AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hardik Pandya: ರೋಹಿತ್ ಶರ್ಮಾ ಉತ್ತರಾಧಿಕಾರಿ ಹಾರ್ದಿಕ್ ಪಾಂಡ್ಯ

Team India: ಭಾರತ ಟಿ20 ತಂಡಕ್ಕೆ ಹಾರ್ದಿಕ್ ಪಾಂಡ್ಯ ನಾಯಕನಾಗಿ ಆಯ್ಕೆಯಾಗುವುದು ಬಹುತೇಕ ಖಚಿತ. ಆದರೆ ಏಕದಿನ ಮತ್ತು ಟೆಸ್ಟ್ ತಂಡಗಳ ಕ್ಯಾಪ್ಟನ್ ಆಗಿ ರೋಹಿತ್ ಶರ್ಮಾ ಮುಂದುವರೆಯುವ ಸಾಧ್ಯತೆಯಿದೆ. ಏಕೆಂದರೆ 2025 ರಲ್ಲಿ ಚಾಂಪಿಯನ್ಸ್ ಟ್ರೋಫಿ ಮತ್ತು ಟೆಸ್ಟ್ ವಿಶ್ವಚಾಂಪಿಯನ್​ಶಿಪ್ ನಡೆಯಲಿದ್ದು, ಹೀಗಾಗಿ ಮುಂದಿನ ವರ್ಷದವರೆಗೆ ರೋಹಿತ್ ಶರ್ಮಾ ಅವರನ್ನೇ ನಾಯಕನಾಗಿ ಮುಂದುವರೆಸುವ ಸಾಧ್ಯತೆ ಹೆಚ್ಚಿದೆ.

Hardik Pandya: ರೋಹಿತ್ ಶರ್ಮಾ ಉತ್ತರಾಧಿಕಾರಿ ಹಾರ್ದಿಕ್ ಪಾಂಡ್ಯ
Jay Shah - Hardik Pandya
ಝಾಹಿರ್ ಯೂಸುಫ್
|

Updated on:Jul 01, 2024 | 2:37 PM

Share

ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಹೀಗಾಗಿ ಮುಂಬರುವ ಟಿ20 ಸರಣಿಗಳಲ್ಲಿ ಭಾರತ ತಂಡವನ್ನು ಹೊಸ ನಾಯಕ ಮುನ್ನಡೆಸಲಿದ್ದಾರೆ. ಅದರಂತೆ ಭಾರತ ತಂಡದ ಸಾರಥ್ಯವಹಿಸುವ ಆಟಗಾರ ಯಾರು ಎಂಬ ಪ್ರಶ್ನೆಗೆ ಹಾರ್ದಿಕ್ ಪಾಂಡ್ಯ ಹೆಸರು ಕೇಳಿ ಬಂದಿದೆ.

ಈ ಹಿಂದೆ ಭಾರತ ಟಿ20 ತಂಡದ ನಾಯಕರಾಗಿದ್ದ ಹಾರ್ದಿಕ್ ಪಾಂಡ್ಯ ಅವರನ್ನು ಟಿ20 ವಿಶ್ವಕಪ್​ಗೂ ಮುಂಚಿತವಾಗಿ ಕೆಳಗಿಳಿಸಲಾಗಿತ್ತು. ಅಲ್ಲದೆ ರೋಹಿತ್ ಶರ್ಮಾಗೆ ಕ್ಯಾಪ್ಟನ್ ಪಟ್ಟ ನೀಡಲಾಗಿತ್ತು. ಇದೀಗ ಟಿ20 ವಿಶ್ವಕಪ್ ಗೆಲುವಿನೊಂದಿಗೆ ಹಿಟ್​ಮ್ಯಾನ್ ಟಿ20ಐ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

ಹೀಗಾಗಿ ಟಿ20 ವಿಶ್ವಕಪ್​ನಲ್ಲಿ ಉಪನಾಯಕರಾಗಿ ಕಾಣಿಸಿಕೊಂಡಿದ್ದ ಹಾರ್ದಿಕ್ ಪಾಂಡ್ಯ ಮುಂಬರುವ ಸರಣಿಗಳಲ್ಲಿ ಕ್ಯಾಪ್ಟನ್ ಆಗುವುದು ಬಹುತೇಕ ಖಚಿತ. ಇದನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಕೂಡ ಪುಷ್ಠೀಕರಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಜಯ್​ ಶಾ, ಭಾರತ ತಂಡದ ನಾಯಕನ ಆಯ್ಕೆಯನ್ನು ಆಯ್ಕೆದಾರರು ನಿರ್ಧರಿಸುತ್ತಾರೆ. ಅವರೊಂದಿಗೆ ಚರ್ಚಿಸಿದ ನಂತರ ನಾವು ಅದನ್ನು ಘೋಷಿಸುತ್ತೇವೆ. ನೀವು ಹಾರ್ದಿಕ್ ಬಗ್ಗೆ ಕೇಳಿದ್ದೀರಿ, ಅವರ ಫಾರ್ಮ್ ಬಗ್ಗೆ ಸಾಕಷ್ಟು ಪ್ರಶ್ನೆಗಳಿದ್ದವು.

ಇದಾಗ್ಯೂ ನಾವು ಮತ್ತು ಆಯ್ಕೆದಾರರು ಅವರ ಮೇಲೆ ನಂಬಿಕೆಯಿಟ್ಟೆವು. ಅದರಂತೆ ಟಿ20 ವಿಶ್ವಕಪ್​ಗೆ ಆಯ್ಕೆ ಮಾಡಿದೆವು. ಇದೀಗ ಅದ್ಭುತ ಪ್ರದರ್ಶನ ನೀಡಿ ಹಾರ್ದಿಕ್ ಪಾಂಡ್ಯ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ ಎಂದು ಜಯ್ ಶಾ ಹೇಳಿದ್ದಾರೆ.

ಇಲ್ಲಿ ಜಯ್ ಶಾ ಹಾರ್ದಿಕ್ ಪಾಂಡ್ಯ ಅವರ ಪ್ರದರ್ಶನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಕಾರಣ, ರೋಹಿತ್ ಶರ್ಮಾ ಅವರ ಉತ್ತರಾಧಿಕಾರಿಯಾಗಿ ಪಾಂಡ್ಯ ಆಯ್ಕೆಯಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

ಶುಭ್​ಮನ್ ಗಿಲ್​ಗೆ ನಾಯಕತ್ವ:

ಭಾರತ ಮತ್ತು ಝಿಂಬಾಬ್ವೆ ನಡುವೆ ಟಿ20 ಸರಣಿಯು ಜುಲೈ 6 ರಿಂದ ಶುರುವಾಗಲಿದೆ. ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಂಡ ಬಹುತೇಕ ಆಟಗಾರರು ಈ ಸರಣಿಯಿಂದ ಹೊರಗುಳಿದಿದ್ದಾರೆ. ಅಲ್ಲದೆ 5 ಪಂದ್ಯಗಳ ಈ ಸರಣಿಗಾಗಿ ಯುವ ಪಡೆಯನ್ನು ಆಯ್ಕೆ ಮಾಡಲಾಗಿದ್ದು, ಈ ತಂಡದ ನಾಯಕತ್ವವನ್ನು ಶುಭ್​ಮನ್ ಗಿಲ್​ಗೆ ವಹಿಸಲಾಗಿದೆ.

ಇದನ್ನೂ ಓದಿ: Shoaib Akhtar: ಭಗವದ್ಗೀತೆ ಶ್ಲೋಕ ಹಂಚಿಕೊಂಡ ಶೊಯೇಬ್ ಅಖ್ತರ್

ಇನ್ನು ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾದ ಪ್ರಮುಖ ಆಟಗಾರರು ಕಾಣಿಸಿಕೊಳ್ಳಲಿದ್ದು, ಈ ಸರಣಿ ವೇಳೆ ಭಾರತ ಟಿ20 ತಂಡದ ನೂತನ ನಾಯಕನನ್ನು ಘೋಷಣೆ ಮಾಡಲಾಗುತ್ತದೆ. ಅದರಂತೆ ರೋಹಿತ್ ಶರ್ಮಾ ಉತ್ತರಾಧಿಕಾರಿಯಾಗಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

Published On - 2:32 pm, Mon, 1 July 24

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?