INDW vs AUSW: ಹರ್ಮನ್, ರಿಚ್ಚಾ ಹೋರಾಟ ವ್ಯರ್ಥ: ರೋಚಕ ಪಂದ್ಯ ಗೆದ್ದು ಟಿ20 ಸರಣಿ ವಶಪಡಿಸಿಕೊಂಡ ಆಸ್ಟ್ರೇಲಿಯಾ

India Women vs Australia Women: ನಾಲ್ಕನೇ ಟಿ20 ಪಂದ್ಯದಲ್ಲಿ ಆಸೀಸ್ 7 ರನ್​ಗಳ ರೋಚಕ ಜಯ ಸಾಧಿಸಿತು. ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಗೆಲುವಿಗೆ ಕಠಿಣ ಹೋರಾಟ ನಡೆಸಿದ ಭಾರತೀಯ ಮಹಿಳೆಯರಿಗೆ ಜಯ ಸಾಧಿಸಲು ಸಾಧ್ಯವಾಗಲಿಲ್ಲ.

INDW vs AUSW: ಹರ್ಮನ್, ರಿಚ್ಚಾ ಹೋರಾಟ ವ್ಯರ್ಥ: ರೋಚಕ ಪಂದ್ಯ ಗೆದ್ದು ಟಿ20 ಸರಣಿ ವಶಪಡಿಸಿಕೊಂಡ ಆಸ್ಟ್ರೇಲಿಯಾ
INDW vs AUSW
Follow us
TV9 Web
| Updated By: Vinay Bhat

Updated on:Dec 18, 2022 | 9:08 AM

ಭಾರತ ಪ್ರವಾಸ ಬೆಳೆಸಿರುವ ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡ (India Women vs Australia Women) ಟಿ20 ಸರಣಿಯನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಶನಿವಾರ ರಾತ್ರಿ ಮುಂಬೈನ (Mumbai) ಬ್ರಬೌರ್ನ್ ಸ್ಟೇಡಿಯಂನಲ್ಲಿ ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ಆಸೀಸ್ 7 ರನ್​ಗಳ ರೋಚಕ ಜಯ ಸಾಧಿಸಿತು. ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಗೆಲುವಿಗೆ ಕಠಿಣ ಹೋರಾಟ ನಡೆಸಿದ ಭಾರತೀಯ ಮಹಿಳೆಯರಿಗೆ ಜಯ ಸಾಧಿಸಲು ಸಾಧ್ಯವಾಗಲಿಲ್ಲ. ಈ ಮೂಲಕ ಹರ್ಮನ್ (Harmanpreet Kaur) ಪಡೆಗೆ ತವರಿನಲ್ಲೇ ಭಾರೀ ಮುಖಭಂಗವಾದರೆ ಇತ್ತ ಕಾಂಗರೂ ಪಡೆ 3-1 ಅಂತರದಿಂದ ಟಿ20 ಸರಣಿ ತನ್ನದಾಗಿಸಿಕೊಂಡಿತು.

ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಆಸ್ಟ್ರೇಲಿಯಾ ಮಹಿಳಾ ತಂಡ ಆರಂಭದಲ್ಲೇ ಬೆತ್ ಮೋನಿ (2) ಹಾಗೂ ತಹಿಲಾ ಮೆಕ್​ಘ್ರಾತ್ (9) ವಿಕೆಟ್ ಕಳೆದುಕೊಂಡಿತು. ನಾಯಕ ಅಲಿಸ್ಸಾ ಹೀಲೆ 30 ರನ್​ಗಳಿಸಿದ್ದಾಗ ರಿಟೈರ್ಡ್ ಹರ್ಟ್ ಆಗಿ ಪೆವಿಲಿಯನ್ ಸೇರಿಕೊಂಡರು. ಬಳಿಕ ಶುರುವಾಗಿದ್ದು ಎಲಿಸ್ಸಾ ಪೆರಿ ಸ್ಫೋಟಕ ಆಟ. ಇವರಿಗೆ ಗಾರ್ಡನರ್ ಅದ್ಭುತ ಸಾಥ್ ನೀಡಿದರು. ಭಾರತೀಯ ಬೌಲರ್​ಗಳನ್ನು ಮನಬಂದಂತೆ ದಂಡಿಸಿದ ಪೆರಿ ಕೇವಲ 42 ಎಸೆತಗಳಲ್ಲಿ 7 ಫೋರ್, 4 ಸಿಕ್ಸರ್ ಸಿಡಿಸಿ ಅಜೇಯ 72 ರನ್ ಚಚ್ಚಿದರು.

IPL 2023: ಹೊಸ ಅವತಾರದಲ್ಲಿ ಗೇಲ್; ಐಪಿಎಲ್​ಗೆ ಯೂನಿವರ್ಸಲ್ ಬಾಸ್ ರೀ ಎಂಟ್ರಿ..!

ಇದನ್ನೂ ಓದಿ
Image
ARG vs FRA FIFA Final Live Streaming: ಇಂದು ಅರ್ಜೆಂಟೀನಾ vs ಫ್ರಾನ್ಸ್ ಫಿಫಾ ವಿಶ್ವಕಪ್ ಫೈನಲ್: ಎಷ್ಟು ಗಂಟೆಗೆ?, ಯಾವುದರಲ್ಲಿ ನೇರಪ್ರಸಾರ?
Image
FIFA World cup 2022: ಮೊರಾಕ್ಕೊ ವಿರುದ್ಧ ಗೆದ್ದು 3ನೇ ಸ್ಥಾನಕ್ಕೆ ತೃಪ್ತಿಪಟ್ಟ ಕ್ರೋವೇಶಿಯಾಗೆ 223 ಕೋಟಿ ರೂ. ಬಹುಮಾನ!
Image
ಬಿಸಿಸಿಐ ವಿರುದ್ಧ ಗುಡುಗಿದ್ದ ರಮೀಜ್ ರಾಜಾಗೆ ಪಿಸಿಬಿ ಮುಖ್ಯಸ್ಥ ಸ್ಥಾನದಿಂದ ಗೇಟ್​ಪಾಸ್..!
Image
ಬೆಂಗಳೂರಿನಲ್ಲಿ ಬಾಂಗ್ಲಾ ತಂಡವನ್ನು ಮಣಿಸಿ ಹ್ಯಾಟ್ರಿಕ್ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾ..!

ಗಾರ್ಡನರ್ 27 ಎಸೆತಗಳಲ್ಲಿ ತಲಾ 3 ಫೋರ್, ಸಿಕ್ಸರ್​ನೊಂದಿಗೆ 42 ರನ್ ಬಾರಿಸಿದರು. ಕೊನೆಯಲ್ಲಿ ಬಂದ ಗ್ರೇಸ್ ಹ್ಯಾರಿಸ್ ಅಬ್ಬರಿಸಿ ಕೇವಲ 12 ಎಸೆತಗಳಲ್ಲಿ ಅಜೇಯ 27 ರನ್ ಗಳಿಸಿದರು. ಆಸ್ಟ್ರೇಲಿಯಾ 20 ಓವರ್​ಗೆ 3 ವಿಕೆಟ್ ನಷ್ಟಕ್ಕೆ 188 ರನ್ ಗಳಿಸಿತು. ಭಾರತ ಪರ ದೀಪ್ತಿ ಶರ್ಮಾ ದುಬಾರಿ ಆಗುವ ಜೊತೆಗೆ 2 ವಿಕೆಟ್ ಪಡೆದರು. ರಾಧಾ ಯಾದವ್ 1 ವಿಕೆಟ್ ಪಡೆದರು.

ಕಠಿಣ ಟಾರ್ಗೆಟ್ ಬೆನ್ನಟ್ಟಿದ ಭಾರತ ಮಹಿಳಾ ತಂಡ ಕಳಪೆ ಆರಂಭ ಪಡೆದುಕೊಂಡಿತು. 50 ರನ್​ಗೂ ಮೊದಲೇ ಮುಖ್ಯ 3 ವಿಕೆಟ್ ಕಳೆದುಕೊಂಡಿತು. ಸ್ಮೃತಿ ಮಂದಾನ 16 ರನ್​ಗೆ ಔಟಾದರೆ, ಶಫಾಲಿ ವರ್ಮಾ 20 ರನ್​ಗೆ ನಿರ್ಗಮಿಸಿದರು. ಜೆಮಿಯಾ ರೋಡ್ರಿಗಸ್ ಕಳಪೆ ಫಾರ್ಮ್ ಮುಂದುವರೆಸಿ 8 ರನ್​ಗೆ ನಿರ್ಗಮಿಸಿದರು. ಹೀಗೆ ಸಂಕಷ್ಟದಲ್ಲಿದ್ದ ತಂಡಕ್ಕೆ ನಾಯಕಿ ಹರ್ಮನ್​ಪ್ರೀತ್ ಕೌರ್ ಮತ್ತು ದೇವಿಕಾ ವೈದ್ಯ ಆಸರೆಯಾದರು.

ತಂಡದ ಗೆಲುವಿಗೆ ಹೋರಾಟ ನಡೆಸಿದ ಈ ಜೋಡಿ ಬಿರುಸಿನ ಆಟವಾಡಿತು. 72 ರನ್​ಗಳ ಜೊತೆಯಾಟ ಆಡಿದ ಕೌರ್-ವೈದ್ಯ ತಂಡಕ್ಕೆ ಗೆಲುವಿನ ಆಸೆ ಚಿಗುರಿಸಿದರು. ಆದರೆ, ಕೌರ್ ದೊಡ್ಡ ಹೊಡೆತಕ್ಕೆ ಮಾರುಹೋಗಿ 30 ಎಸೆತಗಳಲ್ಲಿ 46 ರನ್ ಸಿಡಿಸಿ ಔಟಾದರು. ಇದರ ಬೆನ್ನಲ್ಲೇ ದೇವಿಕಾ ಕೂಡ 26 ಎಸೆತಗಳಲ್ಲಿ 32 ರನ್ ಬಾರಿಸಿ ಸ್ಟಂಪ್​ಔಟ್ ಆದರು.

ಕೊನೆಯಲ್ಲಿ ರಿಚ್ಚಾ ಘೋಷ್ ಕ್ರೀಸ್​ಗೆ ಬಂದು ಸ್ಫೋಟಕ ಆಟವಾಡಿ ಹೋರಾಡಿದರೂ ತಂಡಕ್ಕೆ ಜಯ ತಂದುಕೊಡಲು ಸಾಧ್ಯವಾಗಲಿಲ್ಲ. ಕೊನೆಯ 12 ಎಸೆತಗಳಲ್ಲಿ ಭಾರತದ ಗೆಲುವಿಗೆ 38 ರನ್​ಗಳ ಅವಶ್ಯಕತೆಯಿತ್ತು. 19ನೇ ಓವರ್​ನಲ್ಲಿ ಎರಡು ಸಿಕ್ಸ್, ಒಂದು ಬಾರಿಸಿ ಒಟ್ಟು 19 ರನ್​ಗಳು ಬಂದವು. ಅಂತಿಮ 6 ಎಸೆತಗಳಲ್ಲಿ 20 ರನ್​ಗಳು ಬೇಕಿದ್ದಾಗ 12 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲು ಕಂಡಿತು. ಭಾರತ 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 181 ರನ್ ಕಲೆಹಾಕಿ ಸರಣಿ ಗೆಲ್ಲುವ ಆಸೆ ಕೈಚೆಲ್ಲಿತು. ರಿಚ್ಚಾ ಘೋಷ್ 19 ಎಸೆತಗಳಲ್ಲಿ 4 ಫೋರ್, 2 ಸಿಕ್ಸರ್ ಬಾರಿಸಿ ಅಜೇಯ 40 ರನ್ ಗಳಿಸಿದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:08 am, Sun, 18 December 22

ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು