Hardik Pandya: ಗೆದ್ದ ಖುಷಿಯಲ್ಲಿ ಮಾತನಾಡುತ್ತಾ ಮೈದಾನದಲ್ಲೇ ಕಣ್ಣೀರಿಟ್ಟ ಹಾರ್ದಿಕ್ ಪಾಂಡ್ಯ: ಏನು ಹೇಳಿದ್ರು ಕೇಳಿ

India vs Pakistan, T20 World Cup: ವಿರಾಟ್ ಕೊಹ್ಲಿ ಹಾಗೂ ಹಾರ್ದಿಕ್ ಪಾಂಡ್ಯ ಅವರ ಶತಕದ ಜೊತೆಯಾಟ ಇಡೀ ಪಂದ್ಯದ ಗತಿಯನ್ನೇ ಬದಲಾಯಿಸಿತು. ಪಾಕಿಸ್ತಾನ ವಿರುದ್ಧ ರೋಚಕ ಜಯ ಸಾಧಿಸಿದ ಬಳಿಕ ಮಾತನಾಡುವಾಗ ಹಾರ್ದಿಕ್ ಭಾವುಕರಾಗಿ ಕಣ್ಣೀರಿಟ್ಟ ಘಟನೆ ಕೂಡ ನಡೆದಿದೆ.

Hardik Pandya: ಗೆದ್ದ ಖುಷಿಯಲ್ಲಿ ಮಾತನಾಡುತ್ತಾ ಮೈದಾನದಲ್ಲೇ ಕಣ್ಣೀರಿಟ್ಟ ಹಾರ್ದಿಕ್ ಪಾಂಡ್ಯ: ಏನು ಹೇಳಿದ್ರು ಕೇಳಿ
Hardik Pandya Crying IND vs PAK
Follow us
TV9 Web
| Updated By: Vinay Bhat

Updated on:Oct 24, 2022 | 8:55 AM

ಟಿ20 ಕ್ರಿಕೆಟ್ ವೃತ್ತಿ ಜೀವನದಲ್ಲೇ ತನ್ನ ಅತ್ಯುತ್ತಮ ಇನ್ನಿಂಗ್ಸ್ ಆಡಿದ ವಿರಾಟ್ ಕೊಹ್ಲಿ (Virat Kohli) ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ ವಿರುದ್ಧ ಭಾರತವನ್ನು (India vs Pakistan) ಗೆಲ್ಲಿಸಿಕೊಟ್ಟರು. ಇವರಿಗೆ ಸಾಥ್ ನೀಡಿದ್ದು ಆಲ್ರೌಂಡರ್ ಹಾರ್ದಿಕ್ ಪಾಂಡ್ಯ. 6.1 ಓವರ್​ಗೆ 4 ವಿಕೆಟ್ ಕಳೆದುಕೊಂಡು ಕೇವಲ 31 ರನ್ ಕಲೆಹಾಕಿದ್ದ ಟೀಮ್ ಇಂಡಿಯಾ ಗೆಲುವು ಸಾಧಿಸುತ್ತೆ ಎಂದು ಯಾರೂ ಊಹಿಸಿರಲಿಲ್ಲ. ಸ್ವತಃ ನಾಯಕ ರೋಹಿತ್ ಶರ್ಮಾ ಕೂಡ ಇದನ್ನೇ ಹೇಳಿದರು. ಆದರೆ, ಐದನೇ ವಿಕೆಟ್​ಗೆ ಜೊತೆಯಾದ ವಿರಾಟ್ ಕೊಹ್ಲಿ ಹಾಗೂ ಹಾರ್ದಿಕ್ ಪಾಂಡ್ಯ (Hardik Pandya) ಎಚ್ಚರಿಕೆಯಿಂದ ಇನ್ನಿಂಗ್ಸ್​ ಕಟ್ಟಿ ಕೊನೆಯ ಓವರ್ ವರೆಗೂ ಕ್ರೀಸ್​ನಲ್ಲಿದ್ದು ಶತಕದ ಜೊತೆಯಾಟ ಆಡಿದರು.

ಹಾರ್ದಿಕ್ 20ನೇ ಓವರ್​ನ ಮೊದಲ ಎಸೆತದಲ್ಲಿ ಬಿಗ್ ಶಾಟ್ ಹೊಡೆಯಲು ಹೋಗಿ ಔಟಾದರು. 37 ಎಸೆತಗಳಲ್ಲಿ 1 ಫೋರ್, 2 ಸಿಕ್ಸರ್​ನೊಂದಿಗೆ 40 ರನ್ ಕಲೆಹಾಕಿದ ಪಾಂಡ್ಯ ತಂಡದ ಗೆಲುವಿಗೆ ಮುಖ್ಯ ಕೊಡುಗೆ ನೀಡಿದರು. ಭಾರತ ರೋಚಕ ಜಯ ಸಾಧಿಸಿದಾಗ ಮಾತನಾಡಿದ ಹಾರ್ದಿಕ್ ಭಾವುಕರಾದ ಘಟನೆ ನಡೆದಿದೆ. ನನ್ನ ತಂದೆ ಈ ಸಂದರ್ಭ ಇದ್ದಿದ್ದರೆ ಇದನ್ನು ನೋಡಿ ತುಂಬಾ ಖುಷಿ ಪಡುತ್ತಿದ್ದರು ಎಂದು ಕಣ್ಣೀರಿಟ್ಟರು.

ಇದನ್ನೂ ಓದಿ
Image
Rohit Sharma: ಪಂದ್ಯ ಮುಗಿದ ಬಳಿಕ ಕೊಹ್ಲಿ ಬಗ್ಗೆ ರೋಹಿತ್ ಶರ್ಮಾ ಆಡಿದ ಮಾತುಗಳೇನು ಗೊತ್ತೇ?
Image
VIDEO: ವಿರಾಟ್ ಕೊಹ್ಲಿಯನ್ನು ಅಪ್ಪಿಕೊಂಡು ಸಂಭ್ರಮಿಸಿದ ರಾಹುಲ್ ದ್ರಾವಿಡ್
Image
Virat Kohli: ಒಂದಲ್ಲ, ಎರಡಲ್ಲ…ಹಲವು ವಿಶ್ವ ದಾಖಲೆಗಳನ್ನು ಉಡೀಸ್ ಮಾಡಿದ ಕಿಂಗ್ ಕೊಹ್ಲಿ
Image
Virat Kohli: ಕಿಂಗ್ ಕೊಹ್ಲಿಯ ಸಿಡಿಲಬ್ಬರಕ್ಕೆ ಸಚಿನ್, ರೋಹಿತ್ ಶರ್ಮಾ ದಾಖಲೆ ಧೂಳೀಪಟ

”ನಾನು ನನ್ನ ತಂದೆಯ ಬಗ್ಗೆ ಮಾತ್ರ ಯೋಚಿಸುತ್ತಿದ್ದೇನೆ. ನಾನು ಅಳುತ್ತಿರುವುದು ತಂದೆ ಇಲ್ಲ ಎಂಬ ಕಾರಣಕ್ಕೆ ಅಲ್ಲ. ನಾನು ನನ್ನ ಮಗನನ್ನು ತುಂಬಾ ಪ್ರೀತಿಸುತ್ತೇನೆ. ನನಗೆ ನನ್ನ ತಂದೆ ಏನೆಲ್ಲ ಮಾಡಿದರೊ ಅದನ್ನು ನಾನು ನನ್ನ ಮಗನಿಗೆ ಮಾಡುವೆನೋ ಗೊತ್ತಿಲ್ಲ. ಆರುವರೆ ವರ್ಷದ ಹುಡುಗನ ಕನಸಿಗೋಸ್ಕರ ಅವರು ಅಂದು ಸಿಟಿಯನ್ನು ಬಿಟ್ಟು ತೆರಳಿದರು. ಆದರೆ, ನಾನು ಇಂದು ಏನು ಮಾಡುತ್ತಿದ್ದೇನೆ ಅವರಿಗೆ ತಿಳಿದಿಲ್ಲ. ಇಂದಿನ ಈ ಆಟ, ಗೆಲುವು ಅವರಿಗೆ ಅರ್ಪಿಸುತ್ತೇನೆ,” ಎಂದು ಹಾರ್ದಿಕ್ ಹೇಳಿದ್ದಾರೆ.

ಹಾರ್ದಿಕ್ ಪಾಂಡ್ಯ ದಾಖಲೆ:

ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ವಿಶೇಷ ದಾಖಲೆ ಕೂಡ ಮಾಡಿದ್ದಾರೆ. ಅತ್ಯುತ್ತಮ ಆಲ್ರೌಂಡ್ ಪ್ರದರ್ಶನ ನೀಡಿದ ಹಾರ್ದಿಕ್ ಇದೀಗ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ ಭಾರತ ಪರ 1,000 ರನ್ ಗಳಿಸಿದ ಹಾಗೂ 50 ವಿಕೆಟ್​ಗಳನ್ನು ಪಡೆದ ಮೊದಲ ಆಟಗಾರ ಎನಿಸಿಕೊಂಡರು. ಸದ್ಯ ಹಾರ್ದಿಕ್ ಭಾರತ ಪರ 74 ಟಿ20 ಪಂದ್ಯಗಳಲ್ಲಿ 1029 ರನ್ ಮತ್ತು 50 ವಿಕೆಟ್ ಕಬಳಿಸಿದ್ದಾರೆ. ಒಟ್ಟಾರೆಯಾಗಿ ಈ ಸಾಧನೆ ಮಾಡಿದ ಏಳನೇ ಆಟಗಾರನಾಗಿದ್ದಾರೆ.

ಭಾರತದ ಮುಂದಿನ ಪಂದ್ಯ:

ಪಾಕಿಸ್ತಾನ ವಿರುದ್ಧ 4 ವಿಕೆಟ್​ಗಳ ಜಯ ಸಾಧಿಸಿದ ಬಳಿಕ ಆತ್ಮವಿಶ್ವಾಸದಲ್ಲಿರುವ ಟೀಮ್ ಇಂಡಿಯಾ ಇದೀಗ ಮುಂದಿನ ಪಂದ್ಯಕ್ಕೆ ಸಜ್ಜಾಗಬೇಕಿದೆ. ಅಕ್ಟೋಬರ್ 27 ರಂದು ಭಾರತ ತಂಡ ನೆದರ್​ಲೆಂಡ್ ವಿರುದ್ಧ ಆಡಲಿದೆ. ಈ ಪಂದ್ಯ ಸಿಡ್ನಿ ಕ್ರಿಕೆಟ್ ಗ್ರೌಂಡ್​ನಲ್ಲಿ ಆಯೋಜಿಸಲಾಗಿದೆ. ಸದ್ಯ ಭಾರತ ಆಡಿರುವ ಒಂದು ಪಂದ್ಯದಲ್ಲಿ ಅದನ್ನು ಗೆದ್ದು 2 ಅಂಕದೊಂದಿಗೆ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನದಲ್ಲಿದೆ. ಅತ್ತ ಸೋತ ಪಾಕಿಸ್ತಾನ ಕೊನೆಯ ಸ್ಥಾನದಲ್ಲಿದ್ದು, ಅಕ್ಟೋಬರ್ 27 ರಂದು ಜಿಂಬಾಬ್ವೆ ವಿರುದ್ಧ ತನ್ನ ಎರಡನೇ ಪಂದ್ಯ ಆಡಲಿದೆ.

Published On - 8:55 am, Mon, 24 October 22

ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ