AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hanuma Vihari: ಇದೆಂಥಾ ಅನ್ಯಾಯ…227 ರನ್​ಗಳಿಸಿದರೂ ತಂಡದಲ್ಲಿಲ್ಲ ಸ್ಥಾನ..!

India vs South Africa 3rd Test:  ವಿರಾಟ್ ಕೊಹ್ಲಿ (ನಾಯಕ), ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ರಿಷಭ್ ಪಂತ್, ಆರ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಉಮೇಶ್ ಯಾದವ್.

Hanuma Vihari: ಇದೆಂಥಾ ಅನ್ಯಾಯ...227 ರನ್​ಗಳಿಸಿದರೂ ತಂಡದಲ್ಲಿಲ್ಲ ಸ್ಥಾನ..!
Hanuma Vihari
TV9 Web
| Edited By: |

Updated on: Jan 11, 2022 | 4:13 PM

Share

ಭಾರತ-ದಕ್ಷಿಣ ಆಫ್ರಿಕಾ (India vs South Africa 3rd Test) ನಡುವಣ 3ನೇ ಟೆಸ್ಟ್ ಪಂದ್ಯವು ಕೇಪ್​ ಟೌನ್​ನಲ್ಲಿ ಶುರುವಾಗಿದೆ. ಈ ಪಂದ್ಯದ ಮೂಲಕ 2ನೇ ಟೆಸ್ಟ್​ನಿಂದ ಹೊರಗುಳಿದಿದ್ದ ಟೀಮ್ ಇಂಡಿಯಾ (Team India) ನಾಯಕ ವಿರಾಟ್ ಕೊಹ್ಲಿ (Virat Kohli) ತಂಡಕ್ಕೆ ಮರಳಿದ್ದಾರೆ. ಇನ್ನು 2ನೇ ಟೆಸ್ಟ್ ಪಂದ್ಯದ ವೇಳೆ ಕೊಹ್ಲಿಯ ಅನುಪಸ್ಥಿತಿಯಲ್ಲಿ ತಂಡದಲ್ಲಿ ಅವಕಾಶ ಪಡೆದಿದ್ದ ಹನುಮ ವಿಹಾರಿ (Hanuma Vihari) ನಾಯಕನ ಆಗಮನದೊಂದಿಗೆ 3ನೇ ಪಂದ್ಯದಿಂದ ಹೊರಬಿದ್ದಿದ್ದಾರೆ. ಇದರ ಬೆನ್ನಲ್ಲೇ ವಿಹಾರಿಗೆ ಮತ್ತೊಂದು ಅವಕಾಶ ನೀಡದೇ ತಂಡದಿಂದ ಕೈಬಿಟ್ಟಿರುವ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶಗಳು ವ್ಯಕ್ತವಾಗುತ್ತಿದೆ. ಇದಕ್ಕೆ ಒಂದು ಕಾರಣ ತಂಡದಲ್ಲಿರುವ ಕೆಲ ಆಟಗಾರರ ಕಳಪೆ ಫಾರ್ಮ್​. ಹೌದು, ಈ ಹಿಂದೆ ಹಲವು ಪಂದ್ಯಗಳನ್ನಾಡಿರುವ ಚೇತೇಶ್ವರ ಪೂಜಾರಾ ಹಾಗೂ ಅಜಿಂಕ್ಯ ರಹಾನೆಯನ್ನು ಕಳೆದ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ ಕಾರಣ ತಂಡದಲ್ಲೇ ಇರಿಸಿಕೊಳ್ಳಲಾಗಿದೆ. ಆದರೆ ಅದೇ ಹನುಮ ವಿಹಾರಿ ಸಿಕ್ಕ ಒಂದು ಅವಕಾಶದಲ್ಲಿ ಒಟ್ಟು 60 ರನ್​ ಬಾರಿಸಿದ್ದಾರೆ. ಇದಾಗ್ಯೂ ಹನುಮ ವಿಹಾರಿಯ ತಲೆದಂಡವೇಕೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಅಷ್ಟೇ ಅಲ್ಲದೆ ಟೀಮ್ ಇಂಡಿಯಾದ ಈ ಪ್ರವಾಸಕ್ಕೂ ಮುನ್ನ ಭಾರತ ಎ ತಂಡ ದಕ್ಷಿಣ ಆಫ್ರಿಕಾ ಎ ತಂಡದ ವಿರುದ್ದ ಟೆಸ್ಟ್ ಪಂದ್ಯವಾಡಿತ್ತು ಎಂಬುದು ಗಮನಾರ್ಹ. ಈ ವೇಳೆ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದು ಕೂಡ ಹನುಮ ವಿಹಾರಿ ಎಂಬುದು ಇಲ್ಲಿ ವಿಶೇಷ. ದಕ್ಷಿಣ ಆಫ್ರಿಕಾ ಎ ತಂಡದ ವಿರುದ್ದ ಟೀಮ್ ಇಂಡಿಯಾ ಎ ನಾಲ್ಕು ದಿನಗಳ 3 ಪಂದ್ಯಗಳನ್ನು ಆಡಿದ್ದರು. ಈ ವೇಳೆ ಹನುಮ ವಿಹಾರಿ ಇಡೀ ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿ ಮಿಂಚಿದ್ದರು.

3 ಪಂದ್ಯಗಳಲ್ಲಿ 75.66 ಸರಾಸರಿಯಲ್ಲಿ ಬ್ಯಾಟ್ ಬೀಸಿದ್ದ ವಿಹಾರಿ 3 ಅರ್ಧಶತಕಗಳೊಂದಿಗೆ ಒಟ್ಟು 227 ರನ್ ಗಳಿಸುವ ಮೂಲಕ ಟಾಪ್ ರನ್​ ಸ್ಕೋರರ್ ಆಗಿ ಹೊರಹೊಮ್ಮಿದ್ದರು. ಅಂದರೆ ಹನುಮ ವಿಹಾರಿ ಅವರು ದಕ್ಷಿಣ ಆಫ್ರಿಕಾದ ಪಿಚ್‌ಗಳಲ್ಲಿ ತಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಇದೇ ಕಾರಣದಿಂದ ಅವರನ್ನು ಸರಣಿಗೆ ಆಯ್ಕೆ ಮಾಡಲಾಗಿತ್ತು. ಆದರೆ ಉತ್ತಮ ಫಾರ್ಮ್​ನಲ್ಲಿದ್ದ ಹನುಮ ವಿಹಾರಿ ಮೊದಲ ಪಂದ್ಯದಲ್ಲಿ ಬೆಂಜ್ ಕಾಯಬೇಕಾಯಿತು. 2ನೇ ಪಂದ್ಯದಲ್ಲಿ ಕೊಹ್ಲಿಯ ಅನುಪಸ್ಥಿತಿಯ ಕಾರಣ ತಂಡದಲ್ಲಿ ಅವಕಾಶ ದೊರೆಯಿತು. ಇದೀಗ ಮತ್ತೊಮ್ಮೆ ಅವಕಾಶ ವಂಚಿತರಾಗಿ ಹೊರಗುಳಿದಿದ್ದಾರೆ.

ಅತ್ತ ಕಳಪೆ ಫಾರ್ಮ್​ನಲ್ಲಿದ್ದರೂ ಅಜಿಂಕ್ಯ ರಹಾನೆ ಹಾಗೂ ಚೇತೇಶ್ವರ ಪೂಜಾರ ಸತತ ಅವಕಾಶ ಪಡೆದಿದ್ದಾರೆ. ಇತ್ತ ದಕ್ಷಿಣ ಆಫ್ರಿಕಾದಲ್ಲಿ ತಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ತೆರೆದಿಟ್ಟರೂ ಹನುಮ ವಿಹಾರಿಗೆ ಅವಕಾಶ ನೀಡದಿರುವ ಬಗ್ಗೆ ಗೌತಮ್ ಗಂಭೀರ್ ಸೇರಿದಂತೆ ಕೆಲ ಮಾಜಿ ಕ್ರಿಕೆಟಿಗರೂ ಕೂಡ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಒಟ್ಟಿನಲ್ಲಿ ಉತ್ತಮ ಫಾರ್ಮ್​ನಲ್ಲಿದ್ದು ಬೆಂಚ್ ಕಾಯಬೇಕಾದ ಪರಿಸ್ಥಿತಿ ಹನುಮ ವಿಹಾರಿಯದ್ದು ಎಂದಷ್ಟೇ ಹೇಳಬಹುದು.

3ನೇ ಟೆಸ್ಟ್​ಗೆ ಭಾರತದ ಪ್ಲೇಯಿಂಗ್ ಇಲೆವೆನ್ ಹೀಗಿದೆ: ವಿರಾಟ್ ಕೊಹ್ಲಿ (ನಾಯಕ), ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ರಿಷಭ್ ಪಂತ್, ಆರ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಉಮೇಶ್ ಯಾದವ್.

ಇದನ್ನೂ ಓದಿ: IPL 2022: ಮತ್ತೆ RCB ಪರ ಆಡಬೇಕೆಂದ ಸ್ಟಾರ್ ಬೌಲರ್

ಇದನ್ನೂ ಓದಿ:  Sachin Tendulkar: ಆಲ್‌ ಟೈಮ್ ಬೆಸ್ಟ್‌ 11 ಹೆಸರಿಸಿದ ಸಚಿನ್: ಪ್ರಮುಖ ಆಟಗಾರರಿಗಿಲ್ಲ ಸ್ಥಾನ

ಇದನ್ನೂ ಓದಿ: IPL 2022 Mega Auction: ಐಪಿಎಲ್ ಮೆಗಾ ಹರಾಜು ಡೇಟ್ ಫಿಕ್ಸ್..!

ಇದನ್ನೂ ಓದಿ: IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!

(Hanuma Vihari-‘Unluckiest cricketer at the moment’)

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ