AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy Birthday Mithali Raj: 39ನೇ ವರ್ಷಕ್ಕೆ ಕಾಲಿಟ್ಟ ಮಿಥಾಲಿ ರಾಜ್: ಕ್ರಿಕೆಟ್ ಲೋಕದಿಂದ ಶುಭಾಶಯಗಳ ಸುರಿಮಳೆ

Mithali Raj: 2005 ಹಾಗೂ 2019ರಲ್ಲಿ ವಿಶ್ವಕಪ್ ಫೈನಲ್ ತಲುಪಿದ ಮಿಥಾಲಿ ನೇತೃತ್ವದ ಭಾರತ ಮಹಿಳಾ ತಂಡ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿ ಪಟ್ಟುಕೊಂಡಿತು. ಇತ್ತೀಚೆಗಷ್ಟೆ ಪ್ರತಿಷ್ಠಿತ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ಪಡೆದ ಮೊದಲ ಮಹಿಳಾ ಕ್ರಿಕೆಟ್‌ ಆಟಗಾರ್ತಿ ಎಂಬ ಸಾಧನೆಯನ್ನು ಕೂಡ ಮಿಥಾಲಿ ರಾಜ್ ಮಾಡಿದ್ದರು.

Happy Birthday Mithali Raj: 39ನೇ ವರ್ಷಕ್ಕೆ ಕಾಲಿಟ್ಟ ಮಿಥಾಲಿ ರಾಜ್: ಕ್ರಿಕೆಟ್ ಲೋಕದಿಂದ ಶುಭಾಶಯಗಳ ಸುರಿಮಳೆ
mithali raj
TV9 Web
| Edited By: |

Updated on: Dec 03, 2021 | 11:27 AM

Share

ಭಾರತ ಮಹಿಳಾ ತಂಡ ಮಾಜಿ ನಾಯಕಿ ಮಿಥಾಲಿ ರಾಜ್ (Mithali Raj:) ಶುಕ್ರವಾರ 39ನೇ ವರ್ಷಕ್ಕೆ ಕಾಲಿಟ್ಟರು. ಭಾರತ ಅಲ್ಲದೆ, ವಿಶ್ವದೆಲ್ಲೆಡೆಯಿಂದ ಹಿರಿಯ ಆಟಗಾರ್ತಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. 1999ರಲ್ಲಿ ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ ಬಳಿಕ, ಹಂತ ಹಂತವಾಗಿ ಉನ್ನತಿಯತ್ತ ಹೆಜ್ಜೆಹಾಕಿದ ಮಿಥಾಲಿ, ಭಾರತ ಕಂಡ ಅತ್ಯಂತ ಯಶಸ್ವಿ ನಾಯಕಿ ಅನ್ನೋ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಇದೀಗ ಹಿರಿಯ ಮಹಿಳಾ ಆಟಗಾರ್ತಿ ಮಿಥಾಲಿ ರಾಜ್ 39ನೇ ವರ್ಷದ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ಅತಿಹೆಚ್ಚು ರನ್‌ಗಳಿಸಿರುವ ಭಾರತೀಯ ಬ್ಯಾಟರ್ ಎನಿಸಿಕೊಂಡಿರುವ ಮಿಥಾಲಿ ರಾಜ್ ಹುಟ್ಟುಹಬ್ಬಕ್ಕೆ ಭಾರತದ ಹಾಲಿ ಹಾಗೂ ಮಾಜಿ ಕ್ರಿಕೆಟಿಗರು ಶುಭಾಶಯ ಕೋರಿದ್ದಾರೆ.

2005 ಹಾಗೂ 2019ರಲ್ಲಿ ವಿಶ್ವಕಪ್ ಫೈನಲ್ ತಲುಪಿದ ಮಿಥಾಲಿ ನೇತೃತ್ವದ ಭಾರತ ಮಹಿಳಾ ತಂಡ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿ ಪಟ್ಟುಕೊಂಡಿತು. ಇತ್ತೀಚೆಗಷ್ಟೆ ಪ್ರತಿಷ್ಠಿತ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ಪಡೆದ ಮೊದಲ ಮಹಿಳಾ ಕ್ರಿಕೆಟ್‌ ಆಟಗಾರ್ತಿ ಎಂಬ ಸಾಧನೆಯನ್ನು ಕೂಡ ಮಿಥಾಲಿ ರಾಜ್ ಮಾಡಿದ್ದರು.

ಹೈದರಾಬಾದ್ ಮೂಲದ ಮಿಥಾಲಿ ರಾಜ್, ತಮ್ಮ 16ನೇ ವಯಸ್ಸಿಗೆ 1999ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು. ಜತೆಗೆ ಐರ್ಲೆಂಡ್ ಎದುರು ಅಜೇಯ 114 ರನ್ ಬಾರಿಸಿದ್ದರು. ಬಳಿಕ ರಾಷ್ಟ್ರೀಯ ತಂಡದಲ್ಲಿ ಖಾಯಂ ಸ್ಥಾನ ಗಿಟ್ಟಿಸಿಕೊಂಡರು.

ಮಿಥಾಲಿ ಒಟ್ಟು 220 ಏಕದಿನ, 89 ಟಿ20 ಹಾಗೂ 12 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ಇದುವರೆಗೂ 7,391 ರನ್ ಸಿಡಿಸಿರುವ ಮಿಥಾಲಿ, 200 ಏಕದಿನ ಪಂದ್ಯಗಳನ್ನಾಡಿದ ಮೊದಲ ಮಹಿಳಾ ಆಟಗಾರ್ತಿ ಎನಿಸಿಕೊಂಡಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ 7 ಶತಕ, 59 ಅರ್ಧಶತಕ ಬಾರಿಸಿದ್ದಾರೆ. ಟಿ20 ಪಂದ್ಯದಲ್ಲಿ ಅಜೇಯ 97 ಮತ್ತು ಟೆಸ್ಟ್​ನಲ್ಲಿ ಅಜೇಯ 214 ರನ್ ಇವರ ಬೆಸ್ಟ್ ಸ್ಕೋರ್ ಆಗಿದೆ.

IPL 2022 Auctions: ಕೆಎಲ್ ರಾಹುಲ್ ಅಲ್ಲ: ಎಲ್ಲ 10 ಫ್ರಾಂಚೈಸಿ ಈ ಒಬ್ಬ ಆಟಗಾರನನ್ನು ಖರೀದಿಸಲು ಮುಗಿಬೀಳಲಿದೆ ಎಂದ ಲಕ್ಷ್ಮಣ್

India vs New Zealand: ಕೊಹ್ಲಿ ಪಡೆಗೆ ಬಿಗ್ ಶಾಕ್: 2ನೇ ಟೆಸ್ಟ್​ನಿಂದ ಟೀಮ್ ಇಂಡಿಯಾದ 3 ಆಟಗಾರರು ಹೊರಕ್ಕೆ

(Mithali Raj is celebrating 39th birthday today)

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ