AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌತಮ್ ಗಂಭೀರ್ ಸಲಹೆಯಿಂದ ಭಾರತದ ವಿರುದ್ಧ ಅಬ್ಬರಿಸಿದ ಗುರ್ಬಾಝ್!

India vs Afghanistan, 1st ODI: ಮಳೆಯ ಕಾರಣ 25 ಓವರ್​ಗಳಿಗೆ ಸೀಮಿತವಾಗಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡ 194 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಟೀಮ್ ಇಂಡಿಯಾ 22.5 ಓವರ್​ಗಳಲ್ಲಿ ಚೇಸ್ ಮಾಡಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಗೌತಮ್ ಗಂಭೀರ್ ಸಲಹೆಯಿಂದ ಭಾರತದ ವಿರುದ್ಧ ಅಬ್ಬರಿಸಿದ ಗುರ್ಬಾಝ್!
Gurbaz - GambhirImage Credit source: GettyImages
ಝಾಹಿರ್ ಯೂಸುಫ್
|

Updated on: Jun 14, 2026 | 1:34 PM

Share

ಟೀಮ್ ಇಂಡಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ್ ತಂಡದ ಆರಂಭಿಕ ದಾಂಡಿಗ ರಹಮಾನುಲ್ಲಾ ಗುರ್ಬಾಝ್ ಸ್ಫೋಟಕ ಶತಕ ಸಿಡಿಸಿದ್ದರು. ಈ ಶತಕದ ಬೆನ್ನಲ್ಲೇ, ಈ ಸಾಧನೆಯ ಹಿಂದೆ ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ಅಮೂಲ್ಯ ಸಲಹೆಗಳಿರುವ ವಿಚಾರ ಬಹಿರಂಗವಾಗಿದೆ. ಈ ವಿಚಾರವನ್ನು ಬಹಿರಂಗಪಡಿಸಿದ್ದು ಮತ್ಯಾರೂ ಅಲ್ಲ, ರಹಮಾನುಲ್ಲಾ ಗುರ್ಬಾಝ್.

ಇದಕ್ಕೂ ಮುನ್ನ ನಡೆದ ಏಕೈಕ ಟೆಸ್ಟ್ ಪಂದ್ಯದ ಮುಕ್ತಾಯದ ನಂತರ, ತಮ್ಮ ಬ್ಯಾಟಿಂಗ್ ಶೈಲಿ ಹಾಗೂ ಶಾಟ್ ಆಯ್ಕೆಯನ್ನು ಸುಧಾರಿಸಿಕೊಳ್ಳಲು ಗುರ್ಬಾಝ್ ಅವರು ಭಾರತದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದರು.

ಈ ಬಗ್ಗೆ ಮಾತನಾಡಿದ ಗುರ್ಬಾಝ್, “ಟೆಸ್ಟ್ ಪಂದ್ಯ ಮುಗಿದ ಬಳಿಕ ನಾನು ಗೌತಮ್ ಗಂಭೀರ್ ಸರ್ ಅವರೊಂದಿಗೆ ಸುದೀರ್ಘವಾಗಿ ಮಾತನಾಡಿದ್ದೆ. ನನ್ನ ಶಾಟ್ ಸೆಲೆಕ್ಷನ್ ಉತ್ತಮಪಡಿಸಿಕೊಳ್ಳುವ ಬಗ್ಗೆ ನಾನು ಕೇಳಿದಾಗ ಅವರು ನೀಡಿದ ಸಲಹೆಗಳು ತುಂಬಾ ನೆರವಾದವು. ಆ ಪಾಯಿಂಟ್‌ಗಳನ್ನು ನಾನು ನೆಟ್ಸ್ ಅಭ್ಯಾಸದ ವೇಳೆ ಅಳವಡಿಸಿಕೊಂಡೆ. ಜಿಜಿ (ಗೌತಮ್ ಗಂಭೀರ್) ಸರ್ ಮಾರ್ಗದರ್ಶನಕ್ಕೆ ನಾನು ಸದಾ ಕೃತಜ್ಞನಾಗಿರುತ್ತೇನೆ” ಎಂದು ಧನ್ಯವಾದಗಳನ್ನು ತಿಳಿಸಿದ್ದಾರೆ.

ಗಂಭೀರ್ – ಗುರ್ಬಾಝ್ ಬಾಂಧವ್ಯ:

ಗೌತಮ್ ಗಂಭೀರ್ ಮತ್ತು ರಹಮಾನುಲ್ಲಾ ಗುರ್ಬಾಝ್ ನಡುವೆ ಐಪಿಎಲ್‌ನಿಂದಲೇ ಉತ್ತಮ ಬಾಂಧವ್ಯವಿದೆ. ಕೋಲ್ಕತಾ ನೈಟ್ ರೈಡರ್ಸ್ (KKR) ತಂಡದ ಮೆಂಟರ್ ಆಗಿ ಗಂಭೀರ್ ಕಾರ್ಯನಿರ್ವಹಿಸುತ್ತಿದ್ದಾಗ, ಗುರ್ಬಾಝ್ ಕೆಕೆಆರ್ ತಂಡದ ಪ್ರಮುಖ ಆಟಗಾರನಾಗಿದ್ದರು.

ಗಂಭೀರ್ ಅವರ ಗರಡಿಯಲ್ಲಿ ಪಳಗಿದ್ದ ಗುರ್ಬಾಝ್, ಅಂತರರಾಷ್ಟ್ರೀಯ ಮಟ್ಟದಲ್ಲೂ ತಮ್ಮ ಹಳೆಯ ಮೆಂಟರ್ ಬಳಿ ಯಾವುದೇ ಹಿಂಜರಿಕೆಯಿಲ್ಲದೆ ಸಲಹೆ ಪಡೆದಿದ್ದಾರೆ. ಈ ಸಲಹೆಯೊಂದಿಗೆ ಅವರು ದಾಖಲೆಯ ಶತಕ ಸಿಡಿಸಿದ್ದು ವಿಶೇಷ.

ಇದನ್ನೂ ಓದಿ: 1921ರ ದಂಗೆ, ಬಿಟಿಷರ ಬಾಲ್ ಬಾಯ್ಸ್, ಕೇರಳಂ ಫುಟ್​​ಬಾಲ್ ಕ್ರೇಝ್!

ಗುರ್ಬಾಝ್ ದಾಖಲೆಗಳು:

ಮಳೆಯಿಂದಾಗಿ 25 ಓವರ್‌ಗಳಿಗೆ ಸೀಮಿತಗೊಂಡಿದ್ದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರಹಮಾನುಲ್ಲಾ ಗುರ್ಬಾಝ್ ಕೇವಲ 48 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಈ ಶತಕದೊಂದಿಗೆ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಆ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ…

  • ಅತಿ ವೇಗದ ಶತಕ: ಕೇವಲ 48 ಎಸೆತಗಳಲ್ಲಿ ಶತಕ ಪೂರೈಸುವ ಮೂಲಕ ಅಫ್ಘಾನಿಸ್ತಾನದ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ವೇಗದ ಏಕದಿನ ಶತಕದ ದಾಖಲೆ ನಿರ್ಮಿಸಿದ್ದಾರೆ.
  • 2ನೇ ಅತಿ ವೇಗದ ಶತಕ: ಏಕದಿನ ಕ್ರಿಕೆಟ್‌ನಲ್ಲಿ ಭಾರತದ ವಿರುದ್ಧ ಅತಿ ವೇಗವಾಗಿ ಶತಕ ಸಿಡಿಸಿದ ವಿಶ್ವದ 2ನೇ ಬ್ಯಾಟರ್ ಎಂಬ ಕೀರ್ತಿಗೆ ಪಾತ್ರರಾದರು. 45 ಎಸೆತಗಳಲ್ಲಿ ಶತಕ ಬಾರಿಸಿದ ಶಾಹಿದ್ ಅಫ್ರಿದಿ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.
  • ಮೊದಲ ಬ್ಯಾಟರ್: ಟೀಮ್ ಇಂಡಿಯಾ ವಿರುದ್ಧ ಭಾರತದಲ್ಲಿ ಏಕದಿನ ಶತಕ ಸಿಡಿಸಿದ ಅಫ್ಘಾನಿಸ್ತಾನದ ಮೊದಲ ಬ್ಯಾಟರ್​ ಎಂಬ ಐತಿಹಾಸಿಕ ದಾಖಲೆ ಕೂಡ ರಹಮಾನುಲ್ಲಾ ಗುರ್ಬಾಝ್ ಪಾಲಾಗಿದೆ. ಇದಕ್ಕೂ ಮುನ್ನ ಅಫ್ಘಾನ್ ತಂಡ ಯಾವುದೇ ಬ್ಯಾಟರ್ ಭಾರತದಲ್ಲಿ ಭಾರತದ ವಿರುದ್ಧ ಶತಕ ಸಿಡಿಸಿದ ಇತಿಹಾಸ ಇರಲಿಲ್ಲ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More