IPL 2022: ಸಂಕಷ್ಟಕ್ಕೆ ಸಿಲುಕಿದ ಪಾಂಡ್ಯ! ಐಪಿಎಲ್ ತಯಾರಿಯಲ್ಲಿರುವ ಹಾರ್ದಿಕ್​ಗೆ ವಿಶೇಷ ಸವಾಲು ಒಡ್ಡಿದ ಬಿಸಿಸಿಐ

IPL 2022: ರಾಷ್ಟ್ರೀಯ ತಂಡ ಮತ್ತು NCA ಯ ವೈದ್ಯಕೀಯ ಸಿಬ್ಬಂದಿ ಕೇಂದ್ರ ಒಪ್ಪಂದದಲ್ಲಿ ಭಾಗಿಯಾಗಿರುವ ಎಲ್ಲಾ ಆಟಗಾರರ ಮೇಲೆ ಕಣ್ಣಿಟ್ಟಿರುತ್ತಾರೆ. ಯೋ-ಯೋ ಟೆಸ್ಟ್ ನಲ್ಲಿ ಟೀಂ ಇಂಡಿಯಾ ಆಟಗಾರರು 16.5 ಅಂಕ ಗಳಿಸುವುದು ಅನಿವಾರ್ಯವಾಗಿದೆ.

IPL 2022: ಸಂಕಷ್ಟಕ್ಕೆ ಸಿಲುಕಿದ ಪಾಂಡ್ಯ! ಐಪಿಎಲ್ ತಯಾರಿಯಲ್ಲಿರುವ ಹಾರ್ದಿಕ್​ಗೆ ವಿಶೇಷ ಸವಾಲು ಒಡ್ಡಿದ ಬಿಸಿಸಿಐ
ಹಾರ್ದಿಕ್ ಪಾಂಡ್ಯ
Follow us
TV9 Web
| Updated By: ಪೃಥ್ವಿಶಂಕರ

Updated on: Mar 16, 2022 | 8:37 AM

IPL-2022 ಮಾರ್ಚ್ 26 ರಿಂದ ಪ್ರಾರಂಭವಾಗುತ್ತಿದೆ. ಇದಕ್ಕಾಗಿ ಎಲ್ಲ ಆಟಗಾರರು ಸಿದ್ಧತೆ ನಡೆಸಿದ್ದಾರೆ. ಭಾರತದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ಈ ಬಾರಿ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೊಸ ತಂಡ ಗುಜರಾತ್ ಟೈಟಾನ್ಸ್‌ಗೆ ಅವರನ್ನು ನಾಯಕರನ್ನಾಗಿ ಮಾಡಲಾಗಿದೆ. ಪಾಂಡ್ಯ ಮುಂಬೈ ಇಂಡಿಯನ್ಸ್ ಹೊರತುಪಡಿಸಿ ಬೇರೆ ತಂಡದಲ್ಲಿ ಮೊದಲ ಬಾರಿಗೆ ಐಪಿಎಲ್‌ನಲ್ಲಿ ಆಡುತ್ತಿದ್ದಾರೆ. ಜೊತೆಗೆ ಅವರಿಗೆ ನಾಯಕತ್ವದ ಜವಬ್ದಾರಿಯೂ ಸಿಕ್ಕಿದೆ. ಆದರೆ ಇದೆಲ್ಲವನ್ನೂ ಮಾಡುವ ಮೊದಲು ಅವರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ತಮ್ಮ ಫಿಟ್‌ನೆಸ್ ಅನ್ನು ಸಾಬೀತುಪಡಿಸಬೇಕಾಗುತ್ತದೆ. ಪಾಂಡ್ಯ ಪ್ರಸ್ತುತ ಎನ್‌ಸಿಎಯಲ್ಲಿದ್ದು ಫಿಟ್‌ನೆಸ್ ಪರೀಕ್ಷೆ ನಡೆಸುತ್ತಿದ್ದಾರೆ. ಪಾಂಡ್ಯ ಮುಂದೆ ಎನ್‌ಸಿಎ ಸವಾಲು ಹಾಕಿದ್ದು, ಕನಿಷ್ಠ 10 ಓವರ್ ಬೌಲ್ ಮಾಡುವ ಮೂಲಕ ಪಾಂಡ್ಯ ತನ್ನ ಫಿಟ್‌ನೆಸ್ ಸಾಭೀತುಪಡಿಸಿಬೇಕಿದೆ.

ಇನ್ಸೈಡ್‌ಸ್ಪೋರ್ಟ್ ವೆಬ್‌ಸೈಟ್ ಬಿಸಿಸಿಐ ಮೂಲಗಳನ್ನು ಉಲ್ಲೇಖಿಸಿ, ಫಿಟ್‌ನೆಸ್ ಕಾರ್ಯಕ್ರಮವನ್ನು ಎನ್‌ಸಿಎ ಫಿಸಿಯೋ ಮತ್ತು ವಿವಿಎಸ್ ಲಕ್ಷ್ಮಣ್ ಸಿದ್ಧಪಡಿಸಿದ್ದಾರೆ. ಇದರಲ್ಲಿ ಪಾಂಡ್ಯ ಕನಿಷ್ಠ 10 ಓವರ್‌ಗಳನ್ನು ಬೌಲ್ ಮಾಡಬೇಕು ಮತ್ತು ಕಡ್ಡಾಯವಾಗಿ ಯೋ-ಯೋ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು ಎಂದು ಸ್ಪಷ್ಟಪಡಿಸಿದ್ದಾರೆ. ಈ ಪರೀಕ್ಷೆಗಳನ್ನು ಪಾಂಡ್ಯಗಾಗೆ ವಿನ್ಯಾಸಗೊಳಿಸಲಾಗಿಲ್ಲ. ಬದಲಿಗೆ ಎಲ್ಲಾ ಕ್ರಿಕೆಟಿಗರು ಫಿಟ್ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿದೆ. ಕೇಂದ್ರೀಯ ಒಪ್ಪಂದಗಳಲ್ಲಿ ಬರುವ ಆಟಗಾರರಿಗೆ, ಐಪಿಎಲ್‌ಗೆ ಮೊದಲು ಇದು ಅವಶ್ಯಕವಾಗಿದೆ.

ಪಾಂಡ್ಯ ಸಂಕಷ್ಟಕ್ಕೆ ಸಿಲುಕುತ್ತಾರಾ? ರಾಷ್ಟ್ರೀಯ ತಂಡ ಮತ್ತು NCA ಯ ವೈದ್ಯಕೀಯ ಸಿಬ್ಬಂದಿ ಕೇಂದ್ರ ಒಪ್ಪಂದದಲ್ಲಿ ಭಾಗಿಯಾಗಿರುವ ಎಲ್ಲಾ ಆಟಗಾರರ ಮೇಲೆ ಕಣ್ಣಿಟ್ಟಿರುತ್ತಾರೆ. ಯೋ-ಯೋ ಟೆಸ್ಟ್ ನಲ್ಲಿ ಟೀಂ ಇಂಡಿಯಾ ಆಟಗಾರರು 16.5 ಅಂಕ ಗಳಿಸುವುದು ಅನಿವಾರ್ಯವಾಗಿದೆ. ಆದರೆ ಖುಷಿಯ ವಿಚಾರವೆಂದರೆ ಈ ಪರೀಕ್ಷೆಯಲ್ಲಿ ಹಾರ್ದಿಕ್ ಪಾಂಡ್ಯ ಅವರ ಸರಾಸರಿ ಸ್ಕೋರ್ 18 ಆಗಿದೆ.

BCCI (ಕ್ರಿಕೆಟ್ ಬೋರ್ಡ್ ಆಫ್ ಇಂಡಿಯಾ) ಮೂಲವು ಅನಾಮಧೇಯತೆಯ ಷರತ್ತಿನ ಮೇಲೆ ಸುದ್ದಿ ಸಂಸ್ಥೆ PTI ಗೆ ತಿಳಿಸಿದ್ದು, “ಹಾರ್ದಿಕ್ ಮುಂದಿನ ಎರಡು ದಿನಗಳ ಕಾಲ NCA ಯಲ್ಲಿರಲಿದ್ದು, ವಿವಿಧ ಫಿಟ್ನೆಸ್ ಪರೀಕ್ಷೆಗಳಿಗೆ ಒಳಗಾಗುತ್ತಾರೆ. ಅವರು ಕೇಂದ್ರೀಯ ಒಪ್ಪಂದದ ಕ್ರಿಕೆಟಿಗರಾಗಿದ್ದು, ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ನಡೆದ ಟಿ20 ವಿಶ್ವಕಪ್‌ನ ನಂತರ ಪಾಂಡ್ಯ ಯಾವುದೇ ಪಂದ್ಯವನ್ನು ಆಡಿಲ್ಲ. ಹೀಗಾಗಿ ಅವರು ಫಿಟ್​ನೆಸ್ ಪರೀಕ್ಷೆಗೆ ಒಳಗಾಗಲೇಬೇಕು ಎಂದಿದ್ದಾರೆ.

ರಾಷ್ಟ್ರೀಯ ತಂಡ ಮತ್ತು NCA ವೈದ್ಯಕೀಯ ಸಿಬ್ಬಂದಿ ಯಾವಾಗಲೂ ತಮ್ಮ ಕೇಂದ್ರೀಯ ಗುತ್ತಿಗೆ ಆಟಗಾರರ ಮೇಲೆ ಕಣ್ಣಿಟ್ಟಿದ್ದು, ಇದರ ಅಡಿಯಲ್ಲಿ, ಬರೋಡಾದಲ್ಲಿ ಟೈಟಾನ್ಸ್‌ ನಡೆಸಿದ ಐದು ದಿನಗಳ ತರಬೇತಿ ಶಿಬಿರದಲ್ಲಿ ಹಾರ್ದಿಕ್ ಎರಡು-ಮೂರು ಸೆಷನ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: IPL 2022: ಬಾಂಬ್ ಎಕ್ಸ್​ಪರ್ಟ್ ಪಾಂಡ್ಯ​! ಐಪಿಎಲ್ ಆರಂಭಕ್ಕೂ ಮುನ್ನ ಹೊಸ ಅವತಾರ ತಾಳಿದ ಹಾರ್ದಿಕ್; ವಿಡಿಯೋ

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ