AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬರುವ ಎರಡು ಟಿ20 ಸರಣಿಗಳಿಂದ ಹಾರ್ದಿಕ್ ಪಾಂಡ್ಯಗೆ ಕೋಕ್?

Hardik Pandya: ಹಾರ್ದಿಕ್ ಪಾಂಡ್ಯ ಐರ್ಲೆಂಡ್ ಮತ್ತು ಇಂಗ್ಲೆಂಡ್ ಟಿ20 ಪ್ರವಾಸಗಳಿಂದ ಹೊರಗುಳಿಯುವ ಸಾಧ್ಯತೆಯಿದೆ. 2027ರ ಏಕದಿನ ವಿಶ್ವಕಪ್‌ಗೆ ಅವರನ್ನು ಸಿದ್ಧಪಡಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ದಿಕ್ ಅವರ ಫಿಟ್‌ನೆಸ್ ಮತ್ತು 10 ಓವರ್ ಬೌಲಿಂಗ್ ಸಾಮರ್ಥ್ಯವನ್ನು ಆಯ್ಕೆದಾರರು ಸೂಕ್ಷ್ಮವಾಗಿ ಗಮನಿಸಲಿದ್ದಾರೆ. ಗಾಯದ ಸಮಸ್ಯೆಗಳು ಪಾಂಡ್ಯಗೆ ದೊಡ್ಡ ತಲೆನೋವಾಗಿದ್ದು, ಶಿವಂ ದುಬೆ ಮತ್ತು ನಿತೀಶ್ ರೆಡ್ಡಿ ಅವರ ಸ್ಥಾನ ತುಂಬುವ ಸಾಧ್ಯತೆ ಇದೆ.

ಮುಂಬರುವ ಎರಡು ಟಿ20 ಸರಣಿಗಳಿಂದ ಹಾರ್ದಿಕ್ ಪಾಂಡ್ಯಗೆ ಕೋಕ್?
Hardik Pandya
ಪೃಥ್ವಿಶಂಕರ
|

Updated on: Jun 04, 2026 | 10:40 PM

Share

ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸಕ್ಕೆ ಟೀಂ ಇಂಡಿಯಾದ (Team India) ಆಯ್ಕೆ ಜೂನ್ 6 ರಂದು ನಡೆಯಲಿದೆ ಎಂದು ವರದಿಯಾಗಿದೆ. ಆದಾಗ್ಯೂ, ಈ ಎರಡು ಪ್ರವಾಸಗಳಿಗೆ ಹಾರ್ದಿಕ್ ಪಾಂಡ್ಯ (Hardik Pandya) ಅವರನ್ನು ಆಯ್ಕೆ ಮಾಡುವ ಸಾಧ್ಯತೆ ಕಡಿಮೆ. ಅಂದರೆ, ಅವರನ್ನು ಭಾರತದ ಟಿ20 ತಂಡದಿಂದ ಕೈಬಿಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹಾರ್ದಿಕ್ ಅವರನ್ನು ಟಿ20 ತಂಡದಿಂದ ಕೈಬಿಡುವುದರ ಹಿಂದಿನ ಉದ್ದೇಶ ಏಕದಿನ ವಿಶ್ವಕಪ್‌. ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನಲ್ಲಿ ಅನುಭವಿ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ತಂಡದ ಪರ ಪ್ರಮುಖ ಪಾತ್ರವಹಿಸಲಿದ್ದಾರೆ. ಹೀಗಾಗಿ, ಪಾಂಡ್ಯ ಅವರನ್ನು ಸಾಧ್ಯವಾದಷ್ಟು ಏಕದಿನ ಪಂದ್ಯಗಳಲ್ಲಿ ಆಡಿಸುವತ್ತ ಆಯ್ಕೆದಾರರು ಗಮನ ಹರಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಟಿ20 ತಂಡದಿಂದ ಹೊರಗಿಡಲು ಕಾರಣವೇನು?

ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಹಾರ್ದಿಕ್ ಪಾಂಡ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಈ ಏಕದಿನ ಸರಣಿಯಲ್ಲಿ ಹಾರ್ದಿಕ್ ಮತ್ತು ಅವರ ಪ್ರದರ್ಶನದ ಮೇಲೆ ಸಂಪೂರ್ಣವಾಗಿ ಗಮನ ಹರಿಸಲಾಗುವುದು. ಹಾರ್ದಿಕ್ ಪಾಂಡ್ಯ ಅವರ ಬ್ಯಾಟಿಂಗ್ ಪ್ರದರ್ಶನವನ್ನು ಮತ್ತು ಮುಖ್ಯವಾಗಿ, ಅವರು 10 ಓವರ್‌ಗಳ ಪೂರ್ಣ ಕೋಟಾವನ್ನು ಬೌಲ್ ಮಾಡಬಹುದೇ ಎಂಬುದನ್ನು ಆಯ್ಕೆದಾರರು ಸೂಕ್ಷ್ಮವಾಗಿ ಗಮನಿಸುತ್ತಾರೆ. ಇದರ ಜೊತೆಗೆ 2027 ರ ಏಕದಿನ ವಿಶ್ವಕಪ್‌ಗೆ ಹಾರ್ದಿಕ್ ಅವರನ್ನು ಸಿದ್ಧಪಡಿಸುವ ಗುರಿ ಮ್ಯಾನೇಜ್​ಮೆಂಟ್​ಗೆ ಇದೆ.

ಗಾಯವೇ ಪಾಂಡ್ಯಗೆ ಶತ್ರು

ಹಾರ್ದಿಕ್ ಪಾಂಡ್ಯಗೆ ಗಾಯಗಳೇ ದೊಡ್ಡ ತಲೆನೋವಾಗಿದೆ. ಇತ್ತೀಚೆಗೆ ಮುಗಿದ ಐಪಿಎಲ್​ನಲ್ಲೂ ಪಾಂಡ್ಯ ಗಾಯಕ್ಕೆ ತುತ್ತಾಗಿದ್ದರು ಇದರಿಂದಾಗಿ ಅವರು ನಾಲ್ಕರಿಂದ ಐದು ಗುಂಪು ಹಂತದ ಪಂದ್ಯಗಳನ್ನು ಕಳೆದುಕೊಳ್ಳಬೇಕಾಯಿತು. ಐಪಿಎಲ್​ಗೂ ಮೊದಲು ಗಾಯದಿಂದಾಗಿ ಹಲವಾರು ಪ್ರಮುಖ ಅಂತರರಾಷ್ಟ್ರೀಯ ಪಂದ್ಯಾವಳಿಗಳು ಮತ್ತು ಸರಣಿಗಳನ್ನು ಸಹ ಕಳೆದುಕೊಂಡರು. ಗಾಯದಿಂದಾಗಿ ಪಾಂಡ್ಯ 2025 ರ ಏಷ್ಯಾಕಪ್​ನಿಂದಲೂ ಹಿಂದೆ ಸರಿಯಬೇಕಾಯಿತು. ಅದೇ ಗಾಯದಿಂದಾಗಿ ಏಷ್ಯಾಕಪ್ ನಂತರ ನಡೆದ ಆಸ್ಟ್ರೇಲಿಯಾ ಪ್ರವಾಸಕ್ಕೂ ಪಾಂಡ್ಯ ಗೈರಾಗಿದ್ದರು.

ಆದಾಗ್ಯೂ ಗಾಯದಿಂದ ಚೇತರಿಸಿಕೊಂಡು ತಂಡಕ್ಕೆ ಮರಳಿದ್ದ ಹಾರ್ದಿಕ್ ಪಾಂಡ್ಯ 2026 ರ ಟಿ20 ವಿಶ್ವಕಪ್‌ನಲ್ಲಿ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. 2026 ರ ಟಿ20 ವಿಶ್ವಕಪ್‌ನ ಒಂಬತ್ತು ಇನ್ನಿಂಗ್ಸ್‌ಗಳಲ್ಲಿ, ಹಾರ್ದಿಕ್ ಪಾಂಡ್ಯ 160.74 ಸ್ಟ್ರೈಕ್ ರೇಟ್‌ನಲ್ಲಿ 217 ರನ್ ಗಳಿಸುವುದರ ಜೊತೆಗೆ ಒಂಬತ್ತು ವಿಕೆಟ್‌ಗಳನ್ನು ಸಹ ಪಡೆದರು.

IPL 2026: ಮುಂಬೈ ನಾಯಕ ಹಾರ್ದಿಕ್ ಪಾಂಡ್ಯಗೆ ದಂಡದ ಜೊತೆಗೆ ಡಿಮೆರಿಟ್ ಪಾಯಿಂಟ್

ಇದೀಗ ಹಾರ್ದಿಕ್ ಪಾಂಡ್ಯ ಮತ್ತೊಂದು ಗಾಯಕ್ಕೆ ಒಳಗಾಗಿದ್ದು ಪ್ರಸ್ತುತ ಚೇತರಿಕೆಯ ಹಾದಿಯಲ್ಲಿದ್ದಾರೆ. 2027 ರ ಏಕದಿನ ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು, ಆಯ್ಕೆದಾರರು ಹಾರ್ದಿಕ್ ಅವರನ್ನು ಟಿ20 ಕ್ರಿಕೆಟ್‌ನಿಂದ ದೂರವಿಡುವ ನಿರ್ಧಾರಕ್ಕೆ ಬಂದಿದ್ದಾರೆ. ಅದಕ್ಕಾಗಿಯೇ ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸಗಳಲ್ಲಿ ಪಾಂಡ್ಯ ಆಡುವುದು ಅನುಮಾನವಾಗಿದೆ. ಹಾರ್ದಿಕ್ ಅನುಪಸ್ಥಿತಿಯಲ್ಲಿ, ಶಿವಂ ದುಬೆ ಮತ್ತು ನಿತೀಶ್ ರೆಡ್ಡಿ ಅವರನ್ನು ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸಗಳಿಗೆ ಟಿ20 ತಂಡದಲ್ಲಿ ಆಲ್‌ರೌಂಡರ್‌ಗಳಾಗಿ ಆಯ್ಕೆ ಮಾಡುವ ಸಾಧ್ಯತೆಗಳಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಕೃಷ್ಣಭೈರೇಗೌಡ ಕ್ಲಾಸ್
ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಕೃಷ್ಣಭೈರೇಗೌಡ ಕ್ಲಾಸ್
ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ
ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ
ಫುಟ್ ಪಾತ್ ತೆರವಿಗೆ ಕೃಷ್ಣಬೈರೇಗೌಡ ದಿಟ್ಟ ಹೆಜ್ಜೆ
ಫುಟ್ ಪಾತ್ ತೆರವಿಗೆ ಕೃಷ್ಣಬೈರೇಗೌಡ ದಿಟ್ಟ ಹೆಜ್ಜೆ
ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ
ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA
ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA
ಚಾಟ್‌ಜಿಪಿಟಿ ಬಳಸಿ ಬುಕ್ ಬರೆಯಲು ರೆಡಿಯಾದ ಆಟೋ ಡ್ರೈವರ್
ಚಾಟ್‌ಜಿಪಿಟಿ ಬಳಸಿ ಬುಕ್ ಬರೆಯಲು ರೆಡಿಯಾದ ಆಟೋ ಡ್ರೈವರ್