Hardik Pandya: ತಂಡದಿಂದ ಹೊರಬಿದ್ದ ಹಾರ್ದಿಕ್ ಪಾಂಡ್ಯ: ಕಂಬ್ಯಾಕ್ ಮಾಡುವುದು ಕಷ್ಟ
Team India: : ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್-ಕೀಪರ್), ಇಶಾನ್ ಕಿಶನ್
ನ್ಯೂಜಿಲೆಂಡ್ ವಿರುದ್ದದ ಸರಣಿಗಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಈ ತಂಡದಲ್ಲಿ ಒಂದಷ್ಟು ಯುವ ಆಟಗಾರರು ಸ್ಥಾನ ಪಡೆದರೆ, ಮತ್ತೊಂದಷ್ಟು ಹಿರಿಯ ಆಟಗಾರರು ವಿಶ್ರಾಂತಿ ಪಡೆದಿದ್ದಾರೆ. ವಿಶ್ರಾಂತಿ ಪಡೆದಿರುವ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಹಾಗೂ ರವೀಂದ್ರ ಜಡೇಜಾ ಹೆಸರುಗಳಿವೆ. ಆದರೆ ಇದರಲ್ಲಿ ಹಾರ್ದಿಕ್ ಪಾಂಡ್ಯ ಇಲ್ಲ ಎಂಬುದು ವಿಶೇಷ. ಅಂದರೆ ಭಾರತ ತಂಡದಿಂದ ವರ್ಷಗಳ ಬಳಿಕ ಪಾಂಡ್ಯ ಹೊರಬಿದ್ದಂತಾಗಿದೆ. ಟಿ20 ವಿಶ್ವಕಪ್ನಲ್ಲಿ ಹೀನಾಯ ಪ್ರದರ್ಶನ ನೀಡಿದ್ದ ಹಾರ್ದಿಕ್ ಪಾಂಡ್ಯ ಮುಂದೆ ತಂಡದಲ್ಲಿ ಸ್ಥಾನ ಪಡೆಯುವುದು ಕೂಡ ಅಂದುಕೊಂಡಷ್ಟು ಸುಲಭವಲ್ಲ. ಏಕೆಂದರೆ ನ್ಯೂಜಿಲೆಂಡ್ ವಿರುದ್ದದ ಸರಣಿಗಾಗಿ ಯುವ ಆಲ್ರೌಂಡರ್ ವೆಂಕಟೇಶ್ ಅಯ್ಯರ್ ಸ್ಥಾನ ಪಡೆದಿದ್ದಾರೆ. ಒಂದು ವೇಳೆ ಅಯ್ಯರ್ ಮಿಂಚಿದರೆ ಆಲ್ರೌಂಡರ್ ಆಗಿ ತಂಡದಲ್ಲೇ ಉಳಿಯಲಿದ್ದಾರೆ. ಇತ್ತ ರವೀಂದ್ರ ಜಡೇಜಾ ಮತ್ತೆ ತಂಡಕ್ಕೆ ಮರಳಿದರೆ ಹಾರ್ದಿಕ್ ಪಾಂಡ್ಯಗೆ ಅವಕಾಶ ಕೈ ತಪ್ಪಲಿದೆ.
ಈ ಬಗ್ಗೆ ಮಾತನಾಡಿರುವ ಬಿಸಿಸಿಐ ಅಧಿಕಾರಿಯೊಬ್ಬರು, ಹಾರ್ದಿಕ್ ಪಾಂಡ್ಯ ಅವರನ್ನು ತಂಡದಿಂದ ಕೈ ಬಿಡಲಾಗಿದೆ. ಅವರು ಮತ್ತೆ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಳ್ಳಬೇಕಿದ್ದರೆ ಉತ್ತಮ ಫಾರ್ಮ್ ಪ್ರದರ್ಶಿಸಬೇಕು. ಅಷ್ಟೇ ಅಲ್ಲದೆ ಫಿಟ್ನೆಸ್ ಅನ್ನು ಸಾಬೀತುಪಡಿಸಬೇಕಾಗುತ್ತದೆ. ಕೇವಲ ಬ್ಯಾಟ್ಸ್ಮನ್ ಆಗಿ ತಂಡದಲ್ಲಿ ಉಳಿಸಿಕೊಳ್ಳಲಾಗುವುದಿಲ್ಲ. ಹೀಗಾಗಿ ಅವರು ದೇಶೀಯ ಕ್ರಿಕೆಟ್‌ನಲ್ಲಿ ತಮ್ಮ ಸಾಮರ್ಥ್ಯವನ್ನ ಸಾಬೀತುಪಡಿಸಬೇಕಾಗುತ್ತದೆ. ಅಂದರೆ ಮಾತ್ರ ಮತ್ತೆ ತಂಡಕ್ಕೆ ಆಯ್ಕೆಯಾಗಬಹುದು ಎಂದು ತಿಳಿಸಿದ್ದಾರೆ.
ಸದ್ಯ ಫಿಟ್ನೆಸ್ ಸಮಸ್ಯೆಯ ಕಾರಣ ಹಾರ್ದಿಕ್ ಪಾಂಡ್ಯ ಬೌಲಿಂಗ್ ಮಾಡುತ್ತಿಲ್ಲ. ಹೀಗಾಗಿ ಮುಂದೆ ಅವರು ತಂಡದಲ್ಲಿ ಸ್ಥಾನ ಪಡೆಯಬೇಕಿದ್ದರೆ ಸಂಪೂರ್ಣ ಆಲ್ರೌಂಡರ್ ಆಗಿಯೇ ಆಯ್ಕೆಯಾಗಬೇಕಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಪಾಂಡ್ಯ ಬೌಲಿಂಗ್ನತ್ತ ಕೂಡ ಹೆಚ್ಚಿನ ಗಮನ ನೀಡಬೇಕಾಗುತ್ತದೆ.
ಇತ್ತ ಬಿಸಿಸಿಐ ಕೂಡ ಯುವ ಆಲ್ರೌಂಡರ್ಗಳತ್ತ ಗಮನಹರಿಸಿದ್ದು, ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಆಡುತ್ತಿರುವ ಯುವ ಆಲ್ರೌಂಡರ್ಗಳ ಮೇಲೆ ನಿಗಾ ಇಟ್ಟಿದೆ ಎಂದು ತಿಳಿದು ಬಂದಿದೆ. ದೇಶೀಯ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ ವೇಗದ ಬೌಲರ್ ಆಲ್ರೌಂಡರ್ಗಳನ್ನು ಸಜ್ಜುಗೊಳಿಸಿ ಟೀಮ್ ಇಂಡಿಯಾಗೆ ಆಯ್ಕೆ ಮಾಡುವ ಪ್ಲ್ಯಾನ್ ಕೂಡ ರೂಪಿಸಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಹಾರ್ದಿಕ್ ಪಾಂಡ್ಯಗೆ ಮತ್ತೆ ತಂಡದಲ್ಲಿ ಕಾಣಿಸಿಕೊಳ್ಳಲು ಯುವ ಆಟಗಾರರಿಂದ ಕಠಿಣ ಪೈಪೋಟಿ ಎದುರಿಸಬೇಕಾಗಿ ಬರಬಹುದು.
ಭಾರತದ T20I ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಹಲ್, ಅಶ್ವಿನ್, ಅಕ್ಷರ್ ಪಟೇಲ್, ಅವೇಶ್ ಖಾನ್, ಭುವನೇಶ್ವರ್ ಕುಮಾರ್, ದೀಪಕ್ ಚಹರ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್.
ಇದನ್ನೂ ಓದಿ: Team India: ಟೀಮ್ ಇಂಡಿಯಾದ ಈ ಜೋಡಿ ವಿಶ್ವಕಪ್ ಗೆದ್ದು ಕೊಡಲಿದೆ ಎಂದ ಮಾಜಿ ಕ್ರಿಕೆಟಿಗ
ಇದನ್ನೂ ಓದಿ: Team India: ಟೀಮ್ ಇಂಡಿಯಾದ ಮುಂದಿನ ಸರಣಿಗಳ ವೇಳಾಪಟ್ಟಿ ಹೀಗಿದೆ
ಇದನ್ನೂ ಓದಿ: IPL 2022: ಯುವ ನಾಯಕನ ಮೇಲೆ ಕಣ್ಣಿಟ್ಟಿರುವ CSK
(Hardik Pandya comeback in team india is difficult)