
ಐಪಿಎಲ್ 2024 ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪ್ರದರ್ಶನ ತೀರಾ ಕಳಪೆ ಆಗಿದೆ. ಹಾರ್ದಿಕ್ ಪಾಂಡ್ಯ (Hardik Pandya) ನಾಯಕತ್ವದಲ್ಲಿ ಎಂಐ ಕಮಾಲ್ ಮಾಡಲು ಸಾಧ್ಯವಾಗಲಿಲ್ಲ. ಈಗಾಗಲೇ ಟೂರ್ನಿಯಿಂದ ಹೊರಬಿದ್ದಿರುವ ಮುಂಬೈ ಶನಿವಾರ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಕೂಡ ಸೋಲು ಅನುಭವಿಸಿತು. ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮುಂಬೈಗೆ 16 ಓವರ್‌ಗಳಲ್ಲಿ 158 ರನ್ ಗಳಿಸಲು ಸಾಧ್ಯವಾಗಲಿಲ್ಲ. ಸ್ವತಃ ನಾಯಕನೇ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಲು ವಿಫಲರಾದರು. ಪಂದ್ಯ ಮುಗಿದ ಬಳಿಕ ಮಾತನಾಡಿದ ಹಾರ್ದಿಕ್ ಪಾಂಡ್ಯ ತಮ್ಮ ತಂಡದ ಕಳಪೆ ಪ್ರದರ್ಶನದ ಬಗ್ಗೆ ಮಾತನಾಡಿದ್ದಾರೆ.
ಕೆಕೆಆರ್ ವಿರುದ್ಧದ ಸೋಲಿನ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ನಲ್ಲಿ ಮಾತನಾಡಿದ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ, ”ಇದು ತುಂಬಾ ಕಠಿಣವಾದದ್ದು. ಬ್ಯಾಟಿಂಗ್ ವಿಭಾಗದಲ್ಲಿ ನಾವು ಉತ್ತಮ ಆರಂಭವನ್ನು ಪಡೆದುಕೊಂಡಿದ್ದೆವು. ಆದರೆ ಅದರ ನಂತರ ಲಾಭ ಗಳಿಸಲು ಮತ್ತು ಆವೇಗವನ್ನು ಮುಂದುವರಿಸಲು ನಮಗೆ ಸಾಧ್ಯವಾಗಲಿಲ್ಲ. ವಿಕೆಟ್ ಸ್ವಲ್ಪ ಕಷ್ಟಕರವಾಗಿತ್ತು. ಬೌಲರ್‌ಗಳು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ನಾನು ಭಾವಿಸುತ್ತೇನೆ,” ಎಂದು ಸೋಲಿನ ಕುರಿತು ಹೇಳಿದ್ದಾರೆ.
ಐಪಿಎಲ್ನಲ್ಲಿಂದು ಆರ್ಸಿಬಿ ಪಂದ್ಯ: ಫಾಫ್ ಪಡೆ ಗೆದ್ದರೆ ಏನಾಗಲಿದೆ?, ಸೋತರೆ ಏನಾಗುತ್ತೆ?
”ಇದು ಒಂದು ಸಮಾನ ಸ್ಕೋರ್ ಎಂದು ನಾನು ಭಾವಿಸುತ್ತೇನೆ. ಬೌಂಡರಿಯಿಂದ ಹಿಂತಿರುಗಿದ ಪ್ರತಿ ಚೆಂಡಿನಲ್ಲಿ ತೇವಾಂಶ ಇರುತ್ತಿತ್ತು. ಬೌಲರ್‌ಗಳು ಸುಲಭವಾಗಿ ವಿಕೆಟ್‌ಗಳನ್ನು ಪಡೆಯುತ್ತಿದ್ದರು. ಈ ಋತುವಿನಲ್ಲಿ ನಮ್ಮ ಪ್ರದರ್ಶನ ಚೆನ್ನಾಗಿರಲಿಲ್ಲ ಎಂದು ಒಪ್ಪಿಕೊಳ್ಳುವ ಮೂಲಕ ಮೌನ ಮುರಿದಿರುವ ಪಾಂಡ್ಯ, ನಾವು ಉತ್ತಮ ಕ್ರಿಕೆಟ್ ಆಡಿದ್ದೇವೆ ಎಂದು ನಾನು ಭಾವಿಸುವುದಿಲ್ಲ. ಮುಂದಿನ ಪಂದ್ಯದ ಬಗ್ಗೆ ಏನೂ ಆಲೋಚನೆಗಳಿಲ್ಲ. ಎಷ್ಟು ಸಾಧ್ಯವೋ ಅಷ್ಟು ಆನಂದಿಸಿ ಮತ್ತು ಉತ್ತಮ ಕ್ರಿಕೆಟ್ ಆಡುತ್ತೇವೆ,” ಎಂದು ಹೇಳಿದರು.
ಪಂದ್ಯ ಆರಂಭಕ್ಕೆ ಮಳೆ ಅಡ್ಡಿಪಡಿಸಿದ ಕಾರಣ 16 ಓವರ್ಗೆ ಮ್ಯಾಚ್ ಅನ್ನು ನಿಗದಿಪಡಿಸಲಾಯಿತು. ಆತಿಥೇಯ ತಂಡವು 16 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ ಒಟ್ಟು 157 ರನ್ ಅನ್ನು ಕಲೆಹಾಕಿತು. ವೆಂಕಟೇಶ್ ಅಯ್ಯರ್ 21 ಎಸೆತಗಳಲ್ಲಿ 42 ರನ್ ಗಳಿಸಿದರು. ನಿತೀಶ್ ರಾಣಾ (33), ಆಂಡರ್ ರಸೆಲ್ (24), ರಿಂಕು ಸಿಂಗ್ (20) ಮತ್ತು ರಮಣದೀಪ್ ಸಿಂಗ್ ಅಜೇಯ 17 ರನ್ ಬಾರಿಸಿದರು.
ವಾರದಿಂದ ಬೆಂಗಳೂರಿನಲ್ಲಿ ಮಳೆ; ಆರ್ಸಿಬಿ- ಡೆಲ್ಲಿ ಪಂದ್ಯಕ್ಕೆ ವರುಣನ ಅವಕೃಪೆ?
ಎಂಐನ ಆರಂಭಿಕ ಜೋಡಿ ಇಶಾನ್ ಕಿಶನ್ ಮತ್ತು ರೋಹಿತ್ ಶರ್ಮಾ ತಂಡಕ್ಕೆ ಉತ್ತಮ ಆರಂಭ ಒದಗಿಸಿ ಮೊದಲ ವಿಕೆಟ್‌ಗೆ 6.5 ಓವರ್‌ಗಳಲ್ಲಿ 65 ರನ್ ಸೇರಿಸಿದರು. ಇಶಾನ್ 22 ಎಸೆತಗಳಲ್ಲಿ 40 ರನ್ ಗಳಿಸಿ ನಿರ್ಗಮಿಸಿದರೆ, ರೋಹಿತ್ 24 ಎಸೆತಗಳಲ್ಲಿ 19 ರನ್ ಗಳಿಸುವಲ್ಲಿ ಯಶಸ್ವಿಯಾದರು. ಬಳಿಕ ಇನ್ನೊಂದು ತುದಿಯಲ್ಲಿ ವಿಕೆಟ್‌ಗಳು ಬೀಳುತ್ತಲೇ ಇದ್ದಾಗ ತಿಲಕ್ ವರ್ಮಾ 17 ಎಸೆತಗಳಲ್ಲಿ 32 ರನ್ ಗಳಿಸಿದರು. ಉಳಿದ ಬ್ಯಾಟರ್ಗಳು ಯಾರೂ ಗೆಲುವಿಗೆ ಹೋರಾಡಲಿಲ್ಲ. ಮುಂಬೈ 16 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 139 ರನ್ ಗಳಿಸಿ ಸೋಲೊಪ್ಪಿಕೊಂಡಿತು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:24 am, Sun, 12 May 24