16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2023) ಟೂರ್ನಿಯಲ್ಲಿ 48 ಪಂದ್ಯಗಳು ಮುಕ್ತಾಯಗೊಂಡಿದೆ. ಕೆಲ ತಂಡಗಳಿಂದ ಊಹಿಸಲಾಗದ ಪ್ರದರ್ಶನ ಬರುತ್ತಿದೆ. ಎದುರಾಳಿಗೆ 200+ ಟಾರ್ಗೆಟ್ ನೀಡಿದರೂ ಸುಲಭವಾಗಿ ಚೇಸ್ ಮಾಡಿ ಗೆಲುವು ಸಾಧಿಸುವುದು ಈ ಬಾರಿಯ ಟೂರ್ನಿಯಲ್ಲಿ ಸಾಮಾನ್ಯವಾಗುತ್ತಿದೆ. ಇಂದು ಐಪಿಎಲ್ 2023 ರಲ್ಲಿ ಎರಡು ಪಂದ್ಯಗಳು ನಡೆಯಲಿದೆ. ಮೊದಲ ಪಂದ್ಯದಲ್ಲಿ ಸಿಎಸ್ಕೆ-ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ-ಆರ್ಸಿಬಿ (DC vs RCB) ಮುಖಾಮುಖಿ ಆಗಲಿದೆ. ಶುಕ್ರವಾರ ರಾಜಸ್ಥಾನ ವಿರುದ್ಧ ನಡೆದ ಪಂದ್ಯದಲ್ಲಿ ಗುಜರಾತ್ 9 ವಿಕೆಟ್ಗಳ ಸುಲಭ ಜಯ ದಾಖಲಿಸಿತು. ಇದೀಗ ಈ ಪಂದ್ಯದ ಬಳಿಕ ಐಪಿಎಲ್ 2023 ಪಾಯಿಂಟ್ಸ್ ಟೇಬಲ್ ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿಯಿದೆ ಎಂಬುದನ್ನು ನೋಡೋಣ.
IPL 2023 DC vs RCB Live Streaming: ಮತ್ತೆ ಕೊಹ್ಲಿ- ಗಂಗೂಲಿ ಮುಖಾಮುಖಿ; ಪಂದ್ಯ ಆರಂಭ ಎಷ್ಟು ಗಂಟೆಗೆ?
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡುಪ್ಲೆಸಿಸ್ ಪುನಃ ಆರೆಂಜ್ ಕ್ಯಾಪ್ ತೊಟ್ಟಿದ್ದಾರೆ. ಇವರು ಆಡಿದ ಒಂಬತ್ತು ಪಂದ್ಯಗಳಲ್ಲಿ ಐದು ಅರ್ಧಶತಕ ಸಿಡಿಸಿ ಒಟ್ಟು 466 ರನ್ ಗಳಿಸಿದ್ದಾರೆ. ರಾಜಸ್ಥಾನ್ ತಂಡದ ಯಶಸ್ವಿ ಜೈಸ್ವಾಲ್ ದ್ವಿತೀಯ ಸ್ಥಾನದಲ್ಲಿದ್ದಾರೆ. ಇವರು ಆಡಿದ ಹತ್ತು ಪಂದ್ಯಗಳಲ್ಲಿ ಮೂರು ಅರ್ಧಶತಕ, 1 ಶತಕ ಸಿಡಿಸಿ ಒಟ್ಟು 442 ರನ್ ಕಲೆಹಾಕಿದ್ದಾರೆ. ಸಿಎಸ್ಕೆ ತಂಡದ ಡೆವೊನ್ ಕಾನ್ವೇ ಮೂರನೇ ಸ್ಥಾನದಲ್ಲಿದ್ದು 10 ಪಂದ್ಯಗಳಿಂದ 414 ರನ್ ಗಳಿಸಿದ್ದಾರೆ.
ಗುಜರಾತ್ ಟೈಟಾನ್ಸ್ ತಂಡದ ಮೊಹಮ್ಮದ್ ಶಮಿ ಪರ್ಪಲ್ ಕ್ಯಾಪ್ ತೊಟ್ಟಿದ್ದಾರೆ. ಇವರು ಆಡಿರುವ ಹತ್ತು ಪಂದ್ಯಗಳಲ್ಲಿ 18 ವಿಕೆಟ್ ಪಡೆದುಕೊಂಡಿದ್ದಾರೆ. ಇದೇ ತಂಡದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ಕೂಡ 10 ಪಂದ್ಯಗಳಿಂದ 18 ವಿಕೆಟ್ ಕಿತ್ತು ದ್ವಿತೀಯ ಸ್ಥಾನದಲ್ಲಿದ್ದಾರೆ. ಸಿಕೆಸ್ಕೆ ತಂಡದ ತುಷಾರ್ ದೇಶಪಾಂಡೆ ಆಡಿರುವ 10 ಪಂದ್ಯಗಳಲ್ಲಿ 17 ವಿಕೆಟ್ ಗಳಿಸಿ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ