AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಬಾಂಬ್ ಎಕ್ಸ್​ಪರ್ಟ್ ಪಾಂಡ್ಯ​! ಐಪಿಎಲ್ ಆರಂಭಕ್ಕೂ ಮುನ್ನ ಹೊಸ ಅವತಾರ ತಾಳಿದ ಹಾರ್ದಿಕ್; ವಿಡಿಯೋ

IPL 2022: ಐಪಿಎಲ್ 2022 ರ ಹೊಸ ಪ್ರೋಮೋ ವೀಡಿಯೊ ಇದೀಗ ಹೊರಹೊಮ್ಮಿದೆ, ಇದರಲ್ಲಿ ಹಾರ್ದಿಕ್ ಪಾಂಡ್ಯ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

IPL 2022: ಬಾಂಬ್ ಎಕ್ಸ್​ಪರ್ಟ್ ಪಾಂಡ್ಯ​! ಐಪಿಎಲ್ ಆರಂಭಕ್ಕೂ ಮುನ್ನ ಹೊಸ ಅವತಾರ ತಾಳಿದ ಹಾರ್ದಿಕ್; ವಿಡಿಯೋ
ಹಾರ್ದಿಕ್ ಪಾಂಡ್ಯ
TV9 Web
| Edited By: |

Updated on: Mar 12, 2022 | 5:43 PM

Share

ಭಾರತದಲ್ಲಿ ಕ್ರೀಡೆಯ ಅತಿದೊಡ್ಡ ಹಬ್ಬವೆಂದು ಪರಿಗಣಿಸಲಾದ ಇಂಡಿಯನ್ ಪ್ರೀಮಿಯರ್ ಲೀಗ್ 2022 (IPL 2022) ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಪ್ರಪಂಚದಾದ್ಯಂತದ ಕ್ರಿಕೆಟ್ ಅಭಿಮಾನಿಗಳು ಈ ಕ್ರಿಕೆಟ್ ಲೀಗ್‌ಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಮಾರ್ಚ್ 26ರಿಂದ ಆರಂಭವಾಗಲಿರುವ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಈಗಾಗಲೇ ಪ್ರೇಕ್ಷಕರಲ್ಲಿ ಭಾರೀ ಕ್ರೇಜ್ ಹುಟ್ಟಿಕೊಂಡಿದೆ. ಇದರ ಅಂತಿಮ ಪಂದ್ಯ ಮೇ 29 ರಂದು ನಡೆಯಲಿದೆ. ಈ ಟೂರ್ನಿಯಲ್ಲಿ ಸಾಕಷ್ಟು ಹೊಸತನಗಳನ್ನು ಕಾನಲಿದ್ದು, ಈ ವರ್ಷ ಎರಡು ಹೊಸ ತಂಡಗಳು ಐಪಿಎಲ್‌ನಲ್ಲಿ ಆಡುವುದನ್ನು ಕಾಣಬಹುದು.

ಅದಾಗ್ಯೂ, ಈ ಮಧ್ಯೆ ಐಪಿಎಲ್ 2022 ರ ಹೊಸ ಪ್ರೋಮೋ ವೀಡಿಯೊ ಇದೀಗ ಹೊರಹೊಮ್ಮಿದೆ, ಇದರಲ್ಲಿ ಹಾರ್ದಿಕ್ ಪಾಂಡ್ಯ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ದೇಶದ ಮೊದಲ ಬಹುಭಾಷಾ ಮೈಕ್ರೋ-ಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಕೂ ಅಪ್ಲಿಕೇಶನ್‌ನಲ್ಲಿನ ವೀಡಿಯೊ ಕಡಿಮೆ ಸಮಯದಲ್ಲೇ ಸಾಕಷ್ಟು ಸದ್ದು ಮಾಡುತ್ತಿದೆ. #pandyapromo ಮತ್ತು #iplpromo ಎಂಬ ಹ್ಯಾಶ್ಟ್ಯಾಗ್ ನಲ್ಲಿ ಈ ವಿಡಿಯೋ ವೈರಲ್ ಆಗುತ್ತಿದೆ.

ಈ ವೀಡಿಯೊದಲ್ಲಿ, ಹಾರ್ದಿಕ್ ಪಾಂಡ್ಯರನ್ನು ಬಾಂಬ್ ತಜ್ಞರಾಗಿ ತೋರಿಸಲಾಗಿದೆ. ವಾಸ್ತವವಾಗಿ, ಈ ವೀಡಿಯೊ ಐಪಿಎಲ್‌ನ ಪ್ರೋಮೋ ಆಗಿದ್ದು, ಇದರಲ್ಲಿ ಎರಡು ಹೊಸ ತಂಡಗಳನ್ನು ಸೇರಿಸಿದ ನಂತರ ಈಗ ಅದು 10 ತಂಡಗಳಾಗಿ ಮಾರ್ಪಟ್ಟಿದೆ. ಈ ಎರಡು ಹೊಸ ತಂಡಗಳ ಸೇರ್ಪಡೆಯೊಂದಿಗೆ, ಐಪಿಎಲ್‌ನ ಹೊಸ ಋತುವಿನಲ್ಲಿ ಏನು ಸ್ಫೋಟಗೊಳ್ಳಲಿದೆ ಎಂಬುದನ್ನು ಪಾಂಡ್ಯ ವಿವರಿಸಿದ್ದಾರೆ. ಸ್ಥಳೀಯ ಸಾಮಾಜಿಕ ಜಾಲತಾಣ ಕೂ ಆಪ್‌ನಲ್ಲಿ ವೈರಲ್ ಆಗಿರುವ ಈ ವೀಡಿಯೊದಲ್ಲಿ ಹೇಳಲಾದ ಮುಖ್ಯ ವಿಷಯವೆಂದರೆ, ಈಗ ಎಂಟು ತಂಡಗಳ ಬದಲಿಗೆ 10 ತಂಡಗಳನ್ನು ಸೇರಿಸಲಾಗಿದ್ದು, ಈ ಚುಟುಕು ಆಟದ ರೋಮಾಂಚನವು ತುಂಬಾ ವೇಗವಾಗಿರುತ್ತದೆ.

ಇದನ್ನೂ ಓದಿ:IND vs WI, WWC 2022: ಸ್ಮೃತಿ- ಹರ್ಮನ್‌ಪ್ರೀತ್ ಶತಕ! ಪಾಯಿಂಟ್ ಪಟ್ಟಿಯಲ್ಲಿ ನಂ.1 ಪಟ್ಟಕ್ಕೇರಿದ ಭಾರತ

ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ