Happy Birthday Rohit Sharma: ಹುಟ್ಟುಹಬ್ಬದ ಸಂಭ್ರಮದಲ್ಲಿ ರೋಹಿತ್ ಶರ್ಮಾ: ಗೆಲುವಿನ ಖಾತೆ ತೆರೆಯುತ್ತಾ ಮುಂಬೈ?

Rohit Sharma Birthday: 35ನೇ ವಸಂತಕ್ಕೆ ಕಾಲಿಟ್ಟಿರುವ ಹಿಟ್​ಮ್ಯಾನ್ ರೋಹಿತ್ ಶರ್ಮಾ, ಕುಟುಂಬ ಸದಸ್ಯರು ಹಾಗೂ ಮುಂಬೈ ಇಂಡಿಯನ್ಸ್ ತಂಡದ ಜೊತೆ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ರೋಹಿತ್ ಹುಟ್ಟು ಹಬ್ಬಕ್ಕೆ ಟೀಮ್ ಇಂಡಿಯಾ ಮಾಜಿ ಹಾಗೂ ಹಾಲಿ, ಬಾಲಿವುಡ್ ಸೆಲೆಬ್ರೆಟಿಗಳು ಸೇರಿದದಂತೆ ಅಭಿಮಾನಿಗಳು ಶುಭಕೋರಿದ್ದಾರೆ.

Happy Birthday Rohit Sharma: ಹುಟ್ಟುಹಬ್ಬದ ಸಂಭ್ರಮದಲ್ಲಿ ರೋಹಿತ್ ಶರ್ಮಾ: ಗೆಲುವಿನ ಖಾತೆ ತೆರೆಯುತ್ತಾ ಮುಂಬೈ?
Rohit Sharma
Follow us
| Edited By: Vinay Bhat

Updated on:Apr 30, 2022 | 12:58 PM

ಭಾರತ ಕ್ರಿಕೆಟ್ ತಂಡದ ನಾಯಕ, ಐಪಿಎಲ್​​ನಲ್ಲಿ ಮುಂಬೈ ಇಂಡಿಯನ್ಸ್ (Mumbai Indians) ತಂಡದ ಕ್ಯಾಪ್ಟನ್ ರೋಹಿತ್ ಶರ್ಮಾ (Rohit Sharma) ಅವರಿಗಿಂದು ಹುಟ್ಟು ಹಬ್ಬದ ಸಂಭ್ರಮ. 35ನೇ ವಸಂತಕ್ಕೆ ಕಾಲಿಟ್ಟಿರುವ ಹಿಟ್​ಮ್ಯಾನ್, ಕುಟುಂಬ ಸದಸ್ಯರು ಹಾಗೂ ಮುಂಬೈ ಇಂಡಿಯನ್ಸ್ ತಂಡದ ಜೊತೆ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ರೋಹಿತ್ ಹುಟ್ಟು ಹಬ್ಬಕ್ಕೆ ಟೀಮ್ ಇಂಡಿಯಾ ಮಾಜಿ ಹಾಗೂ ಹಾಲಿ, ಬಾಲಿವುಡ್ ಸೆಲೆಬ್ರೆಟಿಗಳು ಸೇರಿದದಂತೆ ಅಭಿಮಾನಿಗಳು ಶುಭಕೋರಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ 3 ಬಾರಿ ದ್ವಿಶತಕ ಬಾರಿಸಿದ ಜಗತ್ತಿನ ಏಕೈಕ ಬ್ಯಾಟ್ಸ್‌ಮನ್ ಎನ್ನುವ ದಾಖಲೆ ಬರೆದಿರುವ ರೋಹಿತ್ ಶರ್ಮಾಗೆ ಅಂತರರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ ಹಾಗೂ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಕೂಡ ಟ್ವೀಟ್ ಮೂಲಕ ವಿನೂತನವಾಗಿ ಶುಭಕೋರಿದೆ.

ರೋಹಿತ್ 2007 ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದ ಚೊಚ್ಚಲ ಐಸಿಸಿ ಪುರುಷರ ವಿಶ್ವ ಟಿ20 ನಲ್ಲಿ ತಮ್ಮ ಅಂತರರಾಷ್ಟ್ರೀಯ ಚೊಚ್ಚಲ ಪಂದ್ಯವನ್ನು ಮಾಡಿದರು. ಜೊತೆಗೆ ಆರಂಭದಲ್ಲೇ ಚಾಂಪಿಯನ್ ಆಗಿ ಮನೆಗೆ ಮರಳಿದರು. ಅಂದಿನಿಂದ, ಅವರು ವೈಟ್-ಬಾಲ್ ಕ್ರಿಕೆಟ್‌ನ ಸಾರ್ವಕಾಲಿಕ ಶ್ರೇಷ್ಠರಲ್ಲಿ ತಮ್ಮ ಸ್ಥಾನವನ್ನು ಸ್ಥಿರವಾಗಿ ಭದ್ರಪಡಿಸಿಕೊಂಡಿದ್ದಾರೆ. 227 ಏಕದಿನ ಪಂದ್ಯಗಳನ್ನಾಡಿದ್ದು, ಅವರು 29 ಶತಕಗಳು ಮತ್ತು 43 ಅರ್ಧ ಶತಕಗಳನ್ನು ಒಳಗೊಂಡಂತೆ 9205 ರನ್ ಗಳಿಸಿದ್ದಾರೆ.

ಮಿಲಿಯನ್ ಡಾಲರ್ ಕ್ರಿಕೆಟ್ ಟೂರ್ನಿ ಎನಿಸಿರುವ ಐಪಿಎಲ್‌ನಲ್ಲಿ ರೋಹಿತ್ ಶರ್ಮಾ ತನ್ನದೇ ಆದ ಛಾಪು ಮೂಡಿಸಿದ್ದು, ನಾಯಕನಾಗಿ ಮುಂಬೈ ಇಂಡಿಯನ್ಸ್‌ಗೆ 5 ಐಪಿಎಲ್ ಟ್ರೋಫಿಗಳನ್ನು ಗೆದ್ದುಕೊಟ್ಟಿದ್ದಾರೆ. ಸದ್ಯ 15ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್‌ ತಂಡ ಹೇಳಿಕೊಳ್ಳಿವಂತಹ ಪ್ರದರ್ಶನ ನೀಡುತ್ತಿಲ್ಲ. ಆದರೂ ಸಹ ಇವರು ಐದು ಬಾರಿಯ ತಂಡವನ್ನ ಚಾಂಪಿಯನ್ ಮಟ್ಟಕ್ಕೆ ಕೊಂಡೊಯ್ದಿದ್ದು, ಅವರ ನಾಯಕತ್ವದ ಗುಣವನ್ನು ಎತ್ತಿಹಿಡಿಯುತ್ತದೆ.

GT vs RCB: ಆರ್​ಸಿಬಿ ಪ್ಲೇಯಿಂಗ್ XIಗೆ ಹೊಸ ಆಟಗಾರ ಎಂಟ್ರಿ: ಓಪನಿಂಗ್​ನಲ್ಲಿ ಮತ್ತೆ ಬದಲಾವಣೆ

2013ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಬೆಂಗಳೂರಿನಲ್ಲಿ 203 ರನ್‌ ಗಳಿಸಿದ ರೋಹಿತ್ ತಾವೊಬ್ಬ ರನ್ ದಾಹ ಹೊಂದಿರುವ ಬ್ಯಾಟ್ಸ್ ಮನ್ ಎಂಬುದನ್ನು ಸಾಬೀತುಪಡಿಸಿದ್ದರು. 158 ಎಸೆತಗಳಲ್ಲಿ 209 ರನ್‌ ಚಚ್ಚಿ ಭಾರತದ ಪರ ಒಡಿಐನಲ್ಲಿ ದ್ವಿಶತಕ ಬಾರಿಸಿದ ಮೂರನೇ ಬ್ಯಾಟ್ಸ್‌ಮನ್‌ ಎನಿಸಿದರು. 2014ರಲ್ಲಿ ಈಡನ್‌ ಗಾರ್ಡನ್ಸ್‌ನಲ್ಲಿ ಶ್ರೀಲಂಕಾ ವಿರುದ್ಧ 264 ರನ್ ಕಲೆಹಾಕಿದ ಮುಂಬೈ ಆಟಗಾರ, 173 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದರು. 2017ರಲ್ಲಿ ಮೊಹಾಲಿಯಲ್ಲಿ ಶ್ರೀಲಂಕಾ ವಿರುದ್ಧ 208 ರನ್‌ ಸಿಡಿಸಿದ ರೋಹಿತ್, ಇದಕ್ಕಾಗಿ ಕೇವಲ 153 ಎಸೆತಗಳನ್ನು ಎದುರಿಸಿದ್ದರು. ಹೀಗೆ ಮೂರು ಬಾರಿ ಏಕದಿನದಲ್ಲಿ ದ್ವಿಶತಕ ಚಚ್ಚಿದ್ದಾರೆ.

ಸದ್ಯ ರೋಹಿತ್ ಶರ್ಮಾ ಮುಂದಿರುವ ಬಹುದೊಡ್ಡ ಸವಾಲೆಂದರೆ ಟಿ20 ವಿಶ್ವಕಪ್. ಆಸ್ಟ್ರೇಲಿಯಾದಲ್ಲಿ ಇದೇ ವರ್ಷ ಅಕ್ಟೋಬರ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾವನ್ನ ಯಶಸ್ವಿಯಾಗಿ ಮುನ್ನಡೆಸುವ ಸವಾಲು ರೋಹಿತ್ ಶರ್ಮಾ ಅವರಿಗಿದೆ. ರೋಹಿತ್ ಶರ್ಮಾ ಅವರ ಎಲ್ಲ ಕನಸು ನನಸಾಗಲಿ. ಕ್ರಿಕೆಟ್​​​ನಲ್ಲಿ ಶ್ರೇಷ್ಠ ಬ್ಯಾಟ್ಸ್​ಮನ್​ ಎನಿಸಿಕೊಂಡಿರುವ ಇವರು ಇನ್ನಷ್ಟು ಉತ್ತುಂಗಕ್ಕೇರಲಿ ಎಂಬುದು ನಮ್ಮ ನಿಮ್ಮೆಲ್ಲರ ಆಶಯ. ಹ್ಯಾಪಿ ಬರ್ತ್​ ಡೇ ರೋ’ಹಿಟ್’ ಶರ್ಮಾ.

ಕ್ರೀಡಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:13 am, Sat, 30 April 22

ತಾಜಾ ಸುದ್ದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ