್ಗೆ ಚರ್ಚೆ?
ದೆಹಲಿಗೆ ತೆರಳಿದ ಹರಿಪ್ರಸಾದ್​​: KPCC ಕಾರ್ಯಾಧ್ಯಕ್ಷರ ನೇಮಕ ಬಗ್ಗೆ ಚರ್ಚೆ?
ಹಿರಿಯೂರು ಟಿಕೆಟ್ ಫೈಟ್: ಅಮಿತ್ ಶಾ ಭೇಟಿ ಬೆನ್ನಲ್ಲೇ ಕುಮಾರಸ್ವಾಮಿ ಹೇಳಿಕೆ
ಹಿರಿಯೂರು ಟಿಕೆಟ್ ಫೈಟ್: ಅಮಿತ್ ಶಾ ಭೇಟಿ ಬೆನ್ನಲ್ಲೇ ಕುಮಾರಸ್ವಾಮಿ ಹೇಳಿಕೆ