Hardik Pandya: ಗಂಗೂಲಿ ಮಾತು ಮೀರಿದ್ರಾ ಪಾಂಡ್ಯ: ರಣಜಿ ಕ್ರಿಕೆಟ್​ನಿಂದ ದೂರ ಉಳಿದ ಹಾರ್ದಿಕ್

Hardik Pandya: 28ರ ಹರೆಯದ ಹಾರ್ದಿಕ್ ಪಾಂಡ್ಯ ಸಂಪೂರ್ಣ ಫಿಟ್ ಆಗಿಲ್ಲದ ಕಾರಣ ಬೌಲಿಂಗ್ ನಿಂದ ದೂರ ಉಳಿದಿದ್ದಾರೆ. ಟಿ20 ವಿಶ್ವಕಪ್‌ನಲ್ಲೂ ಅವರು ಆರಂಭಿಕ ಪಂದ್ಯಗಳಲ್ಲಿ ಬೌಲಿಂಗ್ ಮಾಡಿರಲಿಲ್ಲ.

Hardik Pandya: ಗಂಗೂಲಿ ಮಾತು ಮೀರಿದ್ರಾ ಪಾಂಡ್ಯ: ರಣಜಿ ಕ್ರಿಕೆಟ್​ನಿಂದ ದೂರ ಉಳಿದ ಹಾರ್ದಿಕ್
Hardik Pandya
Follow us
TV9 Web
| Updated By: ಝಾಹಿರ್ ಯೂಸುಫ್

Updated on: Feb 07, 2022 | 3:11 PM

ಹಾರ್ದಿಕ್ ಪಾಂಡ್ಯ 2022 ರ ರಣಜಿ ಟ್ರೋಫಿಯಲ್ಲಿ ಆಡದಿರಲು ನಿರ್ಧರಿಸಿದ್ದಾರೆ . ಫೆಬ್ರವರಿ 10ರಿಂದ ಆರಂಭವಾಗಲಿರುವ ಈ ಟೂರ್ನಿಗೆ ಪ್ರಕಟಿಸಲಾಗಿರುವ ಬರೋಡಾ ತಂಡದಲ್ಲಿ ಅವರ ಹೆಸರಿಲ್ಲ. ಬರೋಡಾ ಕ್ರಿಕೆಟ್ ಸಂಸ್ಥೆ ರಣಜಿ ಟ್ರೋಫಿಗೆ 20 ಮಂದಿಯ ತಂಡವನ್ನು ಪ್ರಕಟಿಸಿದೆ. ಬರೋಡಾ ರಣಜಿ ತಂಡದ ನಾಯಕರಾಗಿ ಕೇದಾರ್ ದೇವಧರ್ ಅವರನ್ನು ನೇಮಿಸಲಾಗಿದೆ. ಹಾಗೆಯೇ ತಂಡದ ಉಪನಾಯಕನಾಗಿ ವಿಷ್ಣು ಸೋಲಂಕಿ ಅವರನ್ನು ಆಯ್ಕೆ ಮಾಡಲಾಗಿದೆ. ಹಾರ್ದಿಕ್ ಪಾಂಡ್ಯ ಬಹಳ ದಿನಗಳಿಂದ ಭಾರತ ತಂಡದಿಂದ ಹೊರಗುಳಿದಿದ್ದರು . ಟಿ20 ವಿಶ್ವಕಪ್‌ನಲ್ಲಿ ಕೊನೆಯ ಬಾರಿಗೆ ಟೀಮ್ ಇಂಡಿಯಾದ ಭಾಗವಾಗಿದ್ದರು. ಇದಾದ ಬಳಿಕ ಬೆನ್ನುನೋವು ಹಾಗೂ ಫಿಟ್‌ನೆಸ್‌ನಿಂದಾಗಿ ಆಯ್ಕೆಯಿಂದ ದೂರ ಉಳಿದಿದ್ದರು.

ಈ ಹಿಂದೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ಹಾರ್ದಿಕ್ ಪಾಂಡ್ಯ ರಣಜಿ ಟ್ರೋಫಿಯಲ್ಲಿ ಆಡುವ ನಿರೀಕ್ಷೆಯಿದೆ ಎಂದು ಹೇಳಿದ್ದರು. ಗಂಗೂಲಿ ಅವರು, ‘ಹಾರ್ದಿಕ್ ಗಾಯಗೊಂಡಿದ್ದು, ಸಂಪೂರ್ಣ ಚೇತರಿಸಿಕೊಳ್ಳಲು ಅವರಿಗೆ ವಿರಾಮ ನೀಡಲಾಗಿದೆ. ಇದರಿಂದಾಗಿ ಅವರು ದೀರ್ಘಕಾಲದವರೆಗೆ ಭಾರತೀಯ ಕ್ರಿಕೆಟ್‌ಗೆ ಸೇವೆ ಸಲ್ಲಿಸಬಹುದು. ನಾನು ಅವರನ್ನು ರಣಜಿ ಟ್ರೋಫಿಯಲ್ಲಿ ನೋಡುತ್ತೇನೆ ಎಂದು ನನಗೆ ಖಾತ್ರಿಯಿದೆ. ಅವರು ಪರಿಪೂರ್ಣ ಆಲ್​ರೌಂಡರ್ ಆಗಿ ಕಂಬ್ಯಾಕ್ ಮಾಡಲಿದ್ದಾರೆ ಎಂದು ಗಂಗೂಲಿ ಹೇಳಿದ್ದರು. ಆದರೆ ಇದೀಗ ಬರೋಡಾ ತಂಡದಲ್ಲಿ ಹಾರ್ದಿಕ್ ಪಾಂಡ್ಯ ಹೆಸರಿಲ್ಲದಿರುವುದು ಅಚ್ಚರಿಗೆ ಕಾರಣವಾಗಿದೆ.

ಐಪಿಎಲ್​ನತ್ತ ಫುಲ್ ಫೋಕಸ್: 28ರ ಹರೆಯದ ಹಾರ್ದಿಕ್ ಪಾಂಡ್ಯ ಸಂಪೂರ್ಣ ಫಿಟ್ ಆಗಿಲ್ಲದ ಕಾರಣ ಬೌಲಿಂಗ್ ನಿಂದ ದೂರ ಉಳಿದಿದ್ದಾರೆ. ಟಿ20 ವಿಶ್ವಕಪ್‌ನಲ್ಲೂ ಅವರು ಆರಂಭಿಕ ಪಂದ್ಯಗಳಲ್ಲಿ ಬೌಲಿಂಗ್ ಮಾಡಲಿಲ್ಲ. ಇದರಿಂದಾಗಿ ಅವರ ಆಯ್ಕೆ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ಇದರ ಬೆನ್ನಲ್ಲೇ ಅವರನ್ನು ತಂಡದಿಂದ ಕೈ ಬಿಡಲಾಗಿತ್ತು. ಇದೀಗ ಐಪಿಎಲ್ ಮೂಲಕ ಹಾರ್ದಿಕ್ ಪಾಂಡ್ಯ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳುವ ಇಂಗಿತದಲ್ಲಿದ್ದಾರೆ. ಅಹಮದಾಬಾದ್ ತಂಡದ ನಾಯಕರಾಗಿ ಆಯ್ಕೆಯಾಗಿರುವ ಪಾಂಡ್ಯ ಈ ಮೂಲಕ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ. ಇದಕ್ಕಾಗಿ ಕಠಿಣ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

ಬರೋಡಾ ತಂಡ ಇಂತಿದೆ ಕೇದಾರ್ ದೇವಧರ್ (ನಾಯಕ), ವಿಷ್ಣು ವಿನೋದ್, ಪ್ರತ್ಯೂಷ್ ಕುಮಾರ್, ಶಿವಾಲಿಕ್ ಶರ್ಮಾ, ಕೃನಾಲ್ ಪಾಂಡ್ಯ, ಅಭಿಮನ್ಯು ಸಿಂಗ್ ರಜಪೂತ್, ಧ್ರುವ ಪಟೇಲ್, ಮಿತೇಶ್ ಪಟೇಲ್, ಲುಕ್ಮಾನ್ ಮೇರಿವಾಲಾ, ಬಾಬಾ ಸಫೀ ಖಾನ್ ಪಠಾಣ್ (ವಿಕೆಟ್ ಕೀಪರ್), ಅತಿತ್ ಶೇಠ್, ಭಾರ್ಗವ ಭಟ್, ಪಾರ್ಥ್ ಕೊಹ್ಲಿ, ಶಾಶ್ವತ್ ರಾವತ್, ಶಾಶ್ವತ್ ರಾವತ್ ಸೊಪಾರಿಯಾ, ಕಾರ್ತಿಕ್ ಕಾಕಡೆ, ಗುರ್ಜಿಂದರ್ ಸಿಂಗ್ ಮಾನ್, ಜ್ಯೋತಿಸ್ನಿಲ್ ಸಿಂಗ್, ನಿನಾದ್ ರಥ್ವಾ ಮತ್ತು ಅಕ್ಷಯ್ ಮೋರೆ.

ಇದನ್ನೂ ಓದಿ: Yuzvendra Chahal: ವಿಕೆಟ್​ಗಳ ಶತಕ ಪೂರೈಸಿದ ಚಹಾಲ್

ಇದನ್ನೂ ಓದಿ: Rohit Sharma: ಸಚಿನ್ ದಾಖಲೆ ಮುರಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ

ಇದನ್ನೂ ಓದಿ: Lata Mangeshkar: ಎಲ್ಲರೂ ಕೈಬಿಟ್ಟಾಗ ಟೀಮ್ ಇಂಡಿಯಾ ಕೈ ಹಿಡಿದಿದ್ದ ಲತಾ ಮಂಗೇಶ್ಕರ್..!

(Hardik Pandya skips Ranji Trpohy 2022 ahead of IPL)

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ