AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹ್ಯಾಗ್ಲಿ ಓವಲ್‌ನಲ್ಲಿ ಟೀಂ ಇಂಡಿಯಾಗೆ ಅಗ್ನಿಪರೀಕ್ಷೆ; ದಾಖಲೆಗಳೇ ಆತಂಕ

ಕ್ರೈಸ್ಟ್‌ಚರ್ಚ್‌ನಲ್ಲಿ ನಡೆಯುತ್ತಿರುವ 2ನೇ ಟೆಸ್ಟ್‌ನಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಸೋಲಿನ ಸುಳಿಗೆ ಸಿಲುಕಿದೆ. 3ನೇ ದಿನದಾಟದ ಅಂತ್ಯಕ್ಕೆ ಕಿವೀಸ್ 243 ರನ್‌ಗಳ ಮುನ್ನಡೆ ಪಡೆದಿದೆ. ಹ್ಯಾಗ್ಲಿ ಓವಲ್‌ನಲ್ಲಿ 4ನೇ ಇನ್ನಿಂಗ್ಸ್‌ನಲ್ಲಿ ದೊಡ್ಡ ಮೊತ್ತ ಬೆನ್ನಟ್ಟುವುದು ಕಷ್ಟಕರ. ಇಲ್ಲಿನ ದಾಖಲೆಗಳು ಭಾರತಕ್ಕೆ ಸವಾಲೊಡ್ಡುತ್ತಿದ್ದು, ಸೋಲಿನ ಸುಳಿಯಿಂದ ಪಾರಾಗಲು ಬ್ಯಾಟರ್‌ಗಳು ಮಹತ್ವದ ಪ್ರದರ್ಶನ ನೀಡಬೇಕಿದೆ.

ಹ್ಯಾಗ್ಲಿ ಓವಲ್‌ನಲ್ಲಿ ಟೀಂ ಇಂಡಿಯಾಗೆ ಅಗ್ನಿಪರೀಕ್ಷೆ; ದಾಖಲೆಗಳೇ ಆತಂಕ
Team India
ಪೃಥ್ವಿಶಂಕರ
|

Updated on: Nov 29, 2026 | 3:57 PM

Share

ಕ್ರೈಸ್ಟ್‌ಚರ್ಚ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಸೋಲಿನ ಸುಳಿಗೆ ಸಿಲುಕಿದೆ. ಪಂದ್ಯದ ಮೊದಲ ಮೂರು ದಿನಗಳ ಆಟದಲ್ಲಿ ಆತಿಥೇಯ ನ್ಯೂಜಿಲೆಂಡ್ ಸಂಪೂರ್ಣ ಮೇಲುಗೈ ಸಾಧಿಸಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಕಿವೀಸ್ ಪಡೆ 356 ರನ್‌ಗಳಿಗೆ ಆಲೌಟ್ ಆದರೆ, ಭಾರತ ತಂಡ ಕೇವಲ 246 ರನ್‌ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ಇನ್ನು ಮೂರನೇ ದಿನದಾಟದ ಅಂತ್ಯಕ್ಕೆ ನ್ಯೂಜಿಲೆಂಡ್ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ 3 ವಿಕೆಟ್ ಕಳೆದುಕೊಂಡು 133 ರನ್ ಗಳಿಸಿದೆ. ಈ ಮೂಲಕ ಒಟ್ಟು 243 ರನ್‌ಗಳ ಮುನ್ನಡೆ ಪಡೆದುಕೊಂಡಿದೆ.

ಗುರಿ ಬೆನ್ನಟ್ಟುವುದು ಸುಲಭದ ಮಾತಲ್ಲ

ಹೀಗಾಗಿ ನಾಲ್ಕನೇ ಇನ್ನಿಂಗ್ಸ್‌ನಲ್ಲಿ ಭಾರತ ತಂಡಕ್ಕೆ ಕಠಿಣ ಗುರಿ ಎದುರಾಗುವ ಸಾಧ್ಯತೆಯಿದೆ. ಅದರಲ್ಲೂ ಹ್ಯಾಗ್ಲಿ ಓವಲ್ ಮೈದಾನದಲ್ಲಿ ನಾಲ್ಕನೇ ಇನ್ನಿಂಗ್ಸ್‌ನಲ್ಲಿ ದೊಡ್ಡ ಮೊತ್ತವನ್ನು ಬೆನ್ನಟ್ಟುವುದು ಸುಲಭದ ಮಾತಲ್ಲ. ಈ ಮೈದಾನದಲ್ಲಿ ಈವರೆಗೂ ಯಾವುದೇ ತಂಡ 300 ಅಥವಾ ಅದಕ್ಕಿಂತ ಹೆಚ್ಚಿನ ರನ್‌ಗಳ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿಲ್ಲ. ಇಲ್ಲಿ ದಾಖಲಾದ ಗರಿಷ್ಠ ಚೇಸ್ ಮೊತ್ತ 285 ರನ್‌ಗಳು.

ನ್ಯೂಜಿಲೆಂಡ್‌ನ ಕ್ರೈಸ್ಟ್‌ಚರ್ಚ್‌ನಲ್ಲಿರುವ ಹ್ಯಾಗ್ಲಿ ಓವಲ್ ಮೈದಾನದಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆದಿದ್ದು 2014ರಲ್ಲಿ. ಈ ಮೈದಾನದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಣ ಪಂದ್ಯ ನಡೆಯುತ್ತಿದೆ. ನಾಲ್ಕನೇ ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ರನ್‌ಗಳ ಗುರಿಯನ್ನು ಬೆನ್ನಟ್ಟಿದ ದಾಖಲೆ ಆತಿಥೇಯ ನ್ಯೂಜಿಲೆಂಡ್ ತಂಡದ ಹೆಸರಿನಲ್ಲಿದೆ. 2023ರಲ್ಲಿ ಶ್ರೀಲಂಕಾ ವಿರುದ್ಧ ನಡೆದ ಟೆಸ್ಟ್ ಪಂದ್ಯದಲ್ಲಿ ಕಿವೀಸ್ ಪಡೆ 285 ರನ್‌ಗಳ ಗುರಿಯನ್ನು ಬೆನ್ನಟ್ಟಿ ಎರಡು ವಿಕೆಟ್‌ಗಳ ರೋಚಕ ಗೆಲುವು ದಾಖಲಿಸಿತ್ತು.

ಇನ್ನು ವಿದೇಶಿ ತಂಡವೊಂದು ಈ ಮೈದಾನದಲ್ಲಿ ನಾಲ್ಕನೇ ಇನ್ನಿಂಗ್ಸ್‌ನಲ್ಲಿ ಯಶಸ್ವಿಯಾಗಿ ಬೆನ್ನಟ್ಟಿದ ಗರಿಷ್ಠ ಮೊತ್ತದ ದಾಖಲೆ ಆಸ್ಟ್ರೇಲಿಯಾ ಹೆಸರಿನಲ್ಲಿದೆ. 2024ರಲ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಆಸೀಸ್ ಪಡೆ 279 ರನ್‌ಗಳ ಗುರಿಯನ್ನು ಬೆನ್ನಟ್ಟಿ ಮೂರು ವಿಕೆಟ್‌ಗಳ ಜಯ ಸಾಧಿಸಿತ್ತು.

8 ಬಾರಿ ಚೇಸಿಂಗ್ ತಂಡಕ್ಕೆ ಗೆಲುವು

ಹ್ಯಾಗ್ಲಿ ಓವಲ್ ಮೈದಾನದಲ್ಲಿ ಈವರೆಗೆ ನಡೆದಿರುವ 16 ಟೆಸ್ಟ್ ಪಂದ್ಯಗಳ ಪೈಕಿ ನಾಲ್ಕನೇ ಇನ್ನಿಂಗ್ಸ್‌ನಲ್ಲಿ ಗುರಿ ಬೆನ್ನಟ್ಟಿದ ತಂಡಗಳು ಎಂಟು ಬಾರಿ ಗೆಲುವು ಸಾಧಿಸಿವೆ. ಇದು ಭಾರತ ತಂಡಕ್ಕೆ ಸ್ವಲ್ಪ ಸಮಾಧಾನ ನೀಡುವ ಅಂಕಿ-ಅಂಶವಾಗಿದೆ. ಆದರೆ ಈ ಎಂಟು ಗೆಲುವುಗಳಲ್ಲಿ ಐದು ಪಂದ್ಯಗಳನ್ನು ನ್ಯೂಜಿಲೆಂಡ್ ತಂಡವೇ ಗೆದ್ದಿರುವುದು ಗಮನಾರ್ಹ. ಆಸ್ಟ್ರೇಲಿಯಾ ಎರಡು ಬಾರಿ ಹಾಗೂ ಇಂಗ್ಲೆಂಡ್ ಒಂದು ಬಾರಿ ಇಲ್ಲಿ ನಾಲ್ಕನೇ ಇನ್ನಿಂಗ್ಸ್‌ನಲ್ಲಿ ಗುರಿ ಬೆನ್ನಟ್ಟಿ ಗೆಲುವು ದಾಖಲಿಸಿವೆ.

ನ್ಯೂಜಿಲೆಂಡ್ ನೆಲದಲ್ಲಿ ಧೋನಿ, ಕೊಹ್ಲಿ ದಾಖಲೆ ಸರಿಗಟ್ಟಿದ ಧ್ರುವ್ ಜುರೆಲ್

ಇನ್ನು ಈ ಮೈದಾನದಲ್ಲಿ 2025ರಲ್ಲಿ ನ್ಯೂಜಿಲೆಂಡ್ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆದ ಕೊನೆಯ ಟೆಸ್ಟ್ ಪಂದ್ಯದಲ್ಲಿ ಕಿವೀಸ್ ಪಡೆ ಎದುರಾಳಿಗೆ ಬರೋಬ್ಬರಿ 531 ರನ್‌ಗಳ ಗುರಿ ನೀಡಿತ್ತು. ಆದರೆ ವೆಸ್ಟ್ ಇಂಡೀಸ್ ತಂಡ ಅದ್ಭುತ ಹೋರಾಟ ನಡೆಸಿ ನಾಲ್ಕನೇ ಇನ್ನಿಂಗ್ಸ್‌ನಲ್ಲಿ 457 ರನ್ ಗಳಿಸುವ ಮೂಲಕ ಪಂದ್ಯವನ್ನು ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿತ್ತು. ಹೀಗಾಗಿ ಭಾರತ ತಂಡಕ್ಕೂ ಇಂತಹದ್ದೇ ಒಂದು ಹೋರಾಟದ ಅಗತ್ಯವಿದೆ. ಸೋಲಿನ ಸುಳಿಯಿಂದ ಪಾರಾಗಬೇಕಾದರೆ ಭಾರತೀಯ ಬ್ಯಾಟರ್‌ಗಳು ನಾಲ್ಕನೇ ಇನ್ನಿಂಗ್ಸ್‌ನಲ್ಲಿ ಜವಾಬ್ದಾರಿಯುತ ಆಟವಾಡಬೇಕಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಕಳೆದ ಒಂದು ದಶಕದಿಂದ ಕನ್ನಡದ ನಂ.1 ಸುದ್ದಿ ವಾಹಿನಿ ಟಿವಿ9 ಕನ್ನಡದೊಂದಿಗೆ ಪತ್ರಿಕೋದ್ಯಮದ ಪಯಣ ಮುಂದುವರಿಸಿದ್ದೇನೆ. ಕ್ರೀಡಾ ಜಗತ್ತಿನ ಆಗುಹೋಗುಗಳು, ಆಟಗಾರರ ಸಾಧನೆಗಳು, ಮೈದಾನದ ರೋಚಕ ಕ್ಷಣಗಳು ಹಾಗೂ ಕ್ರೀಡೆಯ ಹಿಂದಿನ ಆಸಕ್ತಿದಾಯಕ ಕಥನಗಳನ್ನು ಅಕ್ಷರಗಳ ಮೂಲಕ ಓದುಗರಿಗೆ ತಲುಪಿಸುವುದು ನನ್ನ ವೃತ್ತಿ ಮತ್ತು ಪ್ರವೃತ್ತಿ. ಕ್ರೀಡೆಯನ್ನು ಕೇವಲ ಆಟವಾಗಿ ನೋಡದೆ, ಅದರೊಳಗಿನ ಪರಿಶ್ರಮ, ಹೋರಾಟ, ಸಾಧನೆ ಮತ್ತು ಭಾವನೆಗಳನ್ನು ಗುರುತಿಸಿ ಬರವಣಿಗೆಯಲ್ಲಿ ಕಟ್ಟಿಕೊಡುವುದು ನನ್ನ ಪ್ರಯತ್ನ. ಮೂಲತಃ ಹಾಸನ ಜಿಲ್ಲೆಯವನು. ಹಾಸನದ ನೆಲದ ಸೊಗಡು ಮತ್ತು ಕನ್ನಡದ ಮೇಲಿನ ಅಭಿಮಾನ ನನ್ನ ಹೆಮ್ಮೆ. ವೃತ್ತಿಪರತೆಯೊಂದಿಗೆ ಹೊಸ ವಿಷಯಗಳನ್ನು ಕಲಿಯುತ್ತಾ, ಕ್ರೀಡಾ ಪತ್ರಿಕೋದ್ಯಮದಲ್ಲಿ ಹೊಸ ಮೈಲಿಗಲ್ಲುಗಳನ್ನು ಸಾಧಿಸುವ ಹಂಬಲ ನನ್ನದು.

Read More
ನನ್ನ ಹೆಣವೂ 7.59 ಲಕ್ಷ ಹಣ ಪಾವತಿಸುವುದಿಲ್ಲ; ಅಡ್ಡಂಡ ಕಾರ್ಯಪ್ಪ ಆಕ್ರೋಶ
ನನ್ನ ಹೆಣವೂ 7.59 ಲಕ್ಷ ಹಣ ಪಾವತಿಸುವುದಿಲ್ಲ; ಅಡ್ಡಂಡ ಕಾರ್ಯಪ್ಪ ಆಕ್ರೋಶ
ಗಗನ್ ಮಾತಿನಿಂದ ಬೇಸರ; ಸುದೀಪ್ ಎದುರು ಕಣ್ಣೀರು ಹಾಕಿದ ತಾಂಡವ್ ರಾಮ್
ಗಗನ್ ಮಾತಿನಿಂದ ಬೇಸರ; ಸುದೀಪ್ ಎದುರು ಕಣ್ಣೀರು ಹಾಕಿದ ತಾಂಡವ್ ರಾಮ್
ಮಲೆನಾಡಿಗೆ ಬಂದಿಳಿದ ನಟಿ ತ್ರಿಷಾ ಕೃಷ್ಣನ್: ತೀರ್ಥಹಳ್ಳಿ ಶೂಟಿಂಗ್
ಮಲೆನಾಡಿಗೆ ಬಂದಿಳಿದ ನಟಿ ತ್ರಿಷಾ ಕೃಷ್ಣನ್: ತೀರ್ಥಹಳ್ಳಿ ಶೂಟಿಂಗ್
ಡಿಲಿಮಿಟೇಶನ್ ಬಿಲ್ ಫ್ರಾಡ್ ಎಂದ ರಾಹುಲ್ ಗಾಂಧಿಗೆ ಶೋಭಾ ಕರಂದ್ಲಾಜೆ ಕೌಂಟರ್
ಡಿಲಿಮಿಟೇಶನ್ ಬಿಲ್ ಫ್ರಾಡ್ ಎಂದ ರಾಹುಲ್ ಗಾಂಧಿಗೆ ಶೋಭಾ ಕರಂದ್ಲಾಜೆ ಕೌಂಟರ್
13ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ
13ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ
ಆನೆ ದಂತ ಕಳ್ಳಸಾಗಣೆ: ತಮಿಳುನಾಡು ಮೂಲದ ಮೂವರು ಅರೆಸ್ಟ್
ಆನೆ ದಂತ ಕಳ್ಳಸಾಗಣೆ: ತಮಿಳುನಾಡು ಮೂಲದ ಮೂವರು ಅರೆಸ್ಟ್
ರಾಗಿಯಲ್ಲಿ ಕಲ್ಲು, ಮಣ್ಣು ಮಿಶ್ರಣ ಮಾಡ್ತಿದ್ದ ಘಟಕದ ಮೇಲೆ ದಾಳಿ
ರಾಗಿಯಲ್ಲಿ ಕಲ್ಲು, ಮಣ್ಣು ಮಿಶ್ರಣ ಮಾಡ್ತಿದ್ದ ಘಟಕದ ಮೇಲೆ ದಾಳಿ
ಬಿಗ್ ಬಾಸ್ ಮನೆಯಲ್ಲಿ ತಾಂಡವ್ ಡ್ಯಾನ್ಸ್; ಕ್ರೇಜಿಸ್ಟಾರ್ ಶೈಲಿಯಲ್ಲಿ ನೃತ್ಯ
ಬಿಗ್ ಬಾಸ್ ಮನೆಯಲ್ಲಿ ತಾಂಡವ್ ಡ್ಯಾನ್ಸ್; ಕ್ರೇಜಿಸ್ಟಾರ್ ಶೈಲಿಯಲ್ಲಿ ನೃತ್ಯ
ನವೆಂಬರ್ 30 ರಿಂದ ಡಿಸೆಂಬರ್ 6ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ನವೆಂಬರ್ 30 ರಿಂದ ಡಿಸೆಂಬರ್ 6ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ರಾಶಿಯವರು ಹೊಸ ಸಂಬಂಧಗಳನ್ನು ಸ್ವಾಗತಿಸಿ
ಇಂದು ರಾಶಿಯವರು ಹೊಸ ಸಂಬಂಧಗಳನ್ನು ಸ್ವಾಗತಿಸಿ