
ಭಾರತ ಮತ್ತು ಜಿಂಬಾಬ್ವೆ (India vs Zimbabwe) ನಡುವಿನ ಟಿ20 ಸರಣಿಯ ಎರಡನೇ ಪಂದ್ಯ ಇಂದು ಜುಲೈ 25 ರಂದು ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಆರಂಭವಾಗಿದೆ. ಸರಣಿಯ ಮೊದಲ ಪಂದ್ಯವನ್ನು ಗೆದ್ದಿರುವ ಟೀಂ ಇಂಡಿಯಾ ಈಗಾಗಲೇ ಸರಣಿಯಲ್ಲಿ 1-0 ಅಂತರದ ಮುನ್ನಡೆ ಪಡೆದುಕೊಂಡಿದೆ. ಇದೀಗ ಈ ಪಂದ್ಯವನ್ನು ಗೆದ್ದರೆ ಸರಣಿ ಟೀಂ ಇಂಡಿಯಾದ ವಶವಾಗಲಿದೆ. ಅಲ್ಲದೆ ಶ್ರೇಯಸ್ ಅಯ್ಯರ್ ನಾಯಕನಾಗಿ ಮೊದಲ ಟಿ20 ಸರಣಿ ಗೆಲ್ಲುವ ಅವಕಾಶ ಹೊಂದಿದ್ದಾರೆ.ಇನ್ನು ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಜಿಂಬಾಬ್ವೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲಿದೆ.
ಟಾಸ್ ಜೊತೆಗೆ ಎರಡು ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಅದರಂತೆ ಜಿಂಬಾಬ್ವೆ ತಂಡದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಅಂದರೆ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿದ್ದ ತಂಡವೇ ಈ ಪಂದ್ಯದಲ್ಲೂ ಆಡಲಿದೆ. ಇತ್ತ ಟೀಂ ಇಂಡಿಯಾದಲ್ಲಿ ಒಂದು ಬದಲಾವಣೆಯನ್ನು ಮಾಡಲಾಗಿದ್ದು, ಕಳೆದ ಪಂದ್ಯದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದ ಅಶೋಕ್ ಶರ್ಮಾರನ್ನು ಈ ಪಂದ್ಯದಿಂದ ಕೈಬಿಡಲಾಗಿದೆ. ಅವರ ಬದಲಿಗೆ ಮತ್ತೊಬ್ಬ ಯುವ ವೇಗಿ ಯಶ್ ಠಾಕೂರ್ಗೆ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಲು ಅವಕಾಶ ನೀಡಲಾಗಿದೆ.
ಇಲ್ಲಿಯವರೆಗೆ, ಭಾರತ ಮತ್ತು ಜಿಂಬಾಬ್ವೆ ನಡುವೆ ಹರಾರೆ ಮೈದಾನದಲ್ಲಿ 13 ಪಂದ್ಯಗಳು ನಡೆದಿವೆ. ಭಾರತ ಈ ಪಂದ್ಯಗಳಲ್ಲಿ 10 ಪಂದ್ಯಗಳನ್ನು ಗೆದ್ದಿದ್ದರೆ, ಜಿಂಬಾಬ್ವೆ 3 ಪಂದ್ಯಗಳನ್ನು ಗೆದ್ದಿದೆ. ಭಾರತ ಕಳೆದ ಐದು ಪಂದ್ಯಗಳನ್ನು ಸುಲಭವಾಗಿ ಗೆದ್ದಿದೆ. ಭಾರತ ಈಗ ಎರಡನೇ ಟಿ20ಐ ಗೆದ್ದು ಸರಣಿಯನ್ನು ತನ್ನದಾಗಿಸಿಕೊಳ್ಳುವ ಇರಾದೆಯಲ್ಲಿದೆ.
Zimbabwe vs India 2nd T20, Live Score: ಟಾಸ್ ಗೆದ್ದ ಜಿಂಬಾಬ್ವೆ ಬೌಲಿಂಗ್ ಆಯ್ಕೆ
ಭಾರತ ತಂಡ: ವೈಭವ್ ಸೂರ್ಯವಂಶಿ, ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ರಿಂಕು ಸಿಂಗ್, ಶಿವಂ ದುಬೆ, ರವಿ ಬಿಷ್ಣೋಯ್, ಪ್ರಿನ್ಸ್ ಯಾದವ್, ಯಶ್ ಠಾಕೂರ್ ( ಚೊಚ್ಚಲ ಪಂದ್ಯ) ಮತ್ತು ಮಯಾಂಕ್ ಯಾದವ್.
#TeamIndia's Playing XI for the 2nd T20I 🔽
Updates ▶️ https://t.co/Z8UUziVx8d
#ZIMvIND pic.twitter.com/KXedeQrr3V
— BCCI (@BCCI) July 25, 2026
ಜಿಂಬಾಬ್ವೆ ತಂಡ: ಬ್ರಿಯಾನ್ ಬೆನೆಟ್, ಬೆನ್ ಕರ್ರನ್ (ಚೊಚ್ಚಲ ಪಂದ್ಯ), ಡಿಯೋನ್ ಮೈಯರ್ಸ್, ಸಿಕಂದರ್ ರಝಾ (ನಾಯಕ), ರಿಯಾನ್ ಬರ್ಲ್, ವೆಸ್ಲಿ ಮಾಧೆವೆರೆ, ತಡಿವಾನಾಶೆ ಮರುಮಾನಿ (ವಿಕೆಟ್ ಕೀಪರ್), ಬ್ರಾಡ್ ಇವಾನ್ಸ್, ನ್ಯೂಮನ್ ನ್ಯಾಮ್ಹುರಿ (ಚೊಚ್ಚಲ ಪಂದ್ಯ), ರಿಚರ್ಡ್ ನಾಗರವಾ ಮತ್ತು ಬ್ಲೆಸ್ಸಿಂಗ್ ಮುಜರಬಾನಿ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:13 pm, Sat, 25 July 26