AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಹಾರ್ದಿಕ್ ಪಾಂಡ್ಯ ಸೇಫ್: ಇಬ್ಬರಿಗೆ ಖಡಕ್ ಎಚ್ಚರಿಕೆ!

Mumbai Indians: ಐದು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿರುವ ಮುಂಬೈ ಇಂಡಿಯನ್ಸ್ ತಂಡಕ್ಕೆ ಈ ಬಾರಿಯ ಐಪಿಎಲ್ ಅಭಿಯಾನವು ದುಃಸ್ವಪ್ನವಾಗಿ ಪರಿಣಮಿಸಿದೆ. ಸ್ಟಾರ್ ಆಟಗಾರರ ದಂಡೇ ಇದ್ದರೂ ಮೈದಾನದಲ್ಲಿ ಮಾತ್ರ ತಂಡವು ತನ್ನ ಹಳೆಯ ಲಯವನ್ನು ಕಂಡುಕೊಳ್ಳಲು ವಿಫಲವಾಗಿದೆ. ಪರಿಣಾಮ 10 ಪಂದ್ಯಗಳಲ್ಲಿ 7 ಮ್ಯಾಚ್​​ಗಳಲ್ಲಿ ಸೋಲನುಭವಿಸಿದೆ.

IPL 2026: ಹಾರ್ದಿಕ್ ಪಾಂಡ್ಯ ಸೇಫ್: ಇಬ್ಬರಿಗೆ ಖಡಕ್ ಎಚ್ಚರಿಕೆ!
Hardik Pandya
ಝಾಹಿರ್ ಯೂಸುಫ್
|

Updated on: May 05, 2026 | 4:23 PM

Share

IPL 2026: ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದಾದ ಮುಂಬೈ ಇಂಡಿಯನ್ಸ್ (MI), 2026ರ ಆವೃತ್ತಿಯಲ್ಲಿ ತನ್ನ ಬಲಿಷ್ಠ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೋರಾಡುತ್ತಿದೆ. ಚಾಂಪಿಯನ್ ಪಟ್ಟಕ್ಕೇರುವ ನೆಚ್ಚಿನ ತಂಡವಾಗಿ ಕಣಕ್ಕಿಳಿದಿದ್ದ ಮುಂಬೈ, ಈ ಸೀಸನ್‌ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿದೆ. ಆಡಿರುವ 10 ಪಂದ್ಯಗಳಲ್ಲಿ ಕೇವಲ 3 ಜಯ ದಾಖಲಿಸಿರುವ ತಂಡವು ಅಂಕಪಟ್ಟಿಯಲ್ಲಿ ಪಾತಾಳಕ್ಕೆ ಕುಸಿದಿದ್ದರೂ, ಮ್ಯಾನೇಜ್‌ಮೆಂಟ್ ಮಾತ್ರ ನಾಯಕತ್ವದ ಬದಲಾವಣೆಗೆ ಮುಂದಾಗದೆ ಹಾರ್ದಿಕ್ ಪಾಂಡ್ಯ ಅವರ ಮೇಲೆ ಅಚಲ ವಿಶ್ವಾಸ ವ್ಯಕ್ತಪಡಿಸಿದೆ.

ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್​ ಕಳಪೆ ಪ್ರದರ್ಶನ ನೀಡುತ್ತಿದ್ದರೂ, ಅವರನ್ನು ಬದಲಿಸುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಅಲ್ಲದೆ ಪಾಂಡ್ಯ ಅವರನ್ನೇ ನಾಯಕನಾಗಿ ಮುಂದುವರಿಸಲು ಎಂಐ ಮ್ಯಾನೇಜ್ಮೆಂಟ್ ನಿರ್ಧರಿಸಿದೆ ಎಂದು ವರದಿಗಳು ತಿಳಿಸಿವೆ.

ಪಾಂಡ್ಯ ಮೇಲಿನ ವಿಶ್ವಾಸ:

ಪ್ರಸಕ್ತ ಸೀಸನ್‌ನಲ್ಲಿ ಮುಂಬೈ ತಂಡ ಆಡಿದ 10 ಪಂದ್ಯಗಳಲ್ಲಿ ಕೇವಲ 3ರಲ್ಲಿ ಜಯಗಳಿಸಿ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಹಾರ್ದಿಕ್ ಪಾಂಡ್ಯ ಅವರ ವೈಯಕ್ತಿಕ ಪ್ರದರ್ಶನ ಮತ್ತು ನಾಯಕತ್ವದ ನಿರ್ಧಾರಗಳು ಟೀಕೆಗೆ ಗುರಿಯಾಗಿದ್ದರೂ, ಫ್ರಾಂಚೈಸಿಯು ಈ ಹಂತದಲ್ಲಿ ನಾಯಕತ್ವ ಬದಲಾವಣೆಗೆ ಮುಂದಾಗುತ್ತಿಲ್ಲ. ಹಾರ್ದಿಕ್ ಪಾಂಡ್ಯ ಅವರ ಬೆನ್ನುನೋವಿನ ಸಮಸ್ಯೆಯ ನಡುವೆಯೂ ಅವರ ಮೇಲೆಯೇ ಭರವಸೆ ಇಡಲಾಗಿದೆ.

ಇಬ್ಬರು ಆಟಗಾರರಿಗೆ ಎಚ್ಚರಿಕೆ:

ಮುಂಬೈ ಇಂಡಿಯನ್ಸ್ ತಂಡದ ಕಳಪೆ ಪ್ರದರ್ಶನಕ್ಕೆ ಕೇವಲ ನಾಯಕನನ್ನೇ ಹೊಣೆ ಮಾಡದ ಮ್ಯಾನೇಜ್‌ಮೆಂಟ್, ಸ್ಟಾರ್ ಬ್ಯಾಟರ್‌ಗಳಾದ ಸೂರ್ಯಕುಮಾರ್ ಯಾದವ್ ಮತ್ತು ತಿಲಕ್ ವರ್ಮಾ ಅವರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ ಎಂದು ತಿಳಿದುಬಂದಿದೆ.

  • ಸೂರ್ಯಕುಮಾರ್ ಯಾದವ್: ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ರನ್ ಗಳಿಸಲು ವಿಫಲರಾಗಿರುವ ಸೂರ್ಯಕುಮಾರ್ ಅವರಿಗೆ ಮುಂಬೈ ಇಂಡಿಯನ್ಸ್ ಮ್ಯಾನೇಜ್ಮೆಂಟ್​ ಕಡೆಯಿಂದ ಎಚ್ಚರಿಕೆ ಸಿಕ್ಕಿದೆ. ಏಕೆಂದರೆ ಈ ಬಾರಿ ಪ್ರತಿ ಪಂದ್ಯದಲ್ಲೂ ಕಣಕ್ಕಿಳಿದಿರುವ ಅವರು ಕೇವಲ 19.50 ರ ಸರಾಸರಿಯಲ್ಲಿ ರನ್ ಗಳಿಸಿದ್ದಾರೆ. ಪಾಂಡ್ಯ ಅನುಪಸ್ಥಿತಿಯಲ್ಲಿ ಅವರು ತಂಡವನ್ನು ಮುನ್ನಡೆಸಿದ್ದರೂ, ಬ್ಯಾಟಿಂಗ್‌ನಲ್ಲಿ ಲಯ ಕಂಡುಕೊಳ್ಳಲು ಪರದಾಡುತ್ತಿದ್ದಾರೆ.
  • ತಿಲಕ್ ವರ್ಮಾ: ಯುವ ಪ್ರತಿಭಾವಂತ ಎಡಗೈ ದಾಂಡಿಗ ತಿಲಕ್ ವರ್ಮಾ ಈ ಬಾರಿ ಮುಂಬೈ ಇಂಡಿಯನ್ಸ್ ಪರ ಶತಕ ಸಿಡಿಸಿದ್ದರು. ಈ ಶತಕದ ಹೊರತಾಗಿಯೂ ಅವರು ಕಳೆದ 10 ಪಂದ್ಯಗಳಿಂದ ಕಲೆಹಾಕಿರುವ ಒಟ್ಟು ಸ್ಕೋರ್ ಕೇವಲ 204 ರನ್​ಗಳು. ಹೀಗಾಗಿಯೇ ತಿಲಕ್ ವರ್ಮಾ ಕೂಡ ಮುಂಬೈ ಇಂಡಿಯನ್ಸ್ ಮ್ಯಾನೇಜ್ಮೆಂಟ್​ನ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಇತ್ತ ಪ್ಲೇಯಿಂಗ್ ಇಲೆವೆನ್​ನ ಖಾಯಂ ಸದಸ್ಯರಾಗಿರುವ ಸೂರ್ಯಕುಮಾರ್ ಯಾದವ್ ಹಾಗೂ ತಿಲಕ್ ವರ್ಮಾರ ಕಳಪೆ ಪ್ರದರ್ಶನವು ಮುಂಬೈ ಇಂಡಿಯನ್ಸ್ ಪಾಲಿಗೆ ಹೊರೆಯಾಗಿ ಮಾರ್ಪಟ್ಟಿದೆ. ಹೀಗಾಗಿಯೇ ಇದೀಗ ಇಬ್ಬರು ಆಟಗಾರರಿಗೆ ಎಚ್ಚರಿಕೆ ನೀಡಲಾಗಿದ್ದು, ಮುಂದಿನ ಪಂದ್ಯದಲ್ಲೂ ಕಳಪೆ ಪ್ರದರ್ಶನ ನೀಡಿದರೆ ಪ್ಲೇಯಿಂಗ್ ಇಲೆವೆನ್​ನಿಂದ ಕೈ ಬಿಡುವ ಸಾಧ್ಯತೆಯಿದೆ.

ಪ್ಲೇ-ಆಫ್ ಕನಸು ಜೀವಂತವೇ?

ಮುಂಬೈ ಇಂಡಿಯನ್ಸ್ ಪ್ಲೇ-ಆಫ್ ರೇಸ್‌ನಲ್ಲಿ ಉಳಿಯಬೇಕಾದರೆ ಮುಂದಿನ ನಾಲ್ಕು ಪಂದ್ಯಗಳಲ್ಲಿ ಕಡ್ಡಾಯವಾಗಿ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಕೇವಲ ಗೆಲುವು ಮಾತ್ರವಲ್ಲದೆ, ಇತರೆ ತಂಡಗಳ ಫಲಿತಾಂಶದ ಮೇಲೆಯೂ ಮುಂಬೈ ಭವಿಷ್ಯ ಅಡಗಿದೆ.

ಇದನ್ನೂ ಓದಿ: RCB ಅಭಿಮಾನಿಗಳಿಗೆ ಬಿಸಿಸಿಐ ಕಡೆಯಿಂದ ಶೀಘ್ರದಲ್ಲೇ ಕಹಿ ಸುದ್ದಿ!

ಒಟ್ಟಾರೆಯಾಗಿ ಹೇಳುವುದಾದರೆ, ಮುಂಬೈ ಇಂಡಿಯನ್ಸ್ ತಂಡವು ಈಗ ಮಾಡು ಇಲ್ಲವೇ ಮಡಿ ಎಂಬಂತಹ ಪರಿಸ್ಥಿತಿಯಲ್ಲಿದೆ. ಹಾರ್ದಿಕ್ ಪಾಂಡ್ಯ ಅವರ ನಾಯಕತ್ವದ ಮೇಲೆ ಮ್ಯಾನೇಜ್‌ಮೆಂಟ್ ಅಚಲ ವಿಶ್ವಾಸ ತೋರಿದ್ದರೂ, ಆ ವಿಶ್ವಾಸವನ್ನು ಉಳಿಸಿಕೊಳ್ಳುವ ಜವಾಬ್ದಾರಿ ಈಗ ಆಟಗಾರರ ಮೇಲಿದೆ. ಅಲ್ಲದೆ ತಮ್ಮ ವೈಯಕ್ತಿಕ ವೈಫಲ್ಯಗಳನ್ನು ಬದಿಗಿಟ್ಟು, ತಂಡದ ಹಿತದೃಷ್ಟಿಯಿಂದ ಎಲ್ಲರೂ ಮುಂದಿನ ಪಂದ್ಯಗಳಲ್ಲಿ ಜವಾಬ್ದಾರಿಯುತ ಆಟವಾಡಬೇಕಿದೆ. ಈ ಆಟದೊಂದಿಗೆ ಮುಂಬೈ ಪಡೆ ಪ್ಲೇಆಫ್​ಗೇರಲಿದೆಯಾ ಎಂಬುದೇ ಈಗ ಕುತೂಹಲ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ವಿಜಯ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಅನಂತ್ ಅಂಬಾನಿ ಭೇಟಿ
ವಿಜಯ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಅನಂತ್ ಅಂಬಾನಿ ಭೇಟಿ
‘ಕಾಕ್ರೂಚ್’ಗಳ ಪ್ರತಿಭಟನೆಗೆ ನಟ ಪ್ರಕಾಶ್ ರೈ ಸಾಥ್: ವಿಡಿಯೋ
‘ಕಾಕ್ರೂಚ್’ಗಳ ಪ್ರತಿಭಟನೆಗೆ ನಟ ಪ್ರಕಾಶ್ ರೈ ಸಾಥ್: ವಿಡಿಯೋ
ರಸ್ತೆ ಬದಿ ಅಂಗಡಿಯಲ್ಲಿ 1 ಟೀ ಕುಡಿದು 2 ಸಾವಿರ ರೂ. ಕೊಟ್ಟ DCM ಪರಮೇಶ್ವರ್
ರಸ್ತೆ ಬದಿ ಅಂಗಡಿಯಲ್ಲಿ 1 ಟೀ ಕುಡಿದು 2 ಸಾವಿರ ರೂ. ಕೊಟ್ಟ DCM ಪರಮೇಶ್ವರ್
ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು?
ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು?
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ
ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ
ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು!
ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು!
ಮಂಡ್ಯದಲ್ಲಿ ಮುನಿಸು ಮರೆತ ಮೈತ್ರಿ ನಾಯಕರು
ಮಂಡ್ಯದಲ್ಲಿ ಮುನಿಸು ಮರೆತ ಮೈತ್ರಿ ನಾಯಕರು
ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು!
ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು!