AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಹಳೆಯ ತಂಡದ ಪರ ಆಡುವುದಿಲ್ಲ ಎಂಬ ಸುಳಿವು ನೀಡಿದ ಹಾರ್ದಿಕ್ ಪಾಂಡ್ಯ

Hardik Pandya: ಹಾರ್ದಿಕ್ ಪಾಂಡ್ಯ, 2015, 2017, 2019 ಮತ್ತು 2020 ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ಭಾಗವಾಗಿದ್ದರು ಎಂಬುದು ವಿಶೇಷ.

IPL 2022: ಹಳೆಯ ತಂಡದ ಪರ ಆಡುವುದಿಲ್ಲ ಎಂಬ ಸುಳಿವು ನೀಡಿದ ಹಾರ್ದಿಕ್ ಪಾಂಡ್ಯ
Hardik Pandya
TV9 Web
| Edited By: |

Updated on: Dec 02, 2021 | 10:38 PM

Share

ಮೆಗಾ ಹರಾಜಿಗೂ ಮುನ್ನ ಮುಂಬೈ ಇಂಡಿಯನ್ಸ್ ತಂಡವು ಆಲ್​ರೌಂಡರ್ ಹಾರ್ದಿಕ್ ಪಾಂಡ್ಯರನ್ನು ಕೈಬಿಟ್ಟಿದೆ. ಅತ್ತ ಮುಂಬೈ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಜಸ್​ಪ್ರೀತ್ ಬುಮ್ರಾ ಹಾಗೂ ಕೀರನ್ ಪೊಲಾರ್ಡ್​ ಅವರನ್ನು ರಿಟೈನ್ ಮಾಡಿಕೊಂಡಿದೆ. ಕಳೆದ ಕೆಲ ವರ್ಷಗಳಿಂದ ಮುಂಬೈ ಇಂಡಿಯನ್ಸ್ ತಂಡದ ಖಾಯಂ ಸದಸ್ಯರಾಗಿದ್ದ ಪಾಂಡ್ಯ ಈ ಹಿಂದಿನ ಮೆಗಾ ಹರಾಜಿಗೂ ಮುನ್ನ ರಿಟೈನ್ ಆಟಗಾರರ ಪಟ್ಟಿಯಲ್ಲಿದ್ದರು. ಆದರೆ ಈ ಬಾರಿಯ ಐಪಿಎಲ್​ನಲ್ಲಿ ಪಾಂಡ್ಯ ಮುಂಬೈ ಪರ ಮಂಕಾಗಿದ್ದಾರೆ. ಇದೇ ಕಾರಣದಿಂದ ಮುಂಬೈ ಇಂಡಿಯನ್ಸ್ ಪಾಂಡ್ಯರನ್ನು ಕೈಬಿಟ್ಟು ಸೂರ್ಯಕುಮಾರ್ ಯಾದವ್​ಗೆ ಮಣೆ ಹಾಕಿದೆ.

ಏಕೆಂದರೆ ಈ ಬಾರಿಯ ಐಪಿಎಲ್​ನಲ್ಲಿ ಪಾಂಡ್ಯ ಕೇವಲ 113.39 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಮಾಡಿ 12 ಪಂದ್ಯಗಳಲ್ಲಿ 127 ರನ್ ಮಾತ್ರಗಳಿಸಲು ಶಕ್ತರಾಗಿದ್ದರು. ಅಷ್ಟೇ ಅಲ್ಲದೆ ಭುಜದ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಅವರು, ಬೌಲಿಂಗ್ ಕೂಡ ಮಾಡಿರಲಿಲ್ಲ. ಇದೀಗ ಔಟ್ ಆಫ್​ ಫಾರ್ಮ್​ನಲ್ಲಿರುವ ಪಾಂಡ್ಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದರ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ಪರ ಮತ್ತೆ ಕಾಣಿಸಿಕೊಳ್ಳುವುದಿಲ್ಲ ಎಂಬುದ ಸಣ್ಣ ಸುಳಿವು ನೀಡಿದ್ದಾರೆ ಪಾಂಡ್ಯ.

ಮುಂಬೈ ಇಂಡಿಯನ್ಸ್ ತಂಡದಿಂದ ಹೊರಬಿದ್ದಿರುವ ಬಗ್ಗೆ ಮಾತನಾಡಿರುವ ಪಾಂಡ್ಯ, “ನಾನು ಈ ನೆನಪುಗಳನ್ನು ನನ್ನ ಜೀವನದುದ್ದಕ್ಕೂ ನನ್ನೊಂದಿಗೆ ಕೊಂಡೊಯ್ಯುತ್ತೇನೆ. ನನ್ನ ಜೀವನದುದ್ದಕ್ಕೂ ಈ ಕ್ಷಣಗಳನ್ನು ನನ್ನೊಂದಿಗೆ ಸಾಗಿಸುತ್ತೇನೆ. ಸ್ನೇಹಿತರಿಗೆ, ಅಭಿಮಾನಿಗಳಿಗೆ ನಾನು ಯಾವಾಗಲೂ ಕೃತಜ್ಞರಾಗಿರುತ್ತೇನೆ. ಮುಂಬೈ ತಂಡದಲ್ಲಿ ನಾನು ಒಬ್ಬ ಆಟಗಾರನಾಗಿ ಮಾತ್ರವಲ್ಲದೆ ವ್ಯಕ್ತಿಯಾಗಿಯೂ ಬೆಳೆದಿದ್ದೇನೆ. ನಾವು ಒಟ್ಟಿಗೆ ಗೆದ್ದಿದ್ದೇವೆ, ಒಟ್ಟಿಗೆ ಸೋತಿದ್ದೇವೆ, ಒಟ್ಟಿಗೆ ಹೋರಾಡಿದ್ದೇವೆ. ಈ ತಂಡದೊಂದಿಗಿನ ಪ್ರತಿ ಕ್ಷಣವೂ ನನ್ನ ಹೃದಯದಲ್ಲಿ ವಿಶೇಷ ಸ್ಥಾನವನ್ನು ಹೊಂದಿದೆ ಎಂದು ತಿಳಿಸಿದ್ದಾರೆ.

ಅಷ್ಟೇ ಅಲ್ಲದೆ ಎಲ್ಲಾ ಒಳ್ಳೆಯ ವಿಷಯಗಳು ಕೊನೆಗೊಳ್ಳಲೇಬೇಕು. ಅದರಂತೆ ಮುಂಬೈ ಜೊತೆಗಿನ ಒಡನಾಟ ಕೊನೆಗೊಂಡಿದೆ ಎನ್ನುವ ಮೂಲಕ ಹಾರ್ದಿಕ್ ಪಾಂಡ್ಯ ಮುಂಬರುವ ಸೀಸನ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಆಡುವುದಿಲ್ಲ ಎಂಬುದನ್ನು ಪರೋಕ್ಷವಾಗಿ ತಿಳಿಸಿದ್ದಾರೆ. ಅತ್ತ ಪಾಂಡ್ಯ ಹೆಸರು ಹೊಸ ಫ್ರಾಂಚೈಸಿ ಅಹಮದಾಬಾದ್ ಜೊತೆ ತಳುಕು ಹಾಕಿಕೊಂಡಿದ್ದು, ಹೀಗಾಗಿ ಅವರು ಮೆಗಾ ಹರಾಜಿಗೂ ಮುನ್ನವೇ ಹೊಸ ತಂಡದ ಪಾಲಾಗಲಿದೆ ಎಂದು ಹೇಳಲಾಗುತ್ತಿದೆ.

ಅಂದಹಾಗೆ ಹಾರ್ದಿಕ್ ಪಾಂಡ್ಯ, 2015, 2017, 2019 ಮತ್ತು 2020 ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ಭಾಗವಾಗಿದ್ದರು ಎಂಬುದು ವಿಶೇಷ.

ಇದನ್ನೂ ಓದಿ: IPL 2022: ದುಡ್ಡಿಗಿಂತ RCB ತಂಡವೇ ಮುಖ್ಯ: ವಿರಾಟ್ ಕೊಹ್ಲಿಗೆ ಅಭಿಮಾನಿಗಳಿಂದ ಬಹುಪರಾಕ್

ಇದನ್ನೂ ಓದಿ: 8 ಫ್ರಾಂಚೈಸಿ ಉಳಿಸಿಕೊಂಡ ಆಟಗಾರರ ಪಟ್ಟಿ ಹೀಗಿದೆ

ಇದನ್ನೂ ಓದಿ: 27 ಆಟಗಾರರು ರಿಟೈನ್: ಬಿಡುಗಡೆಯಾದ ಆಟಗಾರರ ಪಟ್ಟಿ ಇಲ್ಲಿದೆ

(Hardik Pandya hints he may not return to Mumbai Indians next year for IPL 2022)

RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು