ICC T20I Rankings: ಟಿ20 ರ‍್ಯಾಂಕಿಂಗ್ ಪ್ರಕಟ: ಅಗ್ರಸ್ಥಾನದಲ್ಲಿ ಹಾರ್ದಿಕ್ ಪಾಂಡ್ಯ

Hardik Pandya: ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ 8 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಹಾರ್ದಿಕ್ ಪಾಂಡ್ಯ 6 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದರು. ಈ ವೇಳೆ ಒಟ್ಟು 144 ರನ್ ಕಲೆಹಾಕಿದ್ದಾರೆ. ಹಾಗೆಯೇ ಬೌಲಿಂಗ್​ನಲ್ಲಿ 25 ಓವರ್​ಗಳನ್ನು ಎಸೆದಿದ್ದ ಪಾಂಡ್ಯ 191 ರನ್ ನೀಡಿ ಒಟ್ಟು 11 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ಭರ್ಜರಿ ಪ್ರದರ್ಶನದ ಫಲವಾಗಿ ಇದೀಗ ಟಿ20 ಆಲ್​ರೌಂಡರ್​ಗಳ ಶ್ರೇಯಾಂಕದಲ್ಲಿ ಹಾರ್ದಿಕ್ ಪಾಂಡ್ಯ ಅಗ್ರಸ್ಥಾನ ಅಲಂಕರಿಸಿದ್ದಾರೆ.

ICC T20I Rankings: ಟಿ20 ರ‍್ಯಾಂಕಿಂಗ್ ಪ್ರಕಟ: ಅಗ್ರಸ್ಥಾನದಲ್ಲಿ ಹಾರ್ದಿಕ್ ಪಾಂಡ್ಯ
Hardik Pandya
Follow us
ಝಾಹಿರ್ ಯೂಸುಫ್
|

Updated on:Jul 03, 2024 | 3:08 PM

ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಐಸಿಸಿ ನೂತನ ಟಿ20 ಶ್ರೇಯಾಂಕ ಪಟ್ಟಿಯನ್ನು (ICC T20I Rankings) ಪ್ರಕಟಿಸಿದೆ. ಈ ಬಾರಿ ಟಿ20 ಬ್ಯಾಟರ್​ಗಳ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್ ಅಗ್ರಸ್ಥಾನ ಅಲಂಕರಿಸಿದರೆ, ಬೌಲರ್​ಗಳ ಪಟ್ಟಿಯಲ್ಲಿ ಇಂಗ್ಲೆಂಡ್​ನ ಆದಿಲ್ ರಶೀದ್ ಮೊದಲ ಸ್ಥಾನದಲ್ಲಿದ್ದಾರೆ. ಇನ್ನು ಟಿ20 ಆಲ್​ರೌಂಡರ್​ ಶ್ರೇಯಾಂಕದಲ್ಲಿ ಟೀಮ್ ಇಂಡಿಯಾದ ಹಾರ್ದಿಕ್ ಪಾಂಡ್ಯ ಅಗ್ರಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

ಇನ್ನು ಟಿ20 ಬ್ಯಾಟರ್​ಗಳ ಪಟ್ಟಿಯಲ್ಲಿ ಟಾಪ್-10 ನಲ್ಲಿ ಕೇವಲ ಇಬ್ಬರು ಭಾರತೀಯರು ಮಾತ್ರ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಒಂದೇ ಒಂದು ಪಂದ್ಯವಾಡದ ಯುವ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ 7ನೇ ಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಅದರಂತೆ ಟಿ20 ಬ್ಯಾಟರ್​ಗಳ ಶ್ರೇಯಾಂಕ ಪಟ್ಟಿ ಈ ಕೆಳಗಿನಂತಿದೆ…

ಟಿ20 ಬ್ಯಾಟರ್​ಗಳ ಟಾಪ್​-10 ಪಟ್ಟಿ:

  1. ಟ್ರಾವಿಸ್ ಹೆಡ್ (ಆಸ್ಟ್ರೇಲಿಯಾ)- 844 ರೇಟಿಂಗ್
  2. ಸೂರ್ಯಕುಮಾರ್ ಯಾದವ್ (ಭಾರತ)- 838 ರೇಟಿಂಗ್
  3. ಫಿಲ್ ಸಾಲ್ಟ್ (ಇಂಗ್ಲೆಂಡ್)- 797 ರೇಟಿಂಗ್
  4. ಬಾಬರ್ ಆಝಂ (ಪಾಕಿಸ್ತಾನ್)- 755 ರೇಟಿಂಗ್
  5. ಮೊಹಮ್ಮದ್ ರಿಝ್ವಾನ್ (ಪಾಕಿಸ್ತಾನ್)- 746 ರೇಟಿಂಗ್
  6. ಜೋಸ್ ಬಟ್ಲರ್ (ಇಂಗ್ಲೆಂಡ್)- 746 ರೇಟಿಂಗ್
  7. ಯಶಸ್ಸಿ ಜೈಸ್ವಾಲ್ (ಭಾರತ)- 659 ರೇಟಿಂಗ್
  8. ಬ್ರಾಂಡನ್ ಕಿಂಗ್ (ವೆಸ್ಟ್ ಇಂಡೀಸ್)- 656 ರೇಟಿಂಗ್
  9. ಜಾನ್ಸನ್ ಚಾರ್ಲ್ಸ್ (ವೆಸ್ಟ್ ಇಂಡೀಸ್)- 655 ರೇಟಿಂಗ್
  10. ಐಡೆನ್ ಮಾರ್ಕ್ರಾಮ್ (ಸೌತ್ ಆಫ್ರಿಕಾ)- 646 ರೇಟಿಂಗ್

ಟಿ20 ಬೌಲರ್​ಗಳ ಪಟ್ಟಿಯಲ್ಲಿ ಅಗ್ರ ಹತ್ತರಲ್ಲಿ ಭಾರತದ ಇಬ್ಬರು ಬೌಲರ್​ಗಳು ಸ್ಥಾನ ಪಡೆದಿದ್ದಾರೆ. ಇದಾಗ್ಯೂ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಟಾಪ್-10 ನಲ್ಲಿ ಕಾಣಿಸಿಕೊಂಡಿಲ್ಲ. ಟಿ20 ಬೌಲರ್​ಗಳ ನೂತನ ಶ್ರೇಯಾಂಕ ಪಟ್ಟಿಯಲ್ಲಿ ಬುಮ್ರಾ 12ನೇ ಸ್ಥಾನದಲ್ಲಿದ್ದಾರೆ.

ಟಿ20 ಬೌಲರ್​ಗಳ ಟಾಪ್-10 ಪಟ್ಟಿ:

  1. ಆದಿಲ್ ರಶೀದ್ (ಇಂಗ್ಲೆಂಡ್)- 718 ರೇಟಿಂಗ್
  2. ಅನ್ರಿಕ್ ನೋಕಿಯಾ (ಸೌತ್ ಆಫ್ರಿಕಾ)- 675 ರೇಟಿಂಗ್
  3. ವನಿಂದು ಹಸರಂಗ (ಶ್ರೀಲಂಕಾ)- 674 ರೇಟಿಂಗ್
  4. ರಶೀದ್ ಖಾನ್ (ಅಫ್ಘಾನಿಸ್ತಾನ್)- 668 ರೇಟಿಂಗ್
  5. ಜೋಶ್ ಹ್ಯಾಝಲ್​ವುಡ್ (ಆಸ್ಟ್ರೇಲಿಯಾ)- 662 ರೇಟಿಂಗ್
  6. ಅಕೀಲ್ ಹೊಸೈನ್ (ವೆಸ್ಟ್ ಇಂಡೀಸ್)- 659 ರೇಟಿಂಗ್
  7. ಅಕ್ಷರ್ ಪಟೇಲ್ (ಭಾರತ)- 657 ರೇಟಿಂಗ್
  8. ಆ್ಯಡಂ ಝಂಪಾ (ಆಸ್ಟ್ರೇಲಿಯಾ)- 654 ರೇಟಿಂಗ್
  9. ಕುಲ್ದೀಪ್ ಯಾದವ್ (ಭಾರತ)- 654 ರೇಟಿಂಗ್
  10. ಫಝಲ್​ಹಕ್ ಫಾರೂಖಿ (ಅಫ್ಘಾನಿಸ್ತಾನ್)- 645 ರೇಟಿಂಗ್

ಇದನ್ನೂ ಓದಿ: Team India: ಟೀಮ್ ಇಂಡಿಯಾದ ಮುಂದಿನ ನಾಯಕ ಯಾರು?

ಟಿ20 ಆಲ್​ರೌಂಡರ್​ಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಹಾರ್ದಿಕ್ ಪಾಂಡ್ಯ ಅಗ್ರಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ ಮೂಲಕ ಮಿಂಚಿದ್ದ ಪಾಂಡ್ಯ ಇದೀಗ ಎರಡು ಸ್ಥಾನ ಮೇಲೇರುವ ಮೂಲಕ ಅಗ್ರಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

ಟಿ20 ಆಲ್​​ರೌಂಡರ್​ಗಳ ಟಾಪ್-10 ಪಟ್ಟಿ:

  1. ಹಾರ್ದಿಕ್ ಪಾಂಡ್ಯ (ಭಾರತ)- 222 ರೇಟಿಂಗ್
  2. ವನಿಂದು ಹಸರಂಗ (ಶ್ರೀಲಂಕಾ)- 222 ರೇಟಿಂಗ್
  3. ಮಾರ್ಕಸ್ ಸ್ಟೋಯಿನಿಸ್ (ಆಸ್ಟ್ರೇಲಿಯಾ)- 211 ರೇಟಿಂಗ್
  4. ಸಿಕಂದರ್ ರಾಝ (ಝಿಂಬಾಬ್ವೆ)- 210 ರೇಟಿಂಗ್
  5. ಶಕೀಬ್ ಅಲ್ ಹಸನ್ (ಬಾಂಗ್ಲಾದೇಶ್)- 206 ರೇಟಿಂಗ್
  6. ಮೊಹಮ್ಮದ್ ನಬಿ (ಅಫ್ಘಾನಿಸ್ತಾನ್)- 205 ರೇಟಿಂಗ್
  7. ದೀಪೇಂದ್ರ ಸಿಂಗ್ ಅರೀ (ನೇಪಾಳ)- 199 ರೇಟಿಂಗ್
  8. ಲಿಯಾಮ್ ಲಿವಿಂಗ್​ಸ್ಟೋನ್ (ಇಂಗ್ಲೆಂಡ್)- 187 ರೇಟಿಂಗ್
  9. ಐಡೆನ್ ಮಾರ್ಕ್ರಾಮ್ (ಸೌತ್ ಆಫ್ರಿಕಾ)- 186 ರೇಟಿಂಗ್
  10. ಮೊಯೀನ್ ಅಲಿ (ಇಂಗ್ಲೆಂಡ್)- 174 ರೇಟಿಂಗ್

Published On - 3:05 pm, Wed, 3 July 24

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ