Hardik Pandya: ತಂಡದಿಂದ ಹೊರಬಿದ್ದ ಹಾರ್ದಿಕ್ ಪಾಂಡ್ಯ: ಕಂಬ್ಯಾಕ್ ಮಾಡುವುದು ಕಷ್ಟ

| Updated By: ಝಾಹಿರ್ ಯೂಸುಫ್

Updated on: Nov 10, 2021 | 3:12 PM

Team India: : ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್-ಕೀಪರ್), ಇಶಾನ್ ಕಿಶನ್

Hardik Pandya: ತಂಡದಿಂದ ಹೊರಬಿದ್ದ ಹಾರ್ದಿಕ್ ಪಾಂಡ್ಯ: ಕಂಬ್ಯಾಕ್ ಮಾಡುವುದು ಕಷ್ಟ
Hardik Pandya
Follow us on

ನ್ಯೂಜಿಲೆಂಡ್ ವಿರುದ್ದದ ಸರಣಿಗಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಈ ತಂಡದಲ್ಲಿ ಒಂದಷ್ಟು ಯುವ ಆಟಗಾರರು ಸ್ಥಾನ ಪಡೆದರೆ, ಮತ್ತೊಂದಷ್ಟು ಹಿರಿಯ ಆಟಗಾರರು ವಿಶ್ರಾಂತಿ ಪಡೆದಿದ್ದಾರೆ. ವಿಶ್ರಾಂತಿ ಪಡೆದಿರುವ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ, ಮೊಹಮ್ಮದ್ ಶಮಿ, ಜಸ್​ಪ್ರೀತ್ ಬುಮ್ರಾ ಹಾಗೂ ರವೀಂದ್ರ ಜಡೇಜಾ ಹೆಸರುಗಳಿವೆ. ಆದರೆ ಇದರಲ್ಲಿ ಹಾರ್ದಿಕ್ ಪಾಂಡ್ಯ ಇಲ್ಲ ಎಂಬುದು ವಿಶೇಷ. ಅಂದರೆ ಭಾರತ ತಂಡದಿಂದ ವರ್ಷಗಳ ಬಳಿಕ ಪಾಂಡ್ಯ ಹೊರಬಿದ್ದಂತಾಗಿದೆ. ಟಿ20 ವಿಶ್ವಕಪ್​ನಲ್ಲಿ ಹೀನಾಯ ಪ್ರದರ್ಶನ ನೀಡಿದ್ದ ಹಾರ್ದಿಕ್ ಪಾಂಡ್ಯ ಮುಂದೆ ತಂಡದಲ್ಲಿ ಸ್ಥಾನ ಪಡೆಯುವುದು ಕೂಡ ಅಂದುಕೊಂಡಷ್ಟು ಸುಲಭವಲ್ಲ. ಏಕೆಂದರೆ ನ್ಯೂಜಿಲೆಂಡ್ ವಿರುದ್ದದ ಸರಣಿಗಾಗಿ ಯುವ ಆಲ್​ರೌಂಡರ್​ ವೆಂಕಟೇಶ್ ಅಯ್ಯರ್ ಸ್ಥಾನ ಪಡೆದಿದ್ದಾರೆ. ಒಂದು ವೇಳೆ ಅಯ್ಯರ್ ಮಿಂಚಿದರೆ ಆಲ್​ರೌಂಡರ್ ಆಗಿ ತಂಡದಲ್ಲೇ ಉಳಿಯಲಿದ್ದಾರೆ. ಇತ್ತ ರವೀಂದ್ರ ಜಡೇಜಾ ಮತ್ತೆ ತಂಡಕ್ಕೆ ಮರಳಿದರೆ ಹಾರ್ದಿಕ್ ಪಾಂಡ್ಯಗೆ ಅವಕಾಶ ಕೈ ತಪ್ಪಲಿದೆ.

ಈ ಬಗ್ಗೆ ಮಾತನಾಡಿರುವ ಬಿಸಿಸಿಐ ಅಧಿಕಾರಿಯೊಬ್ಬರು, ಹಾರ್ದಿಕ್ ಪಾಂಡ್ಯ ಅವರನ್ನು ತಂಡದಿಂದ ಕೈ ಬಿಡಲಾಗಿದೆ. ಅವರು ಮತ್ತೆ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಳ್ಳಬೇಕಿದ್ದರೆ ಉತ್ತಮ ಫಾರ್ಮ್​ ಪ್ರದರ್ಶಿಸಬೇಕು. ಅಷ್ಟೇ ಅಲ್ಲದೆ ಫಿಟ್​ನೆಸ್ ಅನ್ನು ಸಾಬೀತುಪಡಿಸಬೇಕಾಗುತ್ತದೆ. ಕೇವಲ ಬ್ಯಾಟ್ಸ್​ಮನ್ ಆಗಿ ತಂಡದಲ್ಲಿ ಉಳಿಸಿಕೊಳ್ಳಲಾಗುವುದಿಲ್ಲ. ಹೀಗಾಗಿ ಅವರು ದೇಶೀಯ ಕ್ರಿಕೆಟ್‌ನಲ್ಲಿ ತಮ್ಮ ಸಾಮರ್ಥ್ಯವನ್ನ ಸಾಬೀತುಪಡಿಸಬೇಕಾಗುತ್ತದೆ. ಅಂದರೆ ಮಾತ್ರ ಮತ್ತೆ ತಂಡಕ್ಕೆ ಆಯ್ಕೆಯಾಗಬಹುದು ಎಂದು ತಿಳಿಸಿದ್ದಾರೆ.

ಸದ್ಯ ಫಿಟ್​ನೆಸ್ ಸಮಸ್ಯೆಯ ಕಾರಣ ಹಾರ್ದಿಕ್ ಪಾಂಡ್ಯ ಬೌಲಿಂಗ್​ ಮಾಡುತ್ತಿಲ್ಲ. ಹೀಗಾಗಿ ಮುಂದೆ ಅವರು ತಂಡದಲ್ಲಿ ಸ್ಥಾನ ಪಡೆಯಬೇಕಿದ್ದರೆ ಸಂಪೂರ್ಣ ಆಲ್​ರೌಂಡರ್ ಆಗಿಯೇ ಆಯ್ಕೆಯಾಗಬೇಕಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಪಾಂಡ್ಯ ಬೌಲಿಂಗ್​ನತ್ತ ಕೂಡ ಹೆಚ್ಚಿನ ಗಮನ ನೀಡಬೇಕಾಗುತ್ತದೆ.

ಇತ್ತ ಬಿಸಿಸಿಐ ಕೂಡ ಯುವ ಆಲ್​ರೌಂಡರ್​ಗಳತ್ತ ಗಮನಹರಿಸಿದ್ದು, ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಆಡುತ್ತಿರುವ ಯುವ ಆಲ್​ರೌಂಡರ್​ಗಳ ಮೇಲೆ ನಿಗಾ ಇಟ್ಟಿದೆ ಎಂದು ತಿಳಿದು ಬಂದಿದೆ. ದೇಶೀಯ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ ವೇಗದ ಬೌಲರ್ ಆಲ್​ರೌಂಡರ್​ಗಳನ್ನು ಸಜ್ಜುಗೊಳಿಸಿ ಟೀಮ್ ಇಂಡಿಯಾಗೆ ಆಯ್ಕೆ ಮಾಡುವ ಪ್ಲ್ಯಾನ್ ಕೂಡ ರೂಪಿಸಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಹಾರ್ದಿಕ್ ಪಾಂಡ್ಯಗೆ ಮತ್ತೆ ತಂಡದಲ್ಲಿ ಕಾಣಿಸಿಕೊಳ್ಳಲು ಯುವ ಆಟಗಾರರಿಂದ ಕಠಿಣ ಪೈಪೋಟಿ ಎದುರಿಸಬೇಕಾಗಿ ಬರಬಹುದು.

ಭಾರತದ T20I ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಹಲ್, ಅಶ್ವಿನ್, ಅಕ್ಷರ್ ಪಟೇಲ್, ಅವೇಶ್ ಖಾನ್, ಭುವನೇಶ್ವರ್ ಕುಮಾರ್, ದೀಪಕ್ ಚಹರ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: Team India: ಟೀಮ್ ಇಂಡಿಯಾದ ಈ ಜೋಡಿ ವಿಶ್ವಕಪ್ ಗೆದ್ದು ಕೊಡಲಿದೆ ಎಂದ ಮಾಜಿ ಕ್ರಿಕೆಟಿಗ

ಇದನ್ನೂ ಓದಿ: Team India: ಟೀಮ್ ಇಂಡಿಯಾದ ಮುಂದಿನ ಸರಣಿಗಳ ವೇಳಾಪಟ್ಟಿ ಹೀಗಿದೆ

ಇದನ್ನೂ ಓದಿ:   IPL 2022: ಯುವ ನಾಯಕನ ಮೇಲೆ ಕಣ್ಣಿಟ್ಟಿರುವ CSK

(Hardik Pandya comeback in team india is difficult)