AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haider Ali Arrest: ಇಂಗ್ಲೆಂಡ್‌ನಲ್ಲಿ ಅತ್ಯಾಚಾರ ಆರೋಪದ ಮೇಲೆ ಪಾಕಿಸ್ತಾನದ ಸ್ಟಾರ್ ಕ್ರಿಕೆಟಿಗ ಬಂಧನ

ಪಾಕಿಸ್ತಾನದ ಯುವ ಬ್ಯಾಟ್ಸ್‌ಮನ್ ಹೈದರ್ ಅಲಿ ಇಂಗ್ಲೆಂಡ್‌ನಲ್ಲಿ ಗಂಭೀರ ಕ್ರಿಮಿನಲ್ ಪ್ರಕರಣದಲ್ಲಿ ಸಿಲುಕಿದ್ದಾರೆ, ಅವರನ್ನು ಅತ್ಯಾಚಾರ ಆರೋಪದ ಮೇಲೆ ಬಂಧಿಸಲಾಗಿದೆ. ಈ ಘಟನೆ ಬೆಳಕಿಗೆ ಬಂದ ನಂತರ, ಪಿಸಿಬಿ ಹೈದರ್ ಅವರನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿದೆ. 24 ವರ್ಷದ ಹೈದರ್ ಅಲಿ ಪಾಕಿಸ್ತಾನ ಪರ ಎರಡು ಏಕದಿನ ಮತ್ತು 35 ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ.

Haider Ali Arrest: ಇಂಗ್ಲೆಂಡ್‌ನಲ್ಲಿ ಅತ್ಯಾಚಾರ ಆರೋಪದ ಮೇಲೆ ಪಾಕಿಸ್ತಾನದ ಸ್ಟಾರ್ ಕ್ರಿಕೆಟಿಗ ಬಂಧನ
ಬಾಬಾರ್ ಅಝಂ ಜೊತೆ ಹೈದರ್ ಅಲಿ
ಮಾಲಾಶ್ರೀ ಅಂಚನ್​
| Edited By: |

Updated on: Aug 08, 2025 | 8:37 AM

Share

ಬೆಂಗಳೂರು (ಆ. 08): ಪಾಕಿಸ್ತಾನದ (Pakistan Cricket Team) ಯುವ ಬ್ಯಾಟ್ಸ್‌ಮನ್ ಹೈದರ್ ಅಲಿ ಇಂಗ್ಲೆಂಡ್‌ನಲ್ಲಿ ಕ್ರಿಮಿನಲ್ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ಆಟಗಾರನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ ಎಂದು ನವಭಾರತ್ ಟೈಮ್ಸ್ ವರದಿ ಮಾಡಿದೆ. ಈ ಘಟನೆಯ ನಂತರ, ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಹೈದರ್ ಅಲಿ ಅನ್ನು ತಕ್ಷಣವೇ ಅಮಾನತುಗೊಳಿಸಿದೆ. ಸದ್ಯ ಹೈದರ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆಯಂತೆ. 24 ವರ್ಷದ ಹೈದರ್ ಅಲಿ ಪಾಕಿಸ್ತಾನ ಪರ ಎರಡು ಏಕದಿನ ಮತ್ತು 35 ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ.

ಸೋಮವಾರ ಬಂಧನ

ಗ್ರೇಟರ್ ಮ್ಯಾಂಚೆಸ್ಟರ್ ಪೊಲೀಸರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಪ್ರಕರಣದ ಬಗ್ಗೆ ಪೊಲೀಸರು, ‘ಆಗಸ್ಟ್ 4, 2025 ರಂದು ಅತ್ಯಾಚಾರದ ವರದಿಯನ್ನು ಸ್ವೀಕರಿಸಿದ ನಂತರ ನಾವು 24 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದೇವೆ. ಈ ಘಟನೆ ಜುಲೈ 23, 2025 ರ ಬುಧವಾರದಂದು ಮ್ಯಾಂಚೆಸ್ಟರ್‌ನ ಸಂಕೀರ್ಣವೊಂದರಲ್ಲಿ ನಡೆದಿತ್ತು ಎಂದು ಆರೋಪಿಸಲಾಗಿದೆ. ಹೆಚ್ಚಿನ ತನಿಖೆ ಬಾಕಿ ಇರುವ ಕಾರಣ ಆ ವ್ಯಕ್ತಿಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಪೊಲೀಸರು ಸಂತ್ರಸ್ತೆಗೆ ಸಹಾಯ ಮಾಡುತ್ತಿದ್ದಾರೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ
Image
ಜೈಸ್ವಾಲ್ ಮನವೋಲಿಸುವಲ್ಲಿ ಯಶಸ್ವಿಯಾದ ರೋಹಿತ್ ಶರ್ಮಾ
Image
ಏಷ್ಯಾಕಪ್, ಟೆಸ್ಟ್ ಸರಣಿಗೆ ಶ್ರೇಯಸ್ ಅಯ್ಯರ್ ಆಯ್ಕೆ ಸಾಧ್ಯತೆ
Image
ಏಕದಿನ ವಿಶ್ವಕಪ್ ಪಂದ್ಯಗಳು ಬೆಂಗಳೂರಿನಿಂದ ಶಿಫ್ಟ್?
Image
ರಿಷಭ್ ಪಂತ್ ಬಳಿ ಕ್ಷಮೆಯಾಚಿಸಿದ ಕ್ರಿಸ್ ವೋಕ್ಸ್

ತನಿಖೆ ಮುಗಿಯುವವರೆಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಹೈದರ್ ಅಲಿಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿದೆ. ಪಿಸಿಬಿ ಹೇಳಿಕೆಯಲ್ಲಿ, “ಯುನೈಟೆಡ್ ಕಿಂಗ್‌ಡಂನ ಕಾನೂನು ಪ್ರಕ್ರಿಯೆಗಳು ಮತ್ತು ಕಾರ್ಯವಿಧಾನಗಳನ್ನು ಪಿಸಿಬಿ ಸಂಪೂರ್ಣವಾಗಿ ಗೌರವಿಸುತ್ತದೆ ಮತ್ತು ತನಿಖೆಯನ್ನು ತನ್ನ ಹಾದಿಯಲ್ಲಿ ನಡೆಸಲು ಅನುಮತಿಸುವ ಮಹತ್ವವನ್ನು ಅರ್ಥಮಾಡಿಕೊಂಡಿದೆ. ಆದ್ದರಿಂದ, ನಡೆಯುತ್ತಿರುವ ತನಿಖೆಯ ಫಲಿತಾಂಶ ಬರುವವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಹೈದರ್ ಅಲಿಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲು ಪಿಸಿಬಿ ನಿರ್ಧರಿಸಿದೆ” ಎಂದು ತಿಳಿಸಿದೆ.

Yashasvi Jaiswal: ರೋಹಿತ್ ಶರ್ಮಾ ಮಾತಿಗೆ ತಲೆಬಾಗಿದ ಯಶಸ್ವಿ ಜೈಸ್ವಾಲ್

2023 ರಿಂದ ತಂಡದಿಂದ ಹೊರಗಿರುವ ಅಲಿ

ಹೈದರ್ ಅಲಿ ಪಾಕಿಸ್ತಾನದ ‘ಎ’ ತಂಡದ ಶಾಹೀನ್ ಟೀಮ್​ ಜೊತೆ ಇಂಗ್ಲೆಂಡ್ ಪ್ರವಾಸದಲ್ಲಿದ್ದರು. ಆ ಪ್ರವಾಸದಲ್ಲಿ ಅವರು 5 ಪಂದ್ಯಗಳನ್ನು ಆಡಿದ್ದಾರೆ ಮತ್ತು ಇದರಲ್ಲಿ ಎರಡು ಅರ್ಧಶತಕಗಳನ್ನು ಗಳಿಸಿದರು. ಅವರು 2023 ರಲ್ಲಿ ಪಾಕಿಸ್ತಾನ ಪರ ತಮ್ಮ ಕೊನೆಯ ಅಂತರರಾಷ್ಟ್ರೀಯ ಪಂದ್ಯವನ್ನು ಆಡಿದ್ದಾರೆ. ಅಂತರರಾಷ್ಟ್ರೀಯ ವೃತ್ತಿಜೀವನದಲ್ಲಿ, ಹೈದರ್ ಅಲಿ ಟಿ20ಯಲ್ಲಿ 505 ರನ್ ಮತ್ತು ಏಕದಿನದಲ್ಲಿ 42 ರನ್ ಗಳಿಸಿದ್ದಾರೆ. ಅವರ ಹೆಸರಿನಲ್ಲಿ ಮೂರು ಅರ್ಧಶತಕಗಳಿವೆ. 2020 ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದ ಅಂಡರ್-19 ವಿಶ್ವಕಪ್‌ನಲ್ಲಿ ಅವರು ಪಾಕಿಸ್ತಾನ ತಂಡದ ಭಾಗವಾಗಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?