AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ತವರಿಗೆ ಮರಳಿದ ಬೆನ್ನಲ್ಲೇ ಟೀಮ್ ಇಂಡಿಯಾ ಆಟಗಾರರ ಭರ್ಜರಿ ಡ್ಯಾನ್ಸ್

T20 World Cup 2024: ಟಿ20 ವಿಶ್ವಕಪ್ ಫೈನಲ್ ಪಂದ್ಯವು ಶನಿವಾರ ಮುಗಿದರೂ, ಭಾರತ ತಂಡವು 4 ದಿನಗಳ ಬಳಿಕ ತವರಿಗೆ ಮರಳಿದೆ. ಇದಕ್ಕೆ ಮುಖ್ಯ ಕಾರಣ ಫೈನಲ್ ಮುಕ್ತಾಯದ ಬೆನ್ನಲ್ಲೇ ಬಾರ್ಬಡೋಸ್​ನಲ್ಲಿ ಬೆರಿಲ್ ಚಂಡಮಾರುತ ಶುರುವಾಗಿದ್ದು. ಬಿರುಗಾಳಿ ಸಹಿತದ ಭಾರೀ ಮಳೆಯಿಂದಾಗಿ ವಿಮಾನಯಾನಗಳು ಬಂದ್ ಆಗಿದ್ದವು. ಹೀಗಾಗಿ ಟೀಮ್ ಇಂಡಿಯಾದ ಹಿಂತಿರುಗುವಿಕೆಯು ವಿಳಂಬವಾಗಿದೆ.

VIDEO: ತವರಿಗೆ ಮರಳಿದ ಬೆನ್ನಲ್ಲೇ ಟೀಮ್ ಇಂಡಿಯಾ ಆಟಗಾರರ ಭರ್ಜರಿ ಡ್ಯಾನ್ಸ್
Rohit Sharma
ಝಾಹಿರ್ ಯೂಸುಫ್
|

Updated on:Jul 04, 2024 | 9:13 AM

Share

ಟಿ20 ವಿಶ್ವಕಪ್​ನೊಂದಿಗೆ (T20 World Cup 2024) ಭಾರತ ತಂಡ ದೆಹಲಿಗೆ ಆಗಮಿಸಿದೆ. ಬುಧವಾರ ಬಾರ್ಬಡೋಸ್​ನಿಂದ ಏರ್​ ಇಂಡಿಯಾ ಚಾರ್ಟರ್ಡ್ ವಿಮಾನದಲ್ಲಿ ಹೊರಟಿದ್ದ ಟೀಮ್ ಇಂಡಿಯಾ ಆಟಗಾರರು ಇಂದು (ಜೂ.4) ಮುಂಜಾನೆ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದರು. ವಿಮಾನ ನಿಲ್ದಾಣದಿಂದ ವಿಶೇಷ ಬಸ್​ನಲ್ಲಿ ಟೀಮ್ ಇಂಡಿಯಾ ಆಟಗಾರರು ದೆಹಲಿಯ ಐಟಿಸಿ ಮೌರ್ಯ ಹೋಟೆಲ್‌ ತೆರಳಿದರು. ಈ ವೇಳೆ ವಿಶ್ವ ಚಾಂಪಿಯನ್ನರನ್ನು ಸ್ವಾಗತಿಸಲು ಡೋಲು ಡಂಗುರದ ವಿಶೇಷ ವ್ಯವಸ್ಥೆ ಮಾಡಲಾಗಿತ್ತು.

ಇತ್ತ ಬಸ್​ನಿಂದ ಟೀಮ್ ಇಂಡಿಯಾ ಆಟಗಾರರು ಇಳಿಯುತ್ತಿದ್ದಂತೆ ಡೋಲು ಬಜಾನ ಶುರುವಾಗಿದೆ. ಇದೇ ವೇಳೆ ಟೀಮ್ ಇಂಡಿಯಾ ಆಟಗಾರ ಹಾರ್ದಿಕ್ ಪಾಂಡ್ಯ ಕುಣಿಯಲಾರಂಭಿಸಿದರು. ಆ ಬಳಿಕ ಬಂದ ಸೂರ್ಯಕುಮಾರ್ ಯಾದವ್ ಹಾಗೂ ಯಶಸ್ವಿ ಜೈಸ್ವಾಲ್ ಕೂಡ ಸ್ಟೆಪ್ಸ್ ಹಾಕುವ ಮೂಲಕ ಗಮನ ಸೆಳೆದರು.

ಇನ್ನು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೂಡ ಕುಣಿಯುತ್ತಾ ಆಗಮಿಸಿದ್ದು ವಿಶೇಷವಾಗಿತ್ತು. ಹಾಗೆಯೇ ಭಾರತ ತಂಡ ವಿಕೆಟ್ ಕೀಪರ್ ರಿಷಭ್ ಪಂತ್ ಹಾಗೂ ಮೊಹಮ್ಮದ್ ಸಿರಾಜ್ ಕೂಡ ನೃತ್ಯ ಮಾಡುವ ಮೂಲಕ ಸಂಭ್ರಮಿಸಿದರು. ಇದೀಗ ಭಾರತೀಯ ಆಟಗಾರರ ಸಂಭ್ರಮದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆ ಪಡೆದುಕೊಂಡಿದೆ.

ಟೀಮ್ ಇಂಡಿಯಾ ಆಟಗಾರರ ಡ್ಯಾನ್ಸ್ ವಿಡಿಯೋ:

ಸಂಜೆ ವಿಜಯೋತ್ಸವ:

ಗುರುವಾರ ಸಂಜೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಟೀಮ್ ಇಂಡಿಯಾ ವಿಜಯೋತ್ಸವ ಆಚರಿಸಲಿದೆ. ಮುಂಬೈನ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್‌ನಿಂದ ಮೆರವಣಿಗೆ ಮೂಲಕ ತೆರೆದ ಬಸ್​ನಲ್ಲಿ ಟೀಮ್ ಇಂಡಿಯಾ ವಾಂಖೆಡೆ ಸ್ಟೇಡಿಯಂಗೆ ಆಗಮಿಸಲಿದ್ದು, ಈ ಬಳಿಕ ಸ್ಟೇಡಿಯಂನಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಅದ್ದೂರಿ ಕಾರ್ಯಕ್ರಮ ನಡೆಯಲಿದೆ.

ಇದನ್ನೂ ಓದಿ: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಐವರು ಆಟಗಾರರು..!

ಈ ವಿಜಯೋತ್ಸವದ ಮೆರವಣಿಗೆಯನ್ನು ಸ್ಟಾರ್ ಸ್ಪೋರ್ಟ್ಸ್​ ಮತ್ತು ಸ್ಪೋರ್ಟ್ಸ್ 18 ಚಾನೆಲ್​ನಲ್ಲಿ ನೇರ ಪ್ರಸಾರ ಇರಲಿದೆ. ಹಾಗೆಯೇ ಜಿಯೋ ಸಿನಿಮಾ ಆ್ಯಪ್​ನಲ್ಲಿ ಈ ಕಾರ್ಯಕ್ರಮವನ್ನು ಲೈವ್ ವೀಕ್ಷಿಸಬಹುದು.

Published On - 9:10 am, Thu, 4 July 24

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ