AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hardik Pandya: ಕೊಹ್ಲಿ ಪಡೆಗೆ ಶಾಕ್ ಮೇಲೆ ಶಾಕ್: ಪಾಕ್ ವಿರುದ್ಧದ ಸೋಲಿನ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ಆಘಾತ

Shoulder Injury for Hardik Pandya, IND vs PAK: ಪಾಕಿಸ್ತಾನ ವಿರುದ್ಧ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡ ಹಾರ್ದಿಕ್ ಪಾಂಡ್ಯ ಅಂತಿಮ ಹಂತದಲ್ಲಿ ಬ್ಯಾಟಿಂಗ್ ಮಾಡಲು ಬಂದರು. ಆದರೆ, ಇದೇವೇಳೆ ಹಾರ್ದಿಕ್ ಮತ್ತೊಮ್ಮೆ ಇಂಜುರಿಗೆ ತುತ್ತಾಗಿದ್ದಾರೆ. ಹೀಗಾಗಿ ಮುಂದಿನ ಪಂದ್ಯದಲ್ಲಿ ಇವರು ಲಭ್ಯತೆ ಅನುಮಾನ.

Hardik Pandya: ಕೊಹ್ಲಿ ಪಡೆಗೆ ಶಾಕ್ ಮೇಲೆ ಶಾಕ್: ಪಾಕ್ ವಿರುದ್ಧದ ಸೋಲಿನ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ಆಘಾತ
Team India
TV9 Web
| Updated By: Vinay Bhat|

Updated on: Oct 25, 2021 | 10:09 AM

Share

ಐಸಿಸಿ ಟಿ20 ವಿಶ್ವಕಪ್​ನ (ICC T20 World Cup) ಅಭ್ಯಾಸ ಪಂದ್ಯದಲ್ಲಿ ಅಬ್ಬರಿಸಿ ಬೊಬ್ಬಿರಿದಿದ್ದ ಟೀಮ್ ಇಂಡಿಯಾ (Team India) ಸೂಪರ್ 12 ಹಂತದ ಮೊದಲ ಪಂದ್ಯದಲ್ಲೇ ಹೀನಾಯ ಸೋಲು ಕಂಡಿದೆ. ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ (India vs Pakistan) ವಿರುದ್ಧ ಬ್ಯಾಟಿಂಗ್- ಬೌಲಿಂಗ್​ನಲ್ಲಿ ಎಡವಿದ ವಿರಾಟ್ ಕೊಹ್ಲಿ (Virat Kohli) ಪಡೆ ಗೆಲುವಿನ ದಾಖಲೆ ಮುಂದುವರೆಸುವಲ್ಲಿ ಯಶಸ್ವಿಯಾಗಲಿಲ್ಲ. ಅನೇಕ ಕಡೆಗಳಲ್ಲಿ ಭಾರತೀಯ ಆಟಗಾರರು ತಪ್ಪೆಸಗಿದರು. ಈ ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾಕ್ಕೆ ಮತ್ತೊಂದು ಆಘಾತ ಉಂಟಾಗಿದೆ. ತಂಡದ ಸ್ಟಾರ್ ಆಟಗಾರ ಇಂಜುರಿಗೆ (Hardik Pandya Injury) ತುತ್ತಾಗಿದ್ದು, ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯುವುದು ಅನುಮಾನ ಎಂದು ಹೇಳಲಾಗಿದೆ. ಭಾರತ ಆರಂಭದಲ್ಲೇ ಪ್ರಮುಖ ವಿಕೆಟ್ ಕಳೆದುಕೊಂಡಿದ್ದು ಒಂದುಕಡೆಯಾದರೆ, ಡೆತ್ ಓವರ್​ನಲ್ಲಿ ಅಬ್ಬರಿಸಲು ಯಾವೊಬ್ಬ ಬ್ಯಾಟರ್ ಇರಲಿಲ್ಲ. ಫಿನಿಶಿಂಗ್ ಜವಾಬ್ದಾರಿ ಹೊತ್ತಿದ್ದ ಹಾರ್ದಿಕ್ ಪಾಂಡ್ಯ (Hardik Pandya) ಬಂದ ಬೆನ್ನಿಗೆ ಹಿಂತಿರುಗಿ ಹೋದರು. ನಂತರ ಇವರು ಫೀಲ್ಡಿಂಗ್​ಗೆ ಕೂಡ ಬರಲಿಲ್ಲ.

ಹೌದು, ಪಾಂಡ್ಯ ಹಲವಾರು ದಿನಗಳಿಂದ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದಕ್ಕಾಗಿ ಇವರು ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿಯೂ ಕೆಲ ಪಂದ್ಯಗಳಲ್ಲಿ ಕಣಕ್ಕಿಳಿದಿರಲಿಲ್ಲ. ಅಷ್ಟೇ ಅಲ್ಲದೆ ಆಡಿದ ಯಾವುದೇ ಐಪಿಎಲ್ ಪಂದ್ಯಗದಲ್ಲಿಯೂ ಬೌಲಿಂಗ್ ಮಾಡಲಿಲ್ಲ. ಪಾಕಿಸ್ತಾನ ವಿರುದ್ಧ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡ ಹಾರ್ದಿಕ್ ಅಂತಿಮ ಹಂತದಲ್ಲಿ ಬ್ಯಾಟಿಂಗ್ ಮಾಡಲು ಬಂದರು. ಆದರೆ, 8 ಎಸೆತಗಳಲ್ಲಿ 11 ರನ್ ಬಾರಿಸಿ ಬಾಬರ್​ಗೆ ಕ್ಯಾಚಿತ್ತು ನಿರ್ಗಮಿಸಿದರು. ಇದೇವೇಳೆ ಅವರು ಮತ್ತೊಮ್ಮೆ ಇಂಜುರಿಗೆ ತುತ್ತಾಗಿದ್ದಾರೆ.

ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಮಾಡುವಾಗ ಬಲ ಭುಜದ ಗಾಯಕ್ಕೆ ತುತ್ತಾದರು. ಅವರನ್ನು ಮುನ್ನೆಚ್ಚರಿಕೆಯಾಗಿ ಸ್ಕ್ಯಾನ್ ಮಾಡಲು ಕರೆದೊಯ್ಯಲಾಗಿದೆ. ಹೀಗಾಗಿ ಪಾಕ್ ವಿರುದ್ಧ ಫೀಲ್ಡಿಂಗ್ ಮಾಡಲು ಇವರ ಬದಲು ಇಶಾನ್ ಕಿಶನ್ ಮೈದಾನ ಪ್ರವೇಶಿಸಬೇಕಾಗಿ ಬಂತು. ವಾಸ್ತವವಾಗಿ, ಭಾರತ ತನ್ನ ಮುಂದಿನ ಪಂದ್ಯವನ್ನು ಅಕ್ಟೋಬರ್ 31 ರಂದು ನ್ಯೂಜಿಲೆಂಡ್ ವಿರುದ್ಧ ಆಡಬೇಕಿದೆ. ಆದರೆ ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ತಂಡಕ್ಕೆ ಮರಳುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ.

ಇನ್ನು ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೂ ಮುನ್ನ ಮಾತನಾಡಿದ ಪಾಂಡ್ಯ, ಬೌಲಿಂಗ್ ಮಾಡಲು ಅಸಾಧ್ಯ ಎಂಬುದನ್ನು ಬಹಿರಂಗ ಪಡಿಸಿದ್ದರು. ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಹಂತದ ಸನಿಹದ ಪಂದ್ಯಗಳಲ್ಲಿ ಬೌಲಿಂಗ್ ಮಾಡುವ ವಿಶ್ವಾಸವನ್ನು ವ್ಯಕ್ತಪಡಿಸಿದರು. ಇನ್ನೂ ಸಹ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಹಾರ್ದಿಕ್ ಪಾಂಡ್ಯ ಮುಂದಿನ ಪಂದ್ಯಗಳಲ್ಲಿ ಬೌಲಿಂಗ್ ಮಾಡಬಹುದು ಎಂಬ ಸಲಹೆಯನ್ನು ತಮ್ಮ ವೈದ್ಯಕೀಯ ತಂಡ ನೀಡಿದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರಂತೆ.

ಭಾನುವಾರ ನಡೆದ ಸೂಪರ್‌ 12 ಹಂತದ ಎರಡನೇ ಗುಂಪಿನ ಮೊದಲ ಹಣಾಹಣಿಯಲ್ಲಿ ಪಾಕಿಸ್ತಾನ ಅಧಿಕಾರಯುತ ಪ್ರದರ್ಶನ ನೀಡಿ ಟೀಮ್ ಇಂಡಿಯಾ ಎದುರು 10 ವಿಕೆಟ್‌ಗಳ ಐತಿಹಾಸಿಕ ಜಯ ದಾಖಲಿಸಿತು. ಇದು ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಪಾಕಿಸ್ತಾನ ತಂಡಕ್ಕೆ ಸಿಕ್ಕ ಮೊತ್ತ ಮೊದಲ 10 ವಿಕೆಟ್‌ ಗೆಲುವಾದರೆ, ಟೀಮ್ ಇಂಡಿಯಾ ಅನುಭವಿಸಿದ ಮೊತ್ತ ಮೊದಲ 10 ವಿಕೆಟ್‌ಗಳ ಸೋಲಾಗಿದೆ.

India vs Pakistan, T20 World Cup: ಪಾಕಿಸ್ತಾನ ವಿರುದ್ಧ ಭಾರತದ ಸೋಲಿಗೆ ಕಾರಣವಾಗಿದ್ದು ಇದೇ ತಪ್ಪುಗಳು ನೋಡಿ

Virat Kohli: ಪಾಕಿಸ್ತಾನ ಪತ್ರಕರ್ತನ ಮೈಚಳಿ ಬಿಡಿಸಿದ ವಿರಾಟ್ ಕೊಹ್ಲಿ: ಖಡಕ್ ಪ್ರಶ್ನೆಗೆ ನಾಯಕ ಉತ್ತರ ಹೇಗಿತ್ತು ಗೊತ್ತಾ?

(Hardik pandya suffers injury A big shock to Team India along with lose of t20 wc match against Pakistan)

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ