Hanuma Vihari: ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್​ಗಿಲ್ಲ ಹನುಮಾ ವಿಹಾರಿ: ಅಭಿಮಾನಿಗಳ ಆಕ್ರೋಶ, ಕೂಡಲೇ ಎಚ್ಚೆತ್ತ ಬಿಸಿಸಿಐ

India squad for New Zealand Tests: ಭಾರತ ತಂಡದ ಪರ ಈವರೆಗೆ 12 ಟೆಸ್ಟ್‌ ಕ್ರಿಕೆಟ್ ಪಂದ್ಯಗಳನ್ನು ಆಡಿರುವ 28 ವರ್ಷದ ಬಲಗೈ ಬ್ಯಾಟ್ಸ್‌ಮನ್‌ ಹನುಮ ವಿಹಾರಿ ಒಂದು ಶತಕ ಒಳಗೊಂಡ 624 ರನ್‌ಗಳನ್ನು ಬಾರಿಸಿದ್ದಾರೆ. ಇದರಲ್ಲಿ ನಾಲ್ಕು ಅರ್ಧಶತಗಳು ಕೂಡ ಸೇರಿವೆ.

Hanuma Vihari: ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್​ಗಿಲ್ಲ ಹನುಮಾ ವಿಹಾರಿ: ಅಭಿಮಾನಿಗಳ ಆಕ್ರೋಶ, ಕೂಡಲೇ ಎಚ್ಚೆತ್ತ ಬಿಸಿಸಿಐ
Hanuma Vihari India vs New Zealand
Follow us
TV9 Web
| Updated By: Vinay Bhat

Updated on: Nov 13, 2021 | 7:35 AM

ತವರಿನಲ್ಲಿ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ (India vs New Zealand Test Serie) ಸರಣಿಗೆ ಶುಕ್ರವಾರ ಭಾರತ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಪ್ರಕಟ ಮಾಡಿತ್ತು. ಆದರೆ, ತಂಡದಲ್ಲಿ ಅನುಭವಿ ಆಟಗಾರ ಹನುಮಾ ವಿಹಾರಿ (Hanuma Vihari) ಅವರಿಗೆ ಸ್ಥಾನ ನೀಡಲಾಗಿಲ್ಲ. ಟೀಮ್ ಇಂಡಿಯಾಕ್ಕೆ (Team India) ಅನೇಕ ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದ ವಿಹಾರಿಯನ್ನು ಕೈಬಿಟ್ಟಿದ್ದಕ್ಕೆ ಅಭಿಮಾನಿಗಳು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದರು. ಸೋಷಿಯಲ್‌ ಮೀಡಿಯಾಗಳಲ್ಲಿ (Social Media) ಬಿಸಿಸಿಐ ಆಯ್ಕೆ ಸಮಿತಿ ವಿರುದ್ಧ ವ್ಯಾಪಕ ಟೀಕೆಗಳು ಹರಿದು ಬಂದಿದ್ದವು. ಇದರಿಂದ ಕೂಡಲೇ ಎಚ್ಚೆತ್ತುಕೊಂಡ ಬಿಸಿಸಿಐ ಆಯ್ಕೆ ಸಮಿತಿ, ಬುಧವಾರ ಪ್ರಕಟ ಮಾಡಿದ್ದ ದಕ್ಷಿಣ ಆಫ್ರಿಕಾ (India Tour of South Africa) ಪ್ರವಾಸ ಕೈಗೊಳ್ಳಲಿರುವ ಭಾರತ ‘ಎ’ ತಂಡಕ್ಕೆ (India A Team) ಹನುಮ ವಿಹಾರಿಯನ್ನು ಸೇರಿಸಿ ಪರಿಷ್ಕೃತ ತಂಡವನ್ನು ಪ್ರಕಟ ಮಾಡಿದೆ.

ಇದಕ್ಕೂ ಮುನ್ನ ಭಾರತ ಎ ತಂಡಕ್ಕೆ ಪ್ರಿಯಾಂಕ್ ಪಾಂಚಾಲ್‌ ಸಾರಥ್ಯದ 14 ಸದಸ್ಯರ ತಂಡವನ್ನು ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಆಯ್ಕೆ ಮಾಡಲಾಗಿತ್ತು. ಈಗ ತಂಡದ ಆಟಗಾರರ ಸಂಖ್ಯೆಯನ್ನು 15ಕ್ಕೆ ವಿಸ್ತರಿಸಲಾಗಿದೆ. ಭಾರತ ತಂಡ ಡೆಸೆಂಬರ್‌ನಲ್ಲಿ ದ್ವಿಪಕ್ಷೀಯ ಟೆಸ್ಟ್, ಟಿ20 ಮತ್ತು ಒಡಿಐ ಕ್ರಿಕೆಟ್‌ ಸರಣಿಗಳ ಸಲುವಾಗಿ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ. ಇದಕ್ಕೂ ಮುನ್ನ ಭಾರತ ‘ಎ’ ತಂಡ ದಕ್ಷಿಣ ಆಫ್ರಿಕಾ ‘ಎ’ ತಂಡದ ವಿರುದ್ಧ ಮೂರು ಪಂದ್ಯಗಳ ಪ್ರಥಮದರ್ಜೆ ಕ್ರಿಕೆಟ್‌ ಸರಣಿಯನ್ನು ಆಡಲಿದೆ.

ಈ ಸರಣಿಯಲ್ಲಿ ಹನುಮ ವಿಹಾರಿ ಗಮನ ಸೆಳೆದರೆ ಭಾರತ ಟೆಸ್ಟ್‌ ತಂಡದಲ್ಲಿ ಮರಳಿ ಸ್ಥಾನ ಪಡೆಯುವ ಸಾಧ್ಯತೆ ಇದೆ. ಸದ್ಯ ನ್ಯೂಜಿಲೆಂಡ್‌ ವಿರುದ್ಧದ ಸರಣಿಗೆ ಬಿಸಿಸಿಐ ಬಹುತೇಕ ಯುವ ಆಟಗಾರರನ್ನು ಆಯ್ಕೆ ಮಾಡಿ, ಅನುಭವಿಗಳಿಗೆ ವಿಶ್ರಾಂತಿ ನೀಡಿದೆ. ಕಳೆದ ಆಸ್ಟ್ರೇಲಿಯಾ ಪ್ರವಾಸದಲ್ಲಿ ಹನುಮ ವಿಹಾರಿ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿದ್ದರು. ಆದರೆ ನಂತರ ಇಂಗ್ಲೆಂಡ್‌ನಲ್ಲಿ ನಡೆದ ಸರಣಿಯಲ್ಲಿ ಆಡುವ ಬಳಗದಲ್ಲಿ ವಿಹಾರಿಗೆ ಸ್ಥಾನ ದೊರೆತಿರಲಿಲ್ಲ. ಈಗ ಟೀಮ್ ಇಂಡಿಯಾ ಸ್ಕ್ವಾಡ್‌ನಿಂದಲೇ ಹನುಮ ವಿಹಾರಿಯನ್ನು ಹೊರಗಿಟ್ಟಿರುವುದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಭಾರತ ತಂಡದ ಪರ ಈವರೆಗೆ 12 ಟೆಸ್ಟ್‌ ಕ್ರಿಕೆಟ್ ಪಂದ್ಯಗಳನ್ನು ಆಡಿರುವ 28 ವರ್ಷದ ಬಲಗೈ ಬ್ಯಾಟ್ಸ್‌ಮನ್‌ ಹನುಮ ವಿಹಾರಿ ಒಂದು ಶತಕ ಒಳಗೊಂಡ 624 ರನ್‌ಗಳನ್ನು ಬಾರಿಸಿದ್ದಾರೆ. ಇದರಲ್ಲಿ ನಾಲ್ಕು ಅರ್ಧಶತಗಳು ಕೂಡ ಸೇರಿವೆ.

ಕಿವೀಸ್‌ ವಿರುದ್ಧದ ಟೆಸ್ಟ್‌ ಸರಣಿಯ ಪ್ರಥಮ ಪಂದ್ಯದಲ್ಲಿ ಅಜಿಂಕ್ಯ ರಹಾನೆ ನಾಯಕತ್ವ ನಿಭಾಯಿಸಲಿದ್ದಾರೆ. ನವೆಂಬರ್‌ 25ರಿಂದ 29ರವರೆಗೆ ಕಾನ್ಪುರದಲ್ಲಿ ಈ ಪಂದ್ಯ ನಡೆಯಲಿದೆ. ಬಳಿಕ ಡಿ.3ರಿಂದ 7ರವರೆಗೆ ಮುಂಬೈನಲ್ಲಿ ನಡೆಯಲಿರುವ ದ್ವಿತೀಯ ಟೆಸ್ಟ್‌ ಪಂದ್ಯಕ್ಕೆ ವಿರಾಟ್‌ ಕೊಹ್ಲಿ ತಂಡ ಸೇರಿಕೊಂಡು ನಾಯಕತ್ವ ಮರಳಿ ಪಡೆಯಲಿದ್ದಾರೆ.

Virat Kohli: ಏಕದಿನ ನಾಯಕತ್ವಕ್ಕೂ ವಿದಾಯ ಹೇಳಲಿದ್ದಾರೆ ಕೊಹ್ಲಿ; ಭಾರತ ಮಾಜಿ ಕೋಚ್ ರವಿಶಾಸ್ತ್ರಿ ಹೇಳಿಕೆ

(Hanuma Vihari exclusion from the 16-member squad for the New Zealand Test series)

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ