Harbhajan Singh: ಲೆಜೆಂಡ್ಸ್ ಕ್ರಿಕೆಟ್ ಲೀಗ್​ನಲ್ಲಿದ್ದ ಭಾರತದ ಮಾಜಿ ಆಟಗಾರ ಹರ್ಭಜನ್ ಸಿಂಗ್​ಗೆ ಕೊರೊನಾ ಪಾಸಿಟಿವ್

Legends Cricket League: ಲೆಜೆಂಡ್ಸ್ ಕ್ರಿಕೆಟ್ ಲೀಗ್​ನಲ್ಲಿ ಇಂಡಿಯಾ ಮಹಾರಾಜಾಸ್ ತಂಡದಲ್ಲಿದ್ದ ಸ್ಟಾರ್ ಸ್ಪಿನ್ನರ್, ಟೀಮ್ ಇಂಡಿಯಾ ಮಾಜಿ ಆಟಗಾರ ಹರ್ಭಜನ್ ಸಿಂಗ್​ಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಈ ಬಗ್ಗೆ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಖಚಿತ ಪಡಿಸಿದ್ದಾರೆ.

Harbhajan Singh: ಲೆಜೆಂಡ್ಸ್ ಕ್ರಿಕೆಟ್ ಲೀಗ್​ನಲ್ಲಿದ್ದ ಭಾರತದ ಮಾಜಿ ಆಟಗಾರ ಹರ್ಭಜನ್ ಸಿಂಗ್​ಗೆ ಕೊರೊನಾ ಪಾಸಿಟಿವ್
Harbhajan Singh Covid Positive
Follow us
TV9 Web
| Updated By: Vinay Bhat

Updated on:Jan 21, 2022 | 12:49 PM

ಲೆಜೆಂಡ್ಸ್ ಕ್ರಿಕೆಟ್ ಲೀಗ್ ಕೂಟಕ್ಕೆ ಶುಕ್ರವಾರ ಚಾಲನೆ ಸಿಕ್ಕಿದೆ. ಒಮಾನ್​​ನ ಅಲ್ ಅಮೆರತ್​ನಲ್ಲಿ ಮೊದಲ ಪಂದ್ಯದಲ್ಲೇ ಮೊಹಮ್ಮದ್ ಕೈಫ್ ನಾಯಕತ್ವದ ಇಂಡಿಯಾ ಮಹಾರಾಜಾಸ್ ತಂಡ ಏಷ್ಯಾ ಲಯನ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿತು. ಆದರೆ, ಇದರ ಬೆನ್ನಲ್ಲೇ ಇಂಡಿಯಾ ತಂಡಕ್ಕೆ ಆಘಾತ ಉಂಟಾಗಿದೆ. ತಂಡದಲ್ಲಿದ್ದ ಸ್ಟಾರ್ ಸ್ಪಿನ್ನರ್, ಟೀಮ್ ಇಂಡಿಯಾ ಮಾಜಿ ಆಟಗಾರ ಹರ್ಭಜನ್ ಸಿಂಗ್​ಗೆ (Harbhajan Singh) ಕೊರೊನಾ ಪಾಸಿಟಿವ್ ಕಂಡುಬಂದಿದೆ. ಈ ಬಗ್ಗೆ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಖಚಿತ ಪಡಿಸಿದ್ದಾರೆ. ಇವರು ಲೆಜೆಂಡ್ಸ್ ಕ್ರಿಕೆಟ್ ಲೀಗ್​ನಲ್ಲಿ (Legends Cricket League) ಆಡುತ್ತಿದ್ದಾರೆ. ಆದರೆ, ನಿನ್ನೆಯ ಪಂದ್ಯದಲ್ಲಿ ಇವರು ಆಡುವ ಬಳಗದಲ್ಲಿ ಇರಲಿಲ್ಲ. “ನನಗೆ ಕೋವಿಡ್ ಪಾಸಿಟಿವ್ ಕಂಡುಬಂದಿದೆ. ನಾನೀಗ ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇನೆ ಮತ್ತು ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದ್ದೇನೆ. ನನ್ನ ಸಂಪರ್ಕದಲ್ಲಿ ಇದ್ದವರು ಆದಷ್ಟು ಬೇಗ ಪರೀಕ್ಷಿಸಿಕೊಳ್ಳುವಂತೆ ವಿನಂತಿಸುತ್ತೇನೆ. ದಯವಿಟ್ಟು ಸುರಕ್ಷಿತವಾಗಿರಿ ಮತ್ತು ಕಾಳಜಿ ವಹಿಸಿ,” ಎಂದು ಹರ್ಭಜನ್ ಟ್ವೀಟ್ ಮಾಡಿದ್ದಾರೆ.

ಹರ್ಭಜನ್ ಅವರ ಪತ್ನಿ ಗೀತಾ ಬಸ್ರಾ ಅವರಿಗೂ ಕೊರೊನಾ ಸೋಂಕು ತಗುಲಿದೆ. ಇವರು ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಈ ಬಗ್ಗೆ ಹೇಳಿಕೊಂಡಿದ್ದು, “ಸಾಕಷ್ಟು ಮುಂಜಾಗ್ರತೆ ವಹಿಸಿದ್ದರೂ ಎರಡು ವರ್ಷಗಳ ಬಳಿಕ ಕೊನೆಗೂ ನನಗೆ ವೈರಸ್ ಅಂಟಿದೆ, ಕ್ವಾರಂಟೈನ್ ಆಗಿದ್ದೇನೆ,” ಎಂದು ಬರೆದುಕೊಂಡಿದ್ದಾರೆ.

ಸದ್ಯ ಹರ್ಭಜನ್ ಅವರಿಗೆ ಕೊರೊನಾ ತಗುಲಿರುವುದರಿಂದ ಲೆಜೆಂಡ್ ಕ್ರಿಕೆಟ್ ಲೀಗ್​ನಲ್ಲೂ ಆತಂಕ ಶುರುವಾಗಿದೆ. ಶುಕ್ರವಾರವಷ್ಟೆ ಲೀಗ್​ಗೆ ಚಾಲನೆ ಸಿಕ್ಕಿತ್ತು. ಮೊದಲ ಪಂದ್ಯದಲ್ಲೇ ಇಂಡಿಯಾ ಮಹಾರಾಜಾಸ್ ತಂಡವು ಏಷ್ಯಾ ಲಯನ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಏಷ್ಯನ್ ಲಯನ್ಸ್ ತಂಡ ಏಳು ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿತು. ತಂಡಕ್ಕೆ ಉಪುಲ್ ತರಂಗ ಉತ್ತಮ ಆರಂಭ ನೀಡಿದರು. ತರಂಗ 66 ರನ್ ಗಳಿಸಿದರೆ, ನಾಯಕ ಮಿಸ್ಭಾ ಉಲ್ ಹಕ್ 44 ರನ್ ಗಳಿಸಿದರು. ಭಾರತದ ಪರ ಮನ್ಪ್ರೀತ್ ಗೋನಿ ಮೂರು ವಿಕೆಟ್ ಕಿತ್ತರೆ, ಇರ್ಫಾನ್ ಪಠಾನ್ ಎರಡು ವಿಕೆಟ್ ಪಡೆದರು. ಬಿನ್ನಿ ಮತ್ತು ಮುನಾಫ್ ಪಟೇಲ್ ತಲಾ ಒಂದು ವಿಕೆಟ್ ಪಡೆದರು.

ಗುರಿ ಬೆನ್ನತ್ತಿದ ಇಂಡಿಯಾ ಮಹಾರಾಜಾಸ್ ಗೆ ಉತ್ತಮ ಆರಂಭ ಸಿಗಲಿಲ್ಲ. ಒಂದು ಹಂತದಲ್ಲಿ 34 ರನ್​ಗೆ ಮೂರು ವಿಕೆಟ್ ಕಳೆದುಕೊಂಡಿದ್ದ ತಂಡಕ್ಕೆ ನಾಯಕ ಕೈಫ್ ಮತ್ತು ಯೂಸುಫ್ ಪಠಾಣ್ ನೆರವಾದರು. ಅದರಲ್ಲೂ ಸ್ಫೋಟಕ ಬ್ಯಾಟಿಂಗ್ ನಡೆಸಿದ ಪಠಾಣ್ ಕೇವಲ 40 ಎಸೆತದಲ್ಲಿ 80 ರನ್ ಗಳಿಸಿದರು. ಐದು ಸಿಕ್ಸರ್ ಮತ್ತು 9 ಬೌಂಡರಿ ಬಾರಿಸಿದ ಯೂಸುಫ್ ರನ್ ಔಟಾದರು. ನಾಯಕ ಕೈಫ್ ಅಜೇಯ 42 ರನ್ ಗಳಿಸಿದರೆ, ಇರ್ಫಾನ್ ಪಠಾಣ್ 21 ರನ್ ಗಳಿಸಿ ಅಜೇಯರಾಗುಳಿದರು. ಇಂಡಿಯಾ ಮಹಾರಾಜಾಸ್ ತಂಡ 19.1 ಓವರ್ ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ ಗುರಿ ತಲುಪಿ ಜಯ ಸಾಧಿಸಿತು.

Axar Patel Engagement: ಹುಟ್ಟುಹಬ್ಬದ ದಿನ ಗೆಳತಿಗೆ ಮಂಡಿಯೂರಿ ಪ್ರಪೋಸ್ ಮಾಡಿದ ಅಕ್ಷರ್ ಪಟೇಲ್: ಫೋಟೋ ವೈರಲ್

Published On - 12:34 pm, Fri, 21 January 22

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!