AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬರುವ ಸರಣಿಗೂ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಡೌಟ್!

India vs Afghanistan: ಭಾರತ ಮತ್ತು ಅಫ್ಘಾನಿಸ್ತಾನ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯು ಸೆಪ್ಟೆಂಬರ್ 13, 2026 ರಿಂದ ಆರಂಭವಾಗಲಿದೆ. ಈ ಸರಣಿಯ ದ್ವಿತೀಯ ಪಂದ್ಯ ಸೆಪ್ಟೆಂಬರ್ 15 ರಂದು ಹಾಗೂ ತೃತೀಯ ಪಂದ್ಯ ಸೆಪ್ಟೆಂಬರ್ 17 ರಂದು ಜರುಗಲಿದೆ. ಇನ್ನು ಈ ಸರಣಿಯ ಎಲ್ಲಾ ಪಂದ್ಯಗಳಿಗೂ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂ ಆತಿಥ್ಯ ವಹಿಸಲಿದೆ.

ಮುಂಬರುವ ಸರಣಿಗೂ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಡೌಟ್!
Team India Image Credit source: GettyImages
ಝಾಹಿರ್ ಯೂಸುಫ್
|

Updated on: Sep 01, 2026 | 10:14 AM

Share

ಭಾರತ ತಂಡದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಅಂತಾರಾಷ್ಟ್ರೀಯ ಕ್ರಿಕೆಟ್ ಪುನರಾಗಮನದ ಕನಸಿಗೆ ಮತ್ತೊಮ್ಮೆ ಗಾಯದ ಆತಂಕ ಎದುರಾಗಿದೆ. ಬೆಂಗಳೂರಿನ ಬಿಸಿಸಿಐ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (CoE) ಯಲ್ಲಿ ತರಬೇತಿ ಪಡೆಯುತ್ತಿದ್ದ ವೇಳೆ ಅವರಿಗೆ ಕಾಲಿನ ಸ್ನಾಯು ಸೆಳೆತ ಕಾಣಿಸಿಕೊಂಡಿದ್ದು, ಮುಂಬರುವ ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಗೆ ಅವರು ಲಭ್ಯರಿರುವುದು ಅನುಮಾನ ಎನ್ನಲಾಗಿದೆ.

ಸೆಪ್ಟೆಂಬರ್ 13, 2026 ರಿಂದ ಆರಂಭವಾಗಲಿರುವ ಭಾರತ ಮತ್ತು ಅಫ್ಘಾನಿಸ್ತಾನ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೂಲಕ ಪಾಂಡ್ಯ ಕಂಬ್ಯಾಕ್ ಮಾಡಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಈ ಹೊಸ ಹಿನ್ನಡೆಯು ಬಿಸಿಸಿಐ ಆಯ್ಕೆ ಸಮಿತಿಗೆ ತಲೆನೋವು ತಂದಿಟ್ಟಿದೆ.

ತರಬೇತಿ ವೇಳೆ ಕಾಣಿಸಿಕೊಂಡ ಸಮಸ್ಯೆ!

ಮೂಲಗಳ ಮಾಹಿತಿ ಪ್ರಕಾರ, ಹಾರ್ದಿಕ್ ಪಾಂಡ್ಯ ಅವರ ಬ್ಯಾಟಿಂಗ್ ಮತ್ತು ಫೀಲ್ಡಿಂಗ್ ಅಭ್ಯಾಸದಲ್ಲಿ ಯಾವುದೇ ತೊಂದರೆ ಇರಲಿಲ್ಲ. ಆದರೆ ಸಂಪೂರ್ಣ ವೇಗದಲ್ಲಿ ಬೌಲಿಂಗ್ ಮಾಡುವಾಗ ಅವರ ಕಾಲಿನಲ್ಲಿ ತೀವ್ರ ಅಸ್ವಸ್ಥತೆ ಕಾಣಿಸಿಕೊಂಡಿದೆ.

ಬಿಸಿಸಿಐ ವೈದ್ಯಕೀಯ ತಂಡವು ಅವರ ಬೌಲಿಂಗ್ ಲೋಡ್ ಅನ್ನು ಸದ್ಯಕ್ಕೆ ಸ್ಥಗಿತಗೊಳಿಸುವಂತೆ ಸೂಚಿಸಿದೆ. ಸರಣಿ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇರುವುದರಿಂದ ಅವರು ಸಂಪೂರ್ಣ ಫಿಟ್ನೆಸ್ ಸಾಧಿಸುವುದು ಕಷ್ಟ ಎನ್ನಲಾಗುತ್ತಿದೆ. ಹೀಗಾಗಿ ಅಫ್ಘಾನಿಸ್ತಾನ್ ವಿರುದ್ಧದ ಸರಣಿಯಲ್ಲೂ ಹಾರ್ದಿಕ್ ಪಾಂಡ್ಯ ಕಾಣಿಸಿಕೊಳ್ಳುವುದು ಅನುಮಾನವಾಗಿದೆ.

ಏಷ್ಯನ್ ಗೇಮ್ಸ್​​ಗಿಲ್ಲ ಹಾರ್ದಿಕ್ ಪಾಂಡ್ಯ:

ಏಷ್ಯನ್ ಗೇಮ್ಸ್​​ಗೆ ಆಯ್ಕೆ ಮಾಡಲಾಗಿರುವ ಭಾರತ ತಂಡದಲ್ಲಿ ಹಾರ್ದಿಕ್ ಪಾಂಡ್ಯಗೆ ಸ್ಥಾನ ನೀಡಲಾಗಿಲ್ಲ. ಹೀಗಾಗಿ ಸೆಪ್ಟೆಂಬರ್ ತಿಂಗಳಲ್ಲಿ ಅವರು ಸಂಪೂರ್ಣ ಫಿಟ್​ನೆಸ್ ಸಾಧಿಸಿದರೂ ಏಷ್ಯನ್ ಗೇಮ್ಸ್​ನಲ್ಲೂ ಕೂಡ ಕಾಣಿಸಿಕೊಳ್ಳುವುದಿಲ್ಲ.

ಅಂದರೆ ಹಾರ್ದಿಕ್ ಪಾಂಡ್ಯ ಕಂಬ್ಯಾಕ್​ಗಾಗಿ ಅಕ್ಟೋಬರ್​ವರೆಗೆ ಕಾಯಲೇಬೇಕು. ಅಕ್ಟೋಬರ್​ನಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಸರಣಿ ನಡೆಯಲಿದ್ದು, ಈ ಸರಣಿಯ ಮೂಲಕ ಪಾಂಡ್ಯ ಅವರ ಪುನರಾಗಮನವನ್ನು ಎದುರು ನೋಡಬಹುದು.

ಇದನ್ನೂ ಓದಿ: ಶತಕದ ಪಂದ್ಯದಲ್ಲಿ ದಾಖಲೆಯ ಸೆಂಚುರಿ ಸಿಡಿಸಿದ ಹೆಟ್ಮೆಯರ್

ಏಷ್ಯನ್ ಗೇಮ್ಸ್​​ಗೆ ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪಾನಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ, ಜಸ್​ಪ್ರೀತ್ ಬುಮ್ರಾ ಬುಮ್ರಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ, ವೈಭವ್ ಸೂರ್ಯವಂಶಿ.

Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು