AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಭಜನ್ ಸಿಂಗ್ ಸಾರ್ವಕಾಲಿಕ ಶ್ರೇಷ್ಠ ಟಿ20 ಪ್ಲೇಯಿಂಗ್ 11: ಪ್ರಮುಖ ಆಟಗಾರರಿಗಿಲ್ಲ ಸ್ಥಾನ

Harbhajan Singh's All-Time T20 XI: ರೋಹಿತ್ ಶರ್ಮಾ, ಕ್ರಿಸ್ ಗೇಲ್, ಜೋಸ್ ಬಟ್ಲರ್, ಶೇನ್ ವಾಟ್ಸನ್, ಎಬಿ ಡಿವಿಲಿಯರ್ಸ್, ಎಂಎಸ್ ಧೋನಿ (ನಾಯಕ), ಡ್ವೇನ್ ಬ್ರಾವೋ

ಹರ್ಭಜನ್ ಸಿಂಗ್ ಸಾರ್ವಕಾಲಿಕ ಶ್ರೇಷ್ಠ ಟಿ20 ಪ್ಲೇಯಿಂಗ್ 11: ಪ್ರಮುಖ ಆಟಗಾರರಿಗಿಲ್ಲ ಸ್ಥಾನ
Harbhajan Singh
TV9 Web
| Edited By: |

Updated on: Nov 11, 2021 | 10:48 PM

Share

ಟೀಮ್ ಇಂಡಿಯಾ ಕ್ರಿಕೆಟಿಗ ಹರ್ಭಜನ್ ಸಿಂಗ್ ತಮ್ಮ ಸಾರ್ವಕಾಲಿಕ ಟಿ20 ಇಲೆವೆನ್ ತಂಡವನ್ನು ಪ್ರಕಟಿಸಿದ್ದಾರೆ. ಇದರಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಸ್ಥಾನ ನೀಡದಿರುವುದು ವಿಶೇಷ. ಇನ್ನು ಈ ಇಲೆವೆನ್​ನಲ್ಲಿ ಕೇವಲ ಮೂವರು ಭಾರತೀಯ ಆಟಗಾರರಿಗೆ ಮಾತ್ರ ಸ್ಥಾನ ನೀಡಿದ್ದಾರೆ. ಹರ್ಭಜನ್ ಸಿಂಗ್ ಈ ತಂಡದ ನಾಯಕನಾಗಿ ಮಹೇಂದ್ರ ಸಿಂಗ್ ಧೋನಿಯನ್ನು ಆಯ್ಕೆ ಮಾಡಿಕೊಂಡಿದ್ದು, ಹಾಗೆಯೇ ವಿಕೆಟ್ ಕೀಪರ್ ಜವಾಬ್ದಾರಿ ಕೂಡ ಧೋನಿಗೆ ವಹಿಸಿದ್ದಾರೆ. ಇನ್ನು ಆರಂಭಿಕರಾಗಿ ಟೀಮ್ ಇಂಡಿಯಾ ಸ್ಪೋಟಕ ಓಪನರ್ ರೋಹಿತ್ ಶರ್ಮಾ ಹಾಗೂ ವೆಸ್ಟ್ ಇಂಡೀಸ್ ದೈತ್ಯ ಕ್ರಿಸ್ ಗೇಲ್ ಅವರನ್ನು ಆಯ್ಕೆ ಮಾಡಿಕೊಂಡಿದ್ದಾರೆ.

ಅದೇ ರೀತಿ ಮೂರನೇ ಕ್ರಮಾಂಕದಲ್ಲಿ ಇಂಗ್ಲೆಂಡ್ ಬ್ಯಾಟರ್ ಜೋಸ್ ಬಟ್ಲರ್​ ಅವರಿಗೆ ಸ್ಥಾನ ನೀಡಿದ್ದಾರೆ. ನಾಲ್ಕನೇ ಸ್ಥಾನದಲ್ಲಿ ಆಸ್ಟ್ರೇಲಿಯಾ ಆಲ್​ರೌಂಡರ್ ಶೇನ್ ವಾಟ್ಸನ್ ಅವರನ್ನು ಆಯ್ಕೆ ಮಾಡಿಕೊಂಡಿದ್ದು, 5ನೇ ಕ್ರಮಾಂಕವನ್ನು ಎಬಿ ಡಿವಿಲಿಯರ್ಸ್​ಗೆ ನೀಡಿದ್ದಾರೆ. ಹಾಗೆಯೇ 6ನೇ ಕ್ರಮಾಂಕದಲ್ಲಿ ಧೋನಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ.

ಇಲ್ಲಿ 7ನೇ ಹಾಗೂ 8ನೇ ಸ್ಥಾನದಲ್ಲಿ ವೆಸ್ಟ್ ಇಂಡೀಸ್​ನ ಆಲ್​ರೌಂಡರ್​ಗಳಾದ ಡ್ವೇನ್ ಬ್ರಾವೋ ಹಾಗೂ ಕೀರನ್ ಪೊಲಾರ್ಡ್​ ಅವರನ್ನು ಹರ್ಭಜನ್ ಸಿಂಗ್ ಆಯ್ಕೆ ಮಾಡಿರುವುದು ವಿಶೇಷ. ಇನ್ನು ಬೌಲರುಗಳ ವಿಭಾಗದಲ್ಲಿ ಸ್ಪಿನ್ನರ್​ ಆಗಿ ಸುನೀಲ್ ನರೈನ್ ಇದ್ದರೆ, ವೇಗಿಗಳಾಗಿ ಲಸಿತ್ ಮಾಲಿಂಗ ಹಾಗೂ ಜಸ್​ಪ್ರೀತ್ ಬುಮ್ರಾ ಅವರನ್ನು ಆಯ್ಕೆ ಮಾಡಿಕೊಂಡಿದ್ದಾರೆ.

ಹರ್ಭಜನ್ ಸಿಂಗ್ ಅವರ ಸಾರ್ವಕಾಲಿಕ T20 XI ಹೀಗಿದೆ: ರೋಹಿತ್ ಶರ್ಮಾ, ಕ್ರಿಸ್ ಗೇಲ್, ಜೋಸ್ ಬಟ್ಲರ್, ಶೇನ್ ವಾಟ್ಸನ್, ಎಬಿ ಡಿವಿಲಿಯರ್ಸ್, ಎಂಎಸ್ ಧೋನಿ (ನಾಯಕ), ಡ್ವೇನ್ ಬ್ರಾವೋ, ಕೀರನ್ ಪೊಲಾರ್ಡ್, ಸುನೀಲ್ ನರೈನ್, ಲಸಿತ್ ಮಾಲಿಂಗ, ಜಸ್ಪ್ರೀತ್ ಬುಮ್ರಾ

ಇದನ್ನೂ ಓದಿ: Team India: ಟೀಮ್ ಇಂಡಿಯಾದ ಈ ಜೋಡಿ ವಿಶ್ವಕಪ್ ಗೆದ್ದು ಕೊಡಲಿದೆ ಎಂದ ಮಾಜಿ ಕ್ರಿಕೆಟಿಗ

ಇದನ್ನೂ ಓದಿ: Team India: ಟೀಮ್ ಇಂಡಿಯಾದ ಮುಂದಿನ ಸರಣಿಗಳ ವೇಳಾಪಟ್ಟಿ ಹೀಗಿದೆ

ಇದನ್ನೂ ಓದಿ:   IPL 2022: ಯುವ ನಾಯಕನ ಮೇಲೆ ಕಣ್ಣಿಟ್ಟಿರುವ CSK

(Harbhajan Singh Names His All-Time T20 XI)