AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ತಿಂಗಳಲ್ಲಿ ನಾಲ್ಕನೇ ಐಷರಾಮಿ ಕಾರು ಖರೀದಿಸಿದ ಹಾರ್ದಿಕ್ ಪಾಂಡ್ಯ

Hardik Pandya's New Luxury Ride: ಟೀಂ ಇಂಡಿಯಾ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ₹1.4 ಕೋಟಿ ಮೌಲ್ಯದ ಹೊಚ್ಚ ಹೊಸ ಮರ್ಸಿಡಿಸ್-ಬೆಂಝ್ ವಿ-ಕ್ಲಾಸ್ ಕಾರನ್ನು ಖರೀದಿಸಿದ್ದಾರೆ. ಈ ಐಷಾರಾಮಿ MPV ಯ ಮೊದಲ ಭಾರತೀಯ ಮಾಲೀಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕೇವಲ ಆರು ತಿಂಗಳಲ್ಲಿ ಇದು ಪಾಂಡ್ಯರ ನಾಲ್ಕನೇ ದುಬಾರಿ ಕಾರು. ಅವರ ಗೆಳತಿ ಮಹಿಕಾ ಅವರೊಂದಿಗೆ ಪಾಂಡ್ಯ ಈ ಕಾರಿನ ಮುಂದೆ ಫೋಟೋ ತೆಗೆಸಿಕೊಂಡಿದ್ದು, ಅವರ ಭವ್ಯ ಕಾರು ಸಂಗ್ರಹಕ್ಕೆ ಮತ್ತೊಂದು ಸೇರ್ಪಡೆಯಾಗಿದೆ.

6 ತಿಂಗಳಲ್ಲಿ ನಾಲ್ಕನೇ ಐಷರಾಮಿ ಕಾರು ಖರೀದಿಸಿದ ಹಾರ್ದಿಕ್ ಪಾಂಡ್ಯ
Hardik Pandya
ಪೃಥ್ವಿಶಂಕರ
|

Updated on:Mar 30, 2026 | 3:01 PM

Share

ಟೀಂ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾಗೂ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯಗೆ (Hardik Pandya) ಕಾರುಗಳ ಮೇಲಿನ ಮೋಹ ಎಂತಹದ್ದು ಎಂಬುದು ಎಲ್ಲರಿಗೂ ತಿಳಿದಿರುವಂತದ್ದೇ. ಪಾಂಡ್ಯ ಗ್ಯಾರೆಜ್​ನಲ್ಲಿ ಹಲವು ದುಬಾರಿ ಕಾರುಗಳ ಸಂಗ್ರಹವಿದೆ. ಇದೀಗ ಅವುಗಳ ಪಟ್ಟಿಗೆ ಮತ್ತೊಂದು ದುಬಾರಿ ಕಾರು ಸೇರ್ಪಡೆಗೊಂಡಿದೆ. ಈ ಮೂಲಕ ಹಾರ್ದಿಕ್ ಪಾಂಡ್ಯ ಕೇವಲ ಆರು ತಿಂಗಳಲ್ಲಿ ನಾಲ್ಕನೇ ಐಷಾರಾಮಿ ಕಾರನ್ನು ಖರೀದಿಸಿದಂತ್ತಾಗಿದೆ. ಈ ಬಾರಿ ಇತ್ತೀಚೆಗೆ ಬಿಡುಗಡೆಯಾದ ಕಾರನ್ನು ಖರೀದಿಸಿರುವ ಹಾರ್ದಿಕ್, ತಮ್ಮ ಗೆಳತಿ ಮಹಿಕಾ ಅವರೊಂದಿಗೆ ಕಾರಿನ ಮುಂದೆ ನಿಂತ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

ಹೊಸ ಕಾರು ಖರೀದಿಸಿದ ಹಾರ್ದಿಕ್ ಪಾಂಡ್ಯ

ಹಾರ್ದಿಕ್ ಪಾಂಡ್ಯ ಹೊಸ ಜನರೇಷನ್​ನ​ ಮರ್ಸಿಡಿಸ್-ಬೆನ್ಜ್ ವಿ-ಕ್ಲಾಸ್ ಕಾರನ್ನು ಖರೀದಿಸಿದ್ದಾರೆ. ಈ ಮೂಲಕ ಈ ಕಾರನ್ನು ಖರೀದಿಸಿದ ಭಾರತದ ಮೊದಲ ವ್ಯಕ್ತಿ ಎನಿಸಿಕೊಂಡಿದ್ದಾರೆ. ಈ ಐಷಾರಾಮಿ MPV (ಬಹುಪಯೋಗಿ ವಾಹನ) ಕಾರಿಗೆನ ಬೆಲೆ ಸುಮಾರು ₹1.4 ಕೋಟಿ ರೂ. ಎನ್ನಲಾಗುತ್ತಿದೆ. ಆರಾಮದಾಯಕ ಕುಟುಂಬ ಪ್ರಯಾಣ ಮತ್ತು ಪ್ರೀಮಿಯಂ ಐಷಾರಾಮಿಗೆ ಹೆಸರುವಾಸಿಯಾದ ಇದು ವಿಶಾಲವಾದ ಒಳಾಂಗಣ, ಉನ್ನತ-ಮಟ್ಟದ ವೈಶಿಷ್ಟ್ಯಗಳು ಮತ್ತು ಸಾಟಿಯಿಲ್ಲದ ಸೌಕರ್ಯವನ್ನು ಹೊಂದಿದೆ.

ಪಾಂಡ್ಯ ಬಳಿ ಇರುವ ಐಷರಾಮಿ ಕಾರುಗಳು

ಹಾರ್ದಿಕ್ ಪಾಂಡ್ಯ ಅವರ ಗ್ಯಾರೇಜ್ ಈಗಾಗಲೇ ಹಲವಾರು ದುಬಾರಿ ಕಾರುಗಳಿಂದ ತುಂಬಿದೆ. ಪಾಂಡ್ಯ ಇತ್ತೀಚೆಗೆ ಸುಮಾರು ₹4 ಕೋಟಿ ಮೌಲ್ಯದ ಲ್ಯಾಂಡ್ ರೋವರ್ ಡಿಫೆಂಡರ್ ಕಾರನ್ನು ಖರೀದಿಸಿ, ಅವರ ಮಗನಿಗೆ ಉಡುಗೊರೆಯಾಗಿ ನೀಡಿದ್ದರು. ಆ ಬಳಿಕ ಸುಮಾರು 12 ಕೋಟಿ ರೂ. ಮೌಲ್ಯದ ಫೆರಾರಿ 12-ಸಿಲಿಂಡರ್ ಕಾರನ್ನು ಪಾಂಡ್ಯ ಇತ್ತೀಚೆಗೆ ಖರೀದಿಸಿದ್ದರು. ಹಾಗೆಯೇ 4.5 ಕೋಟಿ ರೂ. ಮೌಲ್ಯದ ಲಂಬೋರ್ಘಿನಿ ಉರುಸ್ ಕಾರನ್ನು ಸಹ ಖರೀದಿಸಿದ್ದರು.

ಹೊಸ ಪ್ರೇಯಸಿಗಾಗಿ 10 ಕೋಟಿ ಬೆಲೆಯ ಕಾರು ಖರೀದಿಸಿದ ಹಾರ್ದಿಕ್ ಪಾಂಡ್ಯ

ಐಪಿಎಲ್​ನಲ್ಲಿ ಗೆಲುವಿನ ಆರಂಭ

ಇನ್ನು ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿರುವ ಹಾರ್ದಿಕ್ ಪಾಂಡ್ಯ ಲೀಗ್​ನಲ್ಲಿ ಗೆಲುವಿನ ಶುಭಾರಂಭ ಮಾಡಿದ್ದಾರೆ.  ಮೊದಲ ಪಂದ್ಯದಲ್ಲಿ ಕೆಕೆಆರ್ ತಂಡವನ್ನು ಎದುರಿಸಿದ್ದ ಮುಂಬೈ, ಕೆಕೆಆರ್ ನೀಡಿದ್ದ 221 ರನ್​ಗಳ ಗುರಿಯನ್ನು ಕೊನೆಯ ಓವರ್​ನಲ್ಲಿ ಬೆನ್ನಟ್ಟಿ ಗೆಲುವು ಸಾಧಿಸಿತು. ಈ ಮೂಲಕ 2013 ರ ನಂತರ ಐಪಿಎಲ್​ನ ಮೊದಲ ಪಂದ್ಯದಲ್ಲಿ ಗೆದ್ದ ಸಾಧನೆಯನ್ನು ಮುಂಬೈ ತಂಡ ಮಾಡಿದೆ. ಹಾಗೆಯೇ 221 ರನ್​ಗಳ ಬೃಹತ್ ಮೊತ್ತ ಬೆನ್ನಟ್ಟಿದ ದಾಖಲೆ ಕೂಡ ಮುಂಬೈ ಪಾಲಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:58 pm, Mon, 30 March 26

Follow Us
ತನಗೆ ಮಂತ್ರಿಗಿರಿಯೇ ಬೇಡವೆಂದ ಕೆ.ಎನ್​​. ರಾಜಣ್ಣ!
ತನಗೆ ಮಂತ್ರಿಗಿರಿಯೇ ಬೇಡವೆಂದ ಕೆ.ಎನ್​​. ರಾಜಣ್ಣ!
SIR ಬಗ್ಗೆ ಭಯ ಬೇಡ: ಧೈರ್ಯ ಹೇಳಿದ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್
SIR ಬಗ್ಗೆ ಭಯ ಬೇಡ: ಧೈರ್ಯ ಹೇಳಿದ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಹೆಚ್.ಕೆ ಸುರೇಶ್ ಪ್ರಮಾಣ!
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಹೆಚ್.ಕೆ ಸುರೇಶ್ ಪ್ರಮಾಣ!
ಎಲ್ಲರೂ ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವಂತೆ ನೋಡಿಕೊಳ್ಳಿ ಎಂದ ಡಿಕೆಶಿ!
ಎಲ್ಲರೂ ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವಂತೆ ನೋಡಿಕೊಳ್ಳಿ ಎಂದ ಡಿಕೆಶಿ!
ಬೆಂಗಳೂರಿನಲ್ಲಿ ಫುಟ್​ಪಾತ್ ಅತಿಕ್ರಮಣ ತೆರವಿಗೆ ಇಂದೇ ಗಡುವು
ಬೆಂಗಳೂರಿನಲ್ಲಿ ಫುಟ್​ಪಾತ್ ಅತಿಕ್ರಮಣ ತೆರವಿಗೆ ಇಂದೇ ಗಡುವು
ಮತದಾರರ ಪಟ್ಟಿ ಪರಿಷ್ಕರಣೆ: ಸಿಎಂ ಮನೆಯಿಂದಲೇ ಎಸ್​ಐಆರ್​ಗೆ ಚಾಲನೆ!
ಮತದಾರರ ಪಟ್ಟಿ ಪರಿಷ್ಕರಣೆ: ಸಿಎಂ ಮನೆಯಿಂದಲೇ ಎಸ್​ಐಆರ್​ಗೆ ಚಾಲನೆ!
ವಿವಾಹಿತೆ ಜೊತೆ ಪರಾರಿಯಾದ ಯುವಕನ ಮನೆ ಧ್ವಂಸ: ಕಮಿಷನರ್​​ ಏನಂದ್ರು?
ವಿವಾಹಿತೆ ಜೊತೆ ಪರಾರಿಯಾದ ಯುವಕನ ಮನೆ ಧ್ವಂಸ: ಕಮಿಷನರ್​​ ಏನಂದ್ರು?
ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ
ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ
ನೋಡಿ, ಎಂಥಾ ಅದ್ಭುತ ದೃಶ್ಯ! ಒಂದೇ ಮರದ ಮೇಲೆ ಕುಳಿತ ಎರಡು ಚಿರತೆಗಳು
ನೋಡಿ, ಎಂಥಾ ಅದ್ಭುತ ದೃಶ್ಯ! ಒಂದೇ ಮರದ ಮೇಲೆ ಕುಳಿತ ಎರಡು ಚಿರತೆಗಳು
ಅಡ್ಡಮತದಾನ ಮಾಡಿಲ್ಲ: ಬೇಲೂರು ಬಿಜೆಪಿ ಶಾಸಕ ಸುರೇಶ್ ಆಣೆ-ಪ್ರಮಾಣ
ಅಡ್ಡಮತದಾನ ಮಾಡಿಲ್ಲ: ಬೇಲೂರು ಬಿಜೆಪಿ ಶಾಸಕ ಸುರೇಶ್ ಆಣೆ-ಪ್ರಮಾಣ