ಹೊಸ ‘ಲವ್’ ಸ್ಟೋರಿ ಶುರು ಮಾಡಿದ ಹಾರ್ದಿಕ್ ಪಾಂಡ್ಯ
Gujarat Titans vs Mumbai Indians: ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡ 20 ಓವರ್ಗಳಲ್ಲಿ 196 ರನ್ ಕಲೆಹಾಕಿದರೆ, ಮುಂಬೈ ಇಂಡಿಯನ್ಸ್ 160 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಗುಜರಾತ್ ಟೈಟಾನ್ಸ್ ತಂಡ 36 ರನ್ಗಳ ಗೆಲುವು ದಾಖಲಿಸಿದೆ.

ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಮತ್ತೆ ಲವ್ವಲ್ಲಿ ಬಿದ್ದರಾ? ಈ ಪ್ರಶ್ನೆಗೆ ಸದ್ಯದ ಉತ್ತರ ಹೌದು. ಏಕೆಂದರೆ ಹಾರ್ದಿಕ್ ಪಾಂಡ್ಯ ಹೆಸರಿನೊಂದಿಗೆ ಥಳುಕು ಹಾಕಿಕೊಂಡಿರುವ ಜಾಸ್ಮಿನ್ ವಾಲಿಯಾ ಮತ್ತೆ ಕಾಣಿಸಿಕೊಂಡಿದ್ದಾರೆ. ಅದು ಸಹ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯದ ವೇಳೆ.
ಈ ಹಿಂದೆ ಚಾಂಪಿಯನ್ಸ್ ಟ್ರೋಫಿ ಪಂದ್ಯದ ವೇಳೆ ಜಾಸ್ಮಿನ್ ವಾಲಿಯಾ ಸ್ಟೇಡಿಯಂನಲ್ಲಿ ಕಾಣಿಸಿಕೊಂಡಿದ್ದರು. ಇದಕ್ಕೂ ಮುನ್ನ ಶ್ರೀಲಂಕಾ ಪ್ರವಾಸದಲ್ಲಿ ಹಾರ್ದಿಕ್-ಜಾಸ್ಮಿನ್ ಜೊತೆ ಜೊತೆಯಾಗಿ ಓಡಾಡಿದ್ದರು. ಇದಾಗ್ಯೂ ಇಬ್ಬರ ಡೇಟಿಂಗ್ ಮಾಡುತ್ತಿದ್ದಾರೆ ಎಂಬುದು ಖಚಿತವಾಗಿರಲಿಲ್ಲ.
ಆದರೀಗ ಅಹಮದಾಬಾದ್ನಲ್ಲಿ ನಡೆದ ಮುಂಬೈ ಇಂಡಿಯನ್ಸ್ ತಂಡದ ಪಂದ್ಯದ ವೇಳೆ ಜಾಸ್ಮಿನ್ ವಾಲಿಯಾ, ಸೂರ್ಯಕುಮಾರ್ ಯಾದವ್ ಅವರ ಪತ್ನಿ ದೇವಿಶಾ ಶೆಟ್ಟಿ ಜೊತೆ ಕಾಣಿಸಿಕೊಂಡಿದ್ದಾರೆ.
ಐಪಿಎಲ್ನಲ್ಲಿ ವಿಐಪಿಗಳಿಗೆ ಸೀಮಿತವಾಗಿರುವ ಗ್ಯಾಲರಿಯಲ್ಲಿ ಜಾಸ್ಮಿನ್ ಅವರಿಗೆ ಟಿಕೆಟ್ ಕೊಡಿಸಿರುವುದು ಹಾರ್ದಿಕ್ ಪಾಂಡ್ಯ ಎನ್ನಲಾಗಿದೆ. ಇದರೊಂದಿಗೆ ಹಾರ್ದಿಕ್ ಪಾಂಡ್ಯ ಹಾಗೂ ಜಾಸ್ಮಿನ್ ವಾಲಿಯಾ ಡೇಟಿಂಗ್ನಲ್ಲಿರುವುದು ಸಹ ಖಚಿತವಾಗಿದೆ.
ಹಾರ್ದಿಕ್ ಪಾಂಡ್ಯ ಗರ್ಲ್ಫ್ರೆಂಡ್ ವಿಡಿಯೋ:
— kuchnahi123@12345678 (@kuchnahi1269083) March 29, 2025
ಇದಕ್ಕೂ ಮುನ್ನ ಹಾರ್ದಿಕ್ ಪಾಂಡ್ಯ ಬಾಲಿವುಡ್ ನಟಿ ನತಾಶಾ ಸ್ಟಾಂಕೋವಿಕ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. 2020 ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಈ ಜೋಡಿಯು ಕಳೆದ ವರ್ಷ ವಿಚ್ಛೇದನ ಪಡೆದಿದ್ದರು. ಇದಾದ ಬಳಿಕ ಹಾರ್ದಿಕ್ ಪಾಂಡ್ಯ ಹೆಸರು ಯಾವುದೇ ನಟಿಮಣಿಯರೊಂದಿಗೆ ಥಳುಕು ಹಾಕಿಕೊಂಡಿರಲಿಲ್ಲ.
ಇದೀಗ ಭಾರತೀಯ ಮೂಲದ ಬ್ರಿಟಿಷ್ ಗಾಯಕಿ ಜಾಸ್ಮಿನ್ ವಾಲಿಯಾ ಜೊತೆ ಹಾರ್ದಿಕ್ ಪಾಂಡ್ಯ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಇದನ್ನು ಪುಷ್ಠೀಕರಿಸುವಂತೆ ಪಾಂಡ್ಯ ಕಣಕ್ಕಿಳಿಯುವ ಪಂದ್ಯಗಳ ವೇಳೆ ಜಾಸ್ಮಿನ್ ವಾಲಿಯಾ ಕೂಡ ಸ್ಟೇಡಿಯಂನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಇದನ್ನೂ ಓದಿ: ಪಾಕ್ ವಿರುದ್ಧ ವಿಶ್ವ ದಾಖಲೆ ಬರೆದ ಪಾಕಿಸ್ತಾನದ ಮಾಜಿ ಕ್ರಿಕೆಟಿಗನ ಪುತ್ರ..!
ಗೆದ್ದು ಬೀಗಿದ ಗುಜರಾತ್ ಟೈಟಾನ್ಸ್:
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 196 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 160 ರನ್ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಗುಜರಾತ್ ಟೈಟಾನ್ಸ್ ತಂಡವು 36 ರನ್ಗಳ ಜಯ ಸಾಧಿಸಿದೆ.