AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SMAT 2025: ಹಾರ್ದಿಕ್ ಪಾಂಡ್ಯ ಸಲುವಾಗಿ ಇದ್ದಕ್ಕಿದ್ದಂತೆ ಬೇರೆಡೆಗೆ ಸ್ಥಳಾಂತರಗೊಂಡ ಪಂದ್ಯ

Hardik Pandya Fan Frenzy: ಸೈಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿಯಲ್ಲಿ ಹಾರ್ದಿಕ್ ಪಾಂಡ್ಯ ಭಾಗವಹಿಸುವಿಕೆಯಿಂದ ಅಭಿಮಾನಿಗಳ ದಟ್ಟಣೆ ಹೆಚ್ಚಾಗಿದೆ. ಭದ್ರತಾ ಕಾರಣಗಳಿಂದ ಹಾರ್ದಿಕ್ ಆಡಲಿದ್ದ ಬರೋಡಾ vs ಗುಜರಾತ್ ಪಂದ್ಯವನ್ನು ಜಿಮ್ಖಾನಾದಿಂದ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣಕ್ಕೆ ಸ್ಥಳಾಂತರಿಸಲಾಯಿತು. ಈ ಪಂದ್ಯದಲ್ಲಿ ಪಾಂಡ್ಯ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದರು.

SMAT 2025: ಹಾರ್ದಿಕ್ ಪಾಂಡ್ಯ ಸಲುವಾಗಿ ಇದ್ದಕ್ಕಿದ್ದಂತೆ ಬೇರೆಡೆಗೆ ಸ್ಥಳಾಂತರಗೊಂಡ ಪಂದ್ಯ
Hardik Pandya
ಪೃಥ್ವಿಶಂಕರ
|

Updated on: Dec 04, 2025 | 9:05 PM

Share

ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ ಸೈಯದ್ ಮುಷ್ತಾಕ್ ಅಲಿ ಟಿ20 (Syed Mushtaq Ali T20) ಟ್ರೋಫಿಯಲ್ಲಿ ಟೀಂ ಇಂಡಿಯಾದ ಸ್ಟಾರ್ ಆಟಗಾರರು ಕೂಡ ಆಡುತ್ತಿದ್ದಾರೆ. ಬಿಸಿಸಿಐ (BCCI) ನಿಯಮ ಹೊರಡಿಸಿದ ಬಳಿಕ ರಾಷ್ಟ್ರೀಯ ತಂಡದಿಂದ ಹೊರಗಿರುವ ಪ್ರತಿಯೊಬ್ಬರು ದೇಶೀ ಟೂರ್ನಿಯಲ್ಲಿ ಕಣಕ್ಕಿಳಿಯುತ್ತಿದ್ದಾರೆ. ಇದರಿಂದಾಗಿ ದೇಶಿ ಟೂರ್ನಿಗಳನ್ನು ನೋಡಲು ಕ್ರೀಡಾಂಗಣಕ್ಕೆ ಬರುವ ಅಭಿಮಾನಿಗಳ ಸಂಖ್ಯೆಯೂ ಹೆಚ್ಚಾಗಿದೆ. ಆದರೆ ಅಭಿಮಾನಿಗಳ ಆಗಮನವೇ ಆಯೋಜಕರಿಗೆ ದೊಡ್ಡ ತಲೆನೋವು ತಂದಿದ್ದು, ಮುನ್ನೇಚರಿಕಾ ಕ್ರಮವಾಗಿ ಪಂದ್ಯವನ್ನು ಬೇರೆಡೆಗೆ ಸ್ಥಳಾಂತರಿಸಬೇಕಾಗಿದೆ.

ಪಂದ್ಯ ಬೇರೆಡೆಗೆ ಸ್ಥಳಾಂತರ

ವಾಸ್ತವವಾಗಿ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಬರೋಡಾ ಹಾಗೂ ಗುಜರಾತ್ ನಡುವಿನ ಪಂದ್ಯ ಹೈದರಾಬಾದ್​ನ ಜಿಮ್ಖಾನಾ ಮೈದಾನದಲ್ಲಿ ನಡೆಯಬೇಕಾಗಿತ್ತು. ಆದರೆ ಪಂದ್ಯವನ್ನು ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣಕ್ಕೆ ಸ್ಥಳಾಂತರಿಸಲಾಯಿತು. ಇದಕ್ಕೆ ಕಾರಣ ಬರೋಡಾ ತಂಡದ ಪರ ಕಣಕ್ಕಿಳಿದಿದ್ದ ಹಾರ್ದಿಕ್ ಪಾಂಡ್ಯ. ವಾಸ್ತವವಾಗಿ ಹಾರ್ದಿಕ್ ಪಾಂಡ್ಯ ಕೂಡ ಈ ಟೂರ್ನಿಯಲ್ಲಿ ಆಡುತ್ತಿದ್ದು, ಅವರನ್ನು ನೋಡಲು ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿ ಕ್ರೀಡಾಂಗಣಕ್ಕೆ ಬರುತ್ತಿದ್ದಾರೆ. ಅಲ್ಲದೆ ಹಾರ್ದಿಕ್​ ಮೈದಾನದಲ್ಲಿದ್ದಾಗ ಅಭಿಮಾನಿಗಳು ಕೂಡ ಮೈದಾನಕ್ಕೆ ಬಂದು ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಯತ್ನಿಸುತ್ತಿದ್ದಾರೆ. ಇದು ಆಯೋಜಕರಿಗೆ ದೊಡ್ಡ ತಲೆನೋವಾಗಿದೆ. ಹೀಗಾಗಿ ಪಂದ್ಯವನ್ನು ಸ್ಥಳಾಂತರ ಮಾಡಿದ್ದಾರೆ.

ಸಂಘಟಕರ ಪ್ರಕಾರ, ಹಾರ್ದಿಕ್ ಪಾಂಡ್ಯ ಅವರನ್ನು ನೋಡುವ ಸಲುವಾಗಿ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿ ಮೈದಾನಕ್ಕೆ ಬಂದಿದ್ದರು. ಆದ್ದರಿಂದ, ಭದ್ರತಾ ಕಾರಣಗಳಿಂದಾಗಿ, ಬರೋಡಾ ಹಾಗೂ ಗುಜರಾತ್ ನಡುವಿನ ಪಂದ್ಯವನ್ನು ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣಕ್ಕೆ ಸ್ಥಳಾಂತರಿಸಬೇಕಾಯಿತು. ಪಂದ್ಯದ ಸಮಯದಲ್ಲಿ ಯಾವುದೇ ತೊಂದರೆಗಳನ್ನು ತಪ್ಪಿಸಲು ಮತ್ತು ಪಂದ್ಯವು ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

SMAT 2025: ಹಾರ್ದಿಕ್ ಪಾಂಡ್ಯ ಅದ್ಭುತ ಬೌಲಿಂಗ್; 40 ಎಸೆತಗಳಲ್ಲಿ ಪಂದ್ಯ ಗೆದ್ದ ಬರೋಡಾ

ಹಾರ್ದಿಕ್ ಪಾಂಡ್ಯ ಅದ್ಭುತ ಬೌಲಿಂಗ್

ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದರು. ಹಾರ್ದಿಕ್ ಪಾಂಡ್ಯ ಅವರ ಈ ಪ್ರದರ್ಶನದಿಂದಾಗಿ ಬರೋಡಾ, ಗುಜರಾತ್ ತಂಡವನ್ನು 8 ವಿಕೆಟ್‌ಗಳಿಂದ ಸೋಲಿಸಿತು. ಬರೋಡಾ ಕೇವಲ 40 ಎಸೆತಗಳಲ್ಲಿ ಜಯಗಳಿಸಿತು. ಹಾರ್ದಿಕ್ ಪಾಂಡ್ಯ ನಾಲ್ಕು ಓವರ್‌ಗಳಲ್ಲಿ ಕೇವಲ 16 ರನ್‌ಗಳನ್ನು ಬಿಟ್ಟುಕೊಟ್ಟು ಒಂದು ವಿಕೆಟ್ ಪಡೆದ ಮೂಲಕ ಪಂದ್ಯದಲ್ಲಿ ಪ್ರಾಬಲ್ಯ ಸಾಧಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ