ಇನ್ನೊಂದು ಮಗುವಿನ ನಿರೀಕ್ಷೆಯಲ್ಲಿ ಹರ್ಭಜನ್ ಸಿಂಗ್-ಗೀತಾ ಬಸ್ರಾ ದಂಪತಿ

Harbhajan Singh Geeta Basra Couple: ಗೀತಾ ಬಸ್ರಾ ಖುಷಿಯ ಸಂಗತಿಯನ್ನು ಇನ್ಸ್​ಟಾಗ್ರಾಂನಲ್ಲಿ ಹಂಚಿಕೊಳ್ಳುತ್ತಿದ್ದಂತೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಗೆಳೆಯ ಕ್ರಿಕೆಟಿಗ ಸುರೇಶ್ ರೈನಾ ಮತ್ತು ಅವರ ಪತ್ನಿ ಭಜ್ಜಿ-ಗೀತಾ ದಂಪತಿಗಳಿಗೆ ಶುಭಹಾರೈಸಿದ್ದಾರೆ.

ಇನ್ನೊಂದು ಮಗುವಿನ ನಿರೀಕ್ಷೆಯಲ್ಲಿ ಹರ್ಭಜನ್ ಸಿಂಗ್-ಗೀತಾ ಬಸ್ರಾ ದಂಪತಿ
ಹರ್ಭಜನ್ ಸಿಂಗ್ ಮತ್ತು ಗೀತಾ ಬಸ್ರಾ ಕುಟುಂಬ
Follow us
guruganesh bhat
|

Updated on:Mar 14, 2021 | 7:21 PM

ಕ್ರಿಕೆಟಿಗ ಹರ್ಭಜನ್ ಸಿಂಗ್ ಕುಟುಂಬಕ್ಕೆ ಜುಲೈ ಹೊಸ ಅತಿಥಿಯೋರ್ವರ ಆಗಮನವಾಗಲಿದೆ. ಈ ಶುಭಸುದ್ದಿಯನ್ನು ಹರ್ಭಜನ್ ಸಿಂಗ್ ಮಡದಿ ಗೀತಾ ಬಸ್ರಾ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈಗಾಗಲೇ ಈ ತಾರಾ ಜೋಡಿಗೆ ಓರ್ವ ಮಗಳಿದ್ದು ಇದೀಗ ಇನ್ನೊಂದು ಮಗುವಿನ ಅಗಮನಕ್ಕಾಗಿ ಕಾಯುತ್ತಿದೆ. ಗೀತಾ ಬಸ್ರಾ ಖುಷಿಯ ಸಂಗತಿಯನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುತ್ತಿದ್ದಂತೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಗೆಳೆಯ ಕ್ರಿಕೆಟಿಗ ಸುರೇಶ್ ರೈನಾ ಮತ್ತು ಅವರ ಪತ್ನಿ ಭಜ್ಜಿ-ಗೀತಾ ದಂಪತಿಗಳಿಗೆ ಶುಭ ಹಾರೈಸಿದ್ದಾರೆ.

ಬಾಲಿವುಡ್ ನಟಿ ಮತ್ತು ಕಲಾವಿದೆ ಗೀತಾ ಬಸ್ರಾ ಮತ್ತು ತಮ್ಮ ಬೌಲಿಂಗ್ ಶೈಲಿಯಿಂದಲೇ ಪ್ರಸಿದ್ಧರಾಗಿದ್ದ ಹರ್ಭಜನ್ ಸಿಂಗ್ 2015ರಲ್ಲಿ ಹಸೆಮಣೆ ಏರಿದ್ದರು. ಸಾಂಸಾರಿಕ ಬದುಕಿನ ಪ್ರತಿಫಲವಾಗಿ ಜನಿಸಿದ ಮಗಳ ಜತೆಗಿನ ಫೋಟೊವನ್ನು ಹಂಚಿಕೊಂಡಿರುವ ಗೀತಾ ಬಸ್ರಾ, ಜುಲೈನಲ್ಲಿ ತಾಯಿಯಾಗುತ್ತಿರುವ ಸುದ್ದಿಯನ್ನು ಬಹಿರಂಗಪಡಿಸಿದ್ದಾರೆ. ಅವರ ಮಗಳು ‘ಬೇಗನೆ ಅಕ್ಕನಾಗುವ ನಿರೀಕ್ಷೆಯಲ್ಲಿದ್ದೇನೆ’ ಎಂದು ಬರೆದಿರುವ ಟೀಶರ್ಟ್ ಹಿಡಿದಿರುವ ಪೋಟೊವನ್ನು ಗೀತಾ ಬಸ್ರಾ ಹಂಚಿಕೊಂಡಿದ್ದಾರೆ.

View this post on Instagram

A post shared by Geeta Basra (@geetabasra)

ಹರ್ಭಜನ್ ಸಿಂಗ್ ಭಾರತ ಕಂಡ ಅತ್ಯುತ್ತಮ ಸ್ಪಿನ್ ಎಸೆತಗಾರ ಎಂಬುದರಲ್ಲಿ ಎರಡು ಮಾತಿಲ್ಲ. ಕೈ ಅಗಲವಾಗಿಸಿ, ಒಂದು ನೆಗೆತ ಹಾಕಿ ಕೈ ತಿರುಗಿಸುತ್ತಾ ಬೌಲ್ ಮಾಡುವ ತಮ್ಮ ವಿಶಿಷ್ಟ ಶೈಲಿಯ ಮೂಲಕ ಭಾರತದ ಕ್ರಿಕೆಟ್ ಅಭಿಮಾನಿಗಳ ಮನದಲ್ಲಿ ಅಚ್ಚಳಿಯದೆ ಉಳಿದ ಆಟಗಾರ ಇವರು. ಭಾರತೀಯ ಟೆಸ್ಟ್ ಕ್ರಿಕೆಟ್​ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಪೈಕಿ ಮೂರನೇ ಸ್ಥಾನದಲ್ಲಿ ಹರ್ಭಜನ್ ಇದ್ದಾರೆ.

ಹರ್ಭಜನ್ ಸಿಂಗ್ 103 ಟೆಸ್ಟ್ ಪಂದ್ಯಗಳನ್ನಾಡಿ 417 ವಿಕೆಟ್ ಕಬಳಿಸಿದ್ದಾರೆ. ಏಕದಿನ ಪಂದ್ಯಾಟದಲ್ಲಿ ಹರ್ಭಜನ್ ಭಾರತದ 5ನೇ ಅತಿ ಹೆಚ್ಚು ವಿಕೆಟ್ ಟೇಕರ್ ಆಗಿದ್ದಾರೆ. 236 ಪಂದ್ಯಗಳಲ್ಲಿ 269 ವಿಕೆಟ್ ಪಡೆದಿದ್ದಾರೆ. ಹರ್ಭಜನ್ ಸಿಂಗ್ 2007ರಲ್ಲಿ ಟಿ20 ವಿಶ್ವಕಪ್ (ICC WT20) ಗೆದ್ದ ತಂಡದಲ್ಲಿ ಹಾಗೂ 2011 ವಿಶ್ವಕಪ್ (ICC World Cup) ಗೆದ್ದ ತಂಡದ ಸದಸ್ಯರಾಗಿದ್ದರು. 2000ದ ಮೊದಲ ಭಾಗದಲ್ಲಿ ಭಾರತದ ಟೆಸ್ಟ್ ಕ್ರಿಕೆಟ್ ತಂಡ ನಂಬರ್ 1 ರ್ಯಾಂಕಿಂಗ್ ಪಡೆದಿತ್ತು. ಆ ಪ್ರಶಂಸೆಗೆ ಪಾತ್ರವಾಗಲು ಕೂಡ ಹರ್ಭಜನ್ ಸಿಂಗ್ ಕಾರಣರಾಗಿದ್ದರು.

ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ಹಿಂದೆ ಸರಿದ ಬಳಿಕ ಕಮೆಂಟೇಟರ್ ಆಗಿ ಹರ್ಭಜನ್ ಮಿಂಚಿದ್ದರು. ಈ ಬಾರಿಯ ಐಪಿಎಲ್​ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಹರ್ಭಜನ್ ಆಯ್ಕೆಯಾಗಿದ್ದಾರೆ. ಕೇವಲ ಕ್ರಿಕೆಟ್​ನಲ್ಲಿ ಮಾತ್ರವಲ್ಲ, ಸಿನಿಮಾ ವಿಭಾಗದಲ್ಲಿ ಕೂಡ ಹರ್ಭಜನ್ ತಮ್ಮ ಛಾಪು ಮೂಡಿಸಿದ್ದಾರೆ. ಸೋಮವಾರ (ಮಾರ್ಚ್ 1) ತಮ್ಮ ಮುಂದಿನ ಸಿನಿಮಾ ಫ್ರೆಂಡ್​ಶಿಪ್ (Friendship) ಟೀಸರ್ ಹಂಚಿಕೊಂಡಿದ್ದಾರೆ. ಹಿಂದಿ ಭಾಷೆಯ ಫ್ರೆಂಡ್​ಶಿಪ್ ಸಿನಿಮಾದಲ್ಲಿ ಹರ್ಭಜನ್ ಮಿಂಚಿದ್ದಾರೆ.

ಇದನ್ನೂ ಓದಿ: ತಾನು ಮಹಿಳಾ ಕ್ರಿಕೆಟ್​ನ ಸಚಿನ್ ತೆಂಡೂಲ್ಕರ್ ಎನ್ನುವುದನ್ನು ಸಾಬೀತು ಮಾಡಿದ ಮಿಥಾಲಿ ರಾಜ್!

ಇದನ್ನೂ ಓದಿ: ರಣ್​ಬೀರ್ ಕಪೂರ್​ನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದ ಬಾಲಿವುಡ್ ಬೆಡಗಿ ಆಲಿಯಾ ಭಟ್

Published On - 7:10 pm, Sun, 14 March 21

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?