ಬೇಜಾರು ಮಾಡ್ಕೋಬೇಡ… ಮುತ್ತಿಟ್ಟು ಸಮಾಧಾನ ಮಾಡಿದ ಹಾರ್ದಿಕ್ ಪಾಂಡ್ಯ
IPL 2025 DC vs MI: ಇಂಡಿಯನ್ ಪ್ರೀಮಿಯರ್ ಲೀಗ್ನ ( ಐಪಿಎಲ್ 2025 ) 29ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್ಗಳಲ್ಲಿ 205 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 19 ಓವರ್ಗಳಲ್ಲಿ 193 ರನ್ಗಳಿಸಿ ಆಲೌಟ್ ಆಗಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ 29ನೇ ಪಂದ್ಯದ ಮೂಲಕ ಮುಂಬೈ ಇಂಡಿಯನ್ಸ್ (MI) ತಂಡವು ಗೆಲುವಿನ ಲಯಕ್ಕೆ ಮರಳಿದೆ. ಅದು ಸಹ ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ (DC) ವಿರುದ್ಧ ರೋಚಕ ಜಯ ಸಾಧಿಸುವ ಮೂಲಕ ಎಂಬುದು ವಿಶೇಷ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಅಕ್ಷರ್ ಪಟೇಲ್ (Axar Patel) ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ.
ಮುಂಬೈ ಇಂಡಿಯನ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಕೇವಲ 18 ರನ್ಗಳಿಸಿ ಔಟಾದರು. ಇದಾಗ್ಯೂ ರಯಾನ್ ರಿಕೆಲ್ಟನ್ (41), ಸೂರ್ಯಕುಮಾರ್ ಯಾದವ್ ( 40) ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಆ ಬಳಿಕ ಬಂದ ತಿಲಕ್ ವರ್ಮಾ 33 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ 56 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡವು 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 205 ರನ್ ಕಲೆಹಾಕಿತು.
ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 206 ರನ್ಗಳ ಕಠಿಣ ಗುರಿ:
206 ರನ್ಗಳ ಕಠಿಣ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮೊದಲ ಎಸೆತದಲ್ಲೇ ಜೇಕ್ ಫ್ರೇಸರ್ ಮೆಕ್ಗುರ್ಕ್ (0) ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಕಣಕ್ಕಿಳಿದ ಕರುಣ್ ನಾಯರ್ ವಿಸ್ಪೋಟಕ ಬ್ಯಾಟಿಂಗ್ನೊಂದಿಗೆ ಗಮನ ಸೆಳೆದರು. 40 ಎಸೆತಗಳನ್ನು ಎದುರಿಸಿದ ಕರುಣ್ 5 ಸಿಕ್ಸ್ ಹಾಗೂ 12 ಫೋರ್ಗಳೊಂದಿಗೆ 89 ರನ್ ಬಾರಿಸಿದರು. ಮತ್ತೊಂದೆಡೆ ಅಭಿಷೇಕ್ ಪೊರೆಲ್ 33 ರನ್ಗಳ ಕೊಡುಗೆ ನೀಡಿದರು.
ಅಭಿಷೇಕ್ ಪೊರೆಲ್ ಹಾಗೂ ಕರುಣ್ ನಾಯರ್ ವಿಕೆಟ್ ಪತನಗೊಳ್ಳುತ್ತಿದ್ದಂತೆ ದಿಢೀರ್ ಕುಸಿತಕ್ಕೊಳಗಾದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಬ್ಯಾಕ್ ಟು ಬ್ಯಾಕ್ ವಿಕೆಟ್ ಕಳೆದುಕೊಂಡಿತು. ಪರಿಣಾಮ 18 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು ಡೆಲ್ಲಿ ಕ್ಯಾಪಿಟಲ್ಸ್ ತಂಡವು 183 ರನ್ ಕಲೆಹಾಕಿತು.
ಅದರಂತೆ ಕೊನೆಯ 12 ಎಸೆತಗಳಲ್ಲಿ ಡೆಲ್ಲಿ ತಂಡಕ್ಕೆ 23 ರನ್ಗಳ ಅಗತ್ಯವಿತ್ತು. ಆದರೆ 19ನೇ ಓವರ್ನಲ್ಲಿ ಮೂವರು ಬ್ಯಾಟರ್ಗಳು ರನೌಟ್ ಆಗುವುದರೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು 193 ರನ್ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಗೆಲ್ಲುವ ಪಂದ್ಯವನ್ನು ಕೇವಲ 12 ರನ್ಗಳಿಂದ ಡಿಸಿ ಪಡೆ ಕೈ ಚೆಲ್ಲಿಕೊಂಡಿತು.
ರನೌಟ್ನೊಂದಿಗೆ ಪಂದ್ಯ ಗೆದ್ದ ಮುಂಬೈ ಇಂಡಿಯನ್ಸ್:
A HAT-TRICK OF RUN-OUT DOES IT FOR MUMBAI INDIANS! 🥶
Next up on #IPLonJioStar 👉 #LSGvCSK | MON, 14th APR, 6:30 PM LIVE on Star Sports 1, Star Sports 1 Hindi & JioHotstar! pic.twitter.com/aPre4RwkGM
— Star Sports (@StarSportsIndia) April 13, 2025
ಸಮಾಧಾನ ಮಾಡಿದ ಹಾರ್ದಿಕ್ ಪಾಂಡ್ಯ:
ಇತ್ತ ರೋಚಕ ಗೆಲುವು ಸಾಧಿಸಿದ ಖುಷಿಯಲ್ಲಿದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಹಸ್ತಲಾಘವದ ವೇಳೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಅವರನ್ನು ಸಮಾಧಾನಪಡಿಸಿದರು. ಅಲ್ಲದೆ ಪಟೇಲ್ ಅವರಿಗೆ ಮುತ್ತಿಕ್ಕುವ ಮೂಲಕ ತನ್ನ ಬಾಂಧವ್ಯವನ್ನು ತೋರ್ಪಡಿಸಿದರು.
Hardik Pandya & Axar Patel ❤️ pic.twitter.com/CBmEzQvYPd
— MixUpInfo (@MixUpInfo03) April 13, 2025
ಇದೀಗ ಭಾರತೀಯ ಆಟಗಾರರ ನಡುವಣ ಫ್ರೆಂಡ್ಶಿಪ್ನ ಸಂಕೇತವಾಗಿ ಹಾರ್ದಿಕ್ ಪಾಂಡ್ಯ ಅಕ್ಷರ್ ಪಟೇಲ್ಗೆ ಮುತ್ತಿಟ್ಟಿರುವ ಫೋಟೋ ವೈರಲ್ ಆಗಿದ್ದು, ಟೀಮ್ ಇಂಡಿಯಾ ಅಭಿಮಾನಿಗಳಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.