AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಮೌನ ಮುರಿದ ಹಾರ್ದಿಕ್ ಪಾಂಡ್ಯ: ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಏನು ಹೇಳಿದ್ರು ನೋಡಿ

Hardik Pandya Post Match Presentation: ಶನಿವಾರ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಕೂಡ ಮುಂಬೈ ಇಂಡಿಯನ್ಸ್ ಸೋಲು ಅನುಭವಿಸಿತು. ಪಂದ್ಯ ಮುಗಿದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ನಾಯಕ ಹಾರ್ದಿಕ್ ಪಾಂಡ್ಯ ಕೆಲ ವಿಚಾರಗಳನ್ನು ಹೇಳಿದ್ದಾರೆ. ಹಾರ್ದಿಕ್ ಏನು ಹೇಳಿದ್ರು?, ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕೊನೆಗೂ ಮೌನ ಮುರಿದ ಹಾರ್ದಿಕ್ ಪಾಂಡ್ಯ: ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಏನು ಹೇಳಿದ್ರು ನೋಡಿ
Hardik Pandya Post Match Presentation
Vinay Bhat
|

Updated on:May 12, 2024 | 8:25 AM

Share

ಐಪಿಎಲ್ 2024 ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪ್ರದರ್ಶನ ತೀರಾ ಕಳಪೆ ಆಗಿದೆ. ಹಾರ್ದಿಕ್ ಪಾಂಡ್ಯ (Hardik Pandya) ನಾಯಕತ್ವದಲ್ಲಿ ಎಂಐ ಕಮಾಲ್ ಮಾಡಲು ಸಾಧ್ಯವಾಗಲಿಲ್ಲ. ಈಗಾಗಲೇ ಟೂರ್ನಿಯಿಂದ ಹೊರಬಿದ್ದಿರುವ ಮುಂಬೈ ಶನಿವಾರ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಕೂಡ ಸೋಲು ಅನುಭವಿಸಿತು. ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮುಂಬೈಗೆ 16 ಓವರ್​ಗಳಲ್ಲಿ 158 ರನ್ ಗಳಿಸಲು ಸಾಧ್ಯವಾಗಲಿಲ್ಲ. ಸ್ವತಃ ನಾಯಕನೇ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಲು ವಿಫಲರಾದರು. ಪಂದ್ಯ ಮುಗಿದ ಬಳಿಕ ಮಾತನಾಡಿದ ಹಾರ್ದಿಕ್ ಪಾಂಡ್ಯ ತಮ್ಮ ತಂಡದ ಕಳಪೆ ಪ್ರದರ್ಶನದ ಬಗ್ಗೆ ಮಾತನಾಡಿದ್ದಾರೆ.

ಕೆಕೆಆರ್ ವಿರುದ್ಧದ ಸೋಲಿನ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ, ”ಇದು ತುಂಬಾ ಕಠಿಣವಾದದ್ದು. ಬ್ಯಾಟಿಂಗ್ ವಿಭಾಗದಲ್ಲಿ ನಾವು ಉತ್ತಮ ಆರಂಭವನ್ನು ಪಡೆದುಕೊಂಡಿದ್ದೆವು. ಆದರೆ ಅದರ ನಂತರ ಲಾಭ ಗಳಿಸಲು ಮತ್ತು ಆವೇಗವನ್ನು ಮುಂದುವರಿಸಲು ನಮಗೆ ಸಾಧ್ಯವಾಗಲಿಲ್ಲ. ವಿಕೆಟ್ ಸ್ವಲ್ಪ ಕಷ್ಟಕರವಾಗಿತ್ತು. ಬೌಲರ್‌ಗಳು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ನಾನು ಭಾವಿಸುತ್ತೇನೆ,” ಎಂದು ಸೋಲಿನ ಕುರಿತು ಹೇಳಿದ್ದಾರೆ.

ಐಪಿಎಲ್​ನಲ್ಲಿಂದು ಆರ್​ಸಿಬಿ ಪಂದ್ಯ: ಫಾಫ್ ಪಡೆ ಗೆದ್ದರೆ ಏನಾಗಲಿದೆ?, ಸೋತರೆ ಏನಾಗುತ್ತೆ?

”ಇದು ಒಂದು ಸಮಾನ ಸ್ಕೋರ್ ಎಂದು ನಾನು ಭಾವಿಸುತ್ತೇನೆ. ಬೌಂಡರಿಯಿಂದ ಹಿಂತಿರುಗಿದ ಪ್ರತಿ ಚೆಂಡಿನಲ್ಲಿ ತೇವಾಂಶ ಇರುತ್ತಿತ್ತು. ಬೌಲರ್‌ಗಳು ಸುಲಭವಾಗಿ ವಿಕೆಟ್‌ಗಳನ್ನು ಪಡೆಯುತ್ತಿದ್ದರು. ಈ ಋತುವಿನಲ್ಲಿ ನಮ್ಮ ಪ್ರದರ್ಶನ ಚೆನ್ನಾಗಿರಲಿಲ್ಲ ಎಂದು ಒಪ್ಪಿಕೊಳ್ಳುವ ಮೂಲಕ ಮೌನ ಮುರಿದಿರುವ ಪಾಂಡ್ಯ, ನಾವು ಉತ್ತಮ ಕ್ರಿಕೆಟ್ ಆಡಿದ್ದೇವೆ ಎಂದು ನಾನು ಭಾವಿಸುವುದಿಲ್ಲ. ಮುಂದಿನ ಪಂದ್ಯದ ಬಗ್ಗೆ ಏನೂ ಆಲೋಚನೆಗಳಿಲ್ಲ. ಎಷ್ಟು ಸಾಧ್ಯವೋ ಅಷ್ಟು ಆನಂದಿಸಿ ಮತ್ತು ಉತ್ತಮ ಕ್ರಿಕೆಟ್ ಆಡುತ್ತೇವೆ,” ಎಂದು ಹೇಳಿದರು.

ಪಂದ್ಯ ಆರಂಭಕ್ಕೆ ಮಳೆ ಅಡ್ಡಿಪಡಿಸಿದ ಕಾರಣ 16 ಓವರ್​ಗೆ ಮ್ಯಾಚ್ ಅನ್ನು ನಿಗದಿಪಡಿಸಲಾಯಿತು. ಆತಿಥೇಯ ತಂಡವು 16 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ ಒಟ್ಟು 157 ರನ್ ಅನ್ನು ಕಲೆಹಾಕಿತು. ವೆಂಕಟೇಶ್ ಅಯ್ಯರ್ 21 ಎಸೆತಗಳಲ್ಲಿ 42 ರನ್ ಗಳಿಸಿದರು. ನಿತೀಶ್ ರಾಣಾ (33), ಆಂಡರ್ ರಸೆಲ್ (24), ರಿಂಕು ಸಿಂಗ್ (20) ಮತ್ತು ರಮಣದೀಪ್ ಸಿಂಗ್ ಅಜೇಯ 17 ರನ್ ಬಾರಿಸಿದರು.

ವಾರದಿಂದ ಬೆಂಗಳೂರಿನಲ್ಲಿ ಮಳೆ; ಆರ್​ಸಿಬಿ- ಡೆಲ್ಲಿ ಪಂದ್ಯಕ್ಕೆ ವರುಣನ ಅವಕೃಪೆ?

ಎಂಐನ ಆರಂಭಿಕ ಜೋಡಿ ಇಶಾನ್ ಕಿಶನ್ ಮತ್ತು ರೋಹಿತ್ ಶರ್ಮಾ ತಂಡಕ್ಕೆ ಉತ್ತಮ ಆರಂಭ ಒದಗಿಸಿ ಮೊದಲ ವಿಕೆಟ್‌ಗೆ 6.5 ಓವರ್‌ಗಳಲ್ಲಿ 65 ರನ್ ಸೇರಿಸಿದರು. ಇಶಾನ್ 22 ಎಸೆತಗಳಲ್ಲಿ 40 ರನ್ ಗಳಿಸಿ ನಿರ್ಗಮಿಸಿದರೆ, ರೋಹಿತ್ 24 ಎಸೆತಗಳಲ್ಲಿ 19 ರನ್ ಗಳಿಸುವಲ್ಲಿ ಯಶಸ್ವಿಯಾದರು. ಬಳಿಕ ಇನ್ನೊಂದು ತುದಿಯಲ್ಲಿ ವಿಕೆಟ್‌ಗಳು ಬೀಳುತ್ತಲೇ ಇದ್ದಾಗ ತಿಲಕ್ ವರ್ಮಾ 17 ಎಸೆತಗಳಲ್ಲಿ 32 ರನ್ ಗಳಿಸಿದರು. ಉಳಿದ ಬ್ಯಾಟರ್​ಗಳು ಯಾರೂ ಗೆಲುವಿಗೆ ಹೋರಾಡಲಿಲ್ಲ. ಮುಂಬೈ 16 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 139 ರನ್ ಗಳಿಸಿ ಸೋಲೊಪ್ಪಿಕೊಂಡಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:24 am, Sun, 12 May 24

ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ