IND vs SL 1st T20: ಇಂದು ಭಾರತ-ಶ್ರೀಲಂಕಾ ಮೊದಲ ಟಿ20: ಟೀಮ್ ಇಂಡಿಯಾ ಆಡುವ ಬಳಗವೇ ರೋಚಕ

India vs Sri Lanka T20I: ಇಂದು ಶ್ರೀಲಂಕಾ ವಿರುದ್ಧ ಭಾರತ ಕ್ರಿಕೆಟ್ ತಂಡ ಮೊದಲ ಟಿ20 ಪಂದ್ಯವನ್ನು ಆಡುವ ಮೂಲಕ ವರ್ಷದ ಮೊದಲ ಕದನದಲ್ಲಿ ಪಾಲ್ಗೊಳ್ಳಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಮೊದಲ ಟಿ20 ಪಂದ್ಯ ಆಯೋಜಿಸಲಾಗಿದೆ.

IND vs SL 1st T20: ಇಂದು ಭಾರತ-ಶ್ರೀಲಂಕಾ ಮೊದಲ ಟಿ20: ಟೀಮ್ ಇಂಡಿಯಾ ಆಡುವ ಬಳಗವೇ ರೋಚಕ
IND vs SL 1st T20I
Follow us
TV9 Web
| Updated By: Vinay Bhat

Updated on: Jan 03, 2023 | 7:56 AM

ಹೊಸ ವರ್ಷ 2023 ರ (New Year 2023) ಮೊದಲ ಸರಣಿಗೆ ಭಾರತ ಸಜ್ಜಾಗಿ ನಿಂತಿದೆ. ಇಂದು ಶ್ರೀಲಂಕಾ ವಿರುದ್ಧ ಭಾರತ ಕ್ರಿಕೆಟ್ ತಂಡ (India vs Sri Lanka) ಮೊದಲ ಟಿ20 ಪಂದ್ಯವನ್ನು ಆಡುವ ಮೂಲಕ ವರ್ಷದ ಮೊದಲ ಕದನದಲ್ಲಿ ಪಾಲ್ಗೊಳ್ಳಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಮೊದಲ ಟಿ20 ಪಂದ್ಯ ಆಯೋಜಿಸಲಾಗಿದೆ. ಈಗಾಗಲೇ ಉಭಯ ತಂಡಗಳು ಮುಂಬೈನಲ್ಲಿ ಬೀಡುಬಿಟ್ಟಿದ್ದು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಪ್ರಮುಖ ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾವನ್ನು ಹಾರ್ದಿಕ್ ಪಾಂಡ್ಯ (Hardik Pandya) ಮುನ್ನಡೆಸುತ್ತಿದ್ದಾರೆ. ಇತ್ತ ದಸುನ್ ಶನಕಾ ಶ್ರೀಲಂಕಾ ತಂಡದ ನಾಯಕನಾಗಿದ್ದಾರೆ.

ಭಾರತ ಟಿ20 ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ. ಇದೇ ಮೊದಲ ಬಾರಿ ಸೂರ್ಯಕುಮಾರ್ ಯಾದವ್‌ ಭಾರತ ಟಿ20 ತಂಡದ ಉಪನಾಯಕನಾಗಿ ಆಯ್ಕೆ ಆಗಿದ್ದಾರೆ. ಋತುರಾಜ್‌ ಗಾಯಕ್ವಾಡ್‌ ಕಮ್‌ಬ್ಯಾಕ್‌ ಮಾಡಿದ್ದಾರೆ. ರಾಹುಲ್‌ ತ್ರಿಪಾಠಿ, ದೀಪಕ್‌ ಹೂಡ ಮತ್ತು ಸಂಜು ಸ್ಯಾಮ್ಸನ್‌ ಕೂಡ ತಮ್ಮ ಸ್ಥಾನ ಉಳಿಸಿಕೊಂಡಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯಲ್ಲಿ ಸ್ಪೋಟಕ ಪ್ರದರ್ಶನ ನೀಡಿದ್ದ ಇಶಾನ್ ಕಿಶನ್ ಈ ಸರಣಿಯಲ್ಲಿಯೂ ಆರಂಭಿಕನಾಗಿ ಕಣಕ್ಕಿಳಿದು ಮಿಂಚುವ ವಿಶ್ವಾಸ ಮೂಡಿಸಿದ್ದಾರೆ.

ಶುಭ್​ಮನ್ ಗಿಲ್ ಈ ಪಂದ್ಯದ ಮೂಲಕ ಚುಟುಕು ಮಾದರಿಗೆ ಪದಾರ್ಪಣೆ ಮಾಡುವ ಸಾಧ್ಯತೆಯಿದೆ. ಅಚ್ಚರಿಯ ಆಯ್ಕೆ ಎಂಬಂತೆ ಯುವ ಬೌಲರ್‌ಗಳಾದ ಶಿವಂ ಮಾವಿ ಮತ್ತು ಮುಖೇಶ್‌ ಕುಮಾರ್‌ ಇದೇ ಮೊದಲ ಬಾರಿ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಒಟ್ಟಾರೆ ಯುವ ಆಟಗಾರರಿಂದ ಕೂಡಿರುವ ಟೀಮ್ ಇಂಡಿಯಾದ ಆಡುವ ಬಳಗ ಹೇಗಿರಲಿದೆ ಎಂಬುದು ಕುತೂಹಲ ಕೆರಳಿಸಿದೆ.

ಇದನ್ನೂ ಓದಿ
Image
Team India: ಟೀಮ್ ಇಂಡಿಯಾದ ಮುಂದಿನ ಕೋಚ್ ಯಾರು? ಇಲ್ಲಿದೆ ಉತ್ತರ
Image
Hardik Pandya: ಕಳೆದ ಬಾರಿ ಮಿಸ್ ಆಯ್ತು, ಈ ಸಲ ವಿಶ್ವಕಪ್ ನಮ್ದೆ: ಹಾರ್ದಿಕ್ ಪಾಂಡ್ಯ
Image
ಎಂತಹ ಅದ್ಭುತ ರಸ್ತೆ…ಪಾಕ್ ಪಿಚ್​ ಅನ್ನು ವ್ಯಂಗ್ಯವಾಡಿದ ನ್ಯೂಜಿಲೆಂಡ್ ಬೌಲರ್
Image
Devon Conway: ವರ್ಷದ ಮೊದಲ ಶತಕ ಸಿಡಿಸಿ ವಿಶೇಷ ದಾಖಲೆ ಬರೆದ ಕಾನ್ವೆ..!

Team India New Jersey 2023: ಟೀಮ್ ಇಂಡಿಯಾದ ಹೊಸ ಜೆರ್ಸಿ ಅನಾವರಣ

ಭಾರತ ಹಾಗೂ ಶ್ರೀಲಂಕಾ ತಂಡಗಳು ಕೊನೆಯ ಬಾರಿಗೆ ಮುಖಾಮುಖಿ ಆಗಿದ್ದು ಏಷ್ಯಾಕಪ್ ಟೂರ್ನಿಯಲ್ಲಿ. ಇಲ್ಲಿ ಭಾರತ ತಂಡವನ್ನು ಸೋಲಿಸಿ ಏಷ್ಯಾಕಪ್ ಗೆಲ್ಲುವ ಆಸೆಗೆ ತಣ್ಣೇರೆರಚಿದ್ದರು. ಅಲ್ಲದೆ ಲಂಕಾನ್ನರು ಪ್ರಶಸ್ತಿಗೆ ಮುತ್ತಿಕ್ಕಿದ್ದರು. ಹೀಗಾಗಿ ಶ್ರೀಲಂಕಾವನ್ನು ಕಡೆ ಗಣಿಸುವಂತಿಲ್ಲ. ಜೊತೆಗೆ ಭಾರತದ ಪ್ರವಾಸಕ್ಕೆ ಲಂಕಾ ಕ್ರಿಕೆಟ್ ಮಂಡಳಿ ತಂಡದಲ್ಲಿ ಕೆಲ ಬದಲಾವಣೆಗಳನ್ನೂ ಮಾಡಿದೆ. ಅನುಭವಿ ಲೆಗ್‌ ಸ್ಪಿನ್ನರ್‌ ವಾನಿಂದು ಹಸರಂಗ ಇದೇ ಮೊದಲ ಬಾರಿ ಶ್ರೀಲಂಕಾ ಟಿ20 ಕ್ರಿಕೆಟ್‌ ತಂಡದ ವೈಸ್‌ ಕ್ಯಾಪ್ಟನ್‌ ಆಗಿ ಆಯ್ಕೆಯಾಗಿದ್ದಾರೆ. ಸ್ಫೋಟಕ ಬ್ಯಾಟ್ಸ್‌ಮನ್‌ ಭಾನುಕ ರಾಜಪಕ್ಷ ಟಿ20 ಸರಣಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಮೊದಲ ಟಿ20 ಪಂದ್ಯ ನಡೆಯಲಿರುವ ವಾಂಖೆಡೆ ಕ್ರೀಡಾಂಗಣದ ಪಿಚ್ ಬ್ಯಾಟಿಂಗ್ ಸ್ವರ್ಗವಾಗಿದೆ. ಅನೇಕ ಐಪಿಎಲ್ ಪಂದ್ಯಗಳಲ್ಲಿ ಇಲ್ಲಿ ರನ್ ಮಳೆ ಸುರಿದಿರುವುದು ಕಂಡಿದ್ದೇವೆ. ಚೆಂಡು ಮೇಲ್ಮೈಯಿಂದ ಬರುತ್ತದೆ. ಬ್ಯಾಟರ್‌ಗಳು ಕೂಡ ಶಾರ್ಟ್ ಬೌಂಡರಿಗಳನ್ನು ಸಿಡಿಸಲು ಈ ಪಿಚ್​ ಸಹಾಯಕವಾಗಿದೆ. ಇಬ್ಬನಿಯು ಬೌಲರ್‌ಗಳಿಗೆ ಹೆಚ್ಚು ಸಹಾಯಕಾರಿಯಾಗಿದ್ದು, ಪಂದ್ಯದ ತಿರುವಿಗೆ ಕಾರಣವಾಗಬಹುದು. ಆದಾಗ್ಯೂ, ವೇಗಿಗಳು ಆರಂಭಿಕ ಓವರ್‌ಗಳಲ್ಲಿ ಬೌಲರ್​ಗಳು ಮೇಲುಗೈ ಸಾಧಿಸುತ್ತಾರೆ. ಮಳೆಯ ನಿರೀಕ್ಷೆ ಇಲ್ಲವೆಂದು ಹವಾಮಾನ ಇಲಾಖೆ ತಿಳಿಸಿದ್ದು, ಸಂಪೂರ್ಣ 40 ಓವರ್​ಗಳ ಪಂದ್ಯ ನಡೆಯಲಿದೆ.

ಭಾರತ ಮತ್ತು ಶ್ರೀಲಂಕಾ ನಡುವಿನ ಟಿ20 ಸರಣಿಯ ಮೊದಲ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದ್ದು, ಟಾಸ್ 6.30ಕ್ಕೆ ನಡೆಯಲಿದೆ. ನೇರ ಪ್ರಸಾರವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಇರಲಿದೆ. ಲೈವ್ ಸ್ಟ್ರೀಮಿಂಗ್ ಅನ್ನು ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ ವೀಕ್ಷಿಸಬಹುದಾಗಿದೆ.

ಭಾರತ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಇಶಾನ್ ಕಿಶನ್ (ವಿಕೆಟ್‌ಕೀಪರ್‌), ಋತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ಉಪನಾಯಕ), ದೀಪಕ್ ಹೂಡ, ರಾಹುಲ್ ತ್ರಿಪಾಠಿ, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಹಲ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್ , ಶಿವಂ ಮಾವಿ, ಮುಖೇಶ್ ಕುಮಾರ್.

ಶ್ರೀಲಂಕಾ ತಂಡ: ದಸುನ್ ಶನಕ (ನಾಯಕ), ಪಾತುಮ್ ನಿಸ್ಸಾಂಕ, ಅವಿಷ್ಕ ಫೆರ್ನಾಂಡೋ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಸದೀರ ಸಮರವಿಕ್ರಮ, ಕುಸಲ್ ಮೆಂಡಿಸ್, ಭಾನುಕಾ ರಾಜಪಕ್ಸೆ, ಅಶೇನ್ ಬಂಡಾರ, ಮಹೇಶ್ ತೀಕ್ಷಣ, ದಿಲ್ಶನ್ ಮಧುಶಂಕ, ಕಸುನ್ ರಜಿತ, ಪ್ರಮೋದ್ ಮದುಶನ್, ಲಹಿರು ಕುಮಾರ, ನುವಾನ್ ತುಷಾರ, ದುನಿತ್ ವೆಲ್ಲಲಾಗೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ