IND vs ENG: 2ನೇ ಟೆಸ್ಟ್ಗೆ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಹೆಸರಿಸಿದ ಹರ್ಭಜನ್ ಸಿಂಗ್
India vs England 2nd Test: ಭಾರತ ಮತ್ತು ಇಂಗ್ಲೆಂಡ್ ನಡುವಣ 2ನೇ ಟೆಸ್ಟ್ ಪಂದ್ಯದಿಂದ ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ಕೆಎಲ್ ರಾಹುಲ್ ಹಾಗೂ ರವೀಂದ್ರ ಜಡೇಜಾ ಹೊರಗುಳಿದಿದ್ದಾರೆ. ಇನ್ನು ವಿರಾಟ್ ಕೊಹ್ಲಿ ಹಾಗೂ ಮೊಹಮ್ಮದ್ ಶಮಿ ಈ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ. ಹೀಗಾಗಿ ಭಾರತ ತಂಡವು ಅನಾನುಭವಿ ಪಡೆಯೊಂದಿಗೆ ದ್ವಿತೀಯ ಟೆಸ್ಟ್ನಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ.
ಭಾರತ-ಇಂಗ್ಲೆಂಡ್ (India vs England) ನಡುವಣ ಎರಡನೇ ಟೆಸ್ಟ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಆಂಧ್ರ ಪ್ರದೇಶದ ವಿಶಾಖಪಟ್ಟಣದ ವೈಎಸ್ ರಾಜಶೇಖರ್ ರೆಡ್ಡಿ ಸ್ಟೇಡಿಯಣನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಉಭಯ ತಂಡಗಳು ಸಜ್ಜಾಗುತ್ತಿದೆ. ಆದರೆ ಈ ಪಂದ್ಯದಿಂದ ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ಕೆಎಲ್ ರಾಹುಲ್ ಹಾಗೂ ರವೀಂದ್ರ ಜಡೇಜಾ ಹೊರಗುಳಿದಿದ್ದಾರೆ. ಅನುಭವಿ ಆಟಗಾರರ ಅನುಪಸ್ಥಿತಿಯಲ್ಲಿ ಈ ಪಂದ್ಯಕ್ಕಾಗಿ ಭಾರತ ತಂಡವು ಹೇಗೆ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಬಹುದೆಂದು ಟೀಮ್ ಇಂಡಿಯಾದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ತಿಳಿಸಿಕೊಟ್ಟಿದ್ದಾರೆ.
ಯುವ ದಾಂಡಿಗನಿಗೆ ಅವಕಾಶ:
ಭಾರತ ತಂಡವು ದ್ವಿತೀಯ ಟೆಸ್ಟ್ ಪಂದ್ಯಕ್ಕಾಗಿ ಕೆಲ ಮಹತ್ವದ ಬದಲಾವಣೆ ಮಾಡಿಕೊಳ್ಳಬೇಕು. ಇಲ್ಲಿ ಕೆಎಲ್ ರಾಹುಲ್ ಹೊರಗುಳಿದಿರುವ ಕಾರಣ ಸರ್ಫರಾಝ್ ಖಾನ್ಗೆ ಅವಕಾಶ ನೀಡುವುದು ಉತ್ತಮ. ಏಕೆಂದರೆ ಇಂಗ್ಲೆಂಡ್ ಲಯನ್ಸ್ ವಿರುದ್ಧದ ಪಂದ್ಯಗಳಲ್ಲಿ ಸರ್ಫರಾಝ್ ಅದ್ಭುತ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ರಜತ್ ಪಾಟಿದಾರ್ ಬದಲು ಸರ್ಫರಾಝ್ ಖಾನ್ ಉತ್ತಮ ಆಯ್ಕೆ ಎಂದು ಹರ್ಭಜನ್ ಸಿಂಗ್ ತಿಳಿಸಿದ್ದಾರೆ.
ನಾಲ್ವರು ಸ್ಪಿನ್ನರ್ಗಳು:
ಈ ಬಾರಿ ಟೀಮ್ ಇಂಡಿಯಾ ನಾಲ್ವರು ಸ್ಪಿನ್ನರ್ಗಳನ್ನು ಕಣಕ್ಕಿಳಿಸಬೇಕೆಂದು ಹರ್ಭಜನ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. ಇಲ್ಲಿ ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್ ಜೊತೆಗೆ ವಾಷಿಂಗ್ಟನ್ ಸುಂದರ್ ಹಾಗೂ ಕುಲ್ದೀಪ್ ಯಾದವ್ ಅವರನ್ನು ಆಯ್ಕೆ ಮಾಡಬೇಕು. ಅಂದರೆ ವೇಗಿ ಜಸ್ಪ್ರೀತ್ ಬುಮ್ರಾ ಜೊತೆ ನಾಲ್ವರು ಸ್ಪಿನ್ನರ್ಗಳಿರಬೇಕು ಎಂದು ಭಜ್ಜಿ ತಿಳಿಸಿದ್ದಾರೆ.
ಇದೇ ವೇಳೆ ಶುಭ್ಮನ್ ಗಿಲ್ ಹಾಗೂ ಅಯ್ಯರ್ ಅವರ ಫಾರ್ಮ್ ಬಗ್ಗೆ ಮಾತನಾಡಿದ ಹರ್ಭಜನ್ ಸಿಂಗ್, ಇಬ್ಬರೂ ಕಳೆದ 10 ಇನಿಂಗ್ಸ್ಗಳಲ್ಲಿ ಹೆಚ್ಚು ರನ್ ಗಳಿಸಿಲ್ಲ. ಇದೀಗ ಕೆಎಲ್ ರಾಹುಲ್ ತಂಡದಲ್ಲಿಲ್ಲದ ಕಾರಣ, ಇಬ್ಬರ ಮೇಲೆ ಜವಾಬ್ದಾರಿ ಹೆಚ್ಚಿದೆ. ಹೀಗಾಗಿ ಮಧ್ಯಮ ಕ್ರಮಾಂಕದಲ್ಲಿ ಗಿಲ್ ಹಾಗೂ ಅಯ್ಯರ್ ಚೆನ್ನಾಗಿ ಆಡಬೇಕಾದ ಅನಿವಾರ್ಯತೆ ಇದೆ ಎಂದು ಹರ್ಭಜನ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. ಅದರಂತೆ ಹರ್ಭಜನ್ ಸಿಂಗ್ ಹೆಸರಿಸಿದ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…
- ರೋಹಿತ್ ಶರ್ಮಾ
- ಯಶಸ್ವಿ ಜೈಸ್ವಾಲ್
- ಶುಭ್ಮನ್ ಗಿಲ್
- ಶ್ರೇಯಸ್ ಅಯ್ಯರ್
- ಸರ್ಫರಾಝ್ ಖಾನ್
- ಕೆಎಸ್ ಭರತ್ (ವಿಕೆಟ್ ಕೀಪರ್)
- ಅಕ್ಷರ್ ಪಟೇಲ್
- ವಾಷಿಂಗ್ಟನ್ ಸುಂದರ್
- ರವಿಚಂದ್ರನ್ ಅಶ್ವಿನ್
- ಜಸ್ಪ್ರೀತ್ ಬುಮ್ರಾ
- ಕುಲ್ದೀಪ್ ಯಾದವ್
ಭಾರತ-ಇಂಗ್ಲೆಂಡ್ 2ನೇ ಟೆಸ್ಟ್ ಯಾವಾಗ?
ಭಾರತ ಮತ್ತು ಇಂಗ್ಲೆಂಡ್ ನಡುವಣ 2ನೇ ಟೆಸ್ಟ್ ಪಂದ್ಯವು ಫೆಬ್ರವರಿ 2 ರಿಂದ ಶುರುವಾಗಲಿದೆ. ಐದು ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಜಯ ಸಾಧಿಸಿದ್ದು, ಇದೀಗ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಇದೀಗ ಸಮಬಲ ಸಾಧಿಸಬೇಕಿದ್ದರೆ ದ್ವಿತೀಯ ಟೆಸ್ಟ್ನಲ್ಲಿ ಟೀಮ್ ಇಂಡಿಯಾ ಗೆಲ್ಲಲೇಬೇಕು.
ಭಾರತ ಟೆಸ್ಟ್ ತಂಡ:
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ, ಸರ್ಫರಾಝ್ ಖಾನ್, ವಾಷಿಂಗ್ಟನ್ ಸುಂದರ್, ಸೌರಭ್ ಕುಮಾರ್, ಅವೇಶ್ ಖಾನ್.