SMAT 2025: ಹಾರ್ದಿಕ್ ಪಾಂಡ್ಯ ಅದ್ಭುತ ಬೌಲಿಂಗ್; 40 ಎಸೆತಗಳಲ್ಲಿ ಪಂದ್ಯ ಗೆದ್ದ ಬರೋಡಾ
Hardik Pandya Shines: ಇಂಜುರಿಯಿಂದ ಚೇತರಿಸಿಕೊಂಡ ಹಾರ್ದಿಕ್ ಪಾಂಡ್ಯ ಸೈಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿಯಲ್ಲಿ ಬರೋಡಾ ಪರ ಮಿಂಚುತ್ತಿದ್ದಾರೆ. ಗುಜರಾತ್ ವಿರುದ್ಧ ಅದ್ಭುತ ಬೌಲಿಂಗ್ ಹಾಗೂ ಪಂಜಾಬ್ ವಿರುದ್ಧ ಸ್ಫೋಟಕ ಅರ್ಧಶತಕ ಬಾರಿಸಿ ತಮ್ಮ ಫಿಟ್‌ನೆಸ್ ಮತ್ತು ಫಾರ್ಮ್ ಅನ್ನು ಪ್ರದರ್ಶಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡಕ್ಕೆ ಆಯ್ಕೆಯಾಗಿರುವ ಪಾಂಡ್ಯ, ತಮ್ಮ ಪ್ರದರ್ಶನದಿಂದ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದ್ದಾರೆ.

ಇಂಜುರಿಯಿಂದ ಚೇತರಿಸಿಕೊಂಡು ಭಾರತ ಟಿ20 ತಂಡಕ್ಕೆ ಆಯ್ಕೆಯಾಗಿರುವ ಹಾರ್ದಿಕ್ ಪಾಂಡ್ಯ (Hardik Pandya), ಡಿಸೆಂಬರ್ 9 ರಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ತಂಡದ ಪರ ಕಣಕ್ಕಿಳಿಯಲಿದ್ದಾರೆ. ಆದರೆ ಅದಕ್ಕೂ ಮುನ್ನ ದೇಶಿ ಟೂರ್ನಿ ಸೈಯದ್ ಮುಷ್ತಾಕ್ ಅಲಿ (Syed Mushtaq Ali) ಟಿ20 ಟ್ರೋಫಿಯಲ್ಲಿ ಬರೋಡಾ ತಂಡದ ಪರ ಆಡುತ್ತಿರುವ ಹಾರ್ದಿಕ್ ತಂಡದ ಪರ ಗೆಲುವಿನ ಪ್ರದರ್ಶನ ನೀಡಿದ್ದಾರೆ. ಪಂಜಾಬ್ ವಿರುದ್ಧದದ ಪಂದ್ಯದಲ್ಲಿ ಸ್ಫೋಟಕ ಅರ್ಧಶತಕ ಬಾರಿಸಿದ್ದ ಹಾರ್ದಿಕ್, ಇದೀಗ ಗುಜರಾತ್ ವಿರುದ್ಧದ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದರು. ಹಾರ್ದಿಕ್ ಅವರ ಈ ಪ್ರದರ್ಶನದಿಂದಾಗಿ ಹೈದರಾಬಾದ್‌ನ ಜಿಮ್ಖಾನಾ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಬರೋಡಾ ತಂಡ ಗುಜರಾತ್ ತಂಡವನ್ನು 8 ವಿಕೆಟ್‌ಗಳಿಂದ ಸೋಲಿಸಿತು.
ಹಾರ್ದಿಕ್ ಪಾಂಡ್ಯ ಅದ್ಭುತ ಬೌಲಿಂಗ್
ಗುಜರಾತ್ ವಿರುದ್ಧ ಹಾರ್ದಿಕ್ ಪಾಂಡ್ಯ ಅದ್ಭುತ ಬೌಲಿಂಗ್ ಮಾಡಿ ನಾಲ್ಕು ಓವರ್‌ಗಳಲ್ಲಿ ಕೇವಲ 16 ರನ್‌ಗಳನ್ನು ಬಿಟ್ಟುಕೊಟ್ಟು ಒಂದು ವಿಕೆಟ್ ಪಡೆದರು. ಇದೇ ಟೂರ್ನಿಯಲ್ಲಿ ಕೇವಲ 31 ಎಸೆತಗಳಲ್ಲಿ ಶತಕ ಗಳಿಸಿದ್ದ ಉರ್ವಿಲ್ ಪಟೇಲ್ ಅವರನ್ನು ಪಾಂಡ್ಯ ಔಟ್ ಮಾಡಿದರು. ಇದರ ನಂತರ, ಗುಜರಾತ್ 14.1 ಓವರ್‌ಗಳಲ್ಲಿ ಕೇವಲ 73 ರನ್‌ಗಳಿಗೆ ಆಲೌಟ್ ಆಯಿತು. ಬರೋಡಾ ಪರ ರಾಮ್ ಲಿಂಬಾನಿ ಕೇವಲ ಐದು ರನ್‌ಗಳಿಗೆ ಮೂರು ವಿಕೆಟ್ ಪಡೆದರು.
40 ಎಸೆತಗಳಲ್ಲಿ ಪಂದ್ಯ ಗೆದ್ದ ಬರೋಡಾ
ಬರೋಡಾ ತಂಡ ಗುಜರಾತ್ ತಂಡದ ಗುರಿಯನ್ನು ಕೇವಲ 40 ಎಸೆತಗಳಲ್ಲಿ ಬೆನ್ನಟ್ಟಿತು. ಶಾಶ್ವತ್ ರಾವತ್ 19 ಎಸೆತಗಳಲ್ಲಿ ಅಜೇಯ 30 ರನ್ ಗಳಿಸಿದರೆ, ವಿಷ್ಣು ಸೋಲಂಕಿ 27 ರನ್ ಗಳಿಸಿದರು. ಹಾರ್ದಿಕ್ ಪಾಂಡ್ಯ 10 ರನ್ ಗಳಿಸಿ ರವಿ ಬಿಷ್ಣೋಯ್ ಬೌಲಿಂಗ್‌ನಲ್ಲಿ ಔಟಾದರು. ಆದಾಗ್ಯೂ, ಬರೋಡಾ ತಂಡವು 6.4 ಓವರ್‌ಗಳಲ್ಲಿ ಪಂದ್ಯವನ್ನು ಮುಗಿಸಿತು.
T20 World Cup 2026: 2026 ರ ಟಿ20 ವಿಶ್ವಕಪ್ಗೆ ಟೀಂ ಇಂಡಿಯಾದ ನೂತನ ಟಿ20 ಜೆರ್ಸಿ ಅನಾವರಣ
ಪಂಜಾಬ್ ವಿರುದ್ಧ ಪಾಂಡ್ಯ ಅದ್ಭುತ ಅರ್ಧಶತಕ
ಇದಕ್ಕೂ ಮೊದಲು, ಹಾರ್ದಿಕ್ ಪಾಂಡ್ಯ ಪಂಜಾಬ್ ವಿರುದ್ಧ ಕೇವಲ 42 ಎಸೆತಗಳಲ್ಲಿ ನಾಲ್ಕು ಸಿಕ್ಸರ್ ಮತ್ತು ಏಳು ಬೌಂಡರಿಗಳೊಂದಿಗೆ ಅಜೇಯ 77 ರನ್ ಬಾರಿಸಿದರು. ಅವರ ಸ್ಫೋಟಕ ಬ್ಯಾಟಿಂಗ್ ಬರೋಡಾ ತಂಡವು 223 ರನ್‌ಗಳ ಬೃಹತ್ ಗುರಿಯನ್ನು ಐದು ಎಸೆತಗಳು ಬಾಕಿ ಇರುವಂತೆಯೇ ಬೆನ್ನಟ್ಟಲು ಸಹಾಯ ಮಾಡಿತು. ಡಿಸೆಂಬರ್ 9 ರಿಂದ ಪ್ರಾರಂಭವಾಗುವ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಪಾಂಡ್ಯ ಹೇಗೆ ಪ್ರದರ್ಶನ ನೀಡುತ್ತಾರೆ ಎಂಬುದನ್ನು ಈಗ ಕಾದು ನೋಡಬೇಕಾಗಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
