AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್ ಸರಣಿಗೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಅಲಭ್ಯ..!

India vs England: ಐರ್ಲೆಂಡ್ ವಿರುದ್ಧದ ಟಿ20 ಸರಣಿ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಜುಲೈ 1 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಮೊದಲಿಗೆ 5 ಮ್ಯಾಚ್​ಗಳ ಟಿ20 ಸರಣಿಯನ್ನು ಆಡಲಾಗುತ್ತದೆ. ಇದಾದ ಬಳಿಕ ಭಾರತ ಮತ್ತು ಇಂಗ್ಲೆಂಡ್ ನಡುವೆ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ.

ಇಂಗ್ಲೆಂಡ್ ಸರಣಿಗೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಅಲಭ್ಯ..!
Team IndiaImage Credit source: BCCI
ಝಾಹಿರ್ ಯೂಸುಫ್
|

Updated on: Jun 20, 2026 | 2:26 PM

Share

ಭಾರತ ಮತ್ತು ಇಂಗ್ಲೆಂಡ್ ನಡುವಣ ಸರಣಿಯು ಜುಲೈ 1 ರಿಂದ ಶುರುವಾಗಲಿದೆ. ಈ ಸರಣಿಯಿಂದ ಟೀಮ್ ಇಂಡಿಯಾದ ಸ್ಟಾರ್ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ಹೊರಗುಳಿಯಲಿದ್ದಾರೆ. ಗಾಯದ ಸಮಸ್ಯೆಯಿಂದ ಸಂಪೂರ್ಣ ಚೇತರಿಸಿಕೊಳ್ಳಲು ಪಾಂಡ್ಯ ಮತ್ತಷ್ಟು ಸಮಯ ತೆಗೆದುಕೊಳ್ಳಲಿದ್ದು, ಹೀಗಾಗಿ ಇಂಗ್ಲೆಂಡ್ ವಿರುದ್ಧದ ಸರಣಿಗೆ ಅವರನ್ನು ಆಯ್ಕೆ ಮಾಡದಿರಲು ಬಿಸಿಸಿಐ ಆಯ್ಕೆ ಸಮಿತಿ ನಿರ್ಧರಿಸಿದೆ ಎಂದು ವರದಿಯಾಗಿದೆ.

2026ರ ಐಪಿಎಲ್ ಪಂದ್ಯದ ವೇಳೆ ಹಾರ್ದಿಕ್ ಪಾಂಡ್ಯ ಬೆನ್ನುನೋವಿನ ಸಮಸ್ಯೆಗೆ ಒಳಗಾಗಿದ್ದರು. ಈ ಸಮಸ್ಯೆಯ ಕಾರಣ ಅವರು ಮುಂಬೈ ಇಂಡಿಯನ್ಸ್ ತಂಡದ ಕೆಲ ಪಂದ್ಯಗಳನ್ನು ತಪ್ಪಿಸಿಕೊಂಡಿದ್ದರು. ಇದಾಗ್ಯೂ ಅವರನ್ನು ಅಫ್ಘಾನಿಸ್ತಾನ್ ವಿರುದ್ಧದ ಏಕದಿನ ಸರಣಿಗೆ ಆಯ್ಕೆ ಮಾಡಲಾಗಿತ್ತು.

ಆದರೆ ಸಂಪೂರ್ಣ ಫಿಟ್​ನೆಸ್ ಸಾಧಿಸದ ಕಾರಣ ಅಫ್ಘಾನಿಸ್ತಾನ್ ವಿರುದ್ಧದ ಏಕದಿನ ಸರಣಿಯಿಂದ ಅವರನ್ನು ಕೈ ಬಿಡಲಾಗಿತ್ತು. ಆದಾಗ್ಯೂ ಅವರು ಇಂಗ್ಲೆಂಡ್ ವಿರುದ್ಧದ ಸರಣಿಗೆ ಆಯ್ಕೆಯಾಗಲಿದ್ದಾರೆ ಎನ್ನಲಾಗಿತ್ತು. ಅದರಂತೆ ಬೆಂಗಳೂರಿನ ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್ ಕೇಂದ್ರದಲ್ಲಿ ತರಬೇತಿ ಮತ್ತು ರಿಹ್ಯಾಬ್ ಪ್ರಕ್ರಿಯೆಗೆ ಒಳಗಾಗಿದ್ದರು.

ಆದರೀಗ ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್​ನಲ್ಲಿ ನಡೆಸಲಾದ ಫಿಟ್​ನೆಸ್ ಟೆಸ್ಟ್​ನಲ್ಲಿ ಹಾರ್ದಿಕ್ ಪಾಂಡ್ಯ ಮತ್ತೆ ವಿಫಲರಾಗಿದ್ದಾರೆ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಅವರನ್ನು ಪರಿಗಣಿಸದಿರಲು ನಿರ್ಧರಿಸಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

10 ಓವರ್​ ಟಾರ್ಗೆಟ್:

ಮುಂಬರುವ ಏಕದಿನ ವಿಶ್ವಕಪ್​ ಅನ್ನು ದೃಷ್ಟಿಯಲ್ಲಿಟ್ಟುಕೊಂಡು ಹಾರ್ದಿಕ್ ಪಾಂಡ್ಯ ಅವರ ಫಿಟ್​ನೆಸ್ ಟೆಸ್ಟ್​ ನಡೆಯುತ್ತಿದೆ. ಇಲ್ಲಿ ಮುಖ್ಯವಾಗಿ ಪಾಂಡ್ಯ ಅವರಿಗೆ 10 ಓವರ್​ಗಳ ಟಾರ್ಗೆಟ್ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಅಂದರೆ ಬೆನ್ನು ನೋವಿನ ಸಮಸ್ಯೆಯ ಕಾರಣ ಹಾರ್ದಿಕ್ ಪಾಂಡ್ಯಗೆ ದೀರ್ಘಾವಧಿಯವರೆಗೆ ಬೌಲಿಂಗ್ ಮಾಡಲು ಸಾಧ್ಯವಾಗುತ್ತಿಲ್ಲ. ಇತ್ತೀಚಿನ ತರಬೇತಿ ಅವಧಿಗಳಲ್ಲಿ ಅವರು ಪೂರ್ಣ 10 ಓವರ್‌ಗಳ ಬೌಲಿಂಗ್ ಕೋಟಾವನ್ನು ಪೂರೈಸಲು ವಿಫಲರಾಗಿದ್ದಾರೆ ಎಂದು ತಿಳಿದು ಬಂದಿದೆ.

ಇದೇ ಕಾರಣದಿಂದಾಗಿ ಸಂಪೂರ್ಣ ಫಿಟ್​ನೆಸ್ ಸಾಧಿಸಿದ ಬಳಿಕ ಅವರನ್ನು ಆಲ್​ರೌಂಡರ್ ಆಗಿ ಏಕದಿನ ತಂಡಕ್ಕೆ ಆಯ್ಕೆ ಮಾಡಲು ನಿರ್ಧರಿಸಲಾಗಿದೆ. ಅಂದರೆ ಮುಂಬರುವ ದಿನಗಳಲ್ಲಿ ಹಾರ್ದಿಕ್ ಪಾಂಡ್ಯ ಫಿಟ್​ನೆಸ್ ಸಾಧಿಸಿದರೆ 2027ರ ಏಕದಿನ ವಿಶ್ವಕಪ್ ಆಡುವುದು ಖಚಿತ.

ಇದರ ನಡುವೆ ನಡೆಯುವ ಟಿ20 ಸರಣಿಗಳ ವೇಳೆ ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ನೀಡಲು ಬಿಸಿಸಿಐ ಆಯ್ಕೆ ಸಮಿತಿ ಪ್ಲ್ಯಾನ್ ರೂಪಿಸಿದೆ. ಇದೇ ಕಾರಣದಿಂದಾಗಿ ಅವರನ್ನು ಐರ್ಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗಳಿಗೆ ಆಯ್ಕೆ ಮಾಡಲಾಗಿಲ್ಲ.  ಇನ್ನು ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಶೀಘ್ರದಲ್ಲೇ ಭಾರತ ತಂಡವನ್ನು ಪ್ರಕಟಿಸಲಾಗುವುದು ಬಿಸಿಸಿಐ ತಿಳಿಸಿದೆ. ಈ ತಂಡದಲ್ಲಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಳ್ಳುವುದಿಲ್ಲ ಎಂಬುದು ಬಹುತೇಕ ಖಚಿತವಾಗಿದೆ.

ಇದನ್ನೂ ಓದಿ: Virat Kohli: ಕಿಂಗ್ ಕೊಹ್ಲಿ ಕಂಬ್ಯಾಕ್ ಯಾವಾಗ?

ಇಂಗ್ಲೆಂಡ್ ಟಿ20 ಸರಣಿಗೆ ಭಾರತ ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ,  ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ, ಪ್ರಿನ್ಸ್ ಯಾದವ್, ವೈಭವ್ ಸೂರ್ಯವಂಶಿ, ಪ್ರಸಿದ್ಧ್ ಕೃಷ್ಣ.

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್