AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hardik Pandya: ಮುಂಬೈ ಗೆದ್ದರೂ ಹಾರ್ದಿಕ್ ಪಾಂಡ್ಯಗಿಲ್ಲ ಖುಷಿ; 12 ಲಕ್ಷ ರೂಪಾಯಿ ದಂಡ

20 ಓವರ್​ಗಳನ್ನು ಪೂರ್ಣಗೊಳಿಸಲು ನಿಗದಿತ ಸಮಯ ಇದೆ. ಆದರೆ, ಆ ಟೈಮ್​ನಲ್ಲಿ 20 ಓವರ್​ಗಳನ್ನು ಪೂರ್ಣಗೊಳಿಸಲು ಪಾಂಡ್ಯಾಗೆ ಸಾಧ್ಯವಾಗಿಲ್ಲ. ಈ ಕಾರಣಕ್ಕೆ ಅವರಿಗೆ ಇಷ್ಟು ದೊಡ್ಡ ಮೊತ್ತದ ದಂಡ ವಿಧಿಸಲಾಗಿದೆ. ಮುಂಬೈ ಇಂಡಿಯನ್ಸ್ ತಂಡ ಆಡಿದ ಏಳು ಪಂದ್ಯಗಳಲ್ಲಿ ಮೂರು ಪಂದ್ಯಗಳನ್ನು ಮಾತ್ರ ಗೆದ್ದಿದೆ.

Hardik Pandya: ಮುಂಬೈ ಗೆದ್ದರೂ ಹಾರ್ದಿಕ್ ಪಾಂಡ್ಯಗಿಲ್ಲ ಖುಷಿ; 12 ಲಕ್ಷ ರೂಪಾಯಿ ದಂಡ
ಹಾರ್ದಿಕ್
ರಾಜೇಶ್ ದುಗ್ಗುಮನೆ
|

Updated on: Apr 19, 2024 | 11:15 AM

Share

ಹಾರ್ದಿಕ್ ಪಾಂಡ್ಯ (Hardik Pandya) ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದಿದೆ. ಈ ಖುಷಿಯಲ್ಲಿದ್ದ ಹಾರ್ದಿಕ್​ಗೆ ಬಿಸಿಸಿಐ ಶಾಕ್​ ನೀಡಿದೆ. ಹಾರ್ದಿಕ್​ಗೆ ಮ್ಯಾಚ್ ಮುಗಿದ ಬಳಿಕ 12 ಲಕ್ಷ ರೂಪಾಯಿ ದಂಡ ವಿಧಿಸಿದೆ. ಕೋಡ್ ಆಫ್ ಕಂಡಕ್ಟ್​ನ ಮುರಿದ ಕಾರಣ ದಂಡ ವಿಧಿಸಲಾಗಿದೆ. ನಿಗದಿತ ಸಮಯಕ್ಕೆ ಓವರ್ ಪೂರ್ಣಗೊಳಿಸದ ಕಾರಣ ಈ ದಂಡ ಹಾಕಲಾಗಿದೆ.

20 ಓವರ್​ಗಳನ್ನು ಪೂರ್ಣಗೊಳಿಸಲು ಬಿಸಿಸಿಐ ನಿಗದಿತ ಸಮಯ ನೀಡಿದೆ. ಆದರೆ, ಆ ಟೈಮ್​ನಲ್ಲಿ 20 ಓವರ್​ಗಳನ್ನು ಪೂರ್ಣಗೊಳಿಸಲು ಅವರಿಗೆ ಸಾಧ್ಯವಾಗಿಲ್ಲ. ಈ ಕಾರಣಕ್ಕೆ ಅವರಿಗೆ ಇಷ್ಟು ದೊಡ್ಡ ಮೊತ್ತದ ದಂಡ ವಿಧಿಸಲಾಗಿದೆ. ಇಷ್ಟು ಮ್ಯಾಚ್​ಗಳಲ್ಲಿ ಇದೇ ಮೊದಲ ಬಾರಿಗೆ ಹಾರ್ದಿಕ್ ಪಾಂಡ್ಯ ಈ ರೀತಿ ದಂಡ ವಿಧಿಸಿಕೊಳ್ಳುತ್ತಿದ್ದಾರೆ.

‘ಪಂಜಾಬ್ ಕಿಂಗ್ಸ್ ವಿರುದ್ಧ ಹಾರ್ದಿಕ್ ಪಾಂಡ್ಯ ತಂಡ ನಿಧಾನಗತಯಲ್ಲಿ ಬೌಲಿಂಗ್ ಮಾಡಿದೆ. ಹೀಗಾಗಿ ದೊಡ್ಡ ಮೊತ್ತದ ದಂಡ ಹಾಕಲಾಗಿದೆ’ ಎಂದು ಬಿಸಿಸಿಐ ಸುತ್ತೋಲೆಯಲ್ಲಿ ತಿಳಿಸಿದೆ. ಇದು ಮತ್ತೆ ಮತ್ತೆ ಮರುಕಳಿಸಿದರೆ ಮುಂಬೈ ಇಂಡಿಯನ್ಸ್ ತಂಡ ಸಂಕಷ್ಟಕ್ಕೆ ಸಿಲುಕಬಹುದು.

ಮುಂಬೈ ಇಂಡಿಯನ್ಸ್ ಮೊದಲು ಬ್ಯಾಟಿಂಗ್ ಮಾಡಿತು. 193 ರನ್​ಗಳ ಟಾರ್ಗೆಟ್​ನ ಪಂಜಾಬ್​ಗೆ ನೀಡಿತ್ತು. ಪಂಜಾಬ್ ಆರಂಭ ಅಷ್ಟೇನು ಉತ್ತಮವಾಗಿರಲಿಲ್ಲ. 77 ರನ್​ಗಳಿಗೆ ಆರು ವಿಕೆಟ್​ಗಳನ್ನು ಕಳೆದುಕೊಂಡಿತ್ತು. ಆ ಸಂದರ್ಭದಲ್ಲಿ ಅಶುತೋಷ್ ಶರ್ಮಾ ತಂಡಕ್ಕೆ ಆಸರೆ ಆದರು. ಕೇವಲ 28 ಬೌಲ್​ಗೆ 61 ರನ್​ಗಳನ್ನು ಬಾರಿಸಿದರು.  ಆದರೂ ವಿನ್ ಆಗೋಕೆ ಸಾಧ್ಯವಾಗಿಲ್ಲ. ಅಂತಿಮವಾಗಿ ಮುಂಬೈ ಇಂಡಿಯನ್ಸ್ ತಂಡ 9 ರನ್​ಗಳ ಗೆಲುವು ಕಂಡಿತು.

ಇದನ್ನೂ ಓದಿ: ರೋಹಿತ್ ಶರ್ಮಾ ಜೊತೆ ಅಗರ್ಕರ್​ ಚರ್ಚೆ: ಹಾರ್ದಿಕ್ ಪಾಂಡ್ಯಗೆ ನಡುಕ ಶುರು..!

ಮುಂಬೈ ಇಂಡಿಯನ್ಸ್ ತಂಡ ಆಡಿದ ಏಳು ಪಂದ್ಯಗಳಲ್ಲಿ ಮೂರು ಪಂದ್ಯಗಳನ್ನು ಮಾತ್ರ ಗೆದ್ದಿದೆ. ಮೊದಲು ಹ್ಯಾಟ್ರಿಕ್ ಸೋಲು ಕಂಡಿದ್ದ ಅವರು ನಂತರ ಸತತವಾಗಿ ಎರಡು ಪಂದ್ಯ ಗೆದ್ದರು. ಚೆನ್ನೈ ಜೊತೆ ಸೋತಿದ್ದ ತಂಡ ಪಂಜಾಬ್ ಜೊತೆ ಗೆದ್ದು ಬೀಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್